ವಾಹನ ಸವಾರರಿಗೆ ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50ರಷ್ಟು ರಿಯಾಯಿತಿ ಘೋಷಣೆ

ಬೆಂಗಳೂರು : ವಾಹನ ಸವಾರರಿಗೆ ಸರ್ಕಾರ ಮತ್ತೆ ಸಿಹಿಸುದ್ದಿ ನೀಡಿದೆ. ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ.50ರಷ್ಟು ರಿಯಾಯಿತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ದಂಡ ಕಟ್ಟಲು ಈ ಹಿಂದೆ ಸರ್ಕಾರ ಶೇ 50ರಷ್ಟು ರಿಯಾಯಿತಿ ನೀಡಿತ್ತು. ಇದೀಗ ಮತ್ತೆ ಸಂಚಾರ ನಿಯಮ ಉಲ್ಲಂಘಿಸಿರುವ ವಾಹನ ಸವಾರರು ಶೇ 50ರ … Continued

ಐಸಿಸ್ ಸಂಚು ಪ್ರಕರಣ : ಕರ್ನಾಟಕದ 9 ಜನರ ವಿರುದ್ಧ ಪೂರಕ ಚಾರ್ಜ್ ಶೀಟ್ ಸಲ್ಲಿಸಿದ ಎನ್ಐಎ

ನವದೆಹಲಿ : ಜಾಗತಿಕ ಭಯೋತ್ಪಾದಕ ಗುಂಪು ಇಸ್ಲಾಮಿಕ್ ಸ್ಟೇಟ್ (ಐಎಸ್) ಭಯೋತ್ಪಾದನಾ ದಾಳಿ ನಡೆಸಲು ಸಂಚು ರೂಪಿಸಿದ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಕರ್ನಾಟಕದ ಒಂಬತ್ತು ಜನರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನ್ನ ಮೊದಲ ಪೂರಕ ಚಾರ್ಜ್ ಶೀಟ್ ಸಲ್ಲಿಸಿದೆ. ಫೆಡರಲ್ ಏಜೆನ್ಸಿ ಪ್ರಕಾರ, ಚಾರ್ಜ್ ಶೀಟ್‌ನಲ್ಲಿರುವ ಐವರು ಆರೋಪಿಗಳು ತಂತ್ರಜ್ಞಾನದ (ಟೆಕ್‌) … Continued

ವಿರೋಧ ಪಕ್ಷದ ನಾಯಕರು ಬೇಕಾಗಿದ್ದಾರೆ : ಟ್ವೀಟ್‌ನಲ್ಲಿ ಬಿಜೆಪಿ ಲೇವಡಿ ಮಾಡಿದ ಕಾಂಗ್ರೆಸ್‌

ಬೆಂಗಳೂರು: ವಿಪಕ್ಷ ನಾಯಕನ ಆಯ್ಕೆ ಇನ್ನೂ ಆಗದ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್ ಘಟಕ ಬಿಜೆಪಿ ಕಾಲೆಳೆದಿದೆ. ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ ಎಂದು ಎಂದು ಟ್ವೀಟ್ ಮಾಡಿದ್ದು, ವಿಪಕ್ಷ ನಾಯಕನ ಆಯ್ಕೆ ಇನ್ನೂ ಆಗದಿರುವ ಕುರಿತು ಬಿಜೆಪಿ ಬಗ್ಗೆ ಲೇವಡಿ ಮಾಡಿದೆ. ಸಂವಿಧಾನ ತಿಳಿದವರು, ಪ್ರಜಾಪ್ರಭುತ್ವ ಅರಿತವರು, ಸಿಡಿಗೆ ತಡೆಯಾಜ್ಞೆ ತರದವರು, ಭ್ರಷ್ಟಾಚಾರಿಯಲ್ಲದ ವಿಪಕ್ಷ ನಾಯಕರೊಬ್ಬರು ಬೇಕಾಗಿದ್ದಾರೆ. … Continued

ನಾಳೆಯಿಂದಲೇ ಅನ್ನಭಾಗ್ಯ ಯೋಜನೆ ಜಾರಿ : ಸಚಿವ ಮುನಿಯಪ್ಪ

ಬೆಂಗಳೂರು: ಅನ್ನಭಾಗ್ಯ ಯೋಜನೆ ನಾಳೆಯಿಂದಲೇ ಜಾರಿಯಾಗಲಿದೆ. 5 ಕೆಜಿ ಅಕ್ಕಿ ನೀಡಲಾಗುವುದು, ಉಳಿದ 5 ಕೆಜಿ ಅಕ್ಕಿ ಬದಲಿಗೆ ಜನರ ಬ್ಯಾಂಕ್‌ ಖಾತೆಗೆ ಹಾಕಲು ಹಣ ನೀಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾಳೆ (ಜುಲೈ 1)ಯಿಂದಲೇ ಅನ್ನಭಾಗ್ಯ ಯೋಜನೆ ಆರಂಭವಾಗುತ್ತಿದೆ. ಎಲ್ಲ … Continued

