ವಿಧಾನ ಪರಿಷತ್‌ ಚುನಾವಣೆಯಲ್ಲಿ ಸ್ಥಳೀಯ ಸಂಸ್ಥೆಗಳ ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ: ಹೈಕೋರ್ಟ್‌ ಮಹತ್ವದ ತೀರ್ಪು

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ನಡೆಯುವ ಚುನಾವಣೆಯಲ್ಲಿ ನಾಮ ನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ ಎಂದು ಗುರುವಾರ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ಮಾಡಿದೆ. ಇದರಿಂದಾಗಿ ಕಳೆದ ಡಿಸೆಂಬರ್‌ನಲ್ಲಿ ಚಿಕ್ಕಮಗಳೂರು ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ಆಯ್ಕೆಯಾಗಿದ್ದ ಬಿಜೆಪಿಯ ಎಂ ಕೆ ಪ್ರಾಣೇಶ ಅವರಗೆ ಸಂಕಷ್ಟ ಎದುರಾಗಿದೆ. ಆದರೆ, ಎಂ ಕೆ ಪ್ರಾಣೇಶ … Continued

ಆಟೋರಿಕ್ಷಾ ಸೇವೆ: ಸರ್ಕಾರ ನಿಗದಿಪಡಿಸಿದ ದರದ ಜೊತೆಗೆ ಶೇ. 10 ದರ ವಿಧಿಸಲು ಓಲಾ, ಉಬರ್‌ಗೆ ಹೈಕೋರ್ಟ್ ಸೂಚನೆ

ಬೆಂಗಳೂರು: ಆಟೋರಿಕ್ಷಾ ಸೇವೆಗಳಿಗೆ 2021ರ ನವೆಂಬರ್‌ನಲ್ಲಿ ರಾಜ್ಯ ಸರ್ಕಾರ ನಿಗದಿಪಡಿಸಿರುವ ದರದ ಜೊತೆಗೆ ಹೆಚ್ಚುವರಿಯಾಗಿ ಶೇ. 10ರಷ್ಟು ದರ ಮತ್ತು ಸರಕು ಹಾಗೂ ಸೇವಾ ತೆರಿಗೆ(ಜಿಎಸ್‌ಟಿ)ಯನ್ನು ವಿಧಿಸುವ ಮೂಲಕ ಆ್ಯಪ್‌ ಆಧರಿತ ಓಲಾ ಮತ್ತು ಉಬರ್‌ ಆಟೋರಿಕ್ಷಾ ಸೇವೆ ಮುಂದುವರಿಸಬಹುದು ಎಂದು ಹೈಕೋರ್ಟ್‌ ಶುಕ್ರವಾರ ಆದೇಶ ಮಾಡಿದೆ. ಓಲಾ ಮತ್ತು ಉಬರ್‌ ಇನ್ನು ಮುಂದೆ ತಮ್ಮ … Continued

ಮಠ-ವಿದ್ಯಾಪೀಠದ ಚೆಕ್‌ಗಳಿಗೆ ಸಹಿ ಹಾಕಲು ಮುರುಘಾ ಶರಣರಿಗೆ ಅನುಮತಿ ನೀಡಿದ ಹೈಕೋರ್ಟ್‌

ಬೆಂಗಳೂರು: ಚಿತ್ರದುರ್ಗದ ಮುರುಘ ರಾಜೇಂದ್ರ ಬೃಹನ್ಮಠ ಮತ್ತು ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗೆ ವೇತನ ಪಾವತಿಸಲು ಮಠ ಮತ್ತು ವಿದ್ಯಾಪೀಠದ ಚೆಕ್‌ಗಳಿಗೆ ಸಹಿ ಹಾಕಲು ಈಗ ನ್ಯಾಯಾಂಗ ಬಂಧನದಲ್ಲಿರುವ ಶಿವಮೂರ್ತಿ ಮುರುಘಾ ಶರಣರಿಗೆ ಶುಕ್ರವಾರ ಹೈಕೋರ್ಟ್‌ ಅನುಮತಿ ನೀಡಿದೆ. ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೊ ಕಾಯ್ದೆಯಡಿ ಬಂಧಿತರಾಗಿರುವ ಆರೋಪಿ ಮುರುಘಾ ಶರಣರು ಸಲ್ಲಿಸಿದ್ದ … Continued

ರೈತರ ಪರಿಹಾರ ಕೋರಿಕೆ ಅರ್ಜಿಗಳ ನಿರ್ವಹಣೆಗೆ ಮೂರು ತಿಂಗಳಲ್ಲಿ ತಂತ್ರಾಂಶ ಅಭಿವೃದ್ಧಿ: ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ

