ಮುಡಾ ಹಗರಣ: ಹೈಕೋರ್ಟ್‌ ಆದೇಶದ ನಂತರ ಮೊದಲ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಿದ ನಂತರ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಡಾ ಹಗರಣಕ್ಕೆ (MUDA Scam) ಸಂಬಂಧಿಸಿದಂತೆ ರಾಜ್ಯಪಾಲ ಥಾವರ ಚಂದ ಗೆಹ್ಲೋಟ್‌ ಅವರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ … Continued

ಮುಡಾ ಪ್ರಕರಣ | ಸಿದ್ದರಾಮಯ್ಯಗೆ ಹಿನ್ನಡೆ ; ರಾಜ್ಯಪಾಲರ ಪ್ರಾಸಿಕ್ಯೂಷನ್‌ ಆದೇಶ ಎತ್ತಿಹಿಡಿದ ಹೈಕೋರ್ಟ್‌ : ಸಿದ್ದರಾಮಯ್ಯ ಅರ್ಜಿ ವಜಾ

ಬೆಂಗಳೂರು : ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರಚಂದ ಗೆಹ್ಲೋಟ್‌ ಅವರು ತಮ್ಮ ವಿರುದ್ಧ ಅಭಿಯೋಜನಾ (ಪ್ರಾಸಿಕ್ಯೂಷನ್) ಮಂಜೂರಾತಿ ನೀಡಿರುವುದನ್ನು ಪ್ರಶ್ನಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ಮಂಗಳವಾರ ವಜಾ ಮಾಡಿದೆ. ಹೀಗಾಗಿ ಮೊದಲ ಹಂತದ ಕಾನೂನು ಹೋರಾಟದಲ್ಲಿ ಸಿದ್ದರಾಮಯ್ಯ ಅವರಿಗೆ ತೀವ್ರ ಹಿನ್ನಡೆಯಾದಂತಾಗಿದೆ. ರಾಜ್ಯಪಾಲರ ಆದೇಶ ರದ್ದತಿಗೆ ಕೋರಿ … Continued

ಅತ್ಯಾಚಾರ ಆರೋಪ ಪ್ರಕರಣ : ಪ್ರಜ್ವಲ್‌ ರೇವಣ್ಣ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್‌

ಬೆಂಗಳೂರು : ನ್ಯಾಯಾಂಗ ಬಂಧನದಲ್ಲಿರುವ ಅತ್ಯಾಚಾರದ ಪ್ರಕರಣದಲ್ಲಿ ಆರೋಪಿ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಜಾಮೀನು ಅರ್ಜಿಗಳ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಗುರುವಾರ ಕಾಯ್ದಿರಿಸಿದೆ. ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ ಜಾಮೀನು ಕೋರಿದ್ದಾರೆ. ಉಳಿದಂತೆ ಮತ್ತೊಂದು ಅತ್ಯಾಚಾರ ಎಸಗಿರುವ ಆರೋಪ ಮತ್ತು ಅಶ್ಲೀಲ ವೀಡಿಯೊ ಹಂಚಿಕೆಯ ಸಂಬಂಧ ದಾಖಲಾಗಿರುವ ಎರಡು ಪ್ರತ್ಯೇಕ … Continued

ಗೌರಿ ಲಂಕೇಶ್‌ ಹತ್ಯೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳಿಗೆ ಜಾಮೀನು

ಬೆಂಗಳೂರು :  ಪತ್ರಕರ್ತೆ ಗೌರಿ ಲಂಕೇಶ ಕೊಲೆ ಪ್ರಕರಣದಲ್ಲಿ ಮತ್ತೆ ನಾಲ್ವರು ಆರೋಪಿಗಳಿಗೆ ಈಚೆಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ. ಈ ಪ್ರಕರಣದಲ್ಲಿ 18 ಆರೋಪಿಗಳ ಪೈಕಿ 8 ಮಂದಿಗೆ ನ್ಯಾಯಾಲಯವು ಜಾಮೀನು ನೀಡಿದೆ. ಪ್ರಕರಣದಲ್ಲಿ 6ನೇ ಆರೋಪಿಯಾಗಿರುವ ಬೆಳಗಾವಿಯ ಭರತ ಜಯವಂತ ಕುರಾನೆ, 9ನೇ ಆರೋಪಿ … Continued

ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಆರೋಪಪಟ್ಟಿಯ ರಹಸ್ಯ ಮಾಹಿತಿ ಮುದ್ರಣ, ಹಂಚಿಕೆ, ಪ್ರಸಾರಕ್ಕೆ ಹೈಕೋರ್ಟ್‌ ನಿರ್ಬಂಧ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ ಶ್ರೀನಿವಾಸ ಕುರಿತು ಆರೋಪಪಟ್ಟಿಯಲ್ಲಿರುವ ಯಾವುದೇ ರಹಸ್ಯ ಮಾಹಿತಿಯನ್ನು ಪ್ರಸಾರ ಮಾಡದಂತೆ ಮಧ್ಯಮಗಳಿಗೆ ಹೈಕೋರ್ಟ್ ಮಂಗಳವಾರ ನಿರ್ಬಂಧ ವಿಧಿಸಿದೆ. ತಮ್ಮ ವಿರುದ್ಧದ ಮಾಹಿತಿ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸುವಂತೆ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ ಅವರಿದ್ದ … Continued

ತ್ಯಾಜ್ಯ ನದಿಗೆ ಬಿಡುಗಡೆ ಆರೋಪ : ಶಾಸಕ ಯತ್ನಾಳ ಒಡೆತನದ ಕಾರ್ಖಾನೆ ವಿರುದ್ಧದ ದೂರು ವಜಾ ಮಾಡಿದ ಹೈಕೋರ್ಟ್‌

ಬೆಂಗಳೂರು : ಸಂಸ್ಕರಣೆ ಮಾಡದೆ ತ್ಯಾಜ್ಯವನ್ನು ನದಿಗೆ ಬಿಡುಗಡೆ ಮಾಡುವ ಮೂಲಕ ಜಲ ಮತ್ತು ಪರಿಸರ ಕಾಯಿದೆ ಉಲ್ಲಂಘನೆ ಮಾಡಲಾಗಿದೆ ಎಂದು ಆರೋಪಿಸಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಒಡೆತನದ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಮೆಸರ್ಸ್‌ ಸಿದ್ಧಸಿರಿ ಸೌಹಾರ್ದ ಸಹಕಾರಿ ನಿಯಮಿತ ಸಕ್ಕರೆ ಕಾರ್ಖಾನೆ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಕರ್ನಾಟಕ ಹೈಕೋರ್ಟ್‌ … Continued

ಮುಡಾ ಪ್ರಕರಣ : ಸಿದ್ದರಾಮಯ್ಯ ಅವಧಿಯಲ್ಲೇ ಈ ಹಗರಣ ; ಸುಣ್ಣಕ್ಕೆ ಬೆಣ್ಣೆ ಹಂಚಿಕೆ: ಹಿರಿಯ ವಕೀಲ ರಾಘವನ್‌ ಆಕ್ಷೇಪ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ನಿರ್ಧಾರ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಸೋಮವಾರ ಮತ್ತೆ ಮುಂದೂಡಿದೆ. ಮುಡಾ ಹಗರಣದ ತನಿಖೆಗೆ ರಾಜ್ಯಪಾಲರು ಅಭಿಯೋಜನಾ ಮಂಜೂರಾತಿ ನೀಡಿರುವುದನ್ನು ವಜಾ ಮಾಡುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು … Continued

ಮುಡಾ ಹಗರಣ: ರಾಜ್ಯಪಾಲರು ಸಕಾರಣದಿಂದ ಸಂಪುಟದ ಶಿಫಾರಸ್ಸು ಪರಿಗಣಿಸಿಲ್ಲ : ಸಾಲಿಸಿಟರ್‌ ಜನರಲ್‌ ಮೆಹ್ತಾ

