ವಿಮಾನದಲ್ಲಿ ಬಂದು ರೈಲಿನಲ್ಲಿ ಕಳ್ಳತನ ಮಾಡ್ತಿದ್ರು ..! : ಮಂಗಳೂರಲ್ಲಿ ರೈಲ್ವೆ ಪೊಲೀಸರಿಗೆ ಸಿಕ್ಕಿಬಿದ್ರು ಹೈಟೆಕ್‌ ಕಳ್ಳರು…!

ಮಂಗಳೂರು : ವಿಮಾನದಲ್ಲಿ ಆಗಮಿಸಿ ಮಂಗಳೂರಿನಲ್ಲಿ ರೈಲು ಪ್ರಯಾಣಿಕರ ಚಿನ್ನಾಭರಣಗಳನ್ನು ಕದಿಯುತ್ತಿದ್ದ ಕಳ್ಳರಿಬ್ಬರನ್ನು ರೈಲ್ವೇ ಪೊಲೀಸರು ಬಂಧಿಸುವಲ್ಲಿ ಯಶಸ್ಸಿಯಾಗಿದ್ದಾರೆ. ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಅಭಯ ರಾಜ್‌ ಸಿಂಗ್ (26) ಹಾಗೂ ರಾಜಪುರದ ಹರಿಶಂಕರ (25) ಎಂಬವರು ಬಂಧಿತ ಆರೋಪಿಗಳಾಗಿದ್ದಾರೆ. ಇನ್ನೊಬ್ಬ ಆರೋಪಿ ತಪ್ಪಿಸಿಕೊಳ್ಳಲು ಯಶಸ್ವಿಯಾಗಿದ್ದಾನೆ. ಸೆಪ್ಟೆಂಬರ್ 28ರಂದು ಮಂಗಳೂರು ಮತ್ತು ಸುರತ್ಕಲ್ ನಡುವೆ ಸಂಚರಿಸುತ್ತಿದ್ದ … Continued

ರಾಜ್ಯದಲ್ಲಿ ಬರ ಪರಿಸ್ಥಿತಿ : ನಾಳೆಯಿಂದ ಕೇಂದ್ರ ತಂಡದಿಂದ 12 ಜಿಲ್ಲೆಗಳಲ್ಲಿ ಪರಿಶೀಲನೆ

ಬೆಂಗಳೂರು : ಮುಂಗಾರು ಮಳೆ ಕೈಕೊಟ್ಟಿದ್ದರಿಂದ ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಬರ ಸಮೀಕ್ಷೆಗಾಗಿ ನಾಳೆ, ಗುರುವಾರ ರಾಜ್ಯಕ್ಕೆ ಕೇಂದ್ರ ಸರ್ಕಾರದ ಮೂರು ತಂಡ ಭೇಟಿ ನೀಡಿ ಬರದ ಸ್ಥಿತಿಯ ಕುರಿತು ಪರಿಶೀಲನೆ ನಡೆಸಲಿದೆ. ನಾಳೆಯಿಂದ ಅಕ್ಟೋಬರ್ 9ರ ವರೆಗೆ ಬೆಳಗಾವಿ, ಬಾಗಲಕೋಟೆ, ಧಾರವಾಡ, ವಿಜಯಪುರ, ಹಾವೇರಿ, ಗದಗ, ಕೊಪ್ಪಳ, ವಿಜಯನಗರ, ಚಿಕ್ಕಬಳ್ಳಾಪುರ, … Continued

ಕರ್ನಾಟಕದ ಜಾತಿ ಗಣತಿ ವರದಿ ಬಿಡುಗಡೆ ಮಾಡಿ: ಸರ್ಕಾರಕ್ಕೆ ಬಿ.ಕೆ. ಹರಿಪ್ರಸಾದ ಒತ್ತಾಯ

ಬೆಂಗಳೂರು : ಬಿಹಾರದಲ್ಲಿ ನಡೆಸಿದ ಜಾತಿಗಣತಿ ಮಾದರಿಯಲ್ಲಿ ಕರ್ನಾಟಕದಲ್ಲೂ ರಾಜ್ಯ ಸರ್ಕಾರ ನಡೆಸಿದ್ದ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಬೇಕು ಎಂದು ಕಾಂಗ್ರೆಸ್‌ ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಆಗ್ರಹಿಸಿದ್ದಾರೆ. ಕರ್ನಾಟಕವು 2017 ರಲ್ಲಿ ರಾಜ್ಯವು ನಡೆಸಿದ ಜಾತಿ ಗಣತಿಯ ವರದಿ ಬಿಡುಗಡೆ ಮಾಡುವಂತೆ ಅವರು ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ … Continued

