ಯಶ್‌ ನಟನೆಯ ‘ಟಾಕ್ಸಿಕ್‌ʼ ಸಿನೆಮಾ ನಿರ್ಮಾಣ ಸಂಸ್ಥೆಗೆ ಹೈಕೋರ್ಟ್‌ನಿಂದ ಸದ್ಯಕ್ಕೆ ರಿಲೀಫ್‌

ಬೆಂಗಳೂರು : ನಟ ಯಶ ಪ್ರಧಾನ ಭೂಮಿಕೆಯಲ್ಲಿರುವ ʼಟಾಕ್ಸಿಕ್‌ʼ ಸಿನಿಮಾದ ಶೂಟಿಂಗ್‌ಗಾಗಿ ಬೆಂಗಳೂರಿನ ಜಾಲಹಳ್ಳಿಯ ಎಚ್‌ಎಂಟಿ ಮೀಸಲು ಅರಣ್ಯದಲ್ಲಿ ಮರಗಳ ಹನನ ಮಾಡಲಾಗಿದೆ ಎಂದು ಆರೋಪಿಸಿ ಚಿತ್ರ ನಿರ್ಮಾಣ ಸಂಸ್ಥೆ ಕೆವಿಎನ್‌ ಮಾನ್‌ಸ್ಟರ್‌ ಮೈಂಡ್‌ ಕ್ರಿಯೇಷನ್ಸ್‌ ಎಲ್‌ಎಲ್‌ಪಿ ವಿರುದ್ಧದ ತನಿಖೆಗೆ ಮತ್ತು ವಿಚಾರಣಾಧೀನ ನ್ಯಾಯಾಲಯದಲ್ಲಿನ ನ್ಯಾಯಾಂಗ ಪ್ರಕ್ರಿಯೆಗೆ ಹೈಕೋರ್ಟ್‌ ಗುರುವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ ಎಂದು … Continued

ಮುಡಾ ಹಗರಣ | ಸಿದ್ದರಾಮಯ್ಯ ಮೇಲ್ಮನವಿ ವಿಚಾರಣೆ ಜನವರಿ 25ಕ್ಕೆ ಮುಂದೂಡಿದ ಹೈಕೋರ್ಟ್

ಬೆಂಗಳೂರು : ಭ್ರಷ್ಟಾಚಾರ ಪ್ರತಿಬಂಧಕ ಕಾಯಿದೆ ಸೆಕ್ಷನ್‌ 17ಎ ಅಡಿ ಮುಖ್ಯಮಂತ್ರಿ ವಿರುದ್ಧ ತನಿಖೆಗೆ ಅನುಮತಿಸಲು ರಾಜ್ಯಪಾಲರಿಗೆ ಅಧಿಕಾರವಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠದ ಮುಂದೆ ರಾಜ್ಯ ಸರ್ಕಾರ ವಾದಿಸಿತು. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯಪಾಲರು ಅನುಮತಿಸಿರುವುದನ್ನು ಎತ್ತಿ ಹಿಡಿದಿದ್ದ ಏಕಸದಸ್ಯ ಪೀಠದ ಆದೇಶದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಮೇಲ್ಮನವಿ, … Continued

ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ : ತನಿಖೆಗೆ ಎಸ್‌ಐಟಿ ರಚಿಸಿ ಹೈಕೋರ್ಟ್‌ ಆದೇಶ; ವರದಿ ಸಲ್ಲಿಕೆಗೆ 3 ತಿಂಗಳ ಗಡುವು

ಬೆಂಗಳೂರು : ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ತನಿಖೆಯ ನೆಪದಲ್ಲಿ ಸಿಐಡಿ ಪೊಲೀಸರು ನೀಡಿದ ಕಿರುಕುಳದಿಂದ ಮನನೊಂದು ವಕೀಲೆ ಎಸ್‌ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪಿತ ಪ್ರಕರಣದ ತನಿಖೆ ನಡೆಸಲು ಕರ್ನಾಟಕ ಹೈಕೋರ್ಟ್‌ ಬುಧವಾರ ಮೂವರು ಐಪಿಎಸ್‌ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ. ಹಾಗೂ ಮೂರು ತಿಂಗಳಲ್ಲಿ ವರದಿ … Continued

ಚುನಾವಣಾ ಬಾಂಡ್ ಪ್ರಕರಣ: ನಡ್ಡಾ, ನಿರ್ಮಲಾ ಸೀತಾರಾಮನ್‌, ಕಟೀಲು ನಿರಾಳ

ಬೆಂಗಳೂರು : ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಮಾಜಿ ಸಂಸದ ನಳೀನಕುಮಾರ ಕಟೀಲು ಅವರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಬಿಜೆಪಿಯ ರಾಷ್ಟ್ರ ಮತ್ತು ರಾಜ್ಯ ಘಟಕಗಳು ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಂಡು ಸುಲಿಗೆ ಮಾಡಿರುವ … Continued

ಸಿಬಿಐನಿಂದ ಮುಡಾ ಪ್ರಕರಣದ ತನಿಖೆ ಕೋರಿ ಅರ್ಜಿ : ಡಿ.10ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕುಟುಂಬದ ವಿರುದ್ಧದ ಆರೋಪ ಒಳಗೊಂಡ ಮುಡಾ ಪ್ರಕರಣವನ್ನು ಹೈಕೋರ್ಟ್‌ನ ಹಾಲಿ ನ್ಯಾಯಮೂರ್ತಿ ನಿಗಾವಣೆಯಲ್ಲಿ ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಡಿಸೆಂಬರ್‌ 10ಕ್ಕೆ ಮುಂದೂಡಿದೆ. ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಅರ್ಜಿ ಇಂದು, ಮಂಗಳವಾರ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ … Continued