ಬೆಂಗಳೂರು : ರೈತರ ಭೂಮಿ ಸ್ವಾಧೀನಪಡಿಸಿಕೊಂಡಿರುವುದಕ್ಕೆ ಪರಿಹಾರ ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಲ್ಲಿಕೆಯಾಗುವ ಅರ್ಜಿಗಳ ವ್ಯವಸ್ಥಿತ ನಿರ್ವಹಣೆ ಹಾಗೂ ಭೂಸ್ವಾಧೀನದ ಎಲ್ಲಾ ಪ್ರಕ್ರಿಯೆಗಳನ್ನು ಒಂದೇ ತಂತ್ರಾಂಶದ ಅಡಿ ಆನ್‌ಲೈನ್‌ನಲ್ಲಿ ನಿರ್ವಹಿಸಲು ಮೂರು ತಿಂಗಳೊಳಗೆ ತಂತ್ರಾಂಶ (ಸಾಫ್ಟ್‌ವೇರ್‌) ಸಿದ್ಧಪಡಿಸಬೇಕು ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರು ಇ-ಆಡಳಿತದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ನಿರ್ದೇಶಿಸಿದ್ದಾರೆ ಎಂದು ರಾಜ್ಯ ಸರ್ಕಾರವು ಕರ್ನಾಟಕ … Continued

ಪಂಚಮಸಾಲಿ ಮೀಸಲಾತಿ ಪ್ರಕರಣ: ನ್ಯಾ. ಸುಭಾಷ್‌ ಆಡಿ ನೇತೃತ್ವದ ಸಮಿತಿಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್‌ ನೋಟಿಸ್‌

ಬೆಂಗಳೂರು: ವೀರಶೈವ-ಲಿಂಗಾಯತ ಪಂಚಮಸಾಲಿ ಉಪ ಪಂಗಡವನ್ನು 3ಎ ಪ್ರವರ್ಗದಿಂದ 2ಎಗೆ ಸೇರ್ಪಡೆ ಮಾಡುವುದಕ್ಕೆ ಸಂಬಂಧಿಸಿ ವರದಿ ಸಲ್ಲಿಸಲು ರಾಜ್ಯ ಸರ್ಕಾರ ರಚಿಸಿರುವ ನಿವೃತ್ತ ನ್ಯಾಯಮೂರ್ತಿ ಸುಭಾಷ್ ಬಿ. ಆಡಿ ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ಆಕ್ಷೇಪಣೆ ಸಲ್ಲಿಸಲು ಬುಧವಾರ ನೋಟಿಸ್‌ ಜಾರಿ ಮಾಡಿರುವ ಕರ್ನಾಟಕ ಹೈಕೋರ್ಟ್‌, ವಿಚಾರಣೆಯನ್ನು ಒಂದು ವಾರ ಕಾಲ ಮುಂದೂಡಿದೆ ಎಂದು ಬಾರ್‌ … Continued

ಕರ್ನಾಟಕ ಹೈಕೋರ್ಟ್​ನಲ್ಲಿ ಗ್ರೂಪ್​ ಡಿ 150 ಹುದ್ದೆಗಳಿಗೆ ಅರ್ಜಿ ಆಹ್ವಾನ: ಅರ್ಹತೆ ಎಸ್​ಎಸ್​ಎಲ್​ಸಿ

:ಕರ್ನಾಟಕ ಹೈಕೋರ್ಟ್‌ನಲ್ಲಿ ಗ್ರೂಪ್​ ಡಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 150 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. 150 ಹುದ್ದೆಗಳಲ್ಲಿ 21 ಹುದ್ದೆಗಳನ್ನು ಕಲ್ಯಾಣ ಕರ್ನಾಟಕಕ್ಕೆ ಮೀಸಲಾಗಿರಸಲಾಗಿದೆ. ಹತ್ತನೇ ತರಗತಿ ಪಾಸ್​ ಆಗಿರುವ ಅಭ್ಯರ್ಥಿಗಳು ಸಹ ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಆನ್​ಲೈನ್​ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆಪ್ಟೆಂಬರ್​ 17 … Continued

ಮಧ್ಯಾಹ್ನ ಬಿಸಿಯೂಟ ಯೋಜನೆ ಅಡುಗೆ ತಯಾರಕರು ಕನಿಷ್ಠ ವೇತನ ಕಾಯಿದೆಯಡಿ ಸಂಬಳ ಪಡೆಯಲು ಅರ್ಹರಲ್ಲ: ಹೈಕೋರ್ಟ್‌ ತೀರ್ಪು

ಬೆಂಗಳೂರು: ರಾಜ್ಯ ಸರ್ಕಾರ ನಡೆಸುತ್ತಿರುವ ಮಧ್ಯಾಹ್ನ ಬಿಸಿಯೂಟ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿರುವ ಮುಖ್ಯ ಅಡುಗೆ ತಯಾರಕರು ಮತ್ತು ಅಡುಗೆ ಸಹಾಯಕರು ಕನಿಷ್ಠ ವೇತನ ಕಾಯಿದೆಯಡಿ ವೇತನ ಪಡೆಯಲು ಅರ್ಹರಾಗಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಬಿಸಿಯೂಟ ತಯಾರಿಸುವ ಮುಖ್ಯ ಅಡುಗೆ ತಯಾಕರು ಮತ್ತು ಅಡುಗೆ ಸಹಾಯಕರಿಗೆ ಕನಿಷ್ಠ ವೇತನ ಕಾಯ್ದೆ … Continued

