ಕರ್ನಾಟಕದಲ್ಲಿ ಇಂದಿನಿಂದ (ಮೇ19) 5 ದಿನ ಧಾರಾಕಾರ ಮಳೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನಲೆ ಭಾನುವಾರ(ಮೇ 19)ದಿಂದ ಐದು ದಿನ 17 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಭಾಗದ ಜಿಲ್ಲೆಗಳಿಗೆ ಜೋರಾಗಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು ಹಾಗೂ … Continued

ರಾಜ್ಯದ ಈ ಜಿಲ್ಲೆಗಳಲ್ಲಿ 6-7 ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕಾಗಿದ್ದು, ಒಂದು ವಾರದ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮೇ 12ರಿಂದ ಮೇ 16ರ ವರೆಗೆ ಜೋರಾಗಿ ಮಳೆಯಾಗಲಿದೆ. ಮೇ 17 ಮತ್ತು 18ರಂದು ಸಾಧಾರಣ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. … Continued

ಬೆಂಗಳೂರು ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಮೇ 10ರ ವರೆಗೆ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮೇ 7ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಮೇ 10 ರವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ … Continued

ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ 3-4 ದಿನ ಮಳೆ ಬೀಳುವ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಐದಾರು ದಿನಗಳ ಕಾಲ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಬಹುದು ಹಾಗೂ ಇನ್ನೂ ಕೆಲವು ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 4ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು -ಸಿಡಿಲಿನಿಂದ ಕೂಡಿದ ಮಳೆಯಾಗಬಹುದು. ಅಲ್ಲದೆ, … Continued

ಏಪ್ರಿಲ್‌ 30 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವೆಡೆ ಮಳೆ ಏಪ್ರಿಲ್‌ 30ರಿಂದ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐಎಂಡಿ ಪ್ರಕಾರ ಏಪ್ರಿಲ್‌ 27, 28 ಮತ್ತು 29ರಂದು ರಾಜ್ಯಾದ್ಯಂತ ಒಣಹವೆ ಮುಂದುವರೆಯಲಿದೆ. ಏಪ್ರಿಲ್‌ 30 ರಿಂದ ಮೇ 3 ರವರೆಗೆ ರಾಜ್ಯದ ಹಲವೆಡೆ ಮಳೆಯಾಗಲಿದೆ. ಏಪ್ರಿಲ್‌ 30ರಂದು ಬೀದರ, ಕಲಬುರಗಿ, ಯಾದಗಿರಿ, ವಿಜಯಪುರ, ಚಿಕ್ಕಮಗಳೂರು, … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಎರಡು ದಿನ ಗುಡುಗು ಸಹಿತ ಮಳೆ ಮುನ್ಸೂಚನೆ ; ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು: ಕರ್ನಾಟಕದಲ್ಲಿ ಎರಡು ದಿನ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೊ ಹಾಗೂ ಒಳನಾಡಿನ ಎಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದೆ. ಏಪ್ರಿಲ್‌ 21ರಂದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡಕ್ಕೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, … Continued

ರಾಜ್ಯದ ಹಲವೆಡೆ ಮಳೆ : ವಿಜಯಪುರದಲ್ಲಿ ಐತಿಹಾಸಿಕ ಸ್ಮಾರಕ ಮೆಹತರ್ ಮಹಲಿನ ಮೀನಾರ್ ಮೇಲ್ತುದಿಗೆ ಹಾನಿ, ಕುಷ್ಟಗಿಯಲ್ಲಿ ಸಿಡಿಲಿಗೆ ರೈತ ಸಾವು

ಬೆಂಗಳೂರು: ರಾಜ್ಯದ ವಿವಿಧ ಪ್ರದೇಶಗಳಲ್ಲಿ ಗುರುವಾರ ಬಿರುಗಾಳಿ ಸಹಿತ ಮಳೆಯಾಗಿದ್ದು, ಸಿಡಲಿಗೆ ಓರ್ವ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಹಲವೆಡೆ ಜಾನುವಾರುಗಳು ಪ್ರಾಣಕಳೆದುಕೊಂಡಿದೆ. ಅಲ್ಲದೆ, ಗಾಳಿಮಳೆಯಿಂದಾಗಿ ವಿಜಯಪುರ ನಗರದಲ್ಲಿರುವ ಐತಿಹಾಸಿಕ ಮೆಹತರ್ ಮಹಲ್ ಸ್ಮಾರಕಕ್ಕೆ ಹಾನಿಯಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಗುರುವಾರ ಸಂಜೆ ಗುಡುಗು-ಸಿಡಿಲ ಅಬ್ಬರದೊಂದಿಗೆ ಭಾರೀ ಗಾಳಿ ಮಳೆ ಸುರಿದಿದೆ. ವಿಜಯಪುರ ನಗರದಲ್ಲಿರುವ ಐತಿಹಾಸಿಕ ಮೆಹತರ್ ಮಹಲ್ … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್​ 17ರ ವರೆಗೆ ಮಳೆ ಸಾಧ್ಯತೆ

ಬೆಂಗಳೂರು : ಯುಗಾದಿಯಿಂದ ಕರ್ನಾಟಕದ ಕೆಲವೇ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಿದೆ. ಹುಬ್ಬಳ್ಳಿ ಸೇರಿದಂತೆ ರಾಜ್ಯದ ಹಲವೆಡೆ ಬುಧವಾರ ಮಳೆಯಾಗಿದೆ. ಇದೇವೇಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್​ 17ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮೂರು ದಿನ ಒಣಹವೆ ಮುಂದುವರೆಯಲಿದ್ದು, ಏಪ್ರಿಲ್​ 13ರ … Continued

ರಾಜ್ಯದ ಹಲವೆಡೆ ಮೂರು ದಿನ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಸುಡು ಬಿಸಿಲ ಬೇಗೆ ಜಾಸ್ತಿಯಾಗಿದ್ದು, ಜೊತೆಗೆ ಜಲ ಕ್ಷಾಮವೂ ಎದುರಾಗಿದೆ ಜನ ಹೈರಾಣಾಗಿದ್ದಾರೆ. ಈ ಮಧ್ಯೆ ಕರ್ನಾಟಕದ ಕೊಡಗು, ಬೀದರ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಕೊಂಚ ಮಳೆ ಆರಂಭವಾಗಿದೆ. ಈ ಮಧ್ಯೆ ಹವಾಮಾನ ಇಲಾಖೆ ರಾಜ್ಯದ ಹಲವೆಡೆ ಮಾರ್ಚ್‌ ೨೧ರಿಂದ ಮೂರು ದಿನಗಳ ಕಾಲ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ … Continued

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನ ಮಳೆಯಾಗುವ ಮುನ್ಸೂಚನೆ

ಬೆಂಗಳೂರು : ಮುಂದಿನ ಮೂರ್ನಾಲ್ಕು ದಿನಗಳ ಕಾಲ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾಔಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, … Continued