ಗಡಿ ವಿವಾದ: ಕರ್ನಾಟಕಕ್ಕೆ ನೀರು ಹರಿಸುವುದನ್ನು ಮರುಪರಿಶೀಲಿಸಬೇಕಾಗುತ್ತದೆ ಎಂದು ಎಚ್ಚರಿಸಿದ ಮಹಾರಾಷ್ಟ್ರ ಸಚಿವ

ನಾಗ್ಪುರ : ಗಡಿ ವಿವಾದಕ್ಕೆ ಸಂಬಂಧಿಸಿ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಬುಧವಾರ ವಾಗ್ದಾಳಿ ನಡೆಸಿದ ಮಹಾರಾಷ್ಟ್ರ ಸಚಿವ ಶಂಭುರಾಜ್‌ ದೇಸಾಯಿ, ಬೊಮ್ಮಾಯಿ ಅವರು ಬೇಜವಾಬ್ದಾರಿಯುತ ಹೇಳಿಕೆಗಳನ್ನು ನೀಡುವುದನ್ನು ನಿಲ್ಲಿಸದಿದ್ದರೆ ಕರ್ನಾಟಕಕ್ಕೆ ನದಿ ನೀರು ಪೂರೈಕೆ ಮಾಡುವ ಬಗ್ಗೆ ಮ=ಹಾರಾಷ್ಟ್ರ ಮರುಪರಿಶೀಲನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮಹಾರಾಷ್ಟ್ರಕ್ಕೆ … Continued

ಗಡಿ ವಿವಾದ: ಮಹಾರಾಷ್ಟ್ರ ಸರ್ಕಾರ ವಿರುದ್ಧ ಸದನದಲ್ಲಿ ಖಂಡನಾ ನಿರ್ಣಯ ಮಂಡನೆಗೆ ಒಮ್ಮತದ ನಿರ್ಧಾರ

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಬುಧವಾರ (ಡಿಸೆಂಬರ್‌ ೨೧) ಮಹಾರಾಷ್ಟ್ರ ಸರ್ಕಾರ ವಿರುದ್ಧ ಖಂಡನಾ ನಿರ್ಣಯವನ್ನು ಉಭಯ ಸದನಗಳಲ್ಲಿ ಮಂಡಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಕರ್ನಾಟಕ ಗಡಿ ವಿಚಾರವಾಗಿ ನಿಲುವಳಿ ಸೂಚನೆ ಸಂದರ್ಭದಲ್ಲಿ ಮಹಾರಾಷ್ಟ್ರ ಸರ್ಕಾರ ಹಾಗೂ ಅವರ ನಡೆ ವಿರುದ್ಧ ಉಭಯ ಸದನ ಮೂಲಕ ಖಂಡನಾ ನಿರ್ಣಯ ಮಂಡಿಸುವ ಬಗ್ಗೆ ಮುಖ್ಯಮಂತ್ರಿ … Continued

ಅಮಿತ್‌ ಶಾ ಸೂಚನೆ ನಂತರ ಬೆಳಗಾವಿಯಲ್ಲಿ ಮಹಾಮೇಳಾವ ಆಯೋಜನೆ ಮಾಡುತ್ತದೆಯೇ ಎಂಇಎಸ್‌..?

ಬೆಳಗಾವಿ: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪಿನವರೆಗೆ ಕಾಯುವಂತೆ ಕರ್ನಾಟಕ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದರೂ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಮಹಾಮೇಳಾವ ಆಯೋಜಿಸಲು ಮುಂದಾಗಿದೆ ಎನ್ನಲಾಗಿದೆ. ಆದರೆ ಗೊಲದಲವೂ ಇದೆ.. ಬೆಳಗಾವಿಯಲ್ಲಿ ವಿಧಾನಸಭೆಯ ಚಳಿಗಾಲದ ಅಧಿವೇಶನದ ವೇಳೆ ಎಂಇಎಸ್‌ ಮಹಾಮೇಳಾವ ಸಂಘಟಿಸುತ್ತ ಬಂದಿದ್ದು, ಅದರಲ್ಲಿ ಕರ್ನಾಟಕದ … Continued

