ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಮುಂದಿನ 6 ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಹವಾಮಾನ ಮುನ್ಸೂಚನೆಯ ಪ್ರಕಾರ, ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಮುಂದಿನ 6 ದಿನ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ (ಐಎಂಡಿ) ಮುನ್ಸೂಚನೆ ನೀಡಿದೆ. ಐಎಂಡಿ ಮುನ್ಸೂಚನೆಯ ಪ್ರಕಾರ, ಬೆಂಗಳೂರಿನಲ್ಲಿ ಗುರುವಾರದವರೆಗೆ ಲಘು ಮಳೆಯಾಗಲಿದೆ, ನಂತರ ಶುಕ್ರವಾರ ಮತ್ತು ಶನಿವಾರ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು … Continued

ಭಾರಿ ಮಳೆ ಮುನ್ಸೂಚನೆ ; ಇಂದು (ಜುಲೈ 18) ಕರ್ನಾಟಕದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಮೂರು ಜಿಲ್ಲೆಗಳಲ್ಲಿ ವಿಪರೀತ ಮಳೆ ಮುಂದುವರಿಯಲಿದ್ದು, ಗುರುವಾರ (ಜುಲೈ 18) ಕರಾವಳಿಯ ಮೂರು ಜಿಲ್ಲೆಗಳು ಹಾಗೂ ಮಲೆನಾಡಿನ ಮೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಜುಲೈ 18ರಂದು ರೆಡ್ ಅಲರ್ಟ್ ನೀಡಲಾಗಿದೆ. … Continued

ಜುಲೈ 2ರ ವರೆಗೆ ಕರ್ನಾಟಕದ 6 ಜಿಲ್ಲೆಗಳಲ್ಲಿ ಅಧಿಕ ಮಳೆಯ ಮುನ್ಸೂಚನೆ

ಬೆಂಗಳೂರು : ಕರ್ನಾಟಕ, ಕೇರಳ ಹಾಗೂ ಮಹಾರಾಷ್ಟ್ರದ ಕರಾವಳಿಯ ಸಮುದ್ರತೀರಗಳಲ್ಲಿ ದಟ್ಟಮೋಡ ಇರುವುದರಿಂದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಲಿದೆ. ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿಯೂ ಹಲವು ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಮುಂದಿನ 48 ಗಂಟೆಗಳಲ್ಲಿ ಕರ್ನಾಟಕ ಕರಾವಳಿಯ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, … Continued

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದು ಭಾನುವಾರ (ಜೂನ್‌ 30)ರಂದು ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ. ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ಗಾಳಿಯ … Continued

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ , ಭೂ ಕುಸಿತದ ಸಾಧ್ಯತೆ ; ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ಬೆಂಗಳೂರು: ಮುಂಗಾರು ಮಳೆಯ ಆರ್ಭಟ ಶುಕ್ರವಾರ (ಜೂನ್‌ 21)ದಿಂದ ಮತ್ತೆ ಜೋರಾಗಲಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳು ಹಾಗೂ ಪಶ್ಚಿಮ ಘಟ್ಟದ ತಪ್ಪಲಿನ ಜಿಲ್ಲೆಗಳಿಗೆ ಒಂದು ವಾರ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಪಶ್ಚಿಮ ಘಟ್ಟದ ಜಿಲ್ಲೆಗಳಾದ ಹಾಸನ, ಕೊಡಗು, ಚಿಕ್ಕಮಗಳೂರು, ಹಾಗೂ ಶಿವಮೊಗ್ಗ, ಮೈಸೂರು … Continued

