ಚಿತ್ತಾಪುರದಲ್ಲಿ ಆರ್‌ ಎಸ್‌ ಎಸ್ ಪಥಸಂಚಲನಕ್ಕೆ ಹೈಕೋರ್ಟ್ ಅನುಮತಿ

ಕಲಬುರಗಿ : ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ನೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಕಲಬುರ್ಗಿಯ ಜಿಲ್ಲೆಯ ಚಿತ್ತಾಪುರದಲ್ಲಿ ನವೆಂಬರ್ 16ರಂದು ನಡೆಸಲು ಉದ್ದೇಶಿಸಿರುವ ಆರ್‌ಎಸ್‌ಎಸ್ ಪಥಸಂಚಲನಕ್ಕೆ ಹೈಕೋರ್ಟ್‌ ಅನುಮತಿ ನೀಡಿದೆ. ಪಥಸಂಚಲನಕ್ಕೆ ಅನುಮತಿ ನಿರಾಕರಿಸಿದ್ದ ತಹಶೀಲ್ದಾರ್ ಕ್ರಮ ಪ್ರಶ್ನಿಸಿ ಆರ್‌ಎಸ್‌ಎಸ್ ಕಲಬುರಗಿ ಜಿಲ್ಲಾ ಸಂಚಾಲಕ ಅಶೋಕ ಪಾಟೀಲ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ ಜಿ … Continued

ಧರ್ಮಸ್ಥಳ ಪ್ರಕರಣ; ಎಸ್‌ಐಟಿ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆ ತೆರವು

ಬೆಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಡಲಾಗಿದೆ ಎನ್ನಲಾದ ಪ್ರಕರಣದ (Dharmasthala case) ಬಗ್ಗೆ ಎಸ್‌ಐಟಿ ತನಿಖೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ಧರ್ಮಸ್ಥಳದಲ್ಲಿ ಅಸಹಜ ಸಾವುಗಳಿಗೆ ಸಂಬಂಧಿಸಿದ ಹಲವಾರು ಶವಗಳನ್ನು ಹೂಳಲಾಗಿದೆ ಎನ್ನಲಾದ ಪ್ರಕರಣ ಕುರಿತು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದ ಮುಂದಿನ ಎಲ್ಲ ಪ್ರಕ್ರಿಯೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್‌ … Continued

ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಸ್ಥೆಗಳ ಚಟುವಟಿಕೆಗೆ ನಿರ್ಬಂಧ: ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆ

ಬೆಂಗಳೂರು : ಸರ್ಕಾರಿ ಆವರಣದಲ್ಲಿ ಚಟುವಟಿಕೆಗಳನ್ನು ನಡೆಸಲು ಖಾಸಗಿ ಸಂಸ್ಥೆಗಳು ಪೂರ್ವಾನುಮತಿ ಪಡೆಯುವುದನ್ನು ಕಡ್ಡಾಯಗೊಳಿಸುವ ರಾಜ್ಯ ಸರ್ಕಾರದ ಇತ್ತೀಚಿನ ನಿರ್ದೇಶನಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ತಡೆ ನೀಡಿದೆ. ಇದರಿಂದ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್​ನಲ್ಲಿ ಹಿನ್ನಡೆಯಾಗಿದೆ. ರಸ್ತೆ, ಉದ್ಯಾನ, ಆಟದ ಮೈದಾನ ಸೇರಿ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ 10ಕ್ಕೂ ಅಧಿಕ ಮಂದಿ ಗುಂಪು ಸೇರಲು ಸರ್ಕಾರದ ಅನುಮತಿ … Continued

ಚಿತ್ತಾಪುರದಲ್ಲಿ ಆರ್‌ ಎಸ್‌ ಎಸ್‌ ಪಥಸಂಚಲ ; ಹೊಸದಾಗಿ ಅರ್ಜಿ ಸಲ್ಲಿಸಲು ಹೈಕೋರ್ಟ್‌ ಸೂಚನೆ

ಕಲಬುರಗಿ : ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ನೂರು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಮತ್ತು ವಿಜಯದಶಮಿ ಉತ್ಸವದ ಭಾಗವಾಗಿ ಕಲಬುರ್ಗಿ ಜಿಲ್ಲೆಯ ಚಿತ್ತಾಪುರದಲ್ಲಿ ನವೆಂಬರ್‌ 2ಕ್ಕೆ ಉದ್ದೇಶಿಸಿರುವ ಆರ್‌ಎಸ್‌ಎಸ್‌ ಪಥಸಂಚಲನ, ಸ್ಥಳ ಮತ್ತು ಸಮಯಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟವಾಗಿ ಕೈಗೊಂಡಿರುವ ನಿರ್ಣಯದ ವರದಿಯನ್ನು ಅಕ್ಟೋಬರ್‌ 24ಕ್ಕೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಭಾನುವಾರ ನಿರ್ದೇಶಿಸಿದೆ. ಚಿತ್ತಾಪುರದಲ್ಲಿ … Continued

