ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣ: ಮೂವರು ಆರೋಪಿಗಳಿಗೆ ಜಾಮೀನು ನಿರಾಕರಿಸಿದ ಹೈಕೋರ್ಟ್‌

ಬೆಂಗಳೂರು : ಬಿಜೆಪಿ ಯುವ ಮೋರ್ಚಾದ ಪ್ರವೀಣ ನೆಟ್ಟಾರು ಹತ್ಯೆ ಪ್ರಕರಣದ ಮೂವರು ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ನಿರಾಕರಿಸಿದೆ. ನ್ಯಾಯಾಂಗ ಬಂಧನದಲ್ಲಿರುವ ಕೆ ಇಸ್ಮಾಯಿಲ್‌ ಶಫಿ (ಆರೋಪಿ 9), ಕೆ ಮೊಹಮ್ಮದ್‌ ಇಕ್ಬಾಲ್‌ (ಆರೋಪಿ 10) ಮತ್ತು ಎಂ ಶಾಹೀದ್‌ (ಆರೋಪಿ 11) ಜಾಮೀನು ಕೋರಿ ಸಲ್ಲಿಸಿದ್ದ ಕ್ರಿಮಿನಲ್‌ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಎಚ್‌.ಬಿ. ಪ್ರಭಾಕರ ಶಾಸ್ತ್ರಿ … Continued

ಪಿಎಸ್‌ಐ ನೇಮಕಾತಿ ಹಗರಣ: ಐಪಿಎಸ್‌ ಅಧಿಕಾರಿ ಅಮೃತ್‌ ಪೌಲ್‌ಗೆ ಜಾಮೀನು

ಬೆಂಗಳೂರು : ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣದಲ್ಲಿ ಆರೋಪಿಯಾಗಿದ್ದ ಹಿರಿಯ ಪೊಲೀಸ್‌ ಅಧಿಕಾರಿ ಅಮೃತ ಪೌಲ್‌ ಅವರಿಗೆ ಸೋಮವಾರ ಕರ್ನಾಟಕ ಹೈಕೋರ್ಟ್‌ ಷರತ್ತು ಬದ್ಧ ಜಾಮೀನು ನೀಡಿದೆ. 545 ಸಬ್‌ ಇನ್ಸ್‌ಪೆಕ್ಟರ್‌ಗಳ ನೇಮಕಾತಿ ಅಕ್ರಮಗಳ ಹಗರಣದ ಪ್ರಕರಣದಲ್ಲಿ 25ನೇ ಆರೋಪಿಯಾಗಿರುವ ಅಮೃತ್‌ ಪೌಲ್‌ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. … Continued

ಸಾಮಾಜಿಕ ಜಾಲತಾಣ ಬಳಕೆಗೆ ವಯೋಮಿತಿ ನಿಗದಿಪಡಿಸಿ: ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸಲಹೆ

ಬೆಂಗಳೂರು : ಮತದಾನಕ್ಕೆ ವಯೋಮಿತಿ ನಿಗದಿ ಮಾಡಿರುವ ರೀತಿಯಲ್ಲಿಯೇ ಸಾಮಾಜಿಕ ಜಾಲತಾಣ ಬಳಕೆ ಮಾಡಲು ವಯೋಮಿತಿ ನಿಗದಿ ಮಾಡಲು ಚಿಂತನೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಮೌಖಿಕವಾಗಿ ಸಲಹೆ ನೀಡಿದೆ. ವೈಯಕ್ತಿಕ ಖಾತೆಗಳನ್ನು ನಿರ್ಬಂಧಿಸಿ ಕೇಂದ್ರ ಸರ್ಕಾರವು 2021ರ ಫೆಬ್ರವರಿ ಮತ್ತು 2022ರ ಅವಧಿಯಲ್ಲಿ ಮಾಡಿದ್ದ ಆದೇಶಗಳನ್ನು ಪ್ರಶ್ನಿಸಿದ್ದ ಅರ್ಜಿ ವಜಾ ಮಾಡಿರುವ ಕರ್ನಾಟಕ … Continued

ಪ್ರಜ್ವಲ್​​ ರೇವಣ್ಣಗೆ ತಾತ್ಕಾಲಿಕ ರಿಲೀಫ್​ : ಸಂಸದ ಸ್ಥಾನ ಅನರ್ಹಗೊಳಿಸಿದ ಹೈಕೋರ್ಟ್​ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ

ನವದೆಹಲಿ: ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಅವರ ಆಯ್ಕೆಯನ್ನು ಅನೂರ್ಜಿತಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಪ್ರಜ್ವಲ್ ರೇವಣ್ಣ ಲೋಕಸಭೆಯಲ್ಲಿ ಜೆಡಿಎಸ್‌ನ ಏಕೈಕ ಸಂಸದ ಮತ್ತು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ. ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ … Continued

ಲೋಕಸಭಾ ಸದಸ್ಯತ್ವ ಅನರ್ಹತೆ ಪ್ರಕರಣ : ಆದೇಶಕ್ಕೆ ತಡೆ ಕೋರಿ ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ತಮ್ಮ ಆಯ್ಕೆ ಅನೂರ್ಜಿತಗೊಳಿಸಿರುವ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವರೆಗೂ ತಡೆಯಾಜ್ಞೆ ನೀಡಬೇಕು ಎಂದು ಕೋರಿ ಪ್ರಜ್ವಲ ರೇವಣ್ಣ ಮತ್ತೆ ಕರ್ನಾಟಕ ಹೈಕೋರ್ಟ್ ಮೊರೆ ಹೋಗಿದ್ದಾರೆ. ಹೈಕೋರ್ಟ್‌ಗೆ ಮಧ್ಯಂತರ ಅರ್ಜಿ ಸಲ್ಲಿಸಿರುವ ಅವರು ಹಾಸನ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿರುವುದನ್ನು ಅಸಿಂಧುಗೊಳಿಸಿ ಹೊರಡಿಸಿರುವ … Continued

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಆಯ್ಕೆ ಅಸಿಂಧು : ಹೈಕೋರ್ಟ್‌ ಆದೇಶ

ಬೆಂಗಳೂರು : ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಚುನಾವಣಾ ಆಯೋಗಕ್ಕೆ ಸುಳ್ಳು ಮಾಹಿತಿಯನ್ನು ನೀಡಿದ್ದಾರೆ ಎಂದು ಪ್ರಜ್ವಲ್‌ ರೇವಣ್ಣ ಆಯ್ಕೆಯನ್ನು ಹೈಕೋರ್ಟ್‌ ಅಸಿಂಧುಗೊಳಿಸಿದೆ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರ ಮೊಮ್ಮಗ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಅವರ ಸದಸ್ಯತ್ವವನ್ನು ಅಸಿಂಧುಗೊಳಿಸಿ ಶುಕ್ರವಾರ ಕರ್ನಾಟಕ ಹೈಕೋರ್ಟ್‌  ಆದೇಶ ಮಾಡಿದೆ ಎಂದು ಬಾರ್‌ & ಬೆಂಚ್‌ ವರದಿ … Continued

ಡಿಸಿಎಂ ಡಿ.ಕೆ. ಶಿವಕುಮಾರ ಟಿಪ್ಪಣಿ ಆಧರಿಸಿ ಬಿಬಿಎಂಪಿ ಅಧಿಕಾರಿಗಳ ವರ್ಗಾವಣೆ, ನಿಯೋಜನೆಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು : ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರು 2023ರ ಆಗಸ್ಟ್‌ 10ರಂದು ಬರೆದಿರುವ ಟಿಪ್ಪಣಿ ಆಧರಿಸಿ ಕೈಗೊಳ್ಳಲಾಗಿದ್ದ ಬಿಬಿಎಂಪಿ ಅಧಿಕಾರಿಗಳ ವರ್ಗಾವಣೆ ಮತ್ತು ನಿಯೋಜನೆಗೆ ಕರ್ನಾಟಕ ಹೈಕೋರ್ಟ್ ಬುಧವಾರ ತಡೆ ನೀಡಿದೆ. ಬೆಂಗಳೂರಿನ ಅನೀಸ್ ಫಾತಿಮಾ ಸೇರಿದಂತೆ ಬಿಬಿಎಂಪಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ-ಕಿರಿಯ ಆರೋಗ್ಯ ಪರಿವೀಕ್ಷಕರು, ಎಸ್‌ಡಿಎ, ಎಫ್‌ಡಿಎ, … Continued