ಈ ವರ್ಷದಿಂದ 9, 11ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ

ಬೆಂಗಳೂರು : 9 ಮತ್ತು 11 ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ನಿರ್ಧರಿಸಿದೆ. ಕಳೆದ ವರ್ಷ 5 ಮತ್ತು 8ನೇ ತರಗತಿ ಮಕ್ಕಳಿಗೆ ಬೋರ್ಡ್ ಪರೀಕ್ಷೆ ನಡೆಸಲಾಗಿತ್ತು. ಈಗ 9 ಮತ್ತು 11ನೇ ತರಗತಿ ಮಕ್ಕಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. … Continued

ಲೋಕಸಭಾ ಚುನಾವಣೆಗೆ ಕಾಂಗ್ರೆಸ್‌ ತಯಾರಿ ಶುರು ; 28 ಕ್ಷೇತ್ರಗಳಿಗೆ ವೀಕ್ಷಕರ ನೇಮಕ

ಬೆಂಗಳೂರು: ಲೋಕಸಭಾ ಚುನಾವಣೆಗೆ ಏಳು ತಿಂಗಳು ಮಾತ್ರ ಬಾಕಿ ಉಳಿದಿದ್ದು, ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಖಚಿತವಾಗಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲಿ ಕಾಂಗ್ರೆಸ್‌ ಕೂಡ ಚುನಾವಣೆಗೆ ತಯಾರಿ ಆರಂಭಿಸಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳಿಗೆ 28 ಮಂದಿ ಸಚಿವರನ್ನು ವೀಕ್ಷಕರನ್ನಾಗಿ ನೇಮಿಸಿದೆ. ಲೋಕಸಭಾ ಚುನಾವಣೆಗೆ ಸಂಬಂಧಿಸಿ ಕ್ಷೇತ್ರಗಳಲ್ಲಿ ಪ್ರವಾಸ ಮಾಡಿ ಎಲ್ಲಾ ಹಂತದ ನಾಯಕರನ್ನು ಸಂಪರ್ಕಿಸಿ, ಸಭೆಗಳನ್ನು … Continued

ಇಂದಿನಿಂದ ಸೆಪ್ಟೆಂಬರ್‌ 30 ರವರೆಗೆ ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳ ಕೆಲಸದ ಅವಧಿ ವಿಸ್ತರಣೆ

ಬೆಂಗಳೂರು: ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳ ಕೆಲಸದ ಅವಧಿಯನ್ನು ಸೆಪ್ಟೆಂಬರ್‌ 23 ರಿಂದ ಜಾರಿಗೆ ಬರುವಂತೆ ಸೆಪ್ಟೆಂಬರ್‌ 30 ರವರೆಗೆ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಕಾರ್ಯ ನಿರ್ವಹಿಸಲು ಕಚೇರಿ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿ (Valuation Committee) 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ … Continued

ಕಾವೇರಿ ವಿವಾದ: ತಮಿಳುನಾಡಿಗೆ ನೀರು ಬಿಡುವಂತೆ ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

ನವದೆಹಲಿ : ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌ 15 ದಿನಗಳ ಕಾಲ ಪ್ರತಿದಿನ 5 ಸಾವಿರ ಕ್ಯೂಸೆಕ್‌ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚಿಸಿದೆ. ಅರ್ಜಿ ವಿಚಾರಣೆ ನಡೆಸಿದ ಬಿ.ಆರ್ ಗವಾಯಿ ನೇತೃತ್ವದ ತ್ರಿ ಸದಸ್ಯ ಪೀಠವು, ಕಾವೇರಿ ನಿಯಂತ್ರಣ ಆಯೋಗ ಮತ್ತು ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶಗಳು ಮತ್ತು … Continued

