ಸಿದ್ದರಾಮಯ್ಯ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಕೆ.ಎಸ್. ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ಅಂದಿನ ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಆಗ ವಿರೋಧ ಪಕ್ಷದ ನಾಯಕರಾಗಿದ್ದ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಹೈಕೋರ್ಟ್ ಶುಕ್ರವಾರ ಮಧ್ಯಂತರ ತಡೆ ನೀಡಿದೆ. ಪ್ರಕರಣ ರದ್ದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಕ್ರಿಮಿನಲ್ … Continued

ಪರಿಸರ ಸೂಕ್ಷ್ಮ ವಲಯದಲ್ಲಿ ಕಟ್ಟಡ ನಿರ್ಮಾಣ: ಬಂಡೀಪುರ ಪರಿಸರ ವಲಯ ನಿಗಾ ಸಮಿತಿಗೆ ಉತ್ತರಿಸಲು ನಟ ಗಣೇಶಗೆ ಹೈಕೋರ್ಟ್‌ ಸೂಚನೆ

ಬೆಂಗಳೂರು : ಬಂಡೀಪುರ ಸೂಕ್ಷ್ಮ ಪರಿಸರ ವಲಯದ ವ್ಯಾಪ್ತಿಯಲ್ಲಿ ಬರುವ ತಮ್ಮ ಜಮೀನಿನಲ್ಲಿ ಕಟ್ಟಡ ನಿರ್ಮಾಣಕ್ಕೆ ನಿರ್ಬಂಧ ವಿಧಿಸಿರುವುದಕ್ಕೆ ಸಂಬಂಧಿಸಿದಂತೆ ಬಂಡೀಪುರ ಸೂಕ್ಷ್ಮ ಪರಿಸರ ವಲಯ ನಿಗಾ ಸಮಿತಿಗೆ ಏಳು ದಿನಗಳಲ್ಲಿ ನಟ ಗಣೇಶ ಉತ್ತರ ನೀಡಬೇಕು ಹಾಗೂ ಇದಾದ ನಾಲ್ಕು ವಾರಗಳಲ್ಲಿ ಸಮಿತಿ ನಿರ್ಧಾರ ಕೈಗೊಳ್ಳಬೇಕು ಎಂದು ಕರ್ನಾಟಕ ಹೈಕೋರ್ಟ್‌ ಸೋಮವಾರ ಆದೇಶಿಸಿದೆ. ತಾತ್ಕಾಲಿಕ … Continued

ಸಿಎಂ ಸಿದ್ದರಾಮಯ್ಯ ಶಾಸಕ ಸ್ಥಾನ ಅಸಿಂಧು ಕೋರಿ ಹೈಕೋರ್ಟಿಗೆ ಅರ್ಜಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಕೆ ಮಾಡಲಾಗಿದೆ. ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಗ್ಯಾರಂಟಿ ಕಾರ್ಡ್​ಗಳನ್ನು ವಿತರಿಸುವ ಮೂಲಕ ಮತದಾರರಿಗೆ ಆಮಿಷವೊಡ್ಡಿ ಚುನಾವಣೆಯಲ್ಲಿ ಗೆಲುವು ಸಾಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಯ್ಕೆಯನ್ನು ಅಸಿಂಧುಗೊಳಿಸುವಂತೆ ಕೆ.ಎಂ.ಶಂಕರ ಎಂಬವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಜಾಪ್ರತಿನಿಧಿ ಕಾಯ್ದೆ ಸೆ.123(1) … Continued

ವಿಧವಾ ವೇತನ ದುರ್ಬಳಕೆ: 80 ವರ್ಷದ ನಿವೃತ್ತ ಸರ್ಕಾರಿ ನೌಕರನಿಗೆ ಒಂದು ವರ್ಷ ಜೈಲು ಬದಲು ಒಂದು ದಿನ ಕೋರ್ಟ್‌ನಲ್ಲಿ ಕೂರುವ ಶಿಕ್ಷೆ

ಬೆಂಗಳೂರು: 36 ವರ್ಷಗಳ ಹಿಂದೆ ಸರ್ಕಾರಿ ನೌಕರನಾಗಿದ್ದಾಗ ಹಣ ದುರ್ಬಳಕೆಗೆ ವಿಧಿಸಿದ್ದ ಒಂದು ವರ್ಷದ ಜೈಲು ಶಿಕ್ಷೆಯನ್ನು ಹೈಕೋರ್ಟ್‌ ನ್ಯಾಯಾಮೂರ್ತಿಗಳು ವಯಸ್ಸನ್ನು ಗಣನೆಗೆ ತೆಗೆದುಕೊಂಡು ಮಾನವೀಯತೆ ಆಧಾರದಲ್ಲಿ ಕಲಾಪ ಮುಗಿಯುವ ತನಕ ಕೋರ್ಟ್‌ನಲ್ಲೇ ಇಡೀ ದಿನ ಕುಳಿತುಕೊಳ್ಳವ ಶಿಕ್ಷೆಯಾಗಿ ಪರಿವರ್ತಿಸಿದ್ದಾರೆ. 36 ವರ್ಷಗಳ ಹಿಂದೆ ಸರ್ಕಾರಿ ಉದ್ಯೋಗಿಯಾಗಿದ್ದಾಗ ವಿಧವಾ ವೇತನ ದುರ್ಬಳಕೆ ಮಾಡಿದ್ದ ಪ್ರಕರಣದಲ್ಲಿ 80 … Continued

