ಹಿರಿಯ ಸಂಶೋಧಕ ಎಂ.ಎಂ. ಕಲಬುರ್ಗಿ ಹತ್ಯೆ ಪ್ರಕರಣ : ಇಬ್ಬರು ಆರೋಪಿಗಳಿಗೆ ಜಾಮೀನು ನೀಡಿದ ಹೈಕೋರ್ಟ್‌

ಬೆಂಗಳೂರು : ಹಿರಿಯ ಸಾಹಿತಿ ಹಾಗೂ ಸಂಶೋಧಕ ಎಂ. ಎಂ. ಕಲಬುರ್ಗಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ವಾಸುದೇವ ಭಗವಾನ್‌ ಮತ್ತು ಅಮಿತ್‌ ಬದ್ದಿಗೆ ಹೈಕೋರ್ಟ್‌ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ವಾಸುದೇವ ಭಗವಾನ್‌ ಸೂರ್ಯವಂಶಿ ಮತ್ತು ಅಮಿತ್‌ ಬದ್ದಿ ಸಲ್ಲಿಸಿದ್ದ ಜಾಮೀನು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ಜಿ ಉಮಾ ಅವರ ಏಕಸದಸ್ಯ ಪೀಠ … Continued

ವಾಲ್ಮೀಕಿ ನಿಗಮ ಹಗರಣ: ಇ.ಡಿ. ಅಧಿಕಾರಿಗಳ ವಿರುದ್ಧದ ಎಫ್​ಐಆರ್​ ಗೆ ಹೈಕೋರ್ಟ್ ತಡೆ

ಬೆಂಗಳೂರು : ರಾಜ್ಯದ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗೆ ವಿಚಾರಣೆಯ ನೆಪದಲ್ಲಿ ಬೆದರಿಕೆ ಹಾಕಿದ ಪ್ರಕರಣದಲ್ಲಿ ಆರೋಪಿಗಳಾಗಿರುವ ಜಾರಿ ನಿರ್ದೇಶನಾಲಯದ ಇಬ್ಬರು ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಹೈಕೋರ್ಟ್‌ ಮಂಗಳವಾರ ತಡೆ ನೀಡಿದೆ. ಜಾರಿ ನಿರ್ದೇಶನಾಲಯದ ಉಪ ನಿರ್ದೇಶಕ ಮನೋಜ ಮಿತ್ತಲ್‌ ಮತ್ತು ಸಹಾಯಕ ನಿರ್ದೇಶಕ ಮುರಳಿ ಕಣ್ಣನ್‌ ವಿರುದ್ಧದ ತನಿಖೆ ನಡೆಸುವುದಕ್ಕೆ ನ್ಯಾಯಮೂರ್ತಿ ಎಂ ನಾಗಪ್ರಸನ್ನ … Continued

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ : ಮೂವರು ಆರೋಪಿಗಳಿಗೆ ಜಾಮೀನು

ಬೆಂಗಳೂರು : ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ 3 ಆರೋಪಿಗಳಿಗೆ ರಾಜ್ಯ ಹೈಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ. ಹತ್ಯೆ ಪ್ರಕರಣದಲ್ಲಿ 5ನೇ ಆರೋಪಿಯಾಗಿರುವ ಅಮಿತ್ ದಿಗ್ವೇಕರ್ ಅಲಿಯಾಸ್ ಅಮಿತ್ ಅಲಿಯಾಸ್‌ ಪ್ರದೀಪ್ ಮಹಾಜನ್, 7ನೇ ಆರೋಪಿ ಸುರೇಶ್ ಎಚ್.ಎಲ್ ಅಲಿಯಾಸ್ ಟೀಚರ್ ಮತ್ತು 17ನೇ ಆರೋಪಿ ಕೆ.ಟಿ ನವೀನ್ ಕುಮಾರ್ ಅಲಿಯಾಸ್ … Continued

ಡಿಸಿಎಂ ಡಿ ಕೆ ಶಿವಕುಮಾರ ವಿರುದ್ಧ ಸಿಬಿಐ ಪ್ರಕರಣ ರದ್ದತಿಗೆ ಸುಪ್ರೀಂ ಕೋರ್ಟ್‌ ನಕಾರ

ನವದೆಹಲಿ: ಕರ್ನಾಟಕ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ರದ್ದುಪಡಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮ್ಮ ವಿರುದ್ಧ ಸಿಬಿಐ ಎಫ್‌ಐಆರ್‌ ದಾಖಲಿಸಿರುವುದನ್ನು ಪ್ರಶ್ನಿಸಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಬೇಲಾ ಎಂ. … Continued

ಪೋಕ್ಸೊ ಪ್ರಕರಣ: ಯಡಿಯೂರಪ್ಪಗೆ ಕೋರ್ಟ್‌ ಹಾಜರಿಗೆ ವಿನಾಯಿತಿ ನೀಡಿದ ಹೈಕೋರ್ಟ್‌

ಬೆಂಗಳೂರು : ಪೋಕ್ಸೊ ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅವರಿಗೆ ವಿಚಾರಣಾ ನ್ಯಾಯಾಲಯವು ಜುಲೈ 15ಕ್ಕೆ ವೈಯಕ್ತಿಕ ಹಾಜರಾತಿಯಿಂದ ವಿನಾಯಿತಿ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ನಿರ್ದೇಶನ ನೀಡಿದೆ. ಜುಲೈ 6ರಂದು ವಿಚಾರಣಾಧೀನ ನ್ಯಾಯಾಲಯವು ಯಡಿಯೂರಪ್ಪ ಸೇರಿ ನಾಲ್ವರು ಆರೋಪಿಗಳು ಖುದ್ದು ಹಾಜರಾಗಬೇಕು ಎಂದು ಆದೇಶಿಸಿತ್ತು. ಬೆಂಗಳೂರಿನ ಸದಾಶಿವನಗರ … Continued

