ಮುಡಾ ಹಗರಣ ಸಿಬಿಐ ತನಿಖೆಗೆ ಕೋರಿ ಅರ್ಜಿ | ಸಿಎಂಗೆ ಹೈಕೋರ್ಟ್‌ ನೋಟಿಸ್‌ : ತನಿಖಾ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ

ಬೆಂಗಳೂರು : ಮುಡಾ ಹಗರಣ (MUDA scam)ಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿಎಂ ಪಾರ್ವತಿ ಸೇರಿದಂತೆ ಹಲವರಿಗೆ ನೋಟಿಸ್ ಜಾರಿ ಮಾಡಿದೆ. ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್‌ 25ರ ವರೆಗೆ ಏನೆಲ್ಲ ತನಿಖೆ ನಡೆಸಲಾಗಿದೆ ಎಂಬುದರ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಕರ್ನಾಟಕ ಹೈಕೋರ್ಟ್‌ … Continued

ಯೋಗೇಶ್ವರ ವಿರುದ್ಧ ಮಾನಹಾನಿಕರ ಹೇಳಿಕೆ ನೀಡದಂತೆ ಮಲಮಗಳ ವಿರುದ್ಧ ತಡೆಯಾಜ್ಞೆ ತಂದ ತಾಯಿ

ಬೆಂಗಳೂರು : ವಿಧಾನಸಭೆ ಉಪಚುನಾವಣೆಯಲ್ಲಿ ಚನ್ನಪಟ್ಟಣದ ಕ್ಷೇತ್ರದ ಹಾಲಿ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ. ಯೋಗೇಶ್ವರ ವಿರುದ್ಧ ಅವರ ಮೊದಲ ಪತ್ನಿಯ ಪುತ್ರಿ ನಿಶಾ ಯೋಗೇಶ್ವರ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಮಾನಹಾನಿಕರ ಅಥವಾ ಅವಹೇಳನಕಾರಿ ಹೇಳಿಕೆಗಳನ್ನು ನೀಡದಂತೆ ಸೋಮವಾರ ಕರ್ನಾಟಕ ಹೈಕೋರ್ಟ್‌ ನಿರ್ಬಂಧಿಸಿದೆ. ಮಾಜಿ ಸಚಿವ ಸಿ ಪಿ ಯೋಗೇಶ್ವರ ಪತ್ನಿ ಪಿ.ವಿ. ಶೀಲಾ ಸಲ್ಲಿಸಿರುವ ಅರ್ಜಿಯ … Continued

ನಟ ದರ್ಶನಗೆ ಮಧ್ಯಂತರ ಜಾಮೀನು: ಹೈಕೋರ್ಟ್‌ ವಿಧಿಸಿರುವ ಷರತ್ತುಗಳೇನು…?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನಗೆ ಎಂಟು ಷರತ್ತುಗಳನ್ನು ವಿಧಿಸಿ ಕರ್ನಾಟಕ ಹೈಕೋರ್ಟ್‌ ಬುಧವಾರ ಆರು ವಾರಗಳ ವೈದ್ಯಕೀಯ ಜಾಮೀನು ಮಂಜೂರು ಮಾಡಿದೆ. ಆಮ್‌ ಆದ್ಮಿ ಪಕ್ಷದ ಮುಖಂಡ ಸತ್ಯೇಂದರ್‌ ಕುಮಾರ್‌ ಜೈನ್‌ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಜನರು ತಮ್ಮ ಖರ್ಚಿನಲ್ಲಿ ತಮ್ಮ ಇಚ್ಛೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು … Continued

ಕರಾಳ ದಿನಕ್ಕೆ ಕರೆ: ಎಂಇಎಸ್‌ಗೆ ಹೈಕೋರ್ಟ್ ನೋಟಿಸ್

ಬೆಂಗಳೂರು : ಬೆಳಗಾವಿಯಲ್ಲಿ ನವೆಂಬರ್‌ 1ರಂದು ಕನ್ನಡ ರಾಜ್ಯೋತ್ಸವ ವಿರೋಧಿಸಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್‌) ನಡೆಸಲು ಉದ್ದೇಶಿಸಿರುವ ಕಾನೂನುಬಾಹಿರ ಕರಾಳ ದಿನ ಪ್ರತಿಭಟನೆಗೆ ಮಧ್ಯಂತರ ಪ್ರತಿಬಂಧಕಾದೇಶ ನೀಡುವಂತೆ ಕೋರಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರ ಮತ್ತು ಎಂಇಎಸ್‌ಗೆ ಕರ್ನಾಟಕ ಹೈಕೋರ್ಟ್‌ ಬುಧವಾರ ನೋಟಿಸ್‌ ಜಾರಿ ಮಾಡಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ಮಲ್ಲಪ್ಪ ಚಾಯಪ್ಪ ಅಕ್ಷರದ … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನಗೆ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿದ್ದ ನಟ ದರ್ಶನ್ ತೂಗುದೀಪಗೆ ಕರ್ನಾಟಕ ಹೈಕೋರ್ಟ್ 6 ವಾರಗಳ ಷರತ್ತುಬದ್ಧ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ದರ್ಶನ್ ಆರೋಗ್ಯ ಸಮಸ್ಯೆಯನ್ನು ಪರಿಗಣನೆಗೆ ತೆಗೆದುಕೊಂಡು ಕರ್ನಾಟಕ ಹೈಕೋರ್ಟ್ 45 ದಿನಗಳ ಮಧ್ಯಂತರ ಜಾಮೀನು ಮಂಜೂರು ಮಾಡಿರುವ ನ್ಯಾಯಾಲಯ ಜಾಮೀನಿಗೆ ಸಾಕಷ್ಟು ಷರತ್ತುಗಳನ್ನೂ ವಿಧಿಸಿದೆ. ಎರಡೂ ಕಡೆಯ ವಾದ ಆಲಿಸಿದ ನ್ಯಾಯಮೂರ್ತಿ … Continued