ನಂದಿ ಬೆಟ್ಟದ ಸಮೀಪ ಆದಿಯೋಗಿ ಪ್ರತಿಮೆ ನಿರ್ಮಾಣ: ಯಥಾಸ್ಥಿತಿ ಕಾಪಾಡಲು ಇಶಾ ಯೋಗ ಕೇಂದ್ರಕ್ಕೆ ಹೈಕೋರ್ಟ್‌

ಬೆಂಗಳೂರು : ಚಿಕ್ಕಬಳ್ಳಾಪುರ ನಗರಕ್ಕೆ ಹೊಂದಿಕೊಂಡಿರುವ ಅವಲಗುರ್ಕಿಯಲ್ಲಿ ಆದಿಯೋಗಿ ಪ್ರತಿಷ್ಠಾಪನೆಗೆ ಮಂಜೂರಾಗಿರುವ ಪ್ರದೇಶದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಸದೆ ಯತಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ನಿರ್ದೇಶಿಸಿದೆ. ಚಿಕ್ಕಬಳ್ಳಾಪುರದ ಚಂಬಳ್ಳಿಯ ಎಸ್‌ ಕ್ಯಾತಪ್ಪ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್‌ ಎಸ್.‌ ಕಿಣಗಿ ಅವರ ನೇತೃತ್ವದ … Continued

ಘಟನೆ ನಡೆದು ನಾಲ್ಕು ವರ್ಷ ಮೀರಿದ್ದರೆ ನಿವೃತ್ತ ಅಧಿಕಾರಿಗಳ ವಿರುದ್ಧ ತನಿಖೆ ನಡೆಸುವಂತಿಲ್ಲ: ಹೈಕೋರ್ಟ್‌ ಮಹತ್ವದ ತೀರ್ಪು

ಬೆಂಗಳೂರು:ನಿವೃತ್ತ ಅಧಿಕಾರಿಯ ವಿರುದ್ಧ ಆರೋಪಿಸಲಾದ ಘಟನೆಯು ನಡೆದು ನಾಲ್ಕು ವರ್ಷಗಳಿಗೂ ಹೆಚ್ಚು ಕಾಲವಾಗಿದ್ದರೆ ಕರ್ನಾಟಕ ನಾಗರಿಕ ಸೇವೆಗಳ ಕಾನೂನಿನ ನಿಯಮ 214 (2) (ಬಿ)ರ ಅನ್ವಯ ಇಲಾಖಾ ತನಿಖಾ ಪ್ರಕ್ರಿಯೆಯನ್ನು ನಡೆಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್‌ ಮಹತ್ವದ ಆದೇಶ ನೀಡಿದೆ. ಕರ್ನಾಟಕ ಗೃಹ ಮಂಡಳಿಯಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿದ್ದ ಅನಿಲಕುಮಾರ ಹಾಗೂ ಟಿ. … Continued

ವೈಯಕ್ತಿಕ ಕಾನೂನಿಗಿಂತ ಪೋಕ್ಸೊ ಕಾಯಿದೆ ಪ್ರಮುಖವಾದದ್ದು ಎಂದ ಕರ್ನಾಟಕ ಹೈಕೋರ್ಟ್

ಬೆಂಗಳೂರು: ಮೊಹಮ್ಮದೀಯ ವೈಯಕ್ತಿಕ ಕಾನೂನಿನ ಪ್ರಕಾರ ಹೆಣ್ಣು ಮಕ್ಕಳು ಮೈ ನೆರೆಯುವುದನ್ನು ವಿವಾಹಕ್ಕೆ ಪರಿಗಣಿಸಲಾಗುತ್ತದೆ. 15ನೇ ವಯಸ್ಸನ್ನು ಮೈನೆರೆಯುವ ವಯಸ್ಸು ಎಂದು ಪರಿಗಣಿಸಲಾಗುತ್ತದೆ. ಹೀಗಾಗಿ, ಬಾಲ್ಯ ವಿವಾಹ ತಡೆ ಕಾಯಿದೆ ಅಡಿ ಅದು ಅಪರಾಧವಲ್ಲ ಎಂಬ ವಾದವನ್ನು ತಿರಸ್ಕರಿಸಿರುವ ಕರ್ನಾಟಕ ಹೈಕೋರ್ಟ್‌, ವಿಶೇಷ ಕಾಯಿದೆಯಾದ ಲೈಂಗಿಕ ದೌರ್ಜನ್ಯಗಳಿಂದ ಮಕ್ಕಳ ರಕ್ಷಣಾ ಕಾಯಿದೆಯು (ಪೋಕ್ಸೊ ಕಾಯಿದೆ) ವೈಯಕ್ತಿಕ … Continued

