ತಾಳಿ ಕಟ್ಟುವಾಗ ಮದುವೆ ನಿರಾಕರಿಸಿದ ಯುವತಿ

ತುಮಕೂರು : ಜಿಲ್ಲೆಯ ಕೊರಟಗೆರೆ ತಾಲೂಕಿನ ಕೋಳಾಲ ಗ್ರಾಮದಲ್ಲಿ ಭಾನುವಾರ ತಾಳಿ ಕಟ್ಟುವ ಸಮಯದಲ್ಲಿ ವಧುವು ಮದುವೆ ನಿರಾಕರಿಸಿ, ಪ್ರಿಯಕರನ ಜೊತೆ ಮದುವೆಯಾಗುವುದಾಗಿ ಹೇಳಿ ಹಸಮಣೆಯಿಂದ ಎದ್ದು ಹೋದ ಘಟನೆ ನಡೆದಿದೆ. ದೊಡ್ಡಬಳ್ಳಾಪುರದ ತಾಲೂಕಿನ ಮೂಡ್ಲಕಾಳೇನಹಳ್ಳಿಯ ಯುವಕ ಮತ್ತು ನೆಲಮಂಗಲ ತಾಲೂಕಿನ ದೊಡ್ಡಬೆಲೆ ಗ್ರಾಮದ ಯುವತಿ ಮದುವೆ ಭಾನುವಾರ ಕೋಳಾಲ ಗ್ರಾಮದ ಕಲ್ಯಾಣ ಮಂಟಪದಲ್ಲಿ ನಡೆಯಬೇಕಿತ್ತು. … Continued

ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರಗೆ ಸಾಂವಿಧಾನಿಕ ಹುದ್ದೆ ನೀಡಿದ ಸರ್ಕಾರ…!

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ರಾಜ್ಯ ಸರ್ಕಾರದಿಂದ ಸಾಂವಿಧಾನಿಕ ಹುದ್ದೆ ನೀಡಲಾಗಿದೆ. ಆಶ್ರಯ ಸಮಿತಿ ಅಧ್ಯಕ್ಷರಾಗಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಜೊತೆಗೆ, ಕೆಡಿಪಿ ಸದಸ್ಯರಾನ್ನಾಗಿಯೂ ಅವರನ್ನು ನೇಮಿಸಲಾಗಿದೆ ಎಂದು ವರದಿಯಾಗಿದೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಯತೀಂದ್ರ, ‘ಕಳೆದ 15 ದಿನದ ಹಿಂದೆಯೇ … Continued

ರಾಜ್ಯದಲ್ಲಿ ಯಾವುದೇ ಬಿಪಿಎಲ್​ ಕಾರ್ಡ್​ ರದ್ದು ಮಾಡುವುದಿಲ್ಲ: ಆಹಾರ ಸಚಿವ ಮುನಿಯಪ್ಪ ಸ್ಪಷ್ಟನೆ

ಹಾಸನ : ರಾಜ್ಯದಲ್ಲಿ ಯಾವುದೇ ಬಿಪಿಎಲ್​ ಕಾರ್ಡ್​ ರದ್ದು ಮಾಡುವುದಿಲ್ಲ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ಹಾಸನದಲ್ಲಿ ಶನಿವಾರ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ 3 ಲಕ್ಷ ಜನರು ಅರ್ಜಿ ಹಾಕಿದ್ದರು. ಅರ್ಜಿ ಬಗ್ಗೆ ಪರಿಶೀಲನೆ ಮಾಡಿ ಅನುಮೋದನೆ ಮಾಡಲು ಸೂಚಿಸಲಾಗಿದೆ. 3 ತಿಂಗಳಲ್ಲಿ ಅರ್ಹರಿಗೆ ಬಿಪಿಎಲ್ ಮತ್ತು ಎಪಿಎಲ್ … Continued

ಕಾವೇರಿ ನದಿ ನೀರು ವಿವಾದ : ಆಗಸ್ಟ್ 25 ರಂದು ಸುಪ್ರೀಂ ಕೋರ್ಟಿನಲ್ಲಿ ತಮಿಳುನಾಡು ಅರ್ಜಿ ವಿಚಾರಣೆ