ಕರ್ನಾಟಕ ಸೇರುತ್ತೇವೆಂದ ಗ್ರಾಮ ಪಂಚಾಯತಗಳನ್ನೇ ವಿಸರ್ಜಿಸುವ ಬೆದರಿಕೆ ಹಾಕಿದ ಮಹಾರಾಷ್ಟ್ರ ಸರ್ಕಾರ

ವಿಜಯಪುರ: ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದದ ಮಧ್ಯೆ ಈಗ ಕರ್ನಾಟಕ ಸೇರಲು ನಿರ್ಧಾರ ಮಾಡಿರುವ ಮಹಾರಾಷ್ಟ್ರದ ಗ್ರಾಮಕ್ಕೆ ಮಹಾರಾಷ್ಟ್ರ ಸರ್ಕಾರಕ್ಕೆ ಬೆದರಿಕೆ ಹಾಕಿದೆ. ಸೊಲ್ಲಾಪುರ ಜಿಲ್ಲೆ ಅಕ್ಕಲಕೋಟ ತಾಲೂಕಿನ ಕನ್ನಡಿಗರಿಗೆ ನೀವು ಕರ್ನಾಟಕಕ್ಕೆ ಸೇರುತ್ತೇವೆ ಎಂದರೆ ನಾವು ನಿಮ್ಮ ಗ್ರಾಮ ಪಂಚಾಯತವನ್ನೇ ವಿಸರ್ಜಿಸುತ್ತೇವೆ ಎಂದು ಮಹಾರಾಷ್ಟ್ರ ಸರ್ಕಾರ ಬೆದರಿಕೆ ಹಾಕಿದೆ. ಕರ್ನಾಟಕ ಸೇರಲು ಇಚ್ಛೆ … Continued

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಕರ್ನಾಟಕ ಸಿಎಂ ಬೊಮ್ಮಾಯಿ-ಮಹಾರಾಷ್ಟ್ರ ಶಿಂಧೆ ದೂರವಾಣಿಯಲ್ಲಿ ‘ಶಾಂತಿʼ ಮಾತುಕತೆ

ಬೆಂಗಳೂರು : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಉಲ್ಬಣದ ನಡುವೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಮಂಗಳವಾರ ದೂರವಾಣಿ ಮೂಲಕ ಮಾತನಾಡಿದ್ದು, ಎರಡೂ ರಾಜ್ಯಗಳು ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಒಪ್ಪಿಕೊಂಡರು. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ನನ್ನೊಂದಿಗೆ ದೂರವಾಣಿ ಸಂಭಾಷಣೆ ನಡೆಸಿದರು, ಎರಡೂ ರಾಜ್ಯಗಳಲ್ಲಿ ಶಾಂತಿ … Continued

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಕರ್ನಾಟಕ ಸಿಎಂಗೆ ಎಚ್ಚರಿಕೆ ನೀಡಿದ ಶರದ್ ಪವಾರ್

ಮುಂಬೈ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಯಿಂದ ಕರ್ನಾಟಕ-ಮಹಾರಾಷ್ಟ್ರ ಗಡಿ ಗ್ರಾಮಗಳಲ್ಲಿ “ಭಯದ ವಾತಾವರಣ” ನಿರ್ಮಾಣವಾಗಿದೆ ಎಂದು ಆರೋಪಿಸಿದ್ದಾರೆ. ಮಂಗಳವಾರ ಮುಂಬೈನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಮಹಾರಾಷ್ಟ್ರದ ವಾಹನಗಳ ಮೇಲಿನ ದಾಳಿಯನ್ನು ಉಲ್ಲೇಖಿಸಿ ಬೊಮ್ಮಾಯಿ ಅವರನ್ನು ದೂಷಿಸಿದ ಪವಾರ್, ಎರಡೂ ರಾಜ್ಯಗಳ … Continued

