ಮುಡಾ ಪ್ರಕರಣ : ಸಿಎಂ ಪತ್ನಿ ಪಾರ್ವತಿ, ಸಚಿವ ಬೈರತಿ ಸುರೇಶಗೆ ದೊಡ್ಡ ರಿಲೀಫ್

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಅವರಿಗೆ ತನಿಖೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು ಜಾರಿ ಮಾಡಿದ್ದ ಸಮನ್ಸ್‌/ನೋಟಿಸ್‌ ಹಾಗೂ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ. ಜಾರಿ ನಿರ್ದೇಶನಾಲಯ ದಾಖಲಿಸಿರುವ ದೂರು ಮತ್ತು ತನಿಖೆ ಹಾಗೂ ಅಕ್ರಮ ಹಣ ವರ್ಗಾವಣೆ ಕಾಯಿದೆ (ಪಿಎಂಎಲ್‌ಎ) … Continued

ರಾಘವೇಶ್ವರ ಭಾರತೀ ಶ್ರೀಗಳ ವಿರುದ್ಧದ ಎರಡನೇ ಅತ್ಯಾಚಾರ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಬೆಂಗಳೂರು : ಹೊಸನಗರದ ಶ್ರೀರಾಮಚಂದ್ರಾಪುರ ಮಠದ ಪೀಠಾಧಿಪತಿ ರಾಘವೇಶ್ವರ ಭಾರತೀ ಸ್ವಾಮಿ ಅವರ ವಿರುದ್ಧದ ಎರಡನೇ ಅತ್ಯಾಚಾರ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ರದ್ದುಪಡಿಸಿದೆ. ರಾಘವೇಶ್ವರ ಭಾರತೀ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ 2024ರ ಜೂನ್‌ 11ರಂದು ಕಾಯ್ದಿರಿಸಿದ್ದ ಆದೇಶವನ್ನು ಸುಮಾರು ಎಂಟು ತಿಂಗಳ ನಂತರ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು … Continued

ಮುಡಾ ಪ್ರಕರಣ | ಸಿಬಿಐ ತನಿಖೆ ಅರ್ಜಿ ವಜಾ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ ಸ್ನೇಹಮಯಿ ಕೃಷ್ಣ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಬಿಂದುವಾಗಿರುವ ಮುಡಾ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಲು ನಿರಾಕರಿಸಿ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠವು ನೀಡಿರುವ ಆದೇಶವನ್ನು ಪ್ರಶ್ನಿಸಿ ದೂರುದಾರ ಮೈಸೂರಿನ ಸ್ನೇಹಮಯಿ ಕೃಷ್ಣ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ … Continued

ಕರ್ನಾಟಕದಲ್ಲಿ ಜಿಪಂ, ತಾಪಂ ಚುನಾವಣೆಗೆ ಕೊನೆಗೂ ಕಾಲ ಸನ್ನಿಹಿತ…

ಬೆಂಗಳೂರು : ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ ಮೀಸಲು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮೇ ಅಂತ್ಯದೊಳಗೆ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟಿಗೆ ತಿಳಿಸಿದೆ. ರಾಜ್ಯ ಸರ್ಕಾರದ ಮುಚ್ಚಳಿಕೆಯನ್ನು ಆಧರಿಸಿ ನ್ಯಾಯಾಂಗ ನಿಂದನೆ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ಇತ್ಯರ್ಥಪಡಿಸಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ. ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯತ … Continued

ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯ ಪತ್ನಿ, ಸಚಿವ ಬೈರತಿಗೆ ಮತ್ತೆ ರಿಲೀಫ್‌

ಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಅವರಿಗೆ ಜಾರಿ ನಿರ್ದೇಶನಾಲಯ ಜಾರಿ ಮಾಡಿದ ಸಮನ್ಸ್‌ಗೆ ನೀಡಿದ ತಡೆಯಾಜ್ಞೆ ಹೈಕೋರ್ಟ್‌ ಸೋಮವಾರ ವಿಸ್ತರಿಸಿದೆ. ಧಾರವಾಡ ಏಕಸದಸ್ಯ ಪೀಠಕ್ಕೆ ಎರಡು ಪ್ರತ್ಯೇಕ ಅರ್ಜಿ ಸಲ್ಲಿಸಿದ್ದರು. ಇಡಿ ಸಮನ್ಸ್​ ರದ್ದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ … Continued

