ಜಿ.ಪಂ–ತಾ.ಪಂ ಚುನಾವಣೆ: ಕ್ಷೇತ್ರ ಮರುವಿಂಗಡಣೆಗೆ ಸರ್ಕಾರಕ್ಕೆ 1 ತಿಂಗಳ ಅಂತಿಮ ಗಡುವು ನೀಡಿದ ಹೈಕೋರ್ಟ್‌

ಬೆಂಗಳೂರು : ರಾಜ್ಯದಲ್ಲಿ ಜಿಲ್ಲಾ ಪಂಚಾಯತ ಹಾಗೂ ತಾಲೂಕು ಪಂಚಾಯತ ಚುನಾವಣೆಗಾಗಿ ಕ್ಷೇತ್ರಗಳ ಮರುವಿಂಗಡಣೆ ಹಾಗೂ ಮೀಸಲಾತಿ ನಿಗದಿ ಪ್ರಕ್ರಿಯೆಯನ್ನು ಒಂದು ತಿಂಗಳಲ್ಲಿ ಪೂರ್ಣಗೊಳಿಸಿ ಅಧಿಸೂಚನೆ ಹೊರಡಿಸಲು ಕೊನೆಯ ಬಾರಿಗೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಒಂದು ತಿಂಗಳ ಕಾಲಾವಕಾಶ ನೀಡಿದೆ. ಜಿಪಂ ಹಾಗೂ ತಾಪಂ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು … Continued

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣ: ಅಭಿನವ ಹಾಲಶ್ರೀಗೆ ಜಾಮೀನು

ಬೆಂಗಳೂರು : ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದ ಪ್ರಕರಣದ ಮೂರನೇ ಆರೋಪಿಯಾಗಿರುವ ವಿಜಯನಗರ ಜಿಲ್ಲೆ ಹಿರೇಹಡಗಲಿ ಹಾಲಸ್ವಾಮಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿಗೆ ಕರ್ನಾಟಕ ಹೈಕೋರ್ಟ್‌ ಬುಧವಾರ ಜಾಮೀನು ನೀಡಿದೆ. ಜಾಮೀನು ಕೋರಿ ಹಾಲಶ್ರೀ ಸ್ವಾಮೀಜಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಎಸ್‌. ವಿಶ್ವಜಿತ ಶೆಟ್ಟಿ ಅವರ ನೇತೃತ್ವದ ಏಕಸದಸ್ಯ ಪೀಠ ಪುರಸ್ಕರಿಸಿದೆ. … Continued

ಹಿಂದೂ ಅನುಸಾರ ಮದುವೆಯಾಗಿ ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ವೈವಾಹಿಕ ಹಕ್ಕುಗಳು ರದ್ದು: ಹೈಕೋರ್ಟ್‌

ಬೆಂಗಳೂರು : ಕೌಟುಂಬಿಕ ದೌರ್ಜನ್ಯ ಪ್ರಕರಣವೊಂದರಲ್ಲಿ ಪತಿಯಿಂದ ಜೀವನಾಂಶ ಕೋರಿದ್ದ ಪತ್ನಿಯು ಹಿಂದೂ ಧರ್ಮದ ಅನುಸಾರ ಮದುವೆಯಾಗಿ ನಂತರದಲ್ಲಿ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಿದ್ದ ಹಿನ್ನೆಲೆಯಲ್ಲಿ ಆಕೆಯ ಎಲ್ಲ ಹಕ್ಕುಗಳು ರದ್ದಾಗಿವೆ ಎಂದು ಕರ್ನಾಟಕ ಹೈಕೋರ್ಟ್‌ ಈಚೆಗೆ ತನ್ನ ಆದೇಶದಲ್ಲಿ ತಿಳಿಸಿದೆ. ಪತ್ನಿಗೆ 4 ಲಕ್ಷ ರೂಪಾಯಿ ಪಾವತಿಸುವಂತೆ ಬೆಂಗಳೂರಿನ ಅಧೀನ ನ್ಯಾಯಾಲಯ ನೀಡಿರುವ ಆದೇಶ ಪ್ರಶ್ನಿಸಿ … Continued