ಈ ಸಂದರ್ಭದಲ್ಲಿ ಬೆಳಗಾವಿಗೆ ಮಹಾರಾಷ್ಟ್ರ ಸಚಿವರು ಬರುವುದು ಸೂಕ್ತವಲ್ಲ : ಸಿಎಂ ಬೊಮ್ಮಾಯಿ

ರಾಮದುರ್ಗ (ಬೆಳಗಾವಿ): ಎರಡು ರಾಜ್ಯಗಳ ಮಧ್ಯೆ ಇರುವ ಈ ಪರಿಸ್ಥಿತಿಯಲ್ಲಿ ಮಹಾರಾಷ್ಟ್ರ ಸಚಿವರು ಬೆಳಗಾವಿಗೆ ಬರುವುದು ಸೂಕ್ತವಲ್ಲ. ಅವರು ಇಲ್ಲಿಗೆ ಬರಬಾರದು ಎಂಬ ಸಂದೇಶವನ್ನು ಈಗಾಗಲೇ ನಮ್ಮ ಮುಖ್ಯ ಕಾರ್ಯದರ್ಶಿಗಳು ಅಲ್ಲಿನ ಮುಖ್ಯ ಕಾರ್ಯದರ್ಶಿಗಳಿಗೆ ಫ್ಯಾಕ್ಸ್ ಮೂಲಕ ಸಂದೇಶ ಕಳುಹಿಸಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು, ಶುಕ್ರವಾರ ಬೆಳಗಾವಿ ಜಿಲ್ಲೆ ರಾಮದುರ್ಗದಲ್ಲಿ ಮಾಧ್ಯಮದವರೊಂದಿಗೆ … Continued

ಮಹಾರಾಷ್ಟ್ರದ ಇಬ್ಬರು ಸಚಿವರು ಡಿಸೆಂಬರ್ 3ರಂದು ಬೆಳಗಾವಿಗೆ ಭೇಟಿ : ಸಿಎಂ ಬೊಮ್ಮಾಯಿಗೆ ಬೆಳಗಾವಿಯ ಕನ್ನಡಪರ ಹೋರಾಟಗಾರ ಬರೆದ ಪತ್ರದಲ್ಲಿ ಏನಿದೆ ?

ಬೆಳಗಾವಿ : ಮಹಾರಾಷ್ಟ್ರದ ಇಬ್ಬರು ಗಡಿ ಉಸ್ತುವಾರಿ ಸಚಿವರು ಡಿಸೆಂಬರ್ 3ರಂದು ಬೆಳಗಾವಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಇಬ್ಬರು ಹಿರಿಯ ಸಚಿವರನ್ನು ಮಹಾರಾಷ್ಟ್ರದ ಜತ್ತ, ಅಕ್ಕಲಕೋಟ ಹಾಗೂ ದಕ್ಷಿಣ ಸೋಲ್ಲಾಪುರ ಪ್ರದೇಶಗಳಿಗೆ ಕಳುಹಿಸಬೇಕು ಎಂದು ಬೆಳಗಾವಿಯ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ … Continued

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ಪ್ರತಿಪಕ್ಷದ ನಾಯಕರ ಜೊತೆ ಚರ್ಚಿಸಿ ಸರ್ವಪಕ್ಷಗಳ ಸಭೆ ನಿಗದಿ-ಸಿಎಂ ಬೊಮ್ಮಾಯಿ

ಬೆಂಗಳೂರು: ಗಡಿ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಕಾನೂನಿನ ಸಮರಕ್ಕೆ ಎಲ್ಲ ರೀತಿಯಲ್ಲಿ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಭಾನುವಾರ ಮುಖ್ಯಮಂತ್ರಿ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸರ್ವೋಚ್ಚ ನ್ಯಾಯಾಲಯದಲ್ಲಿ ಇದೇ 30 ರಂದು ವಿಚಾರಣೆಗೆ ಬರಲಿರುವ ಗಡಿ ವಿಚಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ನ್ಯಾಯಮೂರ್ತಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. 2004 … Continued