ಕೇಂದ್ರದ ಆದೇಶದ ವಿರುದ್ಧ ಪ್ರಕರಣದಲ್ಲಿ ಟ್ವಟರಿಗೆ ಹೈಕೋರ್ಟ್ ರಿಲೀಫ್‌

ಬೆಂಗಳೂರು : ಕೇಂದ್ರ ಸರ್ಕಾರವು ಮೈಕ್ರೋಬ್ಲಾಗಿಂಗ್ ಸೈಟ್ ಟ್ವಿಟರ್ (ಈಗ ಎಕ್ಸ್ ಕಾರ್ಪ್‌ ) ಫೆಬ್ರವರಿ 2021 ಮತ್ತು 2022 ರ ನಡುವೆ ಆಯ್ದ ಟ್ವಿಟರ್‌ ಖಾತೆಗಳನ್ನು ನಿರ್ಬಂಧಿಸಲು ಸೂಚಿಸಿ ಮಾಡಿದ್ದ ಆದೇಶಗಳನ್ನು ಕಾಲಮಿತಿಯಲ್ಲಿ ಪಾಲಿಸಲು ವಿಫಲವಾದ ಆರೋಪದ ಮೇಲೆ ಟ್ವಿಟರ್‌ಗೆ (ಈಗ ಎಕ್ಸ್‌ ಕಾರ್ಪ್‌) ಹೈಕೋರ್ಟ್‌ನ ಏಕಸದಸ್ಯ ಪೀಠವು ವಿಧಿಸಿದ್ದ ₹50 ಲಕ್ಷ ದಂಡದ … Continued

ಪ್ರಧಾನಿ ವಿರುದ್ಧ ನಿಂದನಾತ್ಮಕ ಪದಗಳು ಅವಹೇಳನಕಾರಿ, ದೇಶದ್ರೋಹವಲ್ಲ: ಹೈಕೋರ್ಟ್

ಬೆಂಗಳೂರು : ಶಾಲಾ ಆಡಳಿತ ಮಂಡಳಿ ವಿರುದ್ಧದ ದೇಶದ್ರೋಹದ ಪ್ರಕರಣವನ್ನು ರದ್ದುಪಡಿಸುವ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್, ಪ್ರಧಾನಿ ವಿರುದ್ಧ ಅವಹೇಳನಕಾರಿ ಮತ್ತು ಬೇಜವಾಬ್ದಾರಿಯಿಂದ ನಿಂದನೀಯ ಪದಗಳನ್ನು ಬಳಸಲಾಗಿದೆ, ಆದರೆ ಅದು ದೇಶದ್ರೋಹವಲ್ಲ ಎಂದು ಹೇಳಿದೆ. ಬೀದರ್‌ನ ಶಾಹೀನ್ ಶಾಲೆಯ ಎಲ್ಲಾ ಮ್ಯಾನೇಜ್‌ಮೆಂಟ್ ವ್ಯಕ್ತಿಗಳಾದ ಅಲ್ಲಾವುದ್ದೀನ್, ಅಬ್ದುಲ್ ಖಲೀಕ್, ಮಹಮ್ಮದ್ ಬಿಲಾಲ್ ಇನಾಮದಾರ್ ಮತ್ತು ಮಹಮ್ಮದ್ ಮೆಹತಾಬ್ … Continued

ಆಸ್ತಿಯ ಮೇಲೆ ತಂದೆ ಸಾಲ ಮಾಡಿದ್ದನ್ನು ತೀರಿಸಿದರೂ ಮಗಳಿಗೆ ಆಸ್ತಿ ಮೇಲೆ ಸಮಾನ ಹಕ್ಕಿದೆ: ಹೈಕೋರ್ಟ್‌

ಬೆಂಗಳೂರು: ತಂದೆಯು ಜಮೀನು ಅಡವಿಟ್ಟು ಸಹೋದರಿಗೆ ಮದುವೆ ನೆರವೇರಿಸಿದ್ದು, ಚಿನ್ನಾಭರಣ ಸಹ ಕೊಡಿಸಿದ್ದಾರೆ. ತಂದೆಯ ಸಾಲ ತೀರಿಸಿ ನಾನು ಜಮೀನು ಹಿಂದಕ್ಕೆ ಪಡೆದಿದ್ದೇನೆ. ಆದ್ದರಿಂದ ತಂದೆಯ ಸಹೋದರಿಗೆ ತಂದೆ ಆಸ್ತಿ ಮೇಲೆ ಸಮಾನ ಹಕ್ಕು ಇಲ್ಲ ಮತ್ತು ಆಕೆಗೆ ಆಸ್ತಿಯಲ್ಲಿ ಪಾಲು ಕೊಡಲಾಗದು” ಎಂಬ ವಾದ ತಿರಸ್ಕರಿಸಿರುವ ಕರ್ನಾಟಕ ಹೈಕೋರ್ಟ್, ತಂದೆಯ ಆಸ್ತಿಯಲ್ಲಿ ಪುತ್ರನ ಜೊತೆಗೆ … Continued