ಜೂನ್ 21ರಿಂದ 10 ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆ

ಬೆಂಗಳೂರು : ಈ ಬಾರಿ ಮುಂಗಾರು ಈವರೆಗೆ ತಕ್ಕಮಟ್ಟಿಗೆ ಸಮಾಧಾನ ನೀಡಿದ್ದರೂ ಕೆಲವು ಕಡೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗದರೆ ಕೆಲವು ಭಾಗಗಳಲ್ಲಿ ಮಳೆಯ ಕೊರತೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರಿ ಮಳೆ ಉತ್ತಮವಾಗಿದೆ, ಆದರೆ ಕರಾವಳಿ ಹಾಗೂ ಮಲೆನಾಡಿನ ಹಲವು ಭಾಗಗಳಲ್ಲಿ ಮಳೆ ಕೊರತೆ ಕಂಡುಬಂದಿದೆ. ಇದೇ ವೇಳೆ ಇನ್ನೆರಡು ದಿನಗಳಲ್ಲಿ ರಾಜ್ಯದಲ್ಲಿ … Continued

ಭಾರೀ ಮಳೆ ಮುನ್ಸೂಚನೆ : ಕರ್ನಾಟಕದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯಕ್ಕೆ ಭಾನುವಾರ ಮುಂಗಾರು ಪ್ರವೇಶವಾಗಿದೆ. ಹೀಗಾಗಿ, ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಸೋಮವಾರ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ 24 ಗಂಟೆಗಳಿಗೆ (ಜೂನ್‌ ೩)ದಕ್ಷಿಣ ಕನ್ನಡ, ಉತ್ತರ ಕರ್ನಾಟಕ ಭಾಗದ ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, … Continued

ಕರ್ನಾಟಕಕ್ಕೆ ಮುಂದಿನ 48 ಗಂಟೆಗಳಲ್ಲಿ ಮುಂಗಾರು ಪ್ರವೇಶ : ಈ ಜಿಲ್ಲೆಗಳಲ್ಲಿ ಭಾರೀ ಗಾಳಿಮಳೆಯ ಮುನ್ಸೂಚನೆ

ಬೆಂಗಳೂರು: ಎಲ್ಲರೂ ನಿರೀಕ್ಷಿಸುತ್ತಿದ್ದ ನೈರುತ್ಯ ಮುಂಗಾರು (southwest monsoon) ಜೂನ್ 2 ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಜೂನ್‌ 5-6ರ ಆಗಮಿಸಲಿದೆ ಎಂದು ನಿರೀಕ್ಷಿಸಲಾಗಿದ್ದ ದಿನಾಂಕಗಳಿಗಿಂತ ಮುಂಚಿತವಾಗಿ ಆಗಮಿಸುತ್ತಿದೆ…! ಭಾರತೀಯ ಹವಾಮಾನ ಇಲಾಖೆ (IMD) ವರದಿ ಮಾಡಿರುವಂತೆ ಕೇರಳಕ್ಕೆ ಗುರುವಾರ (ಮೇ 30) ಮಾನ್ಸೂನ್ ಆಗಮನದ ಹಿನ್ನೆಲೆಯಲ್ಲಿ ಈ ಪ್ರಕಟಣೆ ಬಂದಿದೆ. ನೈಋತ್ಯ ಮಾನ್ಸೂನ್ ಗುರುವಾರ (ಮೇ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 2 ದಿನ ಗುಡುಗು ಸಹಿತ ಮಳೆ ; ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾನುವಾರದಿಂದ ಮೇ 26 ಹಾಗೂ 27ರಂದು ಎರಡು ದಿನ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿದ್ದು, ಈ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಬೆಂಗಳೂರು ಸೇರಿ ಇತರ ಹಲವು ಜಿಲ್ಲೆಗಳಲ್ಲಿಯೂ … Continued

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ಕರ್ನಾಟಕದ ಈ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: : ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು ದಿನ ವ್ಯಾಪಕ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 23 ರಿಂದ 25 ರವರೆಗೆ ವ್ಯಾಪಕ ಮಳೆಯಾಗಲಿದ್ದು, ಮೇ 23ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಕೊಡಗು, ಮಂಡ್ಯ, … Continued