ಪೋಕ್ಸೊ ಪ್ರಕರಣ ; ಮಾಜಿ ಸಿಎಂ ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು

ಬೆಂಗಳೂರು : ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇದರಿಂದ ಅವರಿಗೆ ಸದ್ಯಕ್ಕೆ ಬಂಧನದ ಭೀತಿ ಇಲ್ಲವಾಗಿದೆ. ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣ ರದ್ದುಪಡಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ನ್ಯಾ.ಎಂ ನಾಗಪ್ರಸನ್ನ … Continued

ಮುಡಾ ಪ್ರಕರಣ : ಹೈಕೋರ್ಟ್‌ನಿಂದ ಸಿಎಂ ಸಿದ್ದರಾಮಯ್ಯಗೆ ಬಿಗ್‌ ರಿಲೀಫ್‌

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಬಿಂದುವಾಗಿರುವ ಮುಡಾ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಲು ಕೋರಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ತಿರಸ್ಕರಿಸಿದೆ. ಇದರಿಂದ ಸಿದ್ದರಾಮಯ್ಯ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಂತಾಗಿದೆ. ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಮೈಸೂರಿನ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ … Continued

ಜಾತಿ ನಿಂದನೆ ಪ್ರಕರಣ: ಕ್ರಿಸ್‌ ಗೋಪಾಲಕೃಷ್ಣನ್‌ ಸೇರಿ 16 ಮಂದಿ ವಿರುದ್ಧದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

ಬೆಂಗಳೂರು : ಇನ್ಫೋಸಿಸ್‌ ಕಂಪನಿ ಸಹ ಸಂಸ್ಥಾಪಕ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಆಡಳಿತ ಮಂಡಳಿ ಅಧ್ಯಕ್ಷ ಕ್ರಿಸ್‌ ಗೋಪಾಲಕೃಷ್ಣನ್‌, ಐಐಎಸ್‌ಸಿ ನಿರ್ದೇಶಕ ಪ್ರೊ. ಗೋವಿಂದನ್‌ ರಂಗರಾಜನ್‌ ಸೇರಿ 16 ಮಂದಿಯ ವಿರುದ್ಧ ಜಾತಿ ನಿಂದನೆ ಪ್ರಕರಣ ಮತ್ತು ವಿಶೇಷ ನ್ಯಾಯಾಲಯದಲ್ಲಿನ ಖಾಸಗಿ ದೂರಿನ ವಿಚಾರಣಾ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್‌ ತಡೆಯಾಜ್ಞೆ ವಿಧಿಸಿದೆ. ವಿಶೇಷ … Continued

ಸಚಿವೆ ಹೆಬ್ಬಾಳ್ಕರ ವಿರುದ್ಧ ಅಶ್ಲೀಲ ಪದ ಬಳಕೆ ಪ್ರಕರಣ: ಸಿ.ಟಿ. ರವಿಗೆ ಸದ್ಯಕ್ಕೆ ರಿಲೀಫ್‌ ನೀಡಿದ ಹೈಕೋರ್ಟ್‌

ಬೆಂಗಳೂರು : ಬೆಳಗಾವಿ ಸುವರ್ಣಸೌಧದಲ್ಲಿ ನಡೆದ ಅಧಿವೇಶನದ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎನ್ನಲಾದ ಆರೋಪಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ವಿರುದ್ಧದ ವಿಚಾರಣಾಧೀನ ನ್ಯಾಯಾಲಯದಲ್ಲಿನ ಪ್ರಕ್ರಿಯೆಗೆ ಹೈಕೋರ್ಟ್‌ ಗುರುವಾರ ತಡೆಯಾಜ್ಞೆ ನೀಡಿದೆ. ಬೆಳಗಾವಿಯ ಬಾಗೇವಾಡಿ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್‌ ರದ್ದುಪಡಿಸುವಂತೆ … Continued

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ, ಸಚಿವ ಬೈರತಿ ಸುರೇಶಗೆ ಸದ್ಯಕ್ಕೆ ರಿಲೀಫ್ ನೀಡಿದ ಹೈಕೋರ್ಟ್‌

ಬೆಂಗಳೂರು : ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಅವರ ವಿರುದ್ಧ ಜಾರಿ ನಿರ್ದೇಶನಾಲಯ ಜಾರಿ ಮಾಡಿರುವ ಸಮನ್ಸ್‌ಗೆ ಹೈಕೋರ್ಟ್‌ ಸೋಮವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಹಾಗೂ ಸಚಿವ ಬೈರತಿ ಸುರೇಶ ಅವರು ಪ್ರತ್ಯೇಕವಾಗಿ ಸಲ್ಲಿಸಿದ್ದ ಅರ್ಜಿಗಳ … Continued