ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಎಫ್‌ಐಆರ್‌ ಗೆ ತಡೆ ನೀಡಿದ ಹೈಕೋರ್ಟ್‌

ಬೆಂಗಳೂರು : ಇಲ್ಲಿನ ನಗರ್ತಪೇಟೆಯ ಮೊಬೈಲ್ ಅಂಗಡಿ ಮಾಲೀಕ ಮುಖೇಶ ಎಂಬಾತನ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿ, ಸಾರ್ವಜನಿಕ ಶಾಂತಿ-ಸುವ್ಯವಸ್ಥೆಗೆ ಭಂಗ ತಂದ ಆರೋಪದಲ್ಲಿ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಿಸಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ಶುಕ್ರವಾರ ತಡೆ ನೀಡಿದೆ. ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ … Continued

5, 8, 9ನೇ ತರಗತಿಗಳಿಗೆ ಬೋರ್ಡ್‌ ಪರೀಕ್ಷೆ ನಡೆಸಲು ಹೈಕೋರ್ಟ್‌ ಸಮ್ಮತಿ

ಬೆಂಗಳೂರು: ಏಕಸದಸ್ಯ ಪೀಠದ ಆದೇಶವನ್ನು ಹೈಕೋರ್ಟ್‌ನ (High Court) ದ್ವಿಸದ್ಯ ಪೀಠ ರದ್ದುಗೊಳಿಸಿದ್ದು 5,8,9, ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿದೆ. ರಾಜ್ಯದ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಮುಂದಾಗಿದ್ದ ರಾಜ್ಯ ಸರ್ಕಾರದ ಸುತ್ತೋಲೆ ರದ್ದುಪಡಿಸಿದ್ದ ಏಕಸದಸ್ಯ ಪೀಠದ ಆದೇಶವನ್ನು ಬದಿಗೆ ಸರಿಸಿರುವ ಕರ್ನಾಟಕ … Continued

ಅಪಾಯಕಾರಿ 23 ಶ್ವಾನ ತಳಿಗಳ ಸಾಕಣೆ ನಿಷೇಧಿಸಿ ಕೇಂದ್ರ ಸರ್ಕಾರ ಹೊರಡಿಸಿದ ಸುತ್ತೋಲೆಗೆ ಹೈಕೋರ್ಟ್‌ ತಡೆ

ಬೆಂಗಳೂರು : ಮನುಷ್ಯನ ಜೀವಕ್ಕೆ ಮಾರಕವಾಗಬಹುದಾದ 23 ಶ್ವಾನ ತಳಿಗಳ ಸಾಕುವುದು ಹಾಗೂ ಮಾರಾಟ ನಿಷೇಧಿಸಿ ಕೇಂದ್ರ ಸರ್ಕಾರ ಇತ್ತೀಚಗೆ ಹೊರಡಿಸಿದ್ದ ಸುತ್ತೋಲೆಗೆ ಮಂಗಳವಾರ ಕರ್ನಾಟಕ ಹೈಕೋರ್ಟ್‌ ತಡೆ ನೀಡಿದೆ. ತಜ್ಞರ ಸಮಿತಿಯ ಶಿಫಾರಸ್ಸು ಆಧರಿಸಿ ಕೇಂದ್ರ ಸರ್ಕಾರ ಸುತ್ತೋಲೆ ಹೊರಡಿಸಿದ್ದು, ಆದರೆ ತಜ್ಞರು ಇದಕ್ಕೆ ಸಂಬಂಧಿತ ಯಾರನ್ನು ಸಂಪರ್ಕಿಸಿಲ್ಲ ಎಂದು ಆಕ್ಷೇಪಿಸಿ ವೃತ್ತಿಪರ ಶ್ವಾನ … Continued

ಕರ್ನಾಟಕದ 5, 8, 9, 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಬೆಂಗಳೂರು : ರಾಜ್ಯದ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಮುಂದಾಗಿದ್ದ ರಾಜ್ಯ ಸರ್ಕಾರದ ಸುತ್ತೋಲೆ ರದ್ದುಪಡಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿರುವ ಮೇಲ್ಮನವಿ ವಿಚಾರಣೆಯನ್ನು ಸೋಮವಾರ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. ರಾಜ್ಯ ಪಠ್ಯಕ್ರಮ ಅಳವಡಿಸಿಕೊಂಡಿರುವ 5, 8, 9 ಮತ್ತು 11ನೇ ತರಗತಿಗಳಿಗೆ … Continued

ಅಪೆಕ್ಸ್ ಬ್ಯಾಂಕಿಗೆ ₹439 ಕೋಟಿ ಸಾಲ ಮರುಪಾವತಿಸದ ಪ್ರಕರಣ: ತನಿಖೆಗೆ ಸಹಕರಿಸಲು ಶಾಸಕ ರಮೇಶ ಜಾರಕಿಹೊಳಿಗೆ ಹೈಕೋರ್ಟ್‌ ಸೂಚನೆ