ಕಾವೇರಿ ವಿವಾದ : ನದಿಯಲ್ಲಿ ನೀರಿಲ್ಲ ಎಂದು ಸುಪ್ರೀಂ ಕೋರ್ಟಿಗೆ ಇಂದು ಅರ್ಜಿ ; ಸಿಎಂ ಸಿದ್ದರಾಮಯ್ಯ

ನವದೆಹಲಿ : ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ‘ನದಿಯಲ್ಲಿ ನೀರು ಇಲ್ಲ’ ಎಂದು ಗುರುವಾರ (ಸೆಪ್ಟೆಂಬರ್‌ 21) ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಕೆ ಮಾಡಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ದೆಹಲಿಯಲ್ಲಿ ಬುಧವಾರ ಆಯೋಜಿಸಲಾಗಿದ್ದ ಸಭೆಯ ಬಳಿಕ ಮಾತನಾಡಿದ ಅವರು, “ ಸಭೆಯಲ್ಲಿ ಎಲ್ಲ ಪಕ್ಷದ ಸಂಸದರು, ಕೇಂದ್ರ ಸಚಿವರು ಭಾಗಿಯಾಗಿದ್ದರು. ಬೇರೆ ಕೆಲಸವಿದ್ದ ಹಿನ್ನೆಲೆಯಲ್ಲಿ … Continued

ಮೂರು ಡಿಸಿಎಂ ಹುದ್ದೆಯ ನನ್ನ ಅಭಿಪ್ರಾಯಕ್ಕೆ ನಾನು ಈಗಲೂ ಬದ್ಧ : ಸಚಿವ ಕೆ.ಎನ್ ರಾಜಣ್ಣ

ಬೆಂಗಳೂರು : ಪಕ್ಷದ ಹಿತದೃಷ್ಠಿಯಿಂದ ಮೂರು ಉಪಮುಖ್ಯಮಂತ್ರಿ ಹುದ್ದೆಗಳನ್ನು ಸೃಷ್ಟಿಸಬೇಕು ಎಂದು ಹೇಳಿದ್ದೇನೆ. ಈ ಅಭಿಪ್ರಾಯಕ್ಕೆ‌ ನಾನು ಈಗಲೂ ಬದ್ಧನಾಗಿದ್ದೇನೆ. ಇದರಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ. ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಮುದಾಯವಾರು ಮೂರು ಉಪಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ. … Continued

ಸ್ಥಿರಾಸ್ತಿ ಪರಿಷ್ಕೃತ ಮಾರ್ಗಸೂಚಿ ದರ ಅಕ್ಟೋಬರ್‌ 1ರಿಂದ ಜಾರಿ: ಆಗಲಿದೆ ಆಸ್ತಿ ನೋಂದಣಿ ದುಬಾರಿ

ಬೆಂಗಳೂರು : ರಾಜ್ಯಾದ್ಯಂತ ಸ್ಥಿರಾಸ್ತಿಗಳ ಪರಿಷ್ಕೃತ ನೂತನ “ಮಾರ್ಗಸೂಚಿ ದರ” (ಗೈಡೆನ್ಸ್ ವ್ಯಾಲ್ಯೂ) ಅಕ್ಟೋಬರ್ 1 ರಿಂದ ಜಾರಿಯಾಗಲಿದೆ ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನೋಂದಣಿ ಇಲಾಖೆ ಕಾನೂನಿನ ಪ್ರಕಾರ ಪ್ರತಿ ವರ್ಷ ಮಾರ್ಗಸೂಚಿ ದರ ಪರಿಷ್ಕರಣೆಯಾಗಬೇಕು. ಆದರೆ, ಐದು ವರ್ಷದಿಂದ ಮಾರ್ಗಸೂಚಿ ದರ ಪರಿಷ್ಕರಣೆಯಾಗಿರಲಿಲ್ಲ ಎಂದು ತಿಳಿಸಿದರು. … Continued