ಸ್ಯಾಮ್ ಪಿತ್ರೋಡಾ ವಿರುದ್ಧ ಕರ್ನಾಟಕದಲ್ಲಿ ಭೂ ಹಗರಣದ ಆರೋಪ ; ಲೋಕಾಯುಕ್ತ, ಇ.ಡಿ.ಗೆ ಎನ್.ಆರ್. ರಮೇಶ ದೂರು

ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಗೆ ಸೇರಿದ 150 ಕೋಟಿ ರೂ.ಗಳ ಮೌಲ್ಯದ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಸ್ವಾಧೀನಪಡಿಸಿಕೊಂಡ ಆರೋಪದ ಮೇಲೆ ಕಾಂಗ್ರೆಸ್‌ ಪಕ್ಷದ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಮತ್ತು ಇತರ ಐವರ ವಿರುದ್ಧ ಜಾರಿ ನಿರ್ದೇಶನಾಲಯ (ED) ಮತ್ತು ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿದೆ. ಕರ್ನಾಟಕ ಅರಣ್ಯ ಮತ್ತು ಪರಿಸರ ಇಲಾಖೆಯ ಮಾಜಿ ಹೆಚ್ಚುವರಿ … Continued

ಎಚ್‌.ಡಿ.ಕುಮಾರಸ್ವಾಮಿ, ನಿಖಿಲ್‌ ವಿರುದ್ಧ ಬಲವಂತದ ಕ್ರಮ ಬೇಡ : ಹೈಕೋರ್ಟ್‌

ಬೆಂಗಳೂರು : ಲೋಕಾಯುಕ್ತ ವಿಶೇಷ ಪೊಲೀಸ್‌ ತನಿಖಾ ದಳದ (ಎಸ್‌ಐಟಿ) ಮುಖ್ಯಸ್ಥ ಎಂ ಚಂದ್ರಶೇಖರ ಅವರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ದಾಖಲಾಗಿರುವ ಎಫ್‌ಐಆರ್‌ ಸಂಬಂಧ ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ, ಅವರ ಪುತ್ರ ನಿಖಿಲ್‌ ಮತ್ತು ಜೆಡಿಎಸ್‌ ಶಾಸಕ ಸುರೇಶಬಾಬು ವಿರುದ್ಧ ಯಾವುದೇ ಬಲವಂತದ ಕ್ರಮಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್‌ ಬುಧವಾರ ರಾಜ್ಯ ಸರ್ಕಾರಕ್ಕೆ … Continued

ಮುಡಾ ಹಗರಣ ಸಿಬಿಐ ತನಿಖೆಗೆ ಕೋರಿ ಅರ್ಜಿ | ಸಿಎಂಗೆ ಹೈಕೋರ್ಟ್‌ ನೋಟಿಸ್‌ : ತನಿಖಾ ವರದಿ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ

ಬೆಂಗಳೂರು : ಮುಡಾ ಹಗರಣ (MUDA scam)ಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಅವರ ಪತ್ನಿ ಬಿಎಂ ಪಾರ್ವತಿ ಸೇರಿದಂತೆ ಹಲವರಿಗೆ ನೋಟಿಸ್ ಜಾರಿ ಮಾಡಿದೆ. ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನವೆಂಬರ್‌ 25ರ ವರೆಗೆ ಏನೆಲ್ಲ ತನಿಖೆ ನಡೆಸಲಾಗಿದೆ ಎಂಬುದರ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಮೈಸೂರು ಲೋಕಾಯುಕ್ತ ಪೊಲೀಸರಿಗೆ ಕರ್ನಾಟಕ ಹೈಕೋರ್ಟ್‌ … Continued

ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ​ಐಆರ್ ದಾಖಲು

ಮೈಸೂರು : ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಲೋಕಾಯುಕ್ತ ಪೊಲೀಸರು ಶುಕ್ರವಾರ ಪ್ರಥಮ ಮಾಹಿತಿ ವರದಿ (FIR) ದಾಖಲಿಸಿದ್ದಾರೆ. ಲೋಕಾಯುಕ್ತ ಎಡಿಜಿಪಿ ಮನೀಶ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್‌ ಪಿ ಉದೇಶ ನೇತೃತ್ವದಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯವು ಸಿದ್ದರಾಮಯ್ಯ … Continued

ಲೋಕಾಯುಕ್ತ ದಾಳಿ ವೇಳೆ 45.14 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆ…!

