ಕರ್ನಾಟಕದ ಹನಿ ಟ್ರ್ಯಾಪ್ ಪ್ರಕರಣ : ಸುಪ್ರೀಂ ಕೋರ್ಟ್‌ನಲ್ಲಿ ಪಿಐಎಲ್

ನವದೆಹಲಿ: ದೇಶಾದ್ಯಂತ ಸಂಚಲನ ಮೂಡಿಸಿರುವ ಕರ್ನಾಟಕದಲ್ಲಿನ ಹಿರಿಯ ಸಚಿವರು, ಶಾಸಕರು, ರಾಜಕೀಯ ನಾಯಕರು ಸೇರಿದಂತೆ 48 ಜನರನ್ನು ಹನಿ ಟ್ರ್ಯಾಪ್ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್‌) ಸಲ್ಲಿಸಲಾಗಿದೆ. ಅರ್ಜಿಯನ್ನು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ ಖನ್ನಾ ಅವರೆದುರು ಸೋಮವಾರ ಉಲ್ಲೇಖಿಸಲಾಯಿತು. ಪ್ರಕರಣವನ್ನು ನಾಳೆ ಪಟ್ಟಿ ಮಾಡಲಾಗುವುದು … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೂರು ದಿನ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ಸೋಮವಾರ (ಮಾರ್ಚ್‌ 24) ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 25 ರವರೆಗೆ ರಾಜ್ಯಾದ್ಯಂತ ಮೋಡ ಕವಿದ ವಾತಾವರಣ ಇರಲಿದ್ದು, ಹಲವೆಡೆ ಗುಡುಗು, ಮಿಂಚು ಮತ್ತು ಗಾಳಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ಗಾಳಿಯ ವೇಗ ಗಂಟೆಗೆ 30-50 ಕಿಮೀ … Continued

ಧರ್ಮಾಧಾರಿತ ಮೀಸಲಾತಿಗೆ ಸಂವಿಧಾನದಲ್ಲಿ ಅವಕಾಶವಿಲ್ಲ: ಆರೆಸ್ಸೆಸ್

ಬೆಂಗಳೂರು : ಸಂವಿಧಾನವು ಧರ್ಮ ಆಧಾರಿತ ಮೀಸಲಾತಿ ನೀಡುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಆರ್‌ಎಸ್‌ಎಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಹೇಳಿದ್ದಾರೆ. ಬೆಂಗಳೂರಿನ ಚನ್ನೇನಹಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನವು ಧರ್ಮ ಆಧಾರಿತ ಮೀಸಲಾತಿ ನೀಡುವುದಕ್ಕೆ ಅವಕಾಶ ನೀಡುವುದಿಲ್ಲ. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲಾತಿಗೆ ಅವಕಾಶವಿಲ್ಲ. ಯಾರಾದರೂ ಹಾಗೆ ಮಾಡಿದರೆ ಅದು ನಮ್ಮ ಸಂವಿಧಾನಕ್ಕೆ ವಿರುದ್ಧವಾಗಿದೆ … Continued

ಬೆಂಗಳೂರು ಗಾಳಿ ಮಳೆ : ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು 3 ವರ್ಷದ ಬಾಲಕಿ ಸಾವು

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶನಿವಾರ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಭಾರೀ ಮಳೆಯ ನಡುವೆ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು 3 ವರ್ಷದ ಬಾಲಕಿ ಮೃತಪಟ್ಟಿದ್ದಾಳೆ. ಗಾಳಿಮಳೆಯಿಂದಾಗಿ ನಗರದಲ್ಲಿ ಸುಮಾರು 30 ಮರಗಳು ಬಿದ್ದಿದ್ದು, ಹಲವೆಡೆ ಜಲಾವೃತವಾಗಿದೆ ಎಂದು ಬೆಂಗಳೂರಿನ ಸಿವಿಲ್ ಡಿಫೆನ್ಸ್ ತಂಡ ತಿಳಿಸಿದೆ. ಶನಿವಾರ ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ … Continued

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮಳೆ ; ಬೆಂಗಳೂರಲ್ಲಿ ಮಳೆಯಿಂದ 10 ವಿಮಾನಗಳ ಮಾರ್ಗ ಬದಲಾವಣೆ

 ಬೆಂಗಳೂರು: ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಇಂದು ದಿಢೀರ್ ಬಂದ ಮಳೆ(Rain)ಯಾಗಿದೆ. ಭಾರೀ ಮಳೆಯಿಂದಾಗಿ ಬೆಂಗಳೂರಿಗೆ ತೆರಳುತ್ತಿದ್ದ ಕನಿಷ್ಠ 10 ವಿಮಾನಗಳನ್ನು ಚೆನ್ನೈಗೆ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ. ಇಂಡಿಗೋ ಎಕ್ಸ್‌ನಲ್ಲಿ ಪೋಸ್ಟ್‌ನಲ್ಲಿ ಬೆಂಗಳೂರಿನಲ್ಲಿ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳು ವಿಮಾನಗಳ ಮೇಲೆ ಪರಿಣಾಮ ಬೀರುತ್ತಿವೆ ಎಂದು ಹೇಳಿದೆ. “ನಾವು ಹವಾಮಾನವನ್ನು … Continued

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲು ಮಸೂದೆ ವಿಧಾನಸಭೆಯಲ್ಲಿ ಅಂಗೀಕಾರ

