ಅಸಮರ್ಪಕ ಮುಂಗಾರು ಮಳೆ: ಬರ ಘೋಷಣೆ ಕಠಿಣ ನಿಯಮ ಸಡಿಲಿಸುವಂತೆ ಕೋರಿ ಕೇಂದ್ರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಹಾಗೂ ಅಸಮಪರ್ಕ ಮುಂಗಾರು ಮಳೆ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಘೋಷಣೆಯ ಮಾನದಂಡ ಪರಿಷ್ಕರಣೆ ಮಾಡುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್​ ಅವರಿಗೆ ಪತ್ರ ಬರೆದ ಸಿದ್ದರಾಮಯ್ಯ, ಬರಗಾಲ ಘೋಷಣೆಗೆ ಕೇಂದ್ರದ ಈಗಿನ ಬರ ಘೋಷಣೆ … Continued

ಧಾರವಾಡದಲ್ಲಿ ಉದ್ಯಮ ಸ್ಥಾಪನೆಗೆ ಮುಂದಾದ ಶ್ರೀಲಂಕಾ ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್

ಧಾರವಾಡ : ವಿಶ್ವವಿಖ್ಯಾತ ಸ್ಪಿನ್‌ ಬೌಲರ್‌ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್‌ ಅವರು ಕ್ರಿಕೆಟ್‌ ನಿಂದ ನಿವೃತ್ತಿಯಾದ ಬಳಿಕ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ. ಈಗ ಅವರು ಧಾರವಾಡದಲ್ಲಿ ತಮ್ಮ ಉದ್ಯಮ ಸ್ಥಾಪನೆಗೆ ಮುಂದಾಗಿದ್ದಾರೆ. ಶ್ರೀಲಂಕಾದಲ್ಲಿ ಈಗಾಗಲೇ ತಂಪು ಪಾನೀಯ ಉತ್ಪಾದನಾ ಘಟಕವನ್ನು ಹೊಂದಿರುವ ಮುತ್ತಯ್ಯ ಮುರಳೀಧರನ್‌, ತಂಪು ಪಾನೀಯ ಉತ್ಪಾದನೆ ಮಾಡುವ ಸಿಲೋನ್ ಬೆವರೇಜಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯನ್ನು … Continued

1ನೇ ತರಗತಿ ಪ್ರವೇಶಕ್ಕೆ 6 ವರ್ಷ ಆಗಿರಬೇಕು : ರಾಜ್ಯ ಸರ್ಕಾರದ ಅಧಿಸೂಚನೆ ಎತ್ತಿ ಹಿಡಿದ ಹೈಕೋರ್ಟ್‌

ಬೆಂಗಳೂರು : ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ 2025-26ನೇ ಸಾಲಿನಿಂದ ಒಂದನೇ ತರಗತಿಗೆ ಪ್ರವೇಶ ಪಡೆಯಲು ಮಗುವಿಗೆ ಆರು ವರ್ಷ ತುಂಬಿರಬೇಕು ಎಂಬ ರಾಜ್ಯ ಸರ್ಕಾರದ ಅಧಿಸೂಚನೆಯನ್ನು ಕರ್ನಾಟಕ ಹೈಕೋರ್ಟ್‌ ಎತ್ತಿ ಹಿಡಿದಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ನಿರ್ದೇಶಕರು 2022ರ ಜುಲೈ 26ರಂದು ಹೊರಡಿಸಿರುವ ಅಧಿಸೂಚನೆ ರದ್ದುಪಡಿಸಬೇಕು. ನಾಲ್ಕು ವರ್ಷದ ಪುತ್ರಿ … Continued

ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆ ʼಗೃಹಜ್ಯೋತಿʼ ಚಾಲನಾ ಕಾರ್ಯಕ್ರಮಕ್ಕೆ ಶಾಸಕ ಅಜಯ ಸಿಂಗ್ ಗೈರು: ತೀವ್ರ ಚರ್ಚೆಗೆ ಗ್ರಾಸ

