ಸೌಜನ್ಯ ಕೊಲೆ ಪ್ರಕರಣ: ಮರು ತನಿಖೆ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್‌

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆ ಕೋರಿ ಆಕೆಯ ತಂದೆ ಸಲ್ಲಿಸಿದ್ದ ಅರ್ಜಿ ಮತ್ತು ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ವಜಾ ಮಾಡಿದೆ. ಸೌಜನ್ಯ ತಂದೆ ಚಂದಪ್ಪ ಗೌಡ ಮತ್ತು ಖುಲಾಸೆಗೊಂಡಿರುವ ಕಾರ್ಕಳ ತಾಲೂಕಿನ … Continued

ಡಿಕೆಶಿ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ : ಸಿಬಿಐ ಅರ್ಜಿ ವಜಾ ; ಸುಪ್ರೀಂ ಕೋರ್ಟ್‌ ಗೆ ಹೋಗುವುದು ಸೂಕ್ತ ಎಂದ ಹೈಕೋರ್ಟ್‌

ನವದೆಹಲಿ: ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗಾಗಿ ಸಿಬಿಐಗೆ ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿ ಹಿಂಪಡೆದಿರುವ ಹಾಲಿ ಕಾಂಗ್ರೆಸ್ ಸರ್ಕಾರದ ಆದೇಶ ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ರಾಜ್ಯ ಹೈಕೋರ್ಟ್‌ ಗುರುವಾರ ತಿರಸ್ಕರಿಸಿದೆ. ಇದರಿಂದ ಸಿಬಿಐಗೆ ತಾತ್ಕಾಲಿಕ ಹಿನ್ನಡೆಯಾದಂತಾಗಿದೆ. ರಾಜ್ಯ ಸರ್ಕಾರದ ಆಕ್ಷೇಪಾರ್ಹ ಆದೇಶ ಪ್ರಶ್ನಿಸಿ … Continued

ಸಂತ್ರಸ್ತೆ ಅಪಹರಣ ಪ್ರಕರಣ: ಎಚ್​​.ಡಿ. ರೇವಣ್ಣಗೆ ಹೈಕೋರ್ಟಿನಿಂದ ಬಿಗ್​ ರಿಲೀಫ್

ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಸಂತ್ರಸ್ತೆ ಅಪಹರಣದ ಪ್ರಕರಣದ ಮೊದಲನೇ ಆರೋಪಿ, ಜೆಡಿಎಸ್‌ ಶಾಸಕ ಎಚ್‌ ಡಿ ರೇವಣ್ಣಗೆ ವಿಚಾರಣಾಧೀನ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಬುಧವಾರ ಎತ್ತಿ ಹಿಡಿದಿದೆ. ಎಚ್‌.ಡಿ. ರೇವಣ್ಣಗೆ ವಿಚಾರಣಾಧೀನ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ವಿಶೇಷ … Continued

ಅಷ್ಟೊಂದು ಹಣ ಬೇಕಾದ್ರೆ ಆಕೆ ದುಡಿದು ಸಂಪಾದಿಸಲಿ : ಗಂಡನಿಂದ ಪ್ರತಿತಿಂಗಳು 6 ಲಕ್ಷ ರೂ.ಜೀವನಾಂಶ ಕೇಳಿದ ಪತ್ನಿಗೆ ಹೈಕೋರ್ಟ್ ತೀವ್ರ ತರಾಟೆ

ಬೆಂಗಳೂರು: ತನ್ನಿಂದ ದೂರವಿರುವ ಪತಿಯಿಂದ ಪ್ರತಿ ತಿಂಗಳು 6 ಲಕ್ಷ ರೂ. ಜೀವನಾಂಶ ಕೋರಿದ ಪತ್ನಿಯ ನಡೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಹೈಕೋರ್ಟ್ ಆಕೆ ಇಷ್ಟು ಹಣವನ್ನು ಖರ್ಚು ಮಾಡಬೇಕೆಂದು ಬಯಸಿದರೆ ತಾನೇ ದುಡಿದು ಸಂಪಾದಿಸಲಿ ಎಂದು ತರಾಟೆಗೆ ತೆಗೆದುಕೊಂಡಿದೆ. ಕೌಟುಂಬಿಕ ನ್ಯಾಯಾಲಯ ನಿಗದಿಪಡಿಸಿರುವ ಜೀವನಾಂಶ ಹೆಚ್ಚಳ ಮಾಡುವಂತೆ ಕೋರಿ ಪತ್ನಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು … Continued

ಮುಡಾ ಹಗರಣ ; ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನಿಂದ ಸದ್ಯಕ್ಕೆ ರಿಲೀಫ್

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಭೂ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ಖಾಸಗಿ ದೂರುಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ (ಸಿಎಂ) ಸಿದ್ದರಾಮಯ್ಯ ವಿರುದ್ಧದ ವಿಚಾರಣೆಯನ್ನು ಮುಂದೂಡುವಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ವಿಚಾರಣಾ ನ್ಯಾಯಾಲಯಕ್ಕೆ ಸೂಚಿಸಿದೆ. ಆಪಾದಿತ ಮುಡಾ ಭೂ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕನ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವr ಚಂದ್ ಗೆಹ್ಲೋಟ್ ಅನುಮತಿ ನೀಡಿದ … Continued