ನಟ ಚೇತನ್ ವಿರುದ್ಧ ನ್ಯಾಯಾಂಗ ನಿಂದನಾ ಪ್ರಕ್ರಿಯೆ ಆರಂಭಿಸಲು ಸಮ್ಮತಿ

ಬೆಂಗಳೂರು : ಹಿಜಾಬ್ ಪ್ರಕರಣದಲ್ಲಿ ತೀರ್ಪು ನೀಡಿದ ಹೈಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರೋಪದ ಸಂಬಂಧ ಕನ್ನಡ ಚಿತ್ರನಟ ಚೇತನ್‌ ವಿರುದ್ಧ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಈಚೆಗೆ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ್‌ ಶೆಟ್ಟಿ ಅವರು ಒಪ್ಪಿಗೆ ನೀಡಿದ್ದಾರೆ. ಹಾಗೂ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ತಮಿಳುನಾಡಿನ … Continued

ಕೇಂದ್ರದ ಆದೇಶದ ವಿರುದ್ಧ ಪ್ರಕರಣದಲ್ಲಿ ಟ್ವಟರಿಗೆ ಹೈಕೋರ್ಟ್ ರಿಲೀಫ್‌

ಬೆಂಗಳೂರು : ಕೇಂದ್ರ ಸರ್ಕಾರವು ಮೈಕ್ರೋಬ್ಲಾಗಿಂಗ್ ಸೈಟ್ ಟ್ವಿಟರ್ (ಈಗ ಎಕ್ಸ್ ಕಾರ್ಪ್‌ ) ಫೆಬ್ರವರಿ 2021 ಮತ್ತು 2022 ರ ನಡುವೆ ಆಯ್ದ ಟ್ವಿಟರ್‌ ಖಾತೆಗಳನ್ನು ನಿರ್ಬಂಧಿಸಲು ಸೂಚಿಸಿ ಮಾಡಿದ್ದ ಆದೇಶಗಳನ್ನು ಕಾಲಮಿತಿಯಲ್ಲಿ ಪಾಲಿಸಲು ವಿಫಲವಾದ ಆರೋಪದ ಮೇಲೆ ಟ್ವಿಟರ್‌ಗೆ (ಈಗ ಎಕ್ಸ್‌ ಕಾರ್ಪ್‌) ಹೈಕೋರ್ಟ್‌ನ ಏಕಸದಸ್ಯ ಪೀಠವು ವಿಧಿಸಿದ್ದ ₹50 ಲಕ್ಷ ದಂಡದ … Continued

ಪ್ರಧಾನಿ ವಿರುದ್ಧ ನಿಂದನಾತ್ಮಕ ಪದಗಳು ಅವಹೇಳನಕಾರಿ, ದೇಶದ್ರೋಹವಲ್ಲ: ಹೈಕೋರ್ಟ್

ಬೆಂಗಳೂರು : ಶಾಲಾ ಆಡಳಿತ ಮಂಡಳಿ ವಿರುದ್ಧದ ದೇಶದ್ರೋಹದ ಪ್ರಕರಣವನ್ನು ರದ್ದುಪಡಿಸುವ ಸಂದರ್ಭದಲ್ಲಿ ಕರ್ನಾಟಕ ಹೈಕೋರ್ಟ್, ಪ್ರಧಾನಿ ವಿರುದ್ಧ ಅವಹೇಳನಕಾರಿ ಮತ್ತು ಬೇಜವಾಬ್ದಾರಿಯಿಂದ ನಿಂದನೀಯ ಪದಗಳನ್ನು ಬಳಸಲಾಗಿದೆ, ಆದರೆ ಅದು ದೇಶದ್ರೋಹವಲ್ಲ ಎಂದು ಹೇಳಿದೆ. ಬೀದರ್‌ನ ಶಾಹೀನ್ ಶಾಲೆಯ ಎಲ್ಲಾ ಮ್ಯಾನೇಜ್‌ಮೆಂಟ್ ವ್ಯಕ್ತಿಗಳಾದ ಅಲ್ಲಾವುದ್ದೀನ್, ಅಬ್ದುಲ್ ಖಲೀಕ್, ಮಹಮ್ಮದ್ ಬಿಲಾಲ್ ಇನಾಮದಾರ್ ಮತ್ತು ಮಹಮ್ಮದ್ ಮೆಹತಾಬ್ … Continued