ಕಲಬುರಗಿ: ಶನಿವಾರ ನಗರದಲ್ಲಿ ನಡೆದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ʼಗೃಹ ಜ್ಯೋತಿʼ ಯೋಜನೆ ಚಾಲನಾ ಕಾರ್ಯಕ್ರಮಕ್ಕೆ ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಪುತ್ರ ಹಾಗೂ ಜೇವರ್ಗಿ ಕ್ಷೇತ್ರದ ಶಾಸಕ ಡಾ.ಅಜಯ ಸಿಂಗ್‌ ಗೈರಾಗುವ ಮೂಲಕ ಬಹಿರಂಗವಾಗಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಕಲಬುರಗಿ ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ನಡೆದ ಗೃಹ ಜ್ಯೋತಿ … Continued

ನಮ್ಮ ಹಿಂದೆ ಓಡಾಡಿದವರೆಲ್ಲ ಈಗ ಮಂತ್ರಿಯಾಗಿ ಧಿಮಾಕಿನಿಂದ ಓಡಾಡುತ್ತಿದ್ದಾರೆ : ಶಾಸಕ ಬಸವರಾಜ ರಾಯರೆಡ್ಡಿ

ಕೊಪ್ಪಳ: ನಮ್ಮ ಹಿಂದೆ ಓಡಾಡಿದವರೆಲ್ಲ ಈಗ ಮಂತ್ರಿಯಾಗಿದ್ದಾರೆ. ಅವರ ಅಪ್ಪಂದಿರ ಜೊತೆ ನಾನು ಕೆಲಸ‌ ಮಾಡಿದವ. ಈಗ ಇವರು ನಮ್ಮ ಮುಂದೆ ಧಿಮಾಕು ತೋರಿಸಿಕೊಂಡು ಓಡಾಡುತ್ತಾರೆ ಎಂದು ಶಾಸಕ ಬಸವರಾಜ ರಾಯರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಕುಕನೂರು ಪಟ್ಟಣದ ಜನಸಂರ್ಪಕ ಸಭೆಯಲ್ಲಿ ಮಾತನಾಡಿದ ಅವರು, “ನೀವು ಚಿಂತೆ ಮಾಡುವುದು ಬೇಡ. ಒಮ್ಮೊಮ್ಮೆ ಮಂತ್ರಿ ಆಗಲು … Continued

ಸಾರಿಗೆ ನಿಗಮಗಳಿಗೆ ಶಕ್ತಿ ಯೋಜನೆ ಹಣ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಅವಕಾಶ ಮಾಡಿಕೊಡಲಾಗಿದೆ. ಈಗ ಸಾರಿಗೆ ನಿಗಮಗಳಿಗೆ ಶಕ್ತಿ ಯೋಜನೆಯ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ಶಕ್ತಿ ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಸರ್ಕಾರಿ ಬಸ್ ​​ಗಳಲ್ಲಿ ವಿತರಿಸಲಾಗಿರುವ ಟಿಕೆಟ್​​ನ ಒಟ್ಟು ಮೊತ್ತದ ಮೊದಲ ಕಂತನ್ನು … Continued

ಕೊರೊನಾ ಹಗರಣದ ಬಗ್ಗೆ ನ್ಯಾಯಾಂಗ ತನಿಖೆಗೆ ಚಿಂತನೆ: ಆರೋಗ್ಯ ಸಚಿವ ದಿನೇಶ ಗುಂಡೂರಾವ್‌

ಬೆಂಗಳೂರು : ಬಿಜೆಪಿ ಅವಧಿಯ ಕೊರೊನಾ ಹಗರಣದ ಬಗ್ಗೆ ನ್ಯಾಯಾಂಗ ತನಿಖೆಗೆ ವಹಿಸುವ ಚಿಂತನೆ ಇದೆ” ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್‌ ಹೇಳಿದ್ದಾರೆ. ಸೋಮವಾರ ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ನ್ಯಾಯಾಂಗ ತನಿಖೆ ವಿಚಾರವನ್ನು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಪ್ರಸ್ತಾಪಿಸಲಾಗಿದೆ. ಸಾರ್ವಜನಿಕರ ಹಣ ದುರುಪಯೋಗದ ಬಗ್ಗೆ ವರದಿ ಬಂದಿದೆ. ಈ ಬಗ್ಗೆ … Continued

