ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ: ನ್ಯಾ. ಸುಭಾಷ್ ಆಡಿ ನೇತೃತ್ವದ ಸಮಿತಿ ಕಾರ್ಯಾಚರಣೆಗೆ ಹೈಕೋರ್ಟ್‌ ತಡೆ

ಬೆಂಗಳೂರು: ಬೆಂಗಳೂರು: ವೀರಶೈವ-ಲಿಂಗಾಯತ ಪಂಚಮಸಾಲಿ ಉಪಪಂಗಡವನ್ನು 2ಎಗೆ ಸೇರ್ಪಡೆ ಮಾಡುವ ವಿಚಾರದಲ್ಲಿ ಪರಿಶೀಲನೆ ನಡೆಸಿ ವರದಿ ಸಲ್ಲಿಸಲು ರಾಜ್ಯ ಸರ್ಕಾರ ನೇಮಿಸಿದ್ದ ನಿವೃತ್ತ ನ್ಯಾಯಮೂರ್ತಿ ಸುಭಾಷ್ ಬಿ. ಆಡಿ ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ಮುಂದಿನ ಆದೇಶದ ವರೆಗೆ ಮುಂದುವರಿಯದಂತೆ ಕರ್ನಾಟಕ ಹೈಕೋರ್ಟ್‌ ನಿರ್ದೇಶಿಸಿದೆ. ಕಾನೂನಿಗೆ ವಿರುದ್ಧವಾಗಿ ಉನ್ನತಮಟ್ಟದ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶಿಸಿದೆ. … Continued

ಎಸಿಬಿಯಲ್ಲಿನ ಅಕ್ರಮಗಳನ್ನು ಪ್ರಶ್ನಿಸಿದ್ದಕ್ಕೆ ನನಗೆ ವರ್ಗಾವಣೆ ಬೆದರಿಕೆ ಹಾಕಲಾಗಿದೆ, ಇದಕ್ಕೆಲ್ಲ ಬೆದರವುದಿಲ್ಲ : ಹೈಕೋರ್ಟ್‌ ನ್ಯಾ. ಸಂದೇಶ್‌

ಬೆಂಗಳೂರು: ಭ್ರಷ್ಟಾಚಾರಿಗಳ ಹೆಡೆಮುರಿ ಕಟ್ಟಬೇಕಿದ್ದ ಭ್ರಷ್ಟಾಚಾರ ನಿಗ್ರಹ ದಳವೇ (ಎಸಿಬಿ) ಭ್ರಷ್ಟರ ಕೂಪವಾಗಿದೆ. ಎಸಿಬಿ ಕಚೇರಿಗಳೇ ಕಲೆಕ್ಷನ್ ಸೆಂಟರ್‌ಗಳಾಗಿವೆ ಎಂದು ಈಚೆಗೆ ಆಕ್ರೋಶ ವ್ಯಕ್ತಪಡಿಸಿದ್ದ ನ್ಯಾಯಮೂರ್ತಿ ಎಚ್ ಪಿ ಸಂದೇಶ್ ಅವರು ಸಾರ್ವಜನಿಕ ಹಿತದೃಷ್ಟಿಯಿಂದ ವರ್ಗಾವಣೆ ಬೆದರಿಕೆ ಎದುರಿಸಲೂ ಸಿದ್ಧನಿದ್ದೇನೆ ಎಂದು ಸೋಮವಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಲಂಚ ಸ್ವೀಕಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಬೆಂಗಳೂರು … Continued

ಪೋಕ್ಸೊ ಪ್ರಕರಣ: ಸಂತ್ರಸ್ತರು ಪ್ರತಿಕೂಲ ಸಾಕ್ಷಿ ನುಡಿದರೆ ಪಾಟಿ ಸವಾಲಿಗೆ ಗುರಿಪಡಿಸಬಹುದು: ಹೈಕೋರ್ಟ್‌

ಬೆಂಗಳೂರು: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆ ಅಡಿ ದಾಖಲಾದ ಪ್ರಕರಣಗಳಲ್ಲಿ ಸಂತ್ರಸ್ತರು ಪ್ರತಿಕೂಲ ಸಾಕ್ಷಿ ನುಡಿದರೆ ಅವರನ್ನೂ ಪಾಟಿ ಸವಾಲಿಗೆ ಗುರಿಪಡಿಸಬಹುದು ಎಂದು ಕರ್ನಾಟಕ ಹೈಕೋರ್ಟ್ ಈಚೆಗೆ ಸ್ಪಷ್ಟಪಡಿಸಿದೆ. ಪೋಕ್ಸೊ ಪ್ರಕರಣವೊಂದರಲ್ಲಿ ವ್ಯತಿರಿಕ್ತ ಹೇಳಿಕೆ ನೀಡಿದ್ದ ಸಂತ್ರಸ್ತೆಯನ್ನು ಪಾಟಿ ಸವಾಲಿಗೆ ಗುರಿಪಡಿಸಲು ಅನುಮತಿ ನಿರಾಕರಿಸಿದ್ದ ಚಾಮರಾಜನಗರ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯದ … Continued

