‘ಡ್ಯಾಡಿ ಈಸ್ ಬ್ಯಾಕ್’: ಸಿದ್ದರಾಮಯ್ಯ, ಡಿಕೆಶಿ, ಎಚ್.ಡಿ. ಕುಮಾರಸ್ವಾಮಿಯ ಎಐ ವೀಡಿಯೊ ವೈರಲ್…!

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಕೃತಕ ಬುದ್ಧಿಮತ್ತೆ (AI) ಸೃಜಿತ ವೀಡಿಯೊವೊಂದು ಈಗ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಎಐ ಅವತಾರಗಳನ್ನು ಒಳಗೊಂಡ ಈ ವೀಡಿಯೊ ಸದ್ಯ ಇಂಟರ್ನೆಟ್‌ನಲ್ಲಿ ಸಖತ್ ಸದ್ದು ಮಾಡುತ್ತಿದೆ. ಟ್ವಿಟರ್‌ನಲ್ಲಿ (X) ಫ್ಯಾನ್‌ … Continued

ಕರ್ನಾಟಕದಲ್ಲಿ ಅಧಿಕಾರ ಸಂಘರ್ಷ: ಸಿದ್ದರಾಮಯ್ಯ, ಶಿವಕುಮಾರಗೆ ಕಾಂಗ್ರೆಸ್‌ ಹೈಕಮಾಂಡಿನಿಂದ ದೆಹಲಿ ಬುಲಾವ್‌ ಸಾಧ್ಯತೆ…

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ (Chief minister) ಹುದ್ದೆಯ ಕುರಿತಂತೆ ನಡೆಯುತ್ತಿರುವ ಆಂತರಿಕ ಸಂಘರ್ಷ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಪಕ್ಷದ ಹೈಕಮಾಂಡ್‌ ಮಧ್ಯಪ್ರವೇಶಿಸಿದೆ. ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರ ನಡುವೆ ಮಹತ್ವದ ಸಭೆ ನಿಗದಿಯಾಗಿದ್ದು, ಅದರ ನಂತರ ಗೊಂದಲಕ್ಕೆ ಪರಿಹಾರ ಕಂಡುಕೊಳ್ಳುವ ಸಲುವಾಗಿ, ನವೆಂಬರ್ 29 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ … Continued

‘ಸಿಎಂ ಬದಲಾವಣೆ’ ಚರ್ಚೆ ಮತ್ತೆ ಮುನ್ನೆಲೆಗೆ : ಡಿಕೆ ಶಿವಕುಮಾರ ಬಣದ ಶಾಸಕರು ದಿಢೀರ್ ದೆಹಲಿಗೆ…!

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಬಣಕ್ಕೆ ಸೇರಿದ ಕೆಲವು ಕಾಂಗ್ರೆಸ್ ಶಾಸಕರು ದೆಹಲಿಗೆ ದೌಡಾಯಿಸಿದ್ದಾರೆ ಎಂದು ವರದಿಯಾಗಿದೆ. ಕರ್ನಾಟಕದಲ್ಲಿ ಬಹುಕಾಲದಿಂದ ಕೇಳಿಬರುತ್ತಿರುವ ಮುಖ್ಯಮಂತ್ರಿ ಹುದ್ದೆಯ ಅಧಿಕಾರ ಹಂಚಿಕೆ ಸೂತ್ರವನ್ನು ಜಾರಿಗೆ ತರಲು ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೆಚ್ಚಿಸಲು ದೆಹಲಿಗೆ ತೆರಳಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಸರ್ಕಾರವು ಗುರುವಾರ (ನವೆಂಬರ್‌  20)ದಂದು 2.5 ವರ್ಷಗಳನ್ನು … Continued

ಭಿನ್ನಮತ, ಸಂಪುಟ ಪುನರ್ರಚನೆ ಚರ್ಚೆಯ ಮಧ್ಯೆ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಲಿರುವ ರಾಜ್ಯ ಉಸ್ತುವಾರಿ ಸುರ್ಜೇವಾಲಾ