ಬೆಂಗಳೂರು ಡಿ ಜೆ ಹಳ್ಳಿ ಗಲಭೆ ಪ್ರಕರಣ: ಪೊಲೀಸರತ್ತ ಪೆಟ್ರೋಲ್ ತುಂಬಿದ ಬಾಟಲಿಯಿಂದ ದಾಳಿ ಭಯೋತ್ಪಾದನಾ ಕೃತ್ಯ ಎಂದ ಕರ್ನಾಟಕ ಹೈಕೋರ್ಟ್‌

ಬೆಂಗಳೂರು: ಪೊಲೀಸ್ ಸಿಬ್ಬಂದಿ ಮತ್ತು ಪೊಲೀಸ್ ಠಾಣೆಗಳ ಮೇಲೆ ಪೆಟ್ರೋಲ್ ತುಂಬಿದ ಬಾಟಲಿಗಳನ್ನು ಬಳಸಿ ದಾಳಿ ನಡೆಸಿರುವುದು ಮೇಲ್ನೋಟಕ್ಕೆ ಕಾನೂನುಬಾಹಿರ ಚಟುವಟಿಕೆ (ನಿಯಂತ್ರಣ) ಕಾಯಿದೆ (ಯುಎಪಿಎ) ಸೆಕ್ಷನ್ 15ರ ಅಡಿ ‘ಭಯೋತ್ಪಾದನಾ ಕೃತ್ಯ’ ಎನಿಸುತ್ತದೆ ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿಗೆ ಹೇಳಿದೆ. ಬೆಂಗಳೂರಿನ ಡಿ ಜೆ ಹಳ್ಳಿ ಮತ್ತು ಕೆ ಜಿ ಹಳ್ಳಿ ಪೊಲೀಸ್ ಠಾಣೆಗಳ … Continued

ಪೋಷಕರಿಂದ ನೇರವಾಗಿ ಮಗು ದತ್ತು ಪಡೆಯುವುದು ಬಾಲ ನ್ಯಾಯ ಕಾಯಿದೆ ಸೆಕ್ಷನ್‌ 80ರ ಅಡಿ ಅಪರಾಧವಲ್ಲ: ಹೈಕೋರ್ಟ್‌

ಬೆಂಗಳೂರು: ಪೋಷಕರಿಂದ ಮಗುವನ್ನು ನೇರವಾಗಿ ದತ್ತು ಪಡೆದುಕೊಳ್ಳುವುದು ಬಾಲ ನ್ಯಾಯ (ಮಕ್ಕಳ ಆರೈಕೆ ಮತ್ತು ರಕ್ಷಣೆ) ಕಾಯಿದೆಯ ಸೆಕ್ಷನ್ 80ರ ಅಡಿಯಲ್ಲಿ ಅಪರಾಧವಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ನ ಧಾರವಾಡ ಪೀಠವು ಈಚೆಗೆ ಮಹತ್ವದ ತೀರ್ಪು ನೀಡಿದೆ. ಪ್ರಕರಣವೊಂದರಲ್ಲಿ ಮಗುವನ್ನು ದತ್ತು ನೀಡಿದ್ದ ಹಾಗೂ ದತ್ತು ಪಡೆದಿದ್ದವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್‌ ಪ್ರಕರಣವನ್ನು ರದ್ದುಪಡಿಸಿದೆ. ಮಗುವಿನ ದತ್ತು … Continued

ಗೋ ಹತ್ಯೆ ನಿಷೇಧ ಕಾಯಿದೆ: ಸೆಕ್ಷನ್ 5 ನಿಯಮ ಜಾರಿಗೆ ಸರ್ಕಾರಕ್ಕೆ ಹೈಕೋರ್ಟ್‌ ಅಸ್ತು

ಬೆಂಗಳೂರು: ಕರ್ನಾಟಕ ಗೋವಧೆ ಪ್ರತಿಬಂಧಕ ಹಾಗೂ ಜಾನುವಾರು ಸಂರಕ್ಷಣೆ ನಿಯಮಗಳನ್ನು (ಜಾನುವಾರು ಸಾಗಣೆ 2021ರ ನಿಯಮಗಳು) ರೂಪಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಗೋವಧೆ ಪ್ರತಿಬಂಧಕ ಹಾಗೂ ಜಾನುವಾರು ಸಂರಕ್ಷಣಾ ಕಾಯಿದೆ- 2020ರ ಸೆಕ್ಷನ್ 5 ಮತ್ತು ಅದರ ಅಡಿ ರೂಪಿಸಿರುವ ನಿಯಮಗಳ ಜಾರಿಗೆ ಸೋಮವಾರ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದ್ದು, ಅದು ಅಂತಿಮ ನಿರ್ಧಾರಕ್ಕೆ ಒಳಪಟ್ಟಿರುತ್ತದೆ … Continued