ಗೂಂಡಾ ಕಾಯಿದೆ: ಸರ್ಕಾರದ ಆದೇಶ ವಜಾ ಮಾಡಿದ ಹೈಕೋರ್ಟ್‌; ಅರ್ಜಿದಾರರಿಗೆ‌ ತಿಂಗಳೊಳಗೆ 25 ಸಾವಿರ ರೂ. ಪರಿಹಾರಕ್ಕೆ ನಿರ್ದೇಶನ

ಬೆಂಗಳೂರು: ಆರೋಪಿಯ ಮನವಿ ಪರಿಗಣಿಸದೇ ಕಾನೂನುಬಾಹಿರವಾಗಿ ಅರ್ಜಿದಾರರನ್ನು ಕರ್ನಾಟಕದಲ್ಲಿ ವಸ್ತುಗಳ ಕಾನೂನುಬಾಹಿರ ಮಾರಾಟ, ಮಾದಕ ವಸ್ತುಗಳ ಕಾನೂನುಬಾಹಿರ ಮಾರಾಟ, ಜೂಜುಕೋರರು, ಗೂಂಡಾಗಳು (ಅನೈತಿಕ ಟ್ರಾಫಿಕ್‌ ಅಫೆಂಡರ್ಸ್‌, ಕೊಳಚೆ ಪ್ರದೇಶಗಳ ಲೂಟಿಕೋರರು ಮತ್ತು ವಿಡಿಯೊ ಅಥವಾ ಆಡಿಯೊ ಖದೀಮರು) ನಿಯಂತ್ರಣ ಕಾಯಿದೆ 1985ರ ಅಡಿ ಮುಂಜಾಗ್ರತೆಯಿಂದ ವಶಕ್ಕೆ ಪಡೆದಿದ್ದ ರಾಜ್ಯ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ … Continued

ಚಕ್ಕಡಿ, ಗೂಳಿ ಸ್ಪರ್ಧೆಗೆ ಅನುಮತಿ: ಸುಪ್ರೀಂ ಕೋರ್ಟ್‌ ವಿಧಿಸಿರುವ ಷರತ್ತು ಪಾಲಿಸುವಂತೆ ಸೂಚಿಸಿದ ಹೈಕೋರ್ಟ್‌

ಬೆಂಗಳೂರು: ಸುಪ್ರೀಂ ಕೋರ್ಟ್‌ ವಿಧಿಸಿರುವ ಷರತ್ತುಗಳನ್ನು ಪಾಲಿಸುವಂತೆ ಸೂಚಿಸಿರುವ ಹೈಕೋರ್ಟ್‌ ಗೂಳಿ, ಚಕ್ಕಡಿ ಸ್ಪರ್ಧೆ ನಡೆಸಲು ಅನುಮತಿಸಲು ರಾಜ್ಯ ಸರ್ಕಾರಕ್ಕೆ ಬುಧವಾರ ಅವಕಾಶ ಮಾಡಿಕೊಟ್ಟಿದೆ. ಹೈಕೋರ್ಟ್‌ ಈ ಸಂಬಂಧ ಸಲ್ಲಿಕೆಯಾಗಿದ್ದ ಮನವಿಯನ್ನು ವಿಲೇವಾರಿ ಮಾಡಿದೆ.ಮಂಡ್ಯ ಜಿಲ್ಲೆಯಲ್ಲಿ ಚಕ್ಕಡಿ ಸ್ಪರ್ಧೆ ನಡೆಸಲು ಅನುಮತಿಸದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಮೈಸೂರು ಪ್ರಾಣಿ ದಯಾ ಸಂಘ ಸಲ್ಲಿಸಿದ್ದ ಮನವಿಯ … Continued

ತಜ್ಞರ ಸಮಿತಿ ತೀರ್ಮಾನಿಸುವ ವರೆಗೆ ದ್ವಿತೀಯ ಪಿಯು ಫಲಿತಾಂಶ ಪ್ರಕಟ ಬೇಡ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ರಾಜ್ಯ ಸರ್ಕಾರವು ರಚಿಸಿದ ತಜ್ಞರ ಸಮಿತಿಯು ಸಮಗ್ರ ನಿರ್ಧಾರವನ್ನು ತೆಗೆದುಕೊಳ್ಳುವ ವರೆಗೆ ಈ ಸಾಲಿನ ದ್ವಿತೀಯ ಪಿಯು ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸದಂತೆ ಕರ್ನಾಟಕ ಹೈಕೋರ್ಟ್ ಗುರುವಾರ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ರಿಪೀಟರ್ಸ್‌ ಸೇರಿದಂತೆ ಎಲ್ಲ ವರ್ಗದ ವಿದ್ಯಾರ್ಥಿಗಳನ್ನು ಮನಸ್ಸಿನಲ್ಲಿಟ್ಟು ಈ ಆದೇಶ ಹೊರಡಿಸಲಾಗಿದೆ. ನ್ಯಾಯಮೂರ್ತಿ ಬಿ.ವಿ ನಾಗರತ್ನ ಮತ್ತು ನ್ಯಾಯಮೂರ್ತಿ ಹಂಚಾಟೆ ಸಂಜೀವಕುಮಾರ್ … Continued

ಆರೋಗ್ಯ ಸಚಿವರಿಗೆ ಹೈಕೋರ್ಟ್ ನೊಟೀಸ್‌

ಬೆಂಗಳೂರು: ಬೆಂಗಳೂರು ನಗರದಲ್ಲಿ ಆ್ಯಂಬುಲೆನ್ಸ್‌ಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಆ್ಯಂಬುಲೆನ್ಸ್‌ ನಿರ್ವಹಣಾ ವ್ಯವಸ್ಥೆ ಜಾರಿಗೊಳಿಸಲು ಕರೆಯಲಾಗಿದ್ದ 1,800 ಕೋಟಿ ರೂ. ಮೊತ್ತದ ಟೆಂಡರ್‌ ರದ್ದುಪಡಿಸಿದ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಭಾರತ್‌ ಪುನರುತ್ಥಾನ ಟ್ರಸ್ಟ್‌ ಸಲ್ಲಿಸಿದ್ದ ಪಿಐಎಲ್‌ ಕುರಿತು ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕ್‌ … Continued