ನವದೆಹಲಿ: ಕಾವೇರಿ ನದಿ ನೀರು ಬಿಡುಗಡೆಗೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್‌ ಮೂವರು ನ್ಯಾಯಮೂರ್ತಿಗಳ ವಿಶೇಷ ಪೀಠ ರಚಿಸಿದೆ. ನ್ಯಾಯಮೂರ್ತಿಗಳಾದ ಪಿ.ಎಸ್‌. ನರಸಿಂಹ, ಬಿ.ಆರ್‌. ಗವಾಯಿ ಮತ್ತು ಪ್ರಶಾಂತ ಮಿಶ್ರಾ ಅವರನ್ನೊಳಗೊಂಡ ಪೀಠವು ಆಗಸ್ಟ್‌ 25 ರಂದು ತಮಿಳುನಾಡು ಸರ್ಕಾರದ ಅರ್ಜಿ ವಿಚಾರಣೆ ನಡೆಸಲಿದೆ. ಬೆಳೆದು ನಿಂತಿರುವ ಬೆಳೆಯ … Continued

ವಿಧಾನ ಪರಿಷತ್ತಿಗೆ ಸುಧಾಮ ದಾಸ್ ನಾಮನಿರ್ದೇಶನ ವಿರೋಧಿಸಿ ಕಾಂಗ್ರೆಸ್‌ ಹೈಕಮಾಂಡಿಗೆ ನಾಲ್ವರು ಸಚಿವರ ಪತ್ರ

ಬೆಂಗಳೂರು: ಕಾಂಗ್ರೆಸ್ಸಿನಿಂದ ವಿಧಾನ ಪರಿಷತ್ತಿಗೆ ಸುಧಾಮ ದಾಸ್ ಅವರ ನಾಮನಿರ್ದೇಶನಕ್ಕೆ ವಿರೋಧ ವ್ಯಕ್ತಪಡಿಸಿ ನಾಲ್ವರು ಸಚಿವರು ಕಾಂಗ್ರೆಸ್ ಹೈಕಮಾಂಡಿಗೆ ಪತ್ರ ಬರೆದಿದ್ದಾರೆ ಎಂದು ವರದಿಯಾಗಿದೆ. ವಿಧಾನ ಪರಿಷತ್ತಿಗೆ ನಾಮನಿರ್ದೇಶನ ಮಾಡಲು ಹಿರಿಯ ನಟಿ ಉಮಾ ಶ್ರೀ, ಎಂ.ಆರ್. ಸೀತಾರಾಮ ಹಾಗೂ ಸುಧಾಮ ದಾಸ್ ಅವರ ಹೆಸರನ್ನ ಅಂತಿಮಗೊಳಿಸಲಾಗಿದೆ ಎಂದು ಹೇಳಲಾಗಿದೆ. ಆದರೆ ಈಗ ಸುಧಾಮ ದಾಸ್ … Continued

ಆಕ್ರೋಶಕ್ಕೆ ಮಣಿದ ಸರ್ಕಾರ : ದೇವಸ್ಥಾನಗಳ ಅನುದಾನಕ್ಕೆ ತಡೆ ನೀಡಿದ್ದ ಆದೇಶ ವಾಪಸ್

ಬೆಂಗಳೂರು : ದೇವಸ್ಥಾನಗಳ ಅಭಿವೃದ್ಧಿ, ಜೀರ್ಣೋದ್ಧಾರ ಅನುದಾನ ತಡೆ ಹಿಡಿದ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಮೂರು ವಿಷಯಗಳನ್ನು ಮುಂದಿಟ್ಟು ಮುಜರಾಯಿ ಇಲಾಖೆ ದೇವಸ್ಥಾನಗಳ ಜೀರ್ಣೋದ್ದಾರಕ್ಕೆ ಅನುದಾನ ತಡೆ ಹಿಡಿದಿತ್ತು. ಇದರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾದ ನಂತರ ಸರ್ಕಾರ ದಿಢೀರ್ ಆದೇಶ ಹಿಂಪಡೆದಿದೆ. ಈ ಕುರಿತು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಆದೇಶ … Continued