ಪರಿಶಿಷ್ಟ ಜಾತಿಗಳ ಒಳಮೀಸಲಾತಿ ; ಸಂಪುಟದ ನಿರ್ಣಯ ಪ್ರಶ್ನಿಸಿ ಹೈಕೋರ್ಟಿ​ಗೆ ಅರ್ಜಿ

ಬೆಂಗಳೂರು : ರಾಜ್ಯದಲ್ಲಿರುವ 101 ಪರಿಶಿಷ್ಟ ಜಾತಿಗಳ ವರ್ಗೀಕರಣ ಹಾಗೂ ಒಳಮೀಸಲಾತಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಚ್ ನಾಗಮೋಹನದಾಸ್ ಆಯೋಗದ ವರದಿ ಆಧರಿಸಿ 2025ರ ಆಗಸ್ಟ್ 19ರಂದು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿರುವ ನಿರ್ಣಯಕ್ಕೆ ಆಕ್ಷೇಪಿಸಿ ಬಂಜಾರ, ಭೋವಿ, ಕೊರಮ ಮತ್ತು ಕೊರಚ ಸಮುದಾಯಗಳು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿವೆ. ಬಂಜಾರ, ಭೋವಿ, ಕೊರಮ, ಕೊರಚ ಸಮಾಜ … Continued

ಮಹೇಶ ಶೆಟ್ಟಿ ತಿಮರೋಡಿ ಗಡಿಪಾರಿಗೆ ಹೈಕೋರ್ಟ್ ಮಧ್ಯಂತರ ತಡೆ

ಬೆಂಗಳೂರು : ಮಹೇಶ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ‌ ಕನ್ನಡ ಜಿಲ್ಲೆಯಿಂದ ಒಂದು ವರ್ಷದ ಅವಧಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿರುವ ಆದೇಶವನ್ನು ಅಕ್ಟೋಬರ್ 8ರ ವರೆಗೆ ಜಾರಿಗೊಳಿಸದಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಮಧ್ಯಂತರ ಆದೇಶ ಮಾಡಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತರಾದ … Continued

ಅತ್ಯಾಚಾರ ಪ್ರಕರಣ : ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು : ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ದುಷ್ಕೃತ್ಯದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ಜೀವಿತಾವಧಿ ಜೈಲು ಶಿಕ್ಷೆ ರದ್ದುಗೊಳಿಸುವಂತೆ ಕೋರಿ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಹೈಕೋರ್ಟ್‌ಗೆ ಕ್ರಿಮಿನಲ್‌ ಮೇಲ್ಮನವಿ ಸಲ್ಲಿಸಿದ್ದಾರೆ. ಬಾರ್‌ & ಬೆಂಚ್‌ ವರದಿ ಪ್ರಕಾರ, ವಕೀಲ ಬಸವರಾಜ ಸಪ್ಪಣ್ಣವರ ಮೂಲಕ ಕ್ರಿಮಿನಲ್‌ … Continued

ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್‌ ನಕಾರ; ಆದರೆ ಕೆಲ ಷರತ್ತುಗಳು ಅನ್ವಯ

ಬೆಂಗಳೂರು : ಸೆಪ್ಟೆಂಬರ್‌ 22ರಿಂದ ರಾಜ್ಯದಲ್ಲಿ ಆರಂಭವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ – 2025ಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್‌ ಗುರುವಾರ ನಿರಾಕರಿಸಿದೆ. ಆದರೆ, ಸಮೀಕ್ಷೆಯಲ್ಲಿ ಜನರು ಭಾಗವಹಿಸುವುದು ಕಡ್ಡಾಯವಲ್ಲ ಎಂದು ಹೇಳಿದೆ. ಅಲ್ಲದೆ, ಇಲ್ಲಿ ಸಂಗ್ರಹಿಸಿದ ದತ್ತಾಂಶವನ್ನು ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ತನ್ನನ್ನು ಹೊರತುಪಡಿಸಿ ಬೇರಾರಿಗೂ ಸೋರಿಕೆಯಾಗದಂತೆ ಗೌಪ್ಯತೆ ಕಾಯ್ದುಕೊಳ್ಳಬೇಕು ಮತ್ತು … Continued

ಸಿನಿಮಾ ಟಿಕೆಟಿಗೆ ₹200 ದರ ನಿಗದಿ ; ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು : ಮಲ್ಟಿಪ್ಲೆಕ್ಸ್ ಸೇರಿ ರಾಜ್ಯದ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಯ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂಪಾಯಿ ಏಕರೂಪ ದರ ನಿಗದಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ನಿಯಮಗಳಿಗೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ ಮಧ್ಯಂತರ ತಡೆ ನೀಡಿದೆ. ಈ ಕುರಿತಾದ ಅರ್ಜಿಗಳ ವಿಚಾರಣೆ ನಡೆಸಿ, ಕಾಯ್ದಿರಿಸಿದ್ದ ಆದೇಶವನ್ನು ನ್ಯಾಯಮೂರ್ತಿ ರವಿ ಹೊಸಮನಿ … Continued

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕಗೆ ಆಹ್ವಾನ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಿರುವ ಕರ್ನಾಟಕ ಸರ್ಕಾರದ ನಿರ್ಧಾರದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದ್ದ ರಾಜ್ಯ ಹೈಕೋರ್ಟ್‌ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. “ದೇಶದ ಸಂವಿಧಾನದ ಪ್ರಸ್ತಾವನೆ ಏನು ಹೇಳುತ್ತದೆ? ಇದು ಸರ್ಕಾರಿ ಕಾರ್ಯಕ್ರಮ, ಸರ್ಕಾರ ಭೇದ ಮಾಡಲು ಹೇಗೆ ಸಾಧ್ಯ?” ಎಂದು … Continued