ಎನ್‌ಇಪಿ ಅಡಿ ಕನ್ನಡ ಕಲಿಕೆ ಕಡ್ಡಾಯವಲ್ಲ; ಹೈಕೋರ್ಟಿಗೆ ತಿಳಿಸಿದ ಕೇಂದ್ರ ಸರ್ಕಾರ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)- 2020 ಮತ್ತು ಅದರ ನಿಬಂಧನೆಗಳಲ್ಲಿ ಯಾವುದೇ ಭಾಷೆಯನ್ನು ಕಡ್ಡಾಯಗೊಳಿಸುವ ಸಂಬಂಧ ಉಲ್ಲೇಖಗಳಿಲ್ಲ. ಹೀಗಾಗಿ, ಎನ್‌ಇಪಿ ನಿಬಂಧನೆಗಳನ್ನು ಪುನರ್‌ವ್ಯಾಖ್ಯಾನಿಸುವ ಅಗತ್ಯ ಉದ್ಭವಿಸುವುದಿಲ್ಲ ಎಂದು ಕೇಂದ್ರ ಸರ್ಕಾರವು ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ. ಇದರಿಂದಾಗಿ ಪದವಿ ಹಂತದಲ್ಲಿ ಭಾಷೆಯಾಗಿ ಕನ್ನಡ ಕಲಿಕೆಯನ್ನು ಕಡ್ಡಾಯ ಮಾಡಿರುವ ರಾಜ್ಯ ಸರ್ಕಾರಕ್ಕೆ ತೀವ್ರ ಹಿನ್ನೆಡೆಯಾಗಿದೆ. ಪದವಿ ಹಂತದಲ್ಲಿ … Continued

ಕನ್ನಡ ಕಡ್ಡಾಯ: ಮುಂದಿನ ವಿಚಾರಣೆ ವರೆಗೆ ಒತ್ತಾಯದ ಕ್ರಮ ಬೇಡ, ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ಬೆಂಗಳೂರು: ಕನ್ನಡವನ್ನು ಒಂದು ಭಾಷೆಯಾಗಿ ಪದವಿ ಹಂತದಲ್ಲಿ ಕಡ್ಡಾಯವಾಗಿ ಕಲಿಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶದ ಅನ್ವಯ ಮುಂದಿನ ವಿಚಾರಣೆಯವರೆಗೆ ಯಾವುದೇ ಒತ್ತಾಯಪೂರ್ವಕ ಕ್ರಮ ಅನುಸರಿಸದಂತೆ ಕರ್ನಾಟಕ ಹೈಕೋರ್ಟ್‌ ರಾಜ್ಯ ಸರ್ಕಾರ ಹಾಗೂ ವಿಶ್ವವಿದ್ಯಾಲಯಗಳಿಗೆ ಸೋಮವಾರ ಸೂಚಿಸಿದೆ. ಪದವಿ ಹಂತದಲ್ಲಿ ಭಾಷೆಯಾಗಿ ಕನ್ನಡ ಕಡ್ಡಾಯ ಕಲಿಕೆಯ ಆದೇಶವನ್ನು ವಿರೋಧಿಸಿ ಸಂಸ್ಕೃತ ಭಾರತಿ (ಕರ್ನಾಟಕ) ಟ್ರಸ್ಟ್‌, … Continued

ಸಮವಸ್ತ್ರದಲ್ಲಿ ವಿದ್ಯಾರ್ಥಿಗಳ ವಿಚಾರಣೆ ನಡೆಸಿದ್ದ ಪೊಲೀಸರ ವಿರುದ್ಧ ಕ್ರಮ: ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ

ಬೆಂಗಳೂರು: ಬೀದರ್‌ನ ಶಾಹೀನ್‌ ಶಾಲೆಯಲ್ಲಿ ಸಮವಸ್ತ್ರ ಧರಿಸಿ ಮತ್ತು ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು 4, 5 ಮತ್ತು 6ನೇ ತರಗತಿ ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿದ್ದ ತಪ್ಪಿತಸ್ಥ ಪೊಲೀಸ್‌ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರವು ಶುಕ್ರವಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ. ಬೀದರಿನ ಶಾಹೀನ್‌ ಶಾಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯಿದೆಗೆ (ಸಿಎಎ) ಸಂಬಂಧಿಸಿದಂತೆ ಕಳೆದ ವರ್ಷ … Continued

56 ನಗರ ಸ್ಥಳೀಯ ಸಂಸ್ಥೆಗಳಿಗೆ 2 ತಿಂಗಳಲ್ಲಿ ಮೀಸಲಾತಿ ನಿಗದಿಪಡಿಸಿ ಅಂತಿಮ ಅಧಿಸೂಚನೆ ಹೊರಡಿಸಿ: ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

ಬೆಂಗಳೂರು: ರಾಜ್ಯದಲ್ಲಿ ಅವಧಿ ಪೂರ್ಣಗೊಂಡಿರುವ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಎರಡು ತಿಂಗಳ ಒಳಗೆ ಮೀಸಲಾತಿ ನಿಗದಿಪಡಿಸಿ ಅಂತಿಮ ಅಧಿಸೂಚನೆ ಹೊರಡಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ಗುರುವಾರ ಆದೇಶಿಸಿದೆ. ಅವಧಿ ಪೂರ್ಣಗೊಂಡಿರುವ ರಾಜ್ಯದ ಕೆಲ ನಗರ ಸ್ಥಳೀಯ ಸಂಸ್ಥೆಗಳಿಗೆ ನಿಗದಿತ ಕಾಲಮಿತಿಯೊಳಗೆ ಚುನಾವಣೆ ನಡೆಸಲು ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಲು ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ … Continued