ಸಂಸದ ತೇಜಸ್ವಿ ಸೂರ್ಯ ವಿರುದ್ಧದ ಎಫ್‌ಐಆರ್‌ ಗೆ ತಡೆ ನೀಡಿದ ಹೈಕೋರ್ಟ್‌

ಬೆಂಗಳೂರು : ಜಮೀನಿನ ಪಹಣಿಯಲ್ಲಿ ವಕ್ಫ್‌ ಆಸ್ತಿ ನಮೂದಾಗಿದೆ ಎಂದು ಹಾವೇರಿ ಜಿಲ್ಲೆಯ ಹರನಗಿ ಗ್ರಾಮದ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಹರಿಬಿಟ್ಟ ಆರೋಪಿತ ಪ್ರಕರಣದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್‌ ಗುರುವಾರ ತಡೆಯಾಜ್ಞೆ ನೀಡಿದೆ. ಹಾವೇರಿ ಸೆನ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಬೇಕು ಎಂದು … Continued

ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಸಿಬಿಐ ತನಿಖೆಗೆ ಒಪ್ಪಿಸಲು ಹೈಕೋರ್ಟ್‌ ನಕಾರ

ಬೆಂಗಳೂರು : ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಬುಧವಾರ ವಜಾ ಮಾಡಿದೆ. ಅರ್ಜಿಯ ಊರ್ಜಿತತ್ವಕ್ಕೆ ಸಂಬಂಧಿಸಿದಂತೆ ವಾದ-ಪ್ರತಿವಾದ ಆಲಿಸಿ ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಬುಧವಾರ ಪ್ರಕಟಿಸಿದೆ. … Continued

ಬೆದರಿಕೆ ಆರೋಪ: ಎಚ್‌ಡಿ ಕುಮಾಸ್ವಾಮಿ ವಿರುದ್ಧ ಕ್ರಮ ಕೈಗೊಳ್ಳದಂತೆ ಹೈಕೋರ್ಟ್‌ ಆದೇಶ

ಬೆಂಗಳೂರು : ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯ ಖರ್ಚಿಗೆ ₹50 ಕೋಟಿ ರೂಪಾಯಿ ಬೇಡಿಕೆ ಇಟ್ಟು ಬೆದರಿಕೆ ಹಾಕಿದ ಆರೋಪಿತ ಪ್ರಕರಣದಲ್ಲಿ ಕೇಂದ್ರ ಸಚಿವ ಎಚ್‌. ಡಿ. ಕುಮಾರಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮಕೈಗೊಳ್ಳದಂತೆ ಪೊಲೀಸರಿಗೆ ಹೈಕೋರ್ಟ್ ಗುರುವಾರ ಮಧ್ಯಂತರ ಆದೇಶ ಮಾಡಿದೆ. ರಿಯಲ್‌ ಎಸ್ಟೇಟ್‌ ಉದ್ಯಮಿ ಮತ್ತು ಜೆಡಿಎಸ್‌ ಮಾಜಿ ಮುಖಂಡ ವಿಜಯ ಟಾಟಾ ಅವರ … Continued

ಬಿಜೆಪಿ ಅಧ್ಯಕ್ಷ ನಡ್ಡಾ ವಿರುದ್ಧ ಶಿಗ್ಗಾವಿಯಲ್ಲಿ ದಾಖಲಾಗಿದ್ದ ಪ್ರಕರಣ ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆ ವೇಳೆ ಸಾರ್ವಜನಿಕ ಹೇಳಿಕೆ ನೀಡುವ ಮೂಲಕ ಮತದಾರರ ಮೇಲೆ ಪ್ರಭಾವ ಬೀರಿದ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆ ಪಿ ನಡ್ಡಾ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ರದ್ದುಪಡಿಸಿದೆ. ಚುನಾವಣಾ ಪ್ರಚಾರದ ವೇಳೆ ನಡ್ಡಾ ಅವರು “ಬಿಜೆಪಿಗೆ ಮತ ನೀಡಿ … Continued

ಎಚ್‌.ಡಿ.ಕುಮಾರಸ್ವಾಮಿ, ನಿಖಿಲ್‌ ವಿರುದ್ಧ ಬಲವಂತದ ಕ್ರಮ ಬೇಡ : ಹೈಕೋರ್ಟ್‌

ಬೆಂಗಳೂರು : ಲೋಕಾಯುಕ್ತ ವಿಶೇಷ ಪೊಲೀಸ್‌ ತನಿಖಾ ದಳದ (ಎಸ್‌ಐಟಿ) ಮುಖ್ಯಸ್ಥ ಎಂ ಚಂದ್ರಶೇಖರ ಅವರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ದಾಖಲಾಗಿರುವ ಎಫ್‌ಐಆರ್‌ ಸಂಬಂಧ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ, ಅವರ ಪುತ್ರ ನಿಖಿಲ್‌ ಮತ್ತು ಜೆಡಿಎಸ್‌ ಶಾಸಕ ಸುರೇಶಬಾಬು ವಿರುದ್ಧ ಯಾವುದೇ ಬಲವಂತದ ಕ್ರಮಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್‌ ಬುಧವಾರ ರಾಜ್ಯ ಸರ್ಕಾರಕ್ಕೆ … Continued