ಬೆಂಗಳೂರು : ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ಅಭಿಯೋಜನಾ ಮಂಜೂರಾತಿಯು ವಿವೇಚನೆಯಿಂದ ಕೂಡಿದ್ದು, ಸಕಾರಣದಿಂದ ಅವರು ಸಂಪುಟ ಸಭೆಯ ಶಿಫಾರಸ್ಸನ್ನು ಪರಿಗಣಿಸಿಲ್ಲ ಎಂದು ಹೈಕೋರ್ಟ್‌ನಲ್ಲಿ ಶನಿವಾರ ಸಾಲಿಸಿಟರ್‌ ಜನರಲ್‌ ತುಷಾರ್‌ ಮೆಹ್ತಾ ಪ್ರಾಸಿಕ್ಯುಶನ್‌ಗೆ ನೀಡಿದ ರಾಜ್ಯಪಾಲರ ನಿರ್ಧಾರವನ್ನು ಬಲವಾಗಿ ಸಮರ್ಥಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ … Continued

ಪೋಕ್ಸೊ ಪ್ರಕರಣದಲ್ಲಿ ಯಡಿಯೂರಪ್ಪ ಜೈಲಿಗೆ ಹೇಳಿಕೆ: ಹೈಕೋರ್ಟ್‌ನಲ್ಲಿ ಹಿರಿಯ ವಕೀಲ ನಾಗೇಶ ಆಕ್ಷೇಪ

ಬೆಂಗಳೂರು : “ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಜೈಲಿಗೆ ಹೋಗುತ್ತಾರೆ ಎಂದು ಆಡಳಿತಾರೂಢ ಕಾಂಗ್ರೆಸ್‌ನ ಸಚಿವರು, ಶಾಸಕರು ದಿನ ಬೆಳಗಾದರೆ ಹೇಳಿಕೆ ನೀಡುತ್ತಿದ್ದಾರೆ. ಹಾಗಾದರೆ ಅವರೇ ಬಂದು ವಾದಿಸಲಿ” ಎಂದು ಯಡಿಯೂರಪ್ಪ ಪರ ವಕೀಲರು ಹೈಕೋರ್ಟ್‌ನಲ್ಲಿ ಶುಕ್ರವಾರ ಮೌಖಿಕವಾಗಿ ಹೇಳಿದ್ದಾರೆ. ಪೋಕ್ಸೊ ಪ್ರಕರಣದಲ್ಲಿ ಜಾಮೀನು ಕೋರಿ ಮತ್ತು ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ದಾಖಲಾಗಿರುವ … Continued

ಲೈಂಗಿಕ ದೌರ್ಜನ್ಯ ಪ್ರಕರಣ: ಎಚ್‌.ಡಿ.ರೇವಣ್ಣ ವಿರುದ್ಧ ಪ್ರಕ್ರಿಯೆ ದಾಖಲಿಸದಂತೆ ಅಧೀನ ನ್ಯಾಯಾಲಯಕ್ಕೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು : ಜೆಡಿಎಸ್‌ ಶಾಸಕ ಎಚ್‌.ಡಿ. ರೇವಣ್ಣ ಅವರು ಆರೋಪಿಯಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮುಂದಿನ ವಿಚಾರಣೆ ವರೆಗೆ ವಿಚಾರಣಾಧೀನ ನ್ಯಾಯಾಲಯವು ಯಾವುದೇ ವಿಚಾರಣಾ ಪ್ರಕ್ರಿಯೆ ದಾಖಲಿಸಬಾರದು ಎಂದು ಕರ್ನಾಟಕ ಹೈಕೋರ್ಟ್‌ ನಿರ್ದೇಶಿಸಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಎಚ್‌.ಡಿ. ರೇವಣ್ಣ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ. … Continued