ಶ್ಯಾಂಪ್ರಸಾದ್‌ ಶಾಸ್ತ್ರಿ ಆತ್ಮಹತ್ಯೆ ಪ್ರಕರಣ: ರಾಘವೇಶ್ವರ ಶ್ರೀ, ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧದ ಆರೋಪ ಪಟ್ಟಿ ರದ್ದುಗೊಳಿಸಿದ ಹೈಕೋರ್ಟ್‌

ಬೆಂಗಳೂರು: ಶ್ಯಾಮಪ್ರಸಾದ ಶಾಸ್ತ್ರೀ ಆತ್ಮಹತ್ಯೆಗೀಡಾಗಲು ಕುಮ್ಮಕ್ಕು ನೀಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿದ್ದ ರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಸ್ವಾಮೀಜಿ ಮತ್ತು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ಸಲ್ಲಿಸಿದ್ದ ಆರೋಪ ಪಟ್ಟಿಯನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ರದ್ದುಪಡಿಸಿದೆ. ರಾಘವೇಶ್ವರ ಶ್ರೀಗಳ ವಿರುದ್ಧ ಹಲವು ಪ್ರಕರಣಗಳು ಮುನ್ನಲೆಗೆ ಬಂದ ಸಂದರ್ಭದಲ್ಲೇ … Continued

ಪಿಎಸ್‌ಐ ಪ್ರಕರಣ: ಹಗರಣದಲ್ಲಿ ಭಾಗಿಯಾದವರ ಬಗ್ಗೆ ವರದಿ ಸಲ್ಲಿಸಲು ಹೈಕೋರ್ಟ್‌ ಸೂಚನೆ

ಬೆಂಗಳೂರು: ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿ ಪರೀಕ್ಷೆಯಲ್ಲಿ ಆಯ್ಕೆಯಾಗಿರುವ, ಹಾಲಿ ಅರ್ಜಿದಾರರಾಗಿರುವ 145 ಮಂದಿ ಹಗರಣದಲ್ಲಿ ಭಾಗಿಯಾಗಿದ್ದಾರೆಯೇ ಎಂಬುದರ ಕುರಿತು ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೋಮವಾರ ನಿರ್ದೇಶಿಸಿದೆ. ಜೂನ್‌ 15ರ ಒಳಗೆ ರಾಜ್ಯ ಸರ್ಕಾರ ವರದಿ ಸಲ್ಲಿಸಬೇಕು” ಎಂದು ನ್ಯಾಯಾಲಯವು ಆದೇಶ ಮಾಡಿದೆ. ರಾಜ್ಯ ಸರ್ಕಾರದ ಮರು ಪರೀಕ್ಷೆ ಆದೇಶ … Continued

ಓಲಾ, ಉಬರ್‌ ಆಟೋ ಸೇವೆಗೆ ಶೇ.5 ಸೇವಾ ಶುಲ್ಕ ಸೇರಿಸಿ ಪ್ರಯಾಣ ದರ ನಿಗದಿ: ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು: ಪರವಾನಗಿ ಹೊಂದಿರುವ ಓಲಾ, ಉಬರ್‌ ಸಂಸ್ಥೆಗಳಿಗೆ ರಾಜ್ಯದ ಎಲ್ಲ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳು ನಿಗದಿಪಡಿಸಿರುವ ಆಟೋರಿಕ್ಷಾ ಪ್ರಯಾಣ ದರಗಳ ಮೇಲೆ ಶೇ.5 ಸೇವಾ ಶುಲ್ಕ ಹಾಗೂ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸೇರಿಸಿ ಅಂತಿಮ ಪ್ರಯಾಣ ದರ ನಿಗದಿಪಡಿಸಲು ನಿರ್ದೇಶಿಸಿ ರಾಜ್ಯ ಸರ್ಕಾರ 2022ರ ನವೆಂಬರ್‌ 25ರಂದು ಹೊರಡಿಸಿದ್ದ ಅಧಿಸೂಚನೆಗೆ ಕರ್ನಾಟಕ ಹೈಕೋರ್ಟ್‌ … Continued

ಕೆಜಿಎಫ್‌ 2 ಹಾಡು ಬಳಕೆ : ಕಾಂಗ್ರೆಸ್‌ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ದಾಖಲು ; ರಾಹುಲ್‌ ಮತ್ತಿತರರಿಗೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು: ಕೃತಿ ಸ್ವಾಮ್ಯ ಉಲ್ಲಂಘಿಸಿ ಕಾಂಗ್ರೆಸ್‌ ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಬಳಸಿರುವ ಕೆಜಿಎಫ್‌-2 ಸಿನಿಮಾದ ಮುದ್ರಿತ ಸಂಗೀತವನ್ನು ತೆಗೆದುಹಾಕಲು ನಿರ್ದೇಶಿಸಿದ್ದ ಹೈಕೋರ್ಟ್‌ನ ವಿಭಾಗೀಯ ಪೀಠದ ಆದೇಶವನ್ನು ಪಾಲಿಸಿಲ್ಲ ಎಂದು ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್‌ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಹಾಗೂ ಪಕ್ಷದ ಮುಖಂಡರಿಗೆ ಶುಕ್ರವಾರ ನೋಟಿಸ್‌ ಜಾರಿ ಮಾಡಿದೆ. ಕಾಂಗ್ರೆಸ್‌ … Continued