ಬೆಂಗಳೂರು : ಸದನದಲ್ಲಿ ವಿಪಕ್ಷಗಳ ಗದ್ದಲ ಹಾಗೂ ಅಮಾನತಿನ ನಡುವೆ ಮುಸ್ಲಿಂ ಗುತ್ತಿಗೆದಾರರಿಗೆ ಶೇ.4 ಮೀಸಲಾತಿ‌ ನೀಡುವ ‘ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯಮ (ತಿದ್ದುಪಡಿ) ವಿಧೇಯಕ 2025’ ಅನ್ನು ಶುಕ್ರವಾರ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ಬಜೆಟ್‌ನಲ್ಲಿ ಗುತ್ತಿಗೆ ಮೀಸಲಾತಿಯನ್ನು ಎಸ್‌ಸಿ-ಎಸ್‌ಟಿ, ಪ್ರವರ್ಗ 1, 2aಗಳ ಜೊತೆಗೆ 2b ಮುಸ್ಲಿಂ ವರ್ಗವನ್ನೂ ಸೇರಿಸಿ ಗುತ್ತಿಗೆ ಮೊತ್ತವನ್ನು 1 … Continued

ಇಂದಿನಿಂದ ಒಂದು ವಾರ ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಮಾರ್ಚ್‌ 22ರಿಂದ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ. ರಾಜ್ಯದ ಕರಾವಳಿ, ದಕ್ಷಿಣ ಒಳನಾಡು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆಯಾಗುವ … Continued

ಕೆ ಪಿ ಎಸ್‌ ಸಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ – ಎ ಮತ್ತು ಗ್ರೂಪ್ – ಬಿ ವೃಂದದ 384 ಹುದ್ದೆಗಳ ನೇಮಕಾತಿ ಮುಖ್ಯ ಪರೀಕ್ಷೆಯನ್ನು (KAS Mains exam) ಕರ್ನಾಟಕ ಲೋಕಸೇವಾ ಆಯೋಗ ಮುಂದೂಡಿದೆ. ಆಯೋಗವು ಫೆ.13ರಂದು ಮುಖ್ಯ ಪರೀಕ್ಷೆಗೆ ಅಧಿಸೂಚನೆ ಪ್ರಕಟಿಸಿತ್ತು ಮಾರ್ಚ್‌ 28, 29, ಏಪ್ರಿಲ್ 1, ಮತ್ತು 2ರಂದು ಪರೀಕ್ಷೆ ನಡೆಸಲಾಗುವುದು … Continued

ಶಾಸಕರ ಒಟ್ಟು ಆಸ್ತಿ | ಕರ್ನಾಟಕವೇ ನಂ.1 ; ದೇಶದ ಟಾಪ್ 10 ಶ್ರೀಮಂತ ಶಾಸಕರಲ್ಲಿ ಡಿಕೆ ಶಿವಕುಮಾರಗೆ ಎಷ್ಟನೇ ಸ್ಥಾನ ಗೊತ್ತೆ..? ಪಟ್ಟಿ ಇಲ್ಲಿದೆ…

ನವದೆಹಲಿ: ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ಬಿಡುಗಡೆ ಮಾಡಿದ ವರದಿಯ ಪ್ರಕಾರ ಮುಂಬೈನ ಘಾಟಕೋಪಾರ ಪೂರ್ವ ಕ್ಷೇತ್ರವನ್ನು ಪ್ರತಿನಿಧಿಸುವ ಬಿಜೆಪಿಯ ಶಾಸಕ ಪರಾಗ್ ಶಾ ಅವರು ಭಾರತದ ಶ್ರೀಮಂತ ಶಾಸಕರಾಗಿದ್ದಾರೆ ಹಾಗೂ ಕರ್ನಾಟಕ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ದೇಶದ ಎರಡನೇ ಶ್ರೀಮಂತ ಶಾಸಕರಾಗಿದ್ದಾರೆ. ಮುಂಬೈನ ಶಾಸಕ ಪರಾಗ್ ಶಾ ಸುಮಾರು 3,400 … Continued

ಭಾರತ ಸರ್ಕಾರ ವಿರುದ್ಧ ಹೈಕೋರ್ಟ್​​ನಲ್ಲಿ ಮೊಕದ್ದಮೆ ಹೂಡಿದ ಇಲಾನ್ ಮಸ್ಕ್ ಒಡೆತನದ ಎಕ್ಸ್‌

ಬೆಂಗಳೂರು : ಎಲಾನ್ ಮಸ್ಕ್ ಒಡೆತನದ ಎಕ್ಸ್‌ ವೆಬ್‌ಸೈಟ್‌ನಲ್ಲಿನ ಟ್ವೀಟ್ ಮತ್ತು ಇತರ ವಿಷಯವನ್ನು ತೆಗೆದುಹಾಕುವಂತೆ ಸೂಚಿಸಲು ಕೇಂದ್ರ ಸರ್ಕಾರವು ಮಾಹಿತಿ ತಂತ್ರಜ್ಞಾನ ಕಾಯ್ದೆ (ಐಟಿ ಆಕ್ಟ್) ಸೆಕ್ಷನ್ 79(3)(ಬಿ)ಯನ್ನು ಬಳಸುವ ವಿಧಾನವನ್ನು ಪ್ರಶ್ನಿಸಿ ಎಕ್ಸ್, ಭಾರತ ಸರ್ಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ. ಭಾರತದಲ್ಲಿನ ಸರ್ಕಾರಿ ಅಧಿಕಾರಿಗಳು ಸರಿಯಾದ ಕಾನೂನು ಕಾರ್ಯವಿಧಾನಗಳನ್ನು ಬೈಪಾಸ್ … Continued