ಮಠಗಳ ನಿಯಂತ್ರಣಕ್ಕೆ ಕಾನೂನು ರೂಪಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿದ್ದ ಮನವಿ ತಿರಸ್ಕರಿಸಿದ ಹೈಕೋರ್ಟ್‌

ಬೆಂಗಳೂರು: ಹೊಸನಗರದ ರಾಮಚಂದ್ರಾಪುರ ಮಠವೂ ಸೇರಿ ರಾಜ್ಯದಲ್ಲಿರುವ ಎಲ್ಲ ಮಠಗಳ ನಿಯಂತ್ರಣಕ್ಕೆ ಕಾನೂನು ರೂಪಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂಬ ಕೋರಿಕೆಯನ್ನು ಪುರಸ್ಕರಿಸಲು ಹೈಕೋರ್ಟ್ ನಿರಾಕರಿಸಿದ್ದು, ಈ ಸಂಬಂಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಗುರುವಾರ ಇತ್ಯರ್ಥಪಡಿಸಿದೆ. ಮಠಗಳ ನಿಯಂತ್ರಣಕ್ಕೆ ಕಾನೂನು ರೂಪಿಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು. ರಾಮಚಂದ್ರಾಪುರ ಮಠದ ಪೀಠಾಧಿಪತಿ ಸ್ಥಾನದಿಂದ ರಾಘವೇಶ್ವರ ಭಾರತೀ ಸ್ವಾಮೀಜಿ ಅವರನ್ನು … Continued

ಕಾರವಾರ: ಅಂಕೋಲಾ-ಹುಬ್ಬಳ್ಳಿ ರೈಲು ಮಾರ್ಗ- ರಾಷ್ಟ್ರೀಯ ವನ್ಯಜೀವಿ ಮಂಡಳಿ ಸಮಿತಿಯಿಂದ ಸಂಘ-ಸಂಸ್ಥೆಗಳಿಂದ ಅಹವಾಲು ಸ್ವೀಕಾರ

ಕಾರವಾರ :ಕರ್ನಾಟಕ ಹೈಕೋರ್ಟ್‌ ಆದೇಶದ ಮೇರೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಸಮಿತಿಯು ಅಂಕೋಲಾ- ಹುಬ್ಬಳ್ಳಿ ರೇಲ್ವೆ ಯೋಜನೆಯಿಂದ ವನ್ಯಜೀವಿಗಳ ಮೇಲೆ ಆಗಬಹದಾದ ಪರಿಣಾಮದ ಕುರಿತು ಸ್ಥಳ ಪರಿಶೀಲನೆ ನಡೆಸಿದ ನಂತರ ವರದಿ ನೀಡಲಾಗುವುದು ಎಂದು ಭಾರತೀಯ ಅರಣ್ಯ ಸೇವಾ ಡಿಐಜಿ ರಾಕೇಶ ಜಗನ್ಯ ಹೇಳಿದರು. ಇಲ್ಲಿನ ಜಿಲ್ಲಾಧಿಕಾರಿ ಸಭಾಭವನದಲ್ಲಿ ಬುಧವಾರ ನಡೆದ ಅಂಕೊಲಾ-ಹುಬ್ಬಳ್ಳಿ ರೇಲ್ವೆ ಯೋಜನೆಯ … Continued

ಟ್ವಿಟರ್ ದೇಶದಲ್ಲಿ ಬಿಸಿನೆಸ್‌ ಮಾಡಬಹುದು, ಆದರೆ ಈ ದೇಶದ ಕಾನೂನು ಪಾಲಿಸಬೇಕು: ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದ ಕೇಂದ್ರ ಸರ್ಕಾರ

ಬೆಂಗಳೂರು: ಕೇಂದ್ರದ ಎಲೆಕ್ಟ್ರಾನಿಕ್ಸ್‌ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆಯು ಹೊರಡಿಸಿರುವ ಟ್ವಿಟರ್‌ ಖಾತೆಗಳ ನಿರ್ಬಂಧ ಪ್ರಶ್ನಿಸಿ ಟ್ವಿಟರ್‌ ಸಲ್ಲಿಸಿರುವ ಅರ್ಜಿಯನ್ನು ವಿರೋಧಿಸಿ ಕೇಂದ್ರ ಸರ್ಕಾರವು ಕರ್ನಾಟಕ ಹೈಕೋರ್ಟ್‌ಗೆ ಆಕ್ಷೇಪಣೆ ಸಲ್ಲಿಸಿದೆ. ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್ ಟ್ವಿಟರ್ ದೇಶದಲ್ಲಿ ಬಿಸಿನೆಸ್ ಮಾಡಬಹುದು. ಆದರೆ ಈ ನೆಲದ ಕಾನೂನನ್ನು ಅದು ಪಾಲಿಸಬೇಕು ಎಂದು ಕೇಂದ್ರ ಸರ್ಕಾರ ಶುಕ್ರವಾರ ಕರ್ನಾಟಕ ಹೈಕೋಟ್‌ಗೆ … Continued