ಸಮವಸ್ತ್ರದಲ್ಲಿ ವಿದ್ಯಾರ್ಥಿಗಳ ವಿಚಾರಣೆ ನಡೆಸಿದ್ದ ಪೊಲೀಸರ ವಿರುದ್ಧ ಕ್ರಮ: ಹೈಕೋರ್ಟ್‌ಗೆ ಸರ್ಕಾರದ ಮಾಹಿತಿ

ಬೆಂಗಳೂರು: ಬೀದರ್‌ನ ಶಾಹೀನ್‌ ಶಾಲೆಯಲ್ಲಿ ಸಮವಸ್ತ್ರ ಧರಿಸಿ ಮತ್ತು ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು 4, 5 ಮತ್ತು 6ನೇ ತರಗತಿ ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸಿದ್ದ ತಪ್ಪಿತಸ್ಥ ಪೊಲೀಸ್‌ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಸರ್ಕಾರವು ಶುಕ್ರವಾರ ಕರ್ನಾಟಕ ಹೈಕೋರ್ಟ್‌ಗೆ ತಿಳಿಸಿದೆ. ಬೀದರಿನ ಶಾಹೀನ್‌ ಶಾಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯಿದೆಗೆ (ಸಿಎಎ) ಸಂಬಂಧಿಸಿದಂತೆ ಕಳೆದ ವರ್ಷ … Continued

56 ನಗರ ಸ್ಥಳೀಯ ಸಂಸ್ಥೆಗಳಿಗೆ 2 ತಿಂಗಳಲ್ಲಿ ಮೀಸಲಾತಿ ನಿಗದಿಪಡಿಸಿ ಅಂತಿಮ ಅಧಿಸೂಚನೆ ಹೊರಡಿಸಿ: ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

ಬೆಂಗಳೂರು: ರಾಜ್ಯದಲ್ಲಿ ಅವಧಿ ಪೂರ್ಣಗೊಂಡಿರುವ 56 ನಗರ ಸ್ಥಳೀಯ ಸಂಸ್ಥೆಗಳಿಗೆ ಎರಡು ತಿಂಗಳ ಒಳಗೆ ಮೀಸಲಾತಿ ನಿಗದಿಪಡಿಸಿ ಅಂತಿಮ ಅಧಿಸೂಚನೆ ಹೊರಡಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ಗುರುವಾರ ಆದೇಶಿಸಿದೆ. ಅವಧಿ ಪೂರ್ಣಗೊಂಡಿರುವ ರಾಜ್ಯದ ಕೆಲ ನಗರ ಸ್ಥಳೀಯ ಸಂಸ್ಥೆಗಳಿಗೆ ನಿಗದಿತ ಕಾಲಮಿತಿಯೊಳಗೆ ಚುನಾವಣೆ ನಡೆಸಲು ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಲು ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ … Continued