ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪ: ಪಿಎಸ್‌ಐ ವಿರುದ್ಧ ಎಫ್‌ಐಆರ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದಲಿತ ಯುವಕನಿಗೆ ಮೂತ್ರ ಕುಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಪಿಎಸ್‌ಐ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಗೋಣಿಬೀಡು ಪೊಲೀಸ್ ಠಾಣೆ ಪಿಎಸ್‌ಐ ಅರ್ಜುನ್ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದ್ದು, ಶನಿವಾರ ಇಲಾಖೆ ತನಿಖೆಗೂ ಆದೇಶ ಮಾಡಲಾಗಿದೆ. ಮೂಡಿಗೆರೆ ತಾಲೂಕಿನ ಕಿರುಗಂದ ಗ್ರಾಮದ ಯುವಕ ಪುನೀತ್ ನೀಡಿರುವ ದೂರಿನ ಅನ್ವಯ ಎಫ್‌ಐಆರ್ ದಾಖಲಿಸಲಾಗಿದೆ … Continued