ಕಲ್ಲಡ್ಕ ಪ್ರಭಾಕರ್‌ ಭಟ್‌ ವಿರುದ್ಧದ ವಿಚಾರಣೆಗೆ ಹೈಕೋರ್ಟ್‌ ತಡೆ

ಬೆಂಗಳೂರು : ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಿತ ಪ್ರಕರಣದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (ಆರ್‌ಎಸ್‌ಎಸ್) ಪ್ರಮುಖ ಕಲ್ಲಡ್ಕ ಡಾ.ಪ್ರಭಾಕರ ಭಟ್‌ ವಿರುದ್ಧ ಶ್ರೀರಂಗಪಟ್ಟಣ ಜೆಎಂಎಫ್‌ಸಿ ನ್ಯಾಯಾಲಯದಲ್ಲಿರುವ ಪ್ರಕರಣದ ನ್ಯಾಯಿಕ ವಿಚಾರಣಾ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಪಡಿಸಬೇಕು ಎಂದು ಕೋರಿ ಕಲ್ಲಡ್ಕ … Continued

ಕರ್ನಾಟಕದಲ್ಲಿ ಡೆಂಗೆ ಹೆಚ್ಚಳ : ಸ್ವಯಂಪ್ರೇರಿತ ಪಿಐಎಲ್‌ ದಾಖಲಿಸಿಕೊಂಡ ಹೈಕೋರ್ಟ್‌

ಬೆಂಗಳೂರು : ರಾಜಧಾನಿ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಡೆಂಗೆ ಜ್ವರ ಪ್ರಕರಣಗಳ ಹೆಚ್ವಳವಾಗುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಬುಧವಾರ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಲು ರಿಜಿಸ್ಟ್ರಾರ್‌ ಜನರಲ್‌ಗೆ ಆದೇಶಿಸಿದೆ. ಕಲಾಪ ಪ್ರಾರಂಭವಾಗುತ್ತಿದ್ದ ಮುಖ್ಯನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ ನೇತೃತ್ವದ ವಿಭಾಗೀಯ ಪೀಠವು ವಿಷಯ … Continued

ಬಿಟ್ ಕಾಯಿನ್ ಹಗರಣ: ಆರೋಪಿ ಶ್ರೀಕಿ ಸೇರಿ ಇಬ್ಬರ ವಿರುದ್ಧದ ಕೋಕಾ ಕಾಯ್ದೆ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು : ಬಹುಕೋಟಿ ಬಿಟ್‌ ಕಾಯಿನ್‌ ಹಗರಣದ ಪ್ರಮುಖ ಆರೋಪಿ ಶ್ರೀಕೃಷ್ಣ ರಮೇಶ ಅಲಿಯಾಸ್‌ ಶ್ರೀಕಿ ಮತ್ತು ರಾಬಿನ್‌ ಖಂಡೇಲ್‌ವಾಲಾ ವಿರುದ್ಧ ಕೋಕಾ (ಕರ್ನಾಟಕ ಸಂಘಟಿತ ಅಪರಾಧ ತಡೆ ಕಾಯಿದೆ–2000) ಹೇರಿ ಸಿಐಡಿಯ ಡಿಜಿಪಿ ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಬುಧವಾರ ರದ್ದುಪಡಿಸಿದೆ. ಸಿಐಡಿಯ ಡಿಜಿಪಿ 2024ರ ಮೇ 20ರಂದು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಶ್ರೀಕಿ … Continued

ಹಾಸನ ಪೆನ್‌ಡ್ರೈವ್‌ ಹಂಚಿಕೆ ಪ್ರಕರಣ: ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಬಂಧಿಸದಂತೆ ಹೈಕೋರ್ಟ್‌ ಆದೇಶ

ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಲೈಂಗಿಕ ಹಗರಣಕ್ಕೆ ಸಂಬಂಧಿಸಿದ ಪೆನ್‌ಡ್ರೈವ್‌ಗಳನ್ನು ಹಂಚಿಕೆ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಅವರನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ಬಂಧಿಸಬಾರದು. ಆದರೆ, ಪ್ರೀತಂ ತನಿಖಾಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಬೇಕು ಎಂದು ಹೈಕೋರ್ಟ್‌ ಶುಕ್ರವಾರ ಆದೇಶಿಸಿದೆ. ಪ್ರೀತಂ ಗೌಡ ಅವರ … Continued

ಪೋಕ್ಸೋ ಪ್ರಕರಣ: ಎಫ್‌ಐಆರ್ ರದ್ದು ಕೋರಿರುವ ಯಡಿಯೂರಪ್ಪ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಬೆಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ದಾಖಲಾಗಿದ್ದ ಎಫ್‌ಐಆರ್ ರದ್ದು ಹಾಗೂ ನಿರೀಕ್ಷಣಾ ಜಾಮೀನು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದ ನಂತರ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿತು. ಈ ಪ್ರಕರಣದಲ್ಲಿ ಯಡಿಯೂರಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಮತ್ತು ಪ್ರಕರಣ ರದ್ದು ಕೋರಿ … Continued