ಬೆಂಗಳೂರು : ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆ ಅಭಿವೃದ್ಧಿಗೆ ಪಡೆದ ಸಾಲ ಮರುಪಾವತಿಸದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಿಚಾರಣೆಗೆ ಸಹಕರಿಸುವಂತೆ ಬಿಜೆಪಿ ಶಾಸಕ ರಮೇಶ ಜಾರಕಿಹೊಳಿ ಸೇರಿದಂತೆ ಎಲ್ಲ ಆರೋಪಿಗಳಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ಅಲ್ಲದೆ, ಬಂಧನದಂಥ ಕ್ರಮಕ್ಕೆ ಮುಂದಾಗುವಾಗ ನ್ಯಾಯಾಲಯದ ಅನುಮತಿ ಪಡೆಯುವುದು ಕಡ್ಡಾಯ ಎಂದು ಶುಕ್ರವಾರ ಆದೇಶಿಸಿದೆ. ಕರ್ನಾಟಕ ರಾಜ್ಯ ಸಹಕಾರ ಅಪೆಕ್ಸ್ ಬ್ಯಾಂಕ್ … Continued

ಸಿಎಂ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಅನಂತ ಕುಮಾರ ಹೆಗಡೆ ವಿರುದ್ಧ ಮುಂಡಗೋಡು ಠಾಣಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ಶುಕ್ರವಾರ ತಡೆ ನೀಡಿದೆ. ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಅನಂತ ಕುಮಾರ ಹೆಗಡೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ … Continued

ಸರ್ಕಾರದ ಸುತ್ತೋಲೆ ಎತ್ತಿ ಹಿಡಿದ ಹೈಕೋರ್ಟ್ : 5, 8, 9ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಪರೀಕ್ಷೆ ನಡೆಸಲು ವಿಭಾಗೀಯ ಪೀಠ ಅನುಮತಿ

ಬೆಂಗಳೂರು : ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್‌ ಪರೀಕ್ಷೆ ನಡೆಸಲು ಹೈಕೋರ್ಟ್‌ ವಿಭಾಗೀಯ ಪೀಠ ಗುರುವಾರ ಅನುಮತಿ ನೀಡಿದೆ. ಹೀಗಾಗಿ, ಪರೀಕ್ಷೆ ನಡೆಸುವ ಕುರಿತು ಉಂಟಾಗಿದ್ದ ಗೊಂದಲ ದೂರವಾಗಿದೆ. ಕಳೆದ ವರ್ಷದ ಅಕ್ಟೋಬರ್‌ ಮತ್ತು ನವೆಂಬರ್‌ನಲ್ಲಿ ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಅಧಿಸೂಚನೆಗಳನ್ನು ಮಾರ್ಚ್‌ 6ರಂದು ಏಕಸದಸ್ಯ … Continued

5, 8, 9, 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ರದ್ದು : ಹೈಕೋರ್ಟ್ ಆದೇಶ

ಬೆಂಗಳೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5, 8, 9 ಮತ್ತು 11ನೇ ತರಗತಿ ಮಕ್ಕಳಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ರದ್ದುಪಡಿಸಿದೆ. ರಾಜ್ಯ ಪಠ್ಯಕ್ರಮದ ಶಾಲೆಗಳ 5, 8, 9 ಮತ್ತು 11ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾಮಟ್ಟದ ಮೌಲ್ಯಮಾಪನಕ್ಕೆ ಬದಲಾಗಿ ರಾಜ್ಯ … Continued

ಜಯಲಲಿತಾ ಚಿನ್ನಾಭರಣ ಹಸ್ತಾಂತರಿಸುವ ಪ್ರಕ್ರಿಯೆಗೆ ಹೈಕೋರ್ಟ್‌ ತಡೆ

ಬೆಂಗಳೂರು : ಬೆಂಗಳೂರಿನ ವಿಶೇಷ ನ್ಯಾಯಾಲಯದ ಸುಪರ್ದಿಯಲ್ಲಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅವರ ಚಿನ್ನಾಭರಣಗಳು ಮತ್ತು ಇತರ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ. ಮಾರ್ಚ್‌ 6 ಮತ್ತು 7ರಂದು ಜಯಲಲಿತಾ ಅವರ ವಸ್ತುಗಳನ್ನು ತಮಿಳುನಾಡು ಸರ್ಕಾರಕ್ಕೆ ಹಸ್ತಾಂತರಿಸುವ ವಿಶೇಷ ಸಿಬಿಐ ನ್ಯಾಯಾಲಯದ ಪ್ರಕ್ರಿಯೆಗೆ … Continued

ಮುರುಘಾ ಮಠದ ಆಡಳಿತ ನಿರ್ವಹಣೆಗೆ 3 ದಿನದಲ್ಲಿ ಸಮಿತಿ ರಚಿಸಿ: ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ನವದೆಹಲಿ : ಚಿತ್ರದುರ್ಗದ ಮುರುಘಾ ಮಠ ಮತ್ತು ಎಸ್‌ಜೆಎಂ ವಿದ್ಯಾಪೀಠದ ಆಡಳಿತ ನಿರ್ವಹಣೆಗೆ ಪೋಕ್ಸೊ ಪ್ರಕರಣದಲ್ಲಿ ಆರೋಪಿಯಾಗಿರುವ ಡಾ. ಶಿವಮೂರ್ತಿ ಮುರುಘಾ ಶರಣರು ಮತ್ತು ಎಚ್‌.ಏಕಾಂತಯ್ಯ (ಅರ್ಜಿದಾರ) ಅವರನ್ನು ಹೊರಗಿಟ್ಟು ಮೂರು ದಿನಗಳಲ್ಲಿ ಸಮಿತಿ ರಚಿಸಬೇಕು ಎಂದು ಮಂಗಳವಾರ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಆದೇಶಿಸಿದೆ. ಎಚ್‌. ಏಕಾಂತಯ್ಯ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು … Continued