ಬೆಂಗಳೂರು: ಕರ್ನಾಟಕದ ಆಡಳಿತ ಪಕ್ಷವಾದ ಕಾಂಗ್ರೆಸ್‌ನ ಆಂತರಿಕ ಅಸಮಾಧಾನದ ನಡುವೆ ಕರ್ನಾಟಕದ ಉಸ್ತುವಾರಿ ಹಾಗೂ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಸೋಮವಾರ ಪಕ್ಷದ ಶಾಸಕರೊಂದಿಗೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ. ರಣದೀಪ್ ಸಿಂಗ್ ಸುರ್ಜೆವಾಲಾ ಅವರು ಪಕ್ಷದೊಳಗಿನ ಆಂತರಿಕ ಗೊಂದಲ ಹಾಗೂ ಅಸಮಾಧಾನ ಪರಿಹರಿಸುವ ಉದ್ದೇಶದಿಂದ ಎರಡು ದಿನಗಳ ಭೇಟಿಗಾಗಿ ಸೋಮವಾರ (ಜೂನ್‌ ೩೦) … Continued

ಸಿದ್ದರಾಮಯ್ಯ, ಡಿಕೆಶಿ ಫ್ಲೆಕ್ಸ್ ಹಾಕಿ ಸ್ವಾಗತ ಕೋರಿದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ನಡೆ ಚರ್ಚೆಗೆ ಗ್ರಾಸ…!

ಶಿರಸಿ: ಇತ್ತೀಚಿಗೆ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ಪಕ್ಷದ ವಿಪ್‌ ಇದ್ದರೂ ಮತದಾನಕ್ಕೆ ಗೈರಾಗುವ ಮೂಲಕ ಸುದ್ದಿಯಲ್ಲಿದ್ದ ಯಲ್ಲಾಪುರ-ಮುಂಡಗೋಡ ಕ್ಷೇತ್ರದ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ ಅವರು ಫ್ಲೆಕ್ಸ್‌ ಮೂಲಕ ಮತ್ತೆ ಸುದ್ದಿಯಲ್ಲಿದ್ದಾರೆ. ಬನವಾಸಿಯ ಕದಂಬೋತ್ಸವಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಭಾವಚಿತ್ರ ಇರುವ ಫ್ಲೆಕ್ಸ್ ಹಾಕಿ ಸ್ವಾಗತ ಕೋರುವ … Continued

ಮಾಜಿ ಸಚಿವ ಮನೋಹರ ತಹಶೀಲ್ದಾರ ಬಿಜೆಪಿಗೆ ಸೇರ್ಪಡೆ

ಬೆಂಗಳೂರು : ಮಾಜಿ ಸಚಿವ ಮನೋಹರ ತಹಶೀಲ್ದಾರ ಅವರು ಇಂದು, ಶನಿವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮನೋಹರ ತಹಶೀಲ್ದಾರ ಅವರಿಗೆ ಪಕ್ಷದ ಧ್ವಜ ನೀಡಿ ಸ್ವಾಗತಿಸಿದರು. ಈ ವೇಳೆ ವಿಪಕ್ಷ ನಾಯಕ ಆರ್.ಅಶೋಕ, ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಉಪಸ್ಥಿತರಿದ್ದರು. 50 ವರ್ಷಗಳಿಂದ ಕಾಂಗ್ರೆಸ್​ನಲ್ಲಿದ್ದ ಮಾಜಿ … Continued

ಕುತೂಹಲ ಮೂಡಿಸಿದ ಡಿಸಿಎಂ ಶಿವಕುಮಾರ-ಬಿಜೆಪಿ ನಾಯಕಿ ತೇಜಸ್ವಿನಿ ಅನಂತಕುಮಾರ ಭೇಟಿ

ಬೆಂಗಳೂರು: ಬಿಜೆಪಿ ನಾಯಕಿ ಹಾಗೂ ಕೇಂದ್ರದ ಮಾಜಿ ಸಚಿವ ದಿವಂಗತ ಅನಂತಕುಮಾರ ಅವರ ಪತ್ನಿ ತೇಜಸ್ವಿನಿ ಅನಂತಕುಮಾರ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರನ್ನು ಭೇಟಿ ಮಾಡಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಈ ಭೇಟಿ ವೇಳೆ ಅವರು ಕೆಲಹೊತ್ತು ಮಾತುಕತೆ ನಡೆಸಿದ್ದಾರೆ. ಮೂಲಗಳ ಪ್ರಕಾರ, ಕಾರ್ಯಕ್ರಮವೊಂದರ ನಿಮಿತ್ತ ಡಿಕೆಶಿ ಅವರನ್ನು ಆಹ್ವಾನಿಸುವ ಉದ್ದೇಶದಿಂದ ತೇಜಸ್ವಿನಿ … Continued