ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್‌ ಜಾಮೀನು ರದ್ದತಿಗೆ ಸುಪ್ರೀಂಕೋರ್ಟ್‌ ನಕಾರ

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿರುವ ನಟ ದರ್ಶನ್‌, ಪವಿತ್ರಾಗೌಡ ಸೇರಿ ಏಳು ಆರೋಪಿಗಳ ಜಾಮೀನು ರದ್ದುಪಡಿಸಲು ನಿರಾಕರಿಸಿರುವ ಸುಪ್ರೀಂ ಕೋರ್ಟ್‌ ಶುಕ್ರವಾರ ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಿದೆ. ನಟ ದರ್ಶನ್‌, ಪವಿತ್ರಾ ಗೌಡ ಸೇರಿ ಏಳು ಮಂದಿಗೆ ಕರ್ನಾಟಕ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ವಿಶೇಷ ಮೇಲ್ಮನವಿಯನ್ನು … Continued

ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ವಿರುದ್ಧ ಅವಾಚ್ಯ ಶಬ್ದ ಬಳಕೆ ಆರೋಪದ ಪ್ರಕರಣ :ಸಿ.ಟಿ.ರವಿಗೆ ಸದ್ಯಕ್ಕೆ ರಿಲೀಫ್‌ ನೀಡಿದ ಹೈಕೋರ್ಟ್‌

ಬೆಂಗಳೂರು : ವಿಧಾನ ಪರಿಷತ್‌ನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿಯ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ವಿರುದ್ಧ ಯಾವುದೇ ಆತುರದ ಕ್ರಮಕೈಗೊಳ್ಳಬಾರದು ಎಂದು ಹೈಕೋರ್ಟ್‌ ಗುರುವಾರ ರಾಜ್ಯ ಸರ್ಕಾರಕ್ಕೆ ಮಧ್ಯಂತರ ಆದೇಶ ಮಾಡಿದೆ. ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದ … Continued

ಪೋಕ್ಸೋ ಪ್ರಕರಣ ರದ್ದತಿಗೆ ಯಡಿಯೂರಪ್ಪ ಕೋರಿಕೆ: ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಮ್ಮ ವಿರುದ್ಧದ ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಶುಕ್ರವಾರ ಹೈಕೋರ್ಟ್ ನಡೆಸಿದ್ದು ತೀರ್ಪನ್ನು ಕಾಯ್ದಿರಿಸಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಯಡಿಯೂರಪ್ಪ ಅವರ ಖುದ್ದು ಹಾಜರಿಗೆ ನೀಡಿದ್ದ ವಿನಾಯಿತಿಯನ್ನು ವಿಸ್ತರಿಸಿದೆ.ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ಬಿಎಸ್‌ವೈ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿತು. ಬಿಎಸ್‌ವೈ ಪರವಾಗಿ … Continued

ಭವಿಷ್ಯ ನಿಧಿ ವಂಚನೆ ಪ್ರಕರಣ : ರಾಬಿನ್‌ ಉತ್ತಪ್ಪಗೆ ರಿಲೀಫ್‌ ನೀಡಿದ ಹೈಕೋರ್ಟ್‌

ಬೆಂಗಳೂರು : ತಾನು ಸಹ ಪಾಲುದಾರನಾಗಿರುವ ಕಂಪನಿಯಲ್ಲಿನ ಸಿಬ್ಬಂದಿಗೆ ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್‌) ಹಣ ಪಾವತಿ ಮಾಡದೆ ವಂಚಿಸಿದ ಆರೋಪದ ಮೇಲೆ ಭಾರತದ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ವಿರುದ್ಧ ಹೊರಡಿಸಲಾಗಿದ್ದ ವಾರೆಂಟ್‌ಗೆ ಕರ್ನಾಟಕ ಹೈಕೋರ್ಟ್ ತಡೆ ನೀಡಿದೆ. ಪ್ರಾದೇಶಿಕ ಭವಿಷ್ಯನಿಧಿ ಆಯುಕ್ತರು ಹೊರಡಿಸಿರುವ ವಸೂಲಿ (ರಿಕವರಿ) ನೋಟಿಸ್ ಮತ್ತು ಬಂಧನ ವಾರೆಂಟ್ ಪ್ರಶ್ನಿಸಿ … Continued

ಸಚಿವೆ ಹೆಬ್ಬಾಳ್ಕರ ವಿರುದ್ಧ ಅಶ್ಲೀಲ ಪದ ಬಳಕೆ ಪ್ರಕರಣ : ತಕ್ಷಣವೇ ಶಾಸಕ ಸಿ ಟಿ ರವಿ ಬಿಡುಗಡೆ ಮಾಡಲು ಹೈಕೋರ್ಟ್‌ ಆದೇಶ

ಬೆಂಗಳೂರು : ಮಹಿಳೆ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ ಅವರ ವಿರುದ್ಧ ವಿಧಾನ ಪರಿಷತ್‌ನಲ್ಲಿ ಅಶ್ಲೀಲ ಪದ ಬಳಕೆಯ ಆರೋಪದ ಮೇಲೆ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದ ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ ಟಿ ರವಿ ಅವರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಮಧ್ಯಂತರ ಆದೇಶ … Continued