ದರ್ಶನಗೆ ವೈದ್ಯಕೀಯ ಜಾಮೀನು : ಬುಧವಾರ ಆದೇಶ ಪ್ರಕಟಿಸಲಿರುವ ಹೈಕೋರ್ಟ್‌

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್‌ ಅವರು ಬೆನ್ನುಹುರಿ ಸಮಸ್ಯೆಗಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ವೈದ್ಯಕೀಯ ಜಾಮೀನು ಕೋರಿರುವ ಮಧ್ಯಂತರ ಅರ್ಜಿಗೆ ಸಂಬಂಧಿಸಿದ ಆದೇಶವನ್ನು ಬುಧವಾರಕ್ಕೆ (ಅಕ್ಟೋಬರ್‌ 30) ಕರ್ನಾಟಕ ಹೈಕೋರ್ಟ್‌ ಕಾಯ್ದಿರಿಸಿದೆ. ಪ್ರಕರಣದಲ್ಲಿ ಜಾಮೀನು ಕೋರಿ ನಟ ದರ್ಶನ್‌ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಸ್‌ ವಿಶ್ವಜಿತ್‌ ಶೆಟ್ಟಿ ಅವರ … Continued

ಪ್ರಜ್ವಲ್ ರೇವಣ್ಣ ಮೂರು ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು : ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಒಂದು ಜಾಮೀನು ಮತ್ತು ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ವಜಾಗೊಳಿಸಿದೆ. ಪ್ರಜ್ವಲ್‌ ವಿರುದ್ಧ ಮೂರು ಅತ್ಯಾಚಾರ ಮತ್ತು ಒಂದು ಲೈಂಗಿಕ ದೌರ್ಜನ್ಯ, ಮಹಿಳೆಯ ಘನತೆಗೆ ಧಕ್ಕೆ ಉಂಟು ಮಾಡಿದ ಆರೋಪದ ಸಂಬಂಧ ಪ್ರತ್ಯೇಕವಾಗಿ ನಾಲ್ಕು ಎಫ್‌ಐಆರ್‌ಗಳು ದಾಖಲಾಗಿವೆ. … Continued

₹300 ಲಂಚ ಪಡೆದಿದ್ದ ಟೈಪಿಸ್ಟ್‌ ವಜಾ ; ರಾಜ್ಯ ಸರ್ಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಬೆಂಗಳೂರು : ಮೈಸೂರು ವಲಯದ ವಾಣಿಜ್ಯ ತೆರಿಗೆ ಜಂಟಿ ಆಯುಕ್ತರ ಕಚೇರಿಯ ಮಹಿಳಾ ಟೈಪಿಸ್ಟ್‌ ₹300 ಲಂಚ ಪಡೆದಿದ್ದಾರೆ ಎಂಬ ಆರೋಪದಡಿ ಅವರನ್ನು ಸೇವೆಯಿಂದ ವಜಾಗೊಳಿಸಿದ್ದ ರಾಜ್ಯ ಸರ್ಕಾರದ ಕ್ರಮವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿದೆ. ಕರ್ನಾಟಕ ಆಡಳಿತಾತ್ಮಕ ನ್ಯಾಯ ಮಂಡಳಿ (ಕೆಎಟಿ) ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಎಸ್.ಜಿ. ಪಂಡಿತ … Continued

ಮಸೀದಿ ಆವರಣದಲ್ಲಿ ಜೈ ಶ್ರೀರಾಮ ಘೋಷಣೆ ಕೂಗಿದ ಪ್ರಕರಣ : ಇಬ್ಬರ ವಿರುದ್ಧದ ಎಫ್‌ಐಆರ್‌ ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಮ ಘೋಷಣೆ ಕೂಗಿದ ಆರೋಪದ ಮೇಲೆ ಬಂಧನಕ್ಕೊಳಗಾದ ಇಬ್ಬರು ವ್ಯಕ್ತಿಗಳ ವಿರುದ್ಧದ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಡಬ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಎರಡನೇ … Continued

ರೇಣುಕಾಸ್ವಾಮಿ ಕೊಲೆ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್‌ ಗೆ ಅರ್ಜಿ ಸಲ್ಲಿಸಿದ ನಟ ದರ್ಶನ್‌

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ನಟ ದರ್ಶನ್‌ ಅವರು ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್‌ಗೆ ಮಂಗಳವಾರ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣಾಧೀನ ನ್ಯಾಯಾಲಯವು ಸೋಮವಾರ ದರ್ಶನ್‌ಗೆ ಜಾಮೀನು ನಿರಾಕರಿಸಿತ್ತು. ದರ್ಶನ್‌ಗೆ ಜಾಮೀನು ಕೋರಿ ಅವರ ಪರವಾಗಿ ಅರ್ಜಿ ಸಲ್ಲಿಸಿರುವುದಾಗಿ ವಕೀಲ ಎಸ್‌ ಸುನಿಲಕುಮಾರ ತಿಳಿಸಿದ್ದಾರೆ. ದರ್ಶನ್‌ ಅವರು ಪ್ರಭಾವಿಯಾಗಿದ್ದು, ಸಾಮಾಜಿಕವಾಗಿ ಸಾಕಷ್ಟು … Continued