ಶೇ. 40% ಕಮಿಷನ್ ಆರೋಪ ಪ್ರಕರಣ: ತನಿಖೆಗೆ ಜಸ್ಟಿಸ್ ನಾಗಮೋಹನ ದಾಸ್ ಸಮಿತಿ ರಚನೆ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಟೆಂಡರ್‌ ನೀಡುವಾಗ 40% ಕಮಿಷನ್‌ ಬಗ್ಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಆರೋಪಿಸಿರುವ ಕುರಿತು ತನಿಖೆ ಮಾಡಲು ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್.ಎನ್ ನಾಗಮೋಹನ್ ದಾಸ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ಸಮಿತಿ ರಚಿಸಿದೆ. ತನಿಖಾ ಸಮಿತಿ ರಚನೆ ಮಾಡಿ ಗುರುವಾರ ಆದೇಶ ಹೋರಡಿಸಿರುವ ಸರ್ಕಾರ, “ಕಾಮಗಾರಿಗಳ ಟೆಂಡರ್‌, ಪುನರ್‌ … Continued

ಅಕ್ರಮ ಆಸ್ತಿ ಗಳಿಕೆ ಆರೋಪ : ರಾಜ್ಯದ ಹಲವೆಡೆ ಲೋಕಾಯಕ್ತ ದಾಳಿ

ಬೆಂಗಳೂರು: ರಾಜ್ಯದ ಹಲವೆಡೆ ಗುರುವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಹಲವು ಅಧಿಕಾರಿಗಳ ಮನೆ ಹಾಗೂ ಆಸ್ತಿಗಳ ಮೇಲೆ ದಾಳಿ ನಡೆಸಿದ್ದಾರೆ. ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರು, ಕೊಡಗು, ಕೊಪ್ಪಳ, ಚಿತ್ರದುರ್ಗ, ಬೀದರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳಿಗಳು ದಾಳಿ ನಡೆಸಿದ್ದಾರೆ.ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ … Continued

ಶಕ್ತಿ ಯೋಜನೆ ಸ್ಥಗಿತದ ಊಹಾಪೋಹ: ಸ್ಪಷ್ಟನೆ ನೀಡಿದ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿ ಮಹಿಳೆಯರ ಉಚಿತ ಬಸ್‌ ಪ್ರಯಾಣದ ಶಕ್ತಿ ಯೋಜನೆ ಮುಂದುವರಿಯಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯ ರದ್ದತಿ ಬಗ್ಗೆ ನಕಲಿ ಸುದ್ದಿಗಳು ಹರಿದಾಡುತ್ತಿರುವ ಬೆನ್ನಲ್ಲೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಈ ಸ್ಪಷ್ಟನೆ ನೀಡಿದ್ದಾರೆ. ಬುಧವಾರ ಮಂಡ್ಯದಲ್ಲಿ ನಡೆದ … Continued

ಅಸಮರ್ಪಕ ಮುಂಗಾರು ಮಳೆ: ಬರ ಘೋಷಣೆ ಕಠಿಣ ನಿಯಮ ಸಡಿಲಿಸುವಂತೆ ಕೋರಿ ಕೇಂದ್ರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಹಾಗೂ ಅಸಮಪರ್ಕ ಮುಂಗಾರು ಮಳೆ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಘೋಷಣೆಯ ಮಾನದಂಡ ಪರಿಷ್ಕರಣೆ ಮಾಡುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್​ ಅವರಿಗೆ ಪತ್ರ ಬರೆದ ಸಿದ್ದರಾಮಯ್ಯ, ಬರಗಾಲ ಘೋಷಣೆಗೆ ಕೇಂದ್ರದ ಈಗಿನ ಬರ ಘೋಷಣೆ … Continued