ಭೋವಿ ನಿಗಮದ ಹಗರಣದ ತನಿಖೆಯನ್ನು ಸಿಬಿಐಗೆ ಯಾಕೆ ವಹಿಸಬಾರದು?; ಹೈಕೋರ್ಟ್‌

ಬೆಂಗಳೂರು : ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿಗಳ ಅವ್ಯವಹಾರದ ಆರೋಪಕ್ಕೆ ಸಂಬಂಧಿಸಿದ ಹಗರಣದ ಪ್ರಮುಖ ಆರೋಪಿಗಳನ್ನು ಬಂಧಿಸಿಲ್ಲ” ಎಂಬ ಅರ್ಜಿದಾರರ ಆಕ್ಷೇಪಣೆಯನ್ನು ಗಂಭೀರವಾಗಿ ಪರಿಗಣಿಸಿದ ಕರ್ನಾಟಕ ಹೈಕೋರ್ಟ್‌ “ಈ ಹಗರಣದ ತನಿಖೆಯನ್ನು ಸಿಬಿಐಗೆ ಏಕೆ ವಹಿಸಬಾರದು” ಎಂದು ರಾಜ್ಯ ಸರ್ಕಾರವನ್ನು ಪ್ರಶ್ನಿಸಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ. ಸಿದ್ದಾ‍ಪುರ ಪೊಲೀಸ್‌ … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾಗೌಡ ಸೇರಿ ಏಳು ಮಂದಿಗೆ ಹೈಕೋರ್ಟ್‌ನಿಂದ ಜಾಮೀನು

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್‌, ಪವಿತ್ರಾಗೌಡ ಸೇರಿದಂತೆ ಏಳು ಜನರಿಗೆ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಜಾಮೀನು ಮಂಜೂರುಮಾಡಿದೆ. ಸುದೀರ್ಘ ವಾದ-ಪ್ರತಿವಾದ ಆಲಿಸಿ ಡಿಸೆಂಬರ್‌ 9ರಂದು ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರ ಏಕಸದಸ್ಯ ಪೀಠವು ಇಂದು, ಶುಕ್ರವಾರ ಪ್ರಕಟಿಸಿದೆ. ಆರೋಪಿಗಳಾದ ನಟ ದರ್ಶನ್‌, ಪವಿತ್ರಾಗೌಡ, ಆರ್‌ … Continued

ರಾಹುಲ್‌ ಗಾಂಧಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಆರೋಪ : ಶಾಸಕ ಯತ್ನಾಳ ವಿರುದ್ದದ ಎಫ್‌ ಐಆರ್‌ ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು : ಲೋಕಸಭೆ ವಿಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಮುಖಂಡ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ಕರ್ನಾಟಕ ಹೈಕೋರ್ಟ್ ಗುರುವಾರ ರದ್ದುಪಡಿಸಿದೆ. ವಿಜಯಪುರ ಶಾಸಕ ಯತ್ನಾಳ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಪುರಸ್ಕರಿಸಿತು. ವಿಚಾರಣೆ ವೇಳೆ … Continued

ಕನ್ನಡದಲ್ಲೇ ತೀರ್ಪು ಪ್ರಕಟಿಸಿದ ಕರ್ನಾಟಕ ಹೈಕೋರ್ಟ್‌

ಬೆಂಗಳೂರು : ಕನ್ನಡ ಆಡಳಿತ ಭಾಷೆಯಷ್ಟೇ ಅಲ್ಲ, ನ್ಯಾಯದಾನದ ಭಾಷೆಯೂ ಆಗಬೇಕು ಎಂಬುದಕ್ಕೆ ಸ್ಪಂದಿಸಿರುವ ಕರ್ನಾಟಕ ಹೈಕೋರ್ಟ್‌ ಗುರುವಾರ ಪ್ರಕರಣವೊಂದಕ್ಕೆ ಸಂಬಂಧಿಸಿ ಕನ್ನಡದಲ್ಲಿಯೇ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ಕೃಷ್ಣ ಎಸ್.‌ ದೀಕ್ಷಿತ್‌ ಮತ್ತು ಸಿ.ಎಂ. ಜೋಶಿ ಅವರಿದ್ದ ವಿಭಾಗೀಯ ಪೀಠವು ಕನ್ನಡದಲ್ಲೇ ತೀರ್ಪು ನೀಡಿದೆ. ತುಮಕೂರಿನ ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿಯಲ್ಲಿರುವ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದ … Continued

ರೈತನ ಆತ್ಮಹತ್ಯೆ ಸುಳ್ಳು ಸುದ್ದಿ ಟ್ವೀಟ್‌ ಮಾಡಿದ ಆರೋಪ ; ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಪ್ರಕರಣ ರದ್ದು

ಬೆಂಗಳೂರು : ಜಮೀನಿನ ಪಹಣಿಯಲ್ಲಿ ವಕ್ಫ್‌ ಆಸ್ತಿ ಎಂದು ನಮೂದಾಗಿರುವುದರಿಂದ ಹಾವೇರಿ ಜಿಲ್ಲೆಯ ಹರನಗಿ ಗ್ರಾಮದ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಹರಿಬಿಟ್ಟ ಆರೋಪಿತ ಪ್ರಕರಣದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ ಮತ್ತು ಆನಂತರದ ನ್ಯಾಯಾಂಗ ಪ್ರಕ್ರಿಯೆಯನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ರದ್ದುಪಡಿಸಿದೆ. ಹಾವೇರಿ ಸೆನ್‌ (ಸೈಬರ್‌, … Continued