ಅಕ್ರಮ ಆಸ್ತಿ ಪ್ರಕರಣ: ಕೆ.ಆರ್. ಪುರಂ ತಹಶೀಲ್ದಾರ್ ಅಜಿತ್ ರೈ ಬಂಧನ

ಬೆಂಗಳೂರು: ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದ ಹಿನ್ನಲೆಯಲ್ಲಿ ನಿನ್ನೆ ಹಲವೆಡೆ ದಾಳಿ ಮಾಡಿದ್ದ ಲೋಕಾಯುಕ್ತ ಪೊಲೀಸರು ಇಂದು, ಗುರುವಾರ ಕೆ.ಆರ್​. ಪುರ ತಹಶೀಲ್ದಾರ್ ಅಜಿತ್​ ರೈ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬೆಂಗಳೂರು ಸೇರಿ ಅಜಿತ್ ರೈ ಅವರಿಗೆ ಸೇರಿದ ಆಸ್ತಿಗಳ ಮೇಲೆ ಲೋಕಾಯುಕ್ತ ಪೊಲೀಸರು ನಿನ್ನೆ ದಾಳಿ ನಡೆಸಿದ್ದರು. ಸತತ 30 ಗಂಟೆಗಳ … Continued

ಮರ್ಯಾದಾ ಹತ್ಯೆ: ಪ್ರೀತಿಯಲ್ಲಿ ಬಿದ್ದ ಮಗಳನ್ನೇ ಕೊಂದ ತಂದೆ, ಸುದ್ದಿ ಕೇಳಿ ಪ್ರಿಯತಮನೂ ಆತ್ಮಹತ್ಯೆ

ಕೋಲಾರ : ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಮಗಳನ್ನು ತಂದೆಯೇ ಕತ್ತು ಹಿಸುಕಿ ಕೊಲೆ ಮಾಡಿದ ʼಮರ್ಯಾದ ಹತ್ಯೆʼ ಘಟನೆ ನಡೆದಿದ್ದು, ಇದೇವೇಳೆ ಪ್ರೇಯಸಿ ಸಾವಿನಿಂದ ಮನನೊಂದು ಪ್ರಿಯಕರನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರದ ಬಂಗಾರಪೇಟೆಯಲ್ಲಿ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ಕಾಮಸಮುದ್ರ ಹೋಬಳಿ ಬೋಡಗುರ್ಕಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, … Continued

ಬೆಳ್ಳಂಬೆಳಿಗ್ಗೆ ರಾಜ್ಯದ ಹಲವೆಡೆ ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಬೆಂಗಳೂರು : ಇಂದು ಬುಧವಾರ ಬೆಳ್ಳಂಬೆಳಗ್ಗೆ ರಾಜ್ಯಾದ್ಯಂತ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆ ಪರಿಶೀಲನೆ ನಡೆಯುತ್ತಿದೆ. ಭ್ರಷ್ಟಾಚಾರ ಆರೋಪಗಳು ಹಾಗೂ ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ … Continued

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: ರಿಸಲ್ಟ್ ನೋಡಲು ಈ ಲಿಂಕ್ ಬಳಸಿ

ಬೆಂಗಳೂರು : 2023ನೇ ಸಾಲಿನ ದ್ವಿತೀಯ ಪಿಯುಸಿ ಪೂಕರ ಪರೀಕ್ಷೆಯ ಫಲಿತಾಂಶ ಇಂದು, ಮಂಗಳವಾರ (ಜೂನ್ 20) ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆಗೆ ಹಾಜರಾದ ಒಟ್ಟು 1,57,756 ವಿದ್ಯಾರ್ಥಿಗಳ ಪೈಕಿ 50,478 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕಾಲೇಜುಗಳಲ್ಲಿ ಪೂರಕ ಪರೀಕ್ಷೆಯ ಫಲಿತಾಂಶ ಲಗತ್ತಿಸಲಾಗುತ್ತದೆ. https://karresults.nic.in/ ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಫಲಿತಾಂಶ ವೀಕ್ಷಿಸಬಹುದಾಗಿದೆ. … Continued

31 ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ನೇಮಕ; ಯಾವ ಜಿಲ್ಲೆಗೆ ಯಾರು? ಇಲ್ಲಿದೆ ಪಟ್ಟಿ

ಬೆಂಗಳೂರು: ರಾಜ್ಯ ಸರ್ಕಾರವು ಎಲ್ಲ 31 ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಮ್ಮ ಹೊಣೆಗಾರಿಕೆ ನೀಡಿರುವ ಜಿಲ್ಲೆಗಳಿಗೆ ಭೇಟಿ ನೀಡಿ ಸರ್ಕಾರದ ಯೋಜನೆಗಳ ಬಗ್ಗೆ ಪರಿಶೀಲನೆ ನಡೆಸಬೇಕು, ಜಿಲ್ಲೆಯ ಅಭಿವೃದ್ಧಿ ಯೋಜನೆಗಳು ಹಾಗೂ ಜಿಲ್ಲೆ ಪರಿಸ್ಥಿತಿ ಬಗ್ಗೆ ಪರಿಶೀಲಿಸಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ವರದಿ ಸಲ್ಲಿಸಲು … Continued

14 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರವು 14 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ (IAS Officers Transfer) ಮಾಡಿ ಸೋಮವಾರ ಆದೇಶಿಸಿದೆ. ಈ ಆದೇಶಕ್ಕೂ ಕೆಲವೇ ಕ್ಷಣಗಳ ಮುನ್ನ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು. ವರ್ಗಾವಣೆಗೊಂಡಿರುವ 14 ಮಂದಿ ಐಎಎಸ್ ಅಧಿಕಾರಿಗಳು ಜಾವೇದ್ ಅಖ್ತರ್-ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಆರೋಗ್ಯ ಇಲಾಖೆ … Continued