ಪ್ರೀತಿಸಿ ಮದುವೆಯಾದ ನವದಂಪತಿ ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆ

ಬೆಂಗಳೂರು: ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ನವದಂಪತಿ ಕೃಷಿ ಹೊಂಡಕ್ಕೆ ಬಿದ್ದು ಸಾವಿಗೀಡಾದ ಘಟನೆ ಬೆಂಗಲೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬಿಜ್ಜವಾರ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದ ನಿವಾಸಿ ರಮೇಶ (28), ಸಹನಾ(26) ಮೃತಪಟ್ಟ ನವದಂಪತಿ ಎಂದು ಗುರುತಿಸಲಾಗಿದೆ. ಪರಸ್ಪರ ಪ್ರೀತಿಸಿ ಮನೆಯವರ ವಿರೋಧದ ನಡುವೆ … Continued

ಶಾಸಕರ ಅಸಮಾಧಾನಕ್ಕೆ ಸಿದ್ದರಾಮಯ್ಯ ಮದ್ದು : ತಿಂಗಳಿಗೊಮ್ಮೆ ಜಿಲ್ಲಾವಾರು ಶಾಸಕರ ಸಭೆ – ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿಎಂ ಭರವಸೆ

ಬೆಂಗಳೂರು : ವರ್ಗಾವಣೆ ಹಾಗೂ ಅನುದಾನದ ವಿಚಾರದಲ್ಲಿ ಸಚಿವರು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಕೆಲವು ಶಾಸಕರು ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಗುರುವಾರ ರಾತ್ರಿ ನಗರದ ಖಾಸಗಿ ಹೊಟೇಲ್‌ನಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಆಡಳಿತಾತ್ಮಕ ಒತ್ತಡಗಳ ನಡುವೆಯೂ ಪ್ರತಿ ತಿಂಗಳಿಗೊಮ್ಮೆ ಜಿಲ್ಲಾವಾರು ಶಾಸಕರ ಸಭೆ ಕರೆಯುತ್ತೇನೆ. ಕ್ಷೇತ್ರದ ಕುಂದು ಕೊರತೆಗಳ ಬಗ್ಗೆ ಅಲ್ಲಿ ಚರ್ಚಿಸುತ್ತೇನೆ. … Continued

ಕುಂದಾಪುರ: ಅರಶಿಣಗುಂಡಿ ಜಲಪಾತ ವೀಕ್ಷಣೆ ಮಾಡುವಾಗ ನೀರು ಪಾಲಾದ ಯುವಕ

ಉಡುಪಿ : ಜಲಪಾತ ವೀಕ್ಷಣೆಗೆ ಹೋಗಿದ್ದ ಯುವಕ ಕಾಲು ಜಾರಿ ನೀರು ಪಾಲಾದ ಘಟನೆ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ಸಮೀಪದ ಅರಶಿಣ ಗುಂಡಿ ಜಲಪಾತದಲ್ಲಿ ನಡೆದಿದೆ. ನೀರಿಗೆ ಬಿದ್ದ ಯುವಕನನ್ನು ಭದ್ರಾವತಿ ಮೂಲದ 23 ವರ್ಷದ ಶರತಕುಮಾರ ಎಂದು ಗುರುತಿಸಲಾಗಿದೆ. ಭಾನುವಾರ ಸ್ನೇಹಿತನೊಂದಿಗೆ ಕೊಲ್ಲೂರಿಗೆ ಬಂದಿದ್ದ ಈತ ಅರಶಿನಗುಂಡಿ ಜಲಪಾತ ನೊಡಲು ತೆರಳಿದ್ದರು. ಬಂಡೆಕಲ್ಲಿನ … Continued