ಮುಡಾ ಪ್ರಕರಣ | ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಗೆ ರಾಜ್ಯಪಾಲರ ಅನುಮತಿ ; ಹೈಕೋರ್ಟ್‌ಗೆ ಕೇವಿಯಟ್‌ ಸಲ್ಲಿಕೆ

ಬೆಂಗಳೂರು : ಮುಡಾ ಪ್ರಕರಣದಲ್ಲಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್‌ ಅವರು ನೀಡಿರುವ ಅಭಿಯೋಜನಾ ಮಂಜೂರಾತಿಯನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದರೆ ತಮ್ಮ ವಾದವನ್ನೂ ಆಲಿಸಬೇಕು ಎಂದು ಕೇವಿಯಟ್‌ ಸಲ್ಲಿಕೆಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿರುವ ಬೆಂಗಳೂರಿನ ನಾಗರಭಾವಿಯ ಎಸ್‌.ಪಿ. ಪ್ರದೀಪಕುಮಾರ ಅವರು ವಕೀಲ ಎಂ.ಎಚ್‌. ಪ್ರಕಾಶ … Continued

ಡಿಕೆ ಶಿವಕುಮಾರ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ಪ್ರಕರಣ: ಆದೇಶ ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು : ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗಾಗಿ ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಈ ಹಿಂದಿನ ಬಿಜೆಪಿ ಆಡಳಿತದ ರಾಜ್ಯ ಸರ್ಕಾರ ನೀಡಿದ್ದ ಅನುಮತಿಯನ್ನು ಹಿಂಪಡೆದಿರುವ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿರುವ ಕರ್ನಾಟಕ ಹೈಕೋರ್ಟ್‌ ಆದೇಶ ಕಾಯ್ದಿರಿಸಿದೆ. ರಾಜ್ಯ … Continued

ವಾಲ್ಮೀಕಿ ನಿಗಮ ಹಗರಣ: ಇ. ಡಿ. ವಶಕ್ಕೆ ಆರೋಪಿ ವರ್ಮಾ ನೀಡಲು ಹೈಕೋರ್ಟ್‌ ಆದೇಶ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ (ಕೆಎಂವಿಎಸ್‌ಟಿಡಿಸಿಎಲ್‌) ಹಣ ದುರ್ಬಳಕೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಅವರನ್ನು ಆಗಸ್ಟ್‌ 13ರಂದು ತನಿಖೆಗಾಗಿ ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಬೇಕು ಎಂದು ವಿಶೇಷ ತನಿಖಾ ದಳಕ್ಕೆ (ಎಸ್‌ಐಟಿ) ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಆದೇಶಿಸಿದೆ. ಆಗಸ್ಟ್‌ 2ರಂದು ಸತ್ಯನಾರಾಯಣ ವರ್ಮಾ ಅವರನ್ನು ಎಸ್‌ಐಟಿ ಕಸ್ಟಡಿಗೆ … Continued

ʼನಾನು ಕೋರ್ಟ್‌ ಬಿಟ್ಟು ಹೋಗುವುದಿಲ್ಲ, ನನ್ನನ್ನು ಕಾಪಾಡಿʼ ಎಂದು ಹೈಕೋರ್ಟ್‌ ಮುಂದೆ ಕೈಮುಗಿದು ಅಂಗಲಾಚಿದ ಎಂಜಿನಿಯರ್‌

ಬೆಂಗಳೂರು : ಶಿವಮೊಗ್ಗ ಜಿಲ್ಲೆಯ ಸಾಗರದ ಉಪ ಪೊಲೀಸ್‌ ವರಿಷ್ಠಾಧಿಕಾರಿ ಸೇರಿ ಪೊಲೀಸರು ತನಗೆ ಕಿರುಕುಳ ನೀಡುತ್ತಿದ್ದು, ನಾನು ನ್ಯಾಯಾಲಯ ಬಿಟ್ಟು ಹೋಗುವುದಿಲ್ಲ. ನನ್ನನ್ನು ಕಾಪಾಡಿ” ಎಂದು ಸಾಗರದ ಕೆಪಿಟಿಸಿಎಲ್‌ ಸಹಾಯಕ ಎಂಜಿನಿಯರ್‌ ಒಬ್ಬರು ಮಂಗಳವಾರ ಕರ್ನಾಟಕ ಹೈಕೋರ್ಟ್‌ ಮುಂದೆ ಕೈಮುಗಿದು ಅಂಗಲಾಚಿದ್ದಾರೆ. ಇದರಿಂದ ಅಚ್ಚರಿಗೊಂಡ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಅವರ ನಿವೇದನೆಯನ್ನು ಸಾವಧಾನದಿಂದ … Continued

ಪೋಕ್ಸೋ ಪ್ರಕರಣ: ಯಡಿಯೂರಪ್ಪಗೆ ರಿಲೀಫ್‌ ನೀಡಿದ ಹೈಕೋರ್ಟ್‌

ಬೆಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದಲ್ಲಿ ಅವರನ್ನು ಬಂಧಿಸಬಾರದು ಹಾಗೂ ವಿಚಾರಣೆಗೆ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಬೇಕು ಎನ್ನುವ ತನ್ನ ಈ ಹಿಂದಿನ ಮಧ್ಯಂತರ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ವಿಸ್ತರಿಸಿದೆ. ಪ್ರಕರಣದ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು … Continued