ಬೆಂಗಳೂರು: ರಾಜ್ಯದ ಸರ್ಕಾರಿ ಅಧಿಕಾರಿಗಳು ಹಾಗೂ ನಿವೃತ್ತ ಅಧಿಕಾರಿಗಳ ಮನೆ ಮೇಲೆ ನಡೆದ ಲೋಕಾಯುಕ್ತ ದಾಳಿ ದಾಳಿ ವೇಳೆ ಒಟ್ಟು 45.14 ಕೋಟಿ ರೂಪಾಯಿ ಅಕ್ರಮ ಸಂಪತ್ತು ಪತ್ತೆಯಾಗಿದೆ. 100ಕ್ಕೂ ಹೆಚ್ಚು ಸಿಬ್ಬಂದಿಯ ಲೋಕಾಯುಕ್ತ ಪೊಲೀಸರ ತಂಡ ಗುರುವಾರ ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳ 56 ಕಡೆ ದಾಳಿ ನಡೆಸಿತ್ತು. ದಾಳಿಯ ವೇಳೆ 242 … Continued

ಜಮೀನು ಒತ್ತುವರಿ ಆರೋಪ ; ರೋಹಿಣಿ ಸಿಂಧೂರಿ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಿದ ಖ್ಯಾತ ಬಾಲಿವುಡ್ ಗಾಯಕ

ಬೆಂಗಳೂರು: ಭೂಮಿ ಒತ್ತುವರಿ ಮಾಡಿದ ಆರೋಪದಡಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಅವರ ಪತಿ ವಿರುದ್ಧ ಬಾಲಿವುಡ್ ಗಾಯಕ ಲಕ್ಕಿ ಅಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಯಲಹಂಕ ನ್ಯೂಟೌನ್​ ಕೆಂಚೇನಹಳ್ಳಿ ಬಳಿ ಇರುವ ತಮ್ಮ ಜಮೀನು ಕಬಳಿಸಲು ರೋಹಿಣಿ ಸಿಂಧೂರಿ ಹಾಗು ಪತಿ ಸುಧೀರ ರೆಡ್ಡಿ ಸೇರಿದಂತೆ ಯಲಹಂಕ ಉಪವಿಭಾಗದ ಎಸಿಪಿ ಮಂಜುನಾಥ, ಸರ್ವೇಯರ್ … Continued

ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ : ಲಂಚ ಪಡೆದ ಆರೋಪದ ಪ್ರಕರಣದಲ್ಲಿ ಮರು ತನಿಖೆಗೆ ಕೋರ್ಟ್ ಸೂಚನೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಪ್ರಕಣದ ಮುಕ್ತಾಯ ವರದಿ(ಬಿ ರಿಪೋರ್ಟ್‌)ಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಹಾಗೂ ಪ್ರಕರಣವನ್ನು ಮರುತನಿಖೆ ನಡೆಸಿ 6 ತಿಂಗಳಲ್ಲಿ ವರದಿ ಸಲ್ಲಿಸುವಂತೆ ಲೋಕಾಯುಕ್ತಕ್ಕೆ ನ್ಯಾಯಾಲಯ ಸೂಚನೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ … Continued

ಜೂನ್​​ 30ರೊಳಗೆ ಎಲ್ಲ 224 ಶಾಸಕರಿಗೂ ಆಸ್ತಿ ವಿವರ ಸಲ್ಲಿಸಲು ಲೋಕಾಯುಕ್ತ ಗಡುವು

ಬೆಂಗಳೂರು: ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಎಲ್ಲಾ 224 ಶಾಸಕರಿಗೂ ಆಸ್ತಿ ವಿವರ ಸಲ್ಲಿಸುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಸೂಚನೆ ನೀಡಿದ್ದಾರೆ. ಇದೇ ಜೂನ್​​ 30ರೊಳಗೆ ಎಲ್ಲಾ ಶಾಸಕರ ಆಸ್ತಿ ವಿವರ ಸಲ್ಲಿಸಬೇಕು ಎಂದು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್​.ಪಾಟೀಲ ಗಡುವು ನೀಡಿದ್ದಾರೆ. ಈ ಮೋದಲು ಆದೇಶ ನೀಡಿ 15 ದಿನ ಕಳೆದರೂ ಶಾಸಕರು … Continued