ಓಲಾ, ಉಬರ್‌ ಆಟೋ ಸರ್ವಿಸ್‌ : ಶೇ.5 ಸೇವಾ ಶುಲ್ಕ, ಜಿಎಸ್‌ಟಿ ಸೇರಿಸಿ ಪ್ರಯಾಣ ದರ ನಿಗದಿ ಕುರಿತು ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ

ಬೆಂಗಳೂರು: ಪರವಾನಗಿ ಹೊಂದಿರುವ ಸಂಸ್ಥೆಗಳಿಗೆ ರಾಜ್ಯದ ಎಲ್ಲ ಪ್ರಾದೇಶಿಕ ಸಾರಿಗೆ ಪ್ರಾಧಿಕಾರಗಳು ನಿಗದಿಪಡಿಸಿರುವ ಆಟೋರಿಕ್ಷಾ ಪ್ರಯಾಣ ದರಗಳ ಮೇಲೆ ಶೇ. 5 ಜಿಎಸ್‌ಟಿ ಸೇರಿಸಿ ಅಂತಿಮ ಪ್ರಯಾಣ ದರ ನಿಗದಿಪಡಿಸಲು ನಿರ್ದೇಶಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಸೋಮವಾರ ತಿಳಿಸಿದೆ. ಆ್ಯಪ್ ಆಧಾರಿತ ಓಲಾ ಮತ್ತು ಉಬರ್ ಆಟೋರಿಕ್ಷಾ ಸೇವೆ ಸ್ಥಗಿತಗೊಳಿಸಬೇಕು ಎಂಬ ರಾಜ್ಯ ಸರ್ಕಾರದ … Continued

ದತ್ತು ಮಕ್ಕಳೂ ಅನುಕಂಪದ ಆಧಾರದಲ್ಲಿ ಪೋಷಕರ ಉದ್ಯೋಗ ಪಡೆಯಲು ಅರ್ಹರು : ಹೈಕೋರ್ಟ್‌

ಬೆಂಗಳೂರು: : ದತ್ತು ಮಕ್ಕಳು ಸಹ ಅನುಕಂಪದ ಆಧಾರದಲ್ಲಿ ಪೋಷಕರ ಉದ್ಯೋಗ ಪಡೆಯಲು ಅರ್ಹರು ಎಂದು ಕರ್ನಾಟಕ ಹೈಕೋರ್ಟ್‌ನ  ವಿಭಾಗೀಯ ಪೀಠವು  ಆದೇಶಿಸಿದೆ. ದತ್ತು ಮಕ್ಕಳಿಗೆ ಅನುಕಂಪದ ಆಧಾರದಲ್ಲಿ ಉದ್ಯೋಗ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ತಿಳಿಸಿ ಏಕ ಸದಸ್ಯ ಪೀಠವು ಹೊರಡಿಸಿದ್ದ ಆದೇಶ ಪ್ರಶ್ನಿಸಿ ಬಾಗಲಕೋಟೆಯ ಬನಹಟ್ಟಿ ತಾಲೂಕಿನ ನಿವಾಸಿ ಎಸ್ ಗಿರೀಶ್ ಸಲ್ಲಿಸಿದ್ದ ಮೇಲ್ಮನವಿಯನ್ನು … Continued

ಆಹಾರ ಪದಾರ್ಥಗಳ ಮೇಲೆ ಬ್ಯಾಚ್ ಸಂಖ್ಯೆ, ಸಸ್ಯಾಹಾರ, ಮಾಂಸಾಹಾರ ಚಿಹ್ನೆ ನಮೂದಿಸದೆ ಮಾರಾಟ ಮಾಡುವುದು ಅಪರಾಧ: ಹೈಕೋರ್ಟ್‌

ಬೆಂಗಳೂರು: ಆಹಾರ ಪದಾರ್ಥಗಳ ಮೇಲೆ ಬ್ಯಾಚ್ ಸಂಖ್ಯೆ, ಎಕ್ಸ್‌ಪೈರಿ ದಿನಾಂಕ ಅಥವಾ ಸಸ್ಯಾಹಾರ, ಮಾಂಸಾಹಾರ ಚಿಹ್ನೆ ನಮೂದಿಸದೆ ಮಾರಾಟ ಮಾಡುವುದು ಆಹಾರ ಕಲಬೆರಕೆ ತಡೆ ಕಾಯಿದೆ ಅಡಿ ಶಿಕ್ಷಾರ್ಹ ಅಪರಾಧ ಎಂದು ಕರ್ನಾಟಕ ಹೈಕೋರ್ಟ್‌ ಈಚೆಗೆ ಆದೇಶ ನೀಡಿದೆ. ಅಲ್ಲದೇ, ಕಲಬೆರಕೆ ಕಾಫಿ ಪುಡಿ ಮಾರಾಟ ಮಾಡಿದ ಪ್ರಕರಣದಲ್ಲಿ ಆರೋಪಿಗೆ ವಿಚಾರಣಾಧೀನ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ … Continued