ಬೆಂಗಳೂರು : ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಹೈಕೋರ್ಟ್‌ ಅನುಮತಿ

ಬೆಂಗಳೂರು : ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಕರ್ನಾಟಕದ ಹೈಕೋರ್ಟ್‌ ಅನುಮತಿ ನೀಡಿದೆ. ರಾಜ್ಯೋತ್ಸವ ಆಚರಣೆ ಮಾಡಲು ಅನುಮತಿ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಮಂಗಳವಾರ ವಿಚಾರಣೆ ನಡೆಸಿದ ಹೈಕೋರ್ಟ್‌ ಈದ್ಗಾ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲು ಅನುಮತಿ ನೀಡಿದೆ. ನವೆಂಬರ್ 1 ರಿಂದ 3ರ ವರೆಗೆ … Continued

ಚುನಾವಣಾ ಅಕ್ರಮ ಆರೋಪ : ಶಾಸಕ ಎಚ್‌.ಡಿ. ರೇವಣ್ಣಗೆ ಮತ್ತೆ ಸಮನ್ಸ್‌ ಜಾರಿ ಮಾಡಿದ ಹೈಕೋರ್ಟ್‌

ಬೆಂಗಳೂರು : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆಸಿರುವ ಹಿನ್ನೆಲೆಯಲ್ಲಿ ಎಚ್‌ ಡಿ ರೇವಣ್ಣ ಅವರು ಹೊಳೆನರಸೀಪುರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಕುರಿತು ರೇವಣ್ಣ ಅವರಿಗೆ ಕರ್ನಾಟಕ ಹೈಕೋರ್ಟ್‌ ಸೋಮವಾರ ಮತ್ತೆ ಸಮನ್ಸ್‌ ಜಾರಿ ಮಾಡಿದೆ. ಪರಾಜಿತ ಅಭ್ಯರ್ಥಿ ಜಿ. ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಜ್ಯೋತಿ … Continued

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : ಡಿ.ಕೆ. ಶಿವಕುಮಾರಗೆ ಮತ್ತೆ ಸಂಕಷ್ಟದ ಭೀತಿ : ಸಿಬಿಐ ತನಿಖೆಗೆ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಸಂಕಷ್ಟ ಎದುರಾಗಿದ್ದು, ಸಿಬಿಐ ತನಿಖೆಗೆ ಕರ್ನಾಟಕ ಹೈಕೋರ್ಟ್‌ ಹಸಿರು ನಿಶಾನೆ ತೋರಿದೆ. ಶಿವಕುಮಾರ ಹೈಕೋರ್ಟ್‌ಗೆ ತಡವಾಗಿ ಅರ್ಜಿ ಸಲ್ಲಿಸಿದ್ದಾರೆ ಎಂದು ಅವರ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಅದಲ್ಲದೇ ಸಿಬಿಐ ತನಿಖೆಗೆ ಈ ಹಿಂದೆ ನೀಡಿದ್ದ ತಡೆಯಾಜ್ಞೆಯನ್ನು ನ್ಯಾಯಾಲಯ ತೆರವುಗೊಳಿಸಿದೆ. ಅಲ್ಲದೆ, … Continued

ಚಿತ್ರದುರ್ಗ ಮುರುಘಾ ಶರಣರ ವಿರುದ್ಧದ ಪೋಕ್ಸೊ ಪ್ರಕರಣ: ಮೂರನೇ ಆರೋಪಿ ಪರಮಶಿವಯ್ಯಗೆ ಹೈಕೋರ್ಟ್‌ನಿಂದ ಜಾಮೀನು

