ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ (Legislative Council Chairman) ಬಸವರಾಜ ಹೊರಟ್ಟಿ ತಮ್ಮ ಸ್ಥಾನಕ್ಕೆ ಇಂದು (ಆಗಸ್ಟ್‌ 7) ರಾಜೀನಾಮೆ ನೀಡಿದ್ದಾರೆ. ವಿಧಾನ ಪರಿಷತ್‌ನ ಸಭಾಪತಿ ಸ್ಥಾನಕ್ಕೆ ಸ್ವಇಚ್ಛೆಯಿಂದ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಇಂದು, ಶುಕ್ರವಾರ ಹೊರಟ್ಟಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಜೊತೆ ಸುಮಾರು 10 ನಿಮಿಷಗಳ … Continued

ಕರ್ನಾಟಕ ವಿಧಾನ ಪರಿಷತ್‌ ಚುನಾವಣೆ: ಬಿಜೆಪಿ-ಜೆಡಿಎಸ್ ಶಾಸಕರ ‘ಅಡ್ಡ ಮತದಾನ ’ ಕಾಂಗ್ರೆಸ್ ಕೈ ಹಿಡಿದದ್ದು ಹೇಗೆ ?

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶವು ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲಿ ಸಂಭ್ರಮ ತಂದಿದ್ದರೆ, ವಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ಗೆ ತೀವ್ರ ಮುಜುಗರ ತಂದಿಟ್ಟಿದೆ. ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಏಳು ಸ್ಥಾನಗಳ ಪೈಕಿ ಐದರಲ್ಲಿ ಕಾಂಗ್ರೆಸ್ ಜಯಗಳಿಸಿದರೆ ಬಿಜೆಪಿ ಎರಡರಲ್ಲಿ ಜಯಗಳಿಸಿದೆ. ಆದರೆ, ಈ ಎಲ್ಲದರ ನಡುವೆ ವಿಪಕ್ಷಗಳ ಶಾಸಕರು ದೊಡ್ಡ ಮಟ್ಟದಲ್ಲಿ ‘ಕ್ರಾಸ್ ವೋಟಿಂಗ್’ (ಅಡ್ಡ … Continued

ವಿಧಾನ ಪರಿಷತ್ತಿನ ವಿಪಕ್ಷದ ನಾಯಕರಾಗಿ ಛಲವಾದಿ ನಾರಾಯಣಸ್ವಾಮಿ ನೇಮಕ ಮಾಡಿದ ಬಿಜೆಪಿ

ಬೆಂಗಳೂರು: ವಿಧಾನಸಭೆಯಲ್ಲಿ ಪ್ರಮುಖ ವಿರೋಧ ಪಕ್ಷವಾಗಿರುವ ಬಿಜೆಪಿಯು ವಿಧಾನ ಪರಿಷತ್ತಿನ ವಿಪಕ್ಷದ ನಾಯಕರನ್ನಾಗಿ ಛಲವಾದಿ ನಾರಾಯಣಸ್ವಾಮಿ ಅವರನ್ನು ನೇಮಕ ಮಾಡಿದೆ. ಪರಿಷತ್ ವಿಪಕ್ಷ ನಾಯನಾಗಿದ್ದ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸಂಸತ್ತಿಗೆ ಆಯ್ಕೆಯಾದ ನಂತರ ಈ ಸ್ಥಾನ ತೆರವಾಗಿತ್ತು. ಈಗ ಬಿಜೆಪಿಯು ವಿಪಕ್ಷ ನಾಯಕನ ಸ್ಥಾನಕ್ಕೆ ಛಲವಾದಿ ನಾರಾಯಣ ಸ್ವಾಮಿ ಅವರನ್ನು ನೇಮಿಸಿದೆ. ವಿಪಕ್ಷ … Continued

ಕರ್ನಾಟಕ ವಿಧಾನ ಪರಿಷತ್ತಿನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ

ಬೆಂಗಳೂರು : ಮುಂದಿನ ತಿಂಗಳು ತೆರವಾಗಲಿರುವ ಕರ್ನಾಟಕ ವಿಧಾನ ಪರಿಷತ್‌ 11 ಸ್ಥಾನಗಳಿಗೆ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ಈ ಸ್ಥಾನಗಳಿಗೆ ಜೂನ್ 13ರಂದು ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಜೂನ್ 3 ಕೊನೆಯ ದಿನವಾಗಿದ್ದು, ಜೂನ್ 4ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಜೂನ್ 13ರಂದು ಸಂಜೆ ಐದು ಗಂಟೆಗೆ ಮತ ಎಣಿಕೆ ನಡೆಯಲಿದೆ ಎಂದು ಕೇಂದ್ರ … Continued

ಕರ್ನಾಟಕ ವಿಧಾನ ಪರಿಷತ್ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ ಬೆನ್ನಲ್ಲೇ ಪರಿಷತ್‌ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಪರಿಷತ್ತಿನ 6 ಕ್ಷೇತ್ರಗಳ ಪೈಕಿ ಐದು ಕ್ಷೇತ್ರದಲ್ಲಿ ಬಿಜೆಪಿ ಸ್ಪರ್ಧಿಸುತ್ತಿದೆ. ಒಂದು ಸ್ಥಾನವನ್ನು ಜೆಡಿಎಸ್‌ಗೆ ನೀಡಲಾಗಿದೆ. ಈಶಾನ್ಯ ಪದವೀಧರ, ನೈರುತ್ಯ, ಬೆಂಗಳೂರು ಪದವೀಧರ, ಆಗ್ನೇಯ … Continued

ವಿಧಾನ ಪರಿಷತ್ತಿಗೆ ಮುನಿರಾಜು ಗೌಡ ಅವಿರೋಧ ಆಯ್ಕೆ

ಬೆಂಗಳೂರು : ನಿರೀಕ್ಷಿಸಿದ್ದಂತೆಯೇ ರಾಜ್ಯ ವಿಧಾನ ಪರಿಷತ್ ಸದಸ್ಯರಾಗಿ ಮುನಿರಾಜು ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಈಗ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಕರ್ನಾಟಕ ವಿಧಾನ ಸಭೆಯ ಸದಸ್ಯರಿಂದ ವಿಧಾನಪರಿಷತ್ತಿಗೆ ಒಬ್ಬ ಸದಸ್ಯರನ್ನು ಆಯ್ಕೆ ಮಾಡಲು ಉಪ ಚುನಾವಣೆ ನಿಗದಿಯಾಗಿತ್ತು. ಚುನಾವಣಾ ಕಣದಲ್ಲಿ ಅಂತಿಮವಾಗಿ ಮುನಿರಾಜು ಗೌಡ ಪಿ. ಎಂ. ಅವರು ಮಾತ್ರ ಇದ್ದುದರಿಂದ ಅವರನ್ನು ಅವಿರೋಧವಾಗಿ ಆಯ್ಕೆಮಾಡಲಾಗಿದೆ ಎಂದು … Continued