ಬೆಂಗಳೂರು : ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಮೊದಲ ಪೋಕ್ಸೊ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಮಠದ ವಿದ್ಯಾಪೀಠಗಳ ಕಾರ್ಯದರ್ಶಿ ಪರಮಶಿವಯ್ಯ ಅವರಿಗೆ ಶುಕ್ರವಾರ ಕರ್ನಾಟಕ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಪರಮಶಿವಯ್ಯ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಮೂರ್ತಿ ಶಿವಶಂಕರ ಅಮರಣ್ಣವರ ಅವರ ನೇತೃತ್ವದ ಏಕಸದಸ್ಯ ಪೀಠ ಪುರಸ್ಕರಿಸಿದೆ. ಅರ್ಜಿದಾರರು ಎರಡು ಲಕ್ಷ … Continued

13352 ಪ್ರಾಥಮಿಕ ಶಾಲಾ ಶಿಕ್ಷಕರ ಆಯ್ಕೆಗೆ ಸರ್ಕಾರಕ್ಕೆ ಹೈಕೋರ್ಟ್‌ ಗ್ರೀನ್ ಸಿಗ್ನಲ್

ಬೆಂಗಳೂರು : ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ 13,352 ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ಕರ್ನಾಟಕ ಹೈಕೋರ್ಟ್‌ ಗುರುವಾರ ಗ್ರೀನ್‌ ಸಿಗ್ನಲ್‌ ನೀಡಿದೆ. ರಾಜ್ಯ ಸಾರ್ವಜನಿಕ ಶಿಕ್ಷಣ ಇಲಾಖೆಯು ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿ ಸಂಬಂಧ 2022ರ ನವೆಂಬರ್‌ 18ರಂದು ಪ್ರಕಟಿಸಿದ್ದ 1:1 ಅನುಪಾತದ ತಾತ್ಕಾಲಿಕ ಆಯ್ಕೆಪಟ್ಟಿ ರದ್ದುಪಡಿಸಿದ್ದ ಹೈಕೋರ್ಟ್‌ ಏಕಸದಸ್ಯ … Continued

ಬಿಜೆಪಿ ಅಧ್ಯಕ್ಷ ನಡ್ಡಾ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆ ವೇಳೆ ಮತದಾರರ ಮೇಲೆ ಅನುಚಿತ ಪ್ರಭಾವ ಬೀರಿದ್ದಾರೆ ಎಂದು ಆರೋಪಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಕಳೆದ ವಿಧಾನಸಭೆ ಚುನಾವಣೆ ವೇಳೆ “ಬಿಜೆಪಿಗೆ ಮತ ನೀಡಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದಿಂದ ಕರ್ನಾಟಕವು ವಂಚಿತವಾಗದಂತೆ ನೋಡಿಕೊಳ್ಳಿ” … Continued

ವಿವಾಹೇತರ ಸಂಬಂಧ ಹೊಂದಿರುವ ಮಹಿಳೆಗೆ ಪತಿ ಜೀವನಾಂಶ ನೀಡಬೇಕಿಲ್ಲ: ಹೈಕೋರ್ಟ್​​

ಬೆಂಗಳೂರು: ವಿವಾಹೇತರ ಸಂಬಂಧ ಹೊಂದಿರುವ ಪತ್ನಿಯು ಪತಿಯಿಂದ ಜೀವನಾಂಶ ಪಡೆಯಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ಹೇಳಿದೆ. ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ ಅವರಿದ್ದ ನ್ಯಾಯಪೀಠವು ಈ ರೀತಿ ಅಭಿಪ್ರಾಯಪಟ್ಟು ಪತ್ನಿಯು ಸಲ್ಲಿಸಿದ್ದ ಮೇಲ್ಮನವಿಯನ್ನು ಅರ್ಜಿಯನ್ನು ವಜಾಗೊಳಿಸಿದೆ. ಅರ್ಜಿದಾರರು ವಿವಾಹೇತರ ಸಂಬಂಧ ಹೊಂದಿರುವಾಗ, ಪ್ರಾಮಾಣಿಕರಲ್ಲದಿದ್ದಾಗ ಪತಿಯು ಜೀವನಾಂಶ ಕೊಡಬೇಕು ಎಂಬ ವಾದ ಒಪ್ಪಿಕೊಳ್ಳಲಾಗುವುದಿಲ್ಲ. ಪತಿಯ ಕಡೆಯಿಂದ … Continued