ನೋಂದಣಿ ಇಲಾಖೆಯಲ್ಲಿ ಕೆಲವು ಬದಲಾವಣೆ: ರಾಜ್ಯಾದ್ಯಂತ ಕಾವೇರಿ -2 ತಂತ್ರಾಂಶ ಜಾರಿ ; `ಆಸ್ತಿ ನೋಂದಣಿ’ ಮತ್ತಷ್ಟು ಸುಲಭ

ಬೆಂಗಳೂರು : ನೋಂದಣಿ ಇಲಾಖೆಯಲ್ಲಿ ಕೆಲವು ಬದಲಾವಣೆ ಮಾಡಲಾಗಿದ್ದು, ಏಪ್ರಿಲ್​ನಿಂದ ನೋಂದಣಿ ಪ್ರಕ್ರಿಯೆಯಲ್ಲಿ ಕಾವೇರಿ-2 ಅಳವಡಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, 251 ನೋಂದಣಿ ಕಚೇರಿಗಳಲ್ಲಿ ಇಂದು, ಸೋಮವಾರ (ಜೂನ್‌ 19) ಸಂಜೆಯೊಳಗೆ ಕಾವೇರಿ-2 ಜಾರಿಯಾಗಲಿದೆ. ಎಲ್ಲ ದಾಖಲೆಗಳನ್ನು ಕಾವೇರಿ-2ರಲ್ಲಿ ಸಲ್ಲಿಕೆ ಮಾಡಬಹುದು. ಸಬ್ ರಿಜಿಸ್ಟ್ರಾರ್ … Continued

ಕನಕಪುರ :ಕಾಡಾನೆ ದಾಳಿಗೆ ಅಕ್ಕ ಸ್ಥಳದಲ್ಲೇ ಸಾವು, ತಂಗಿಗೆ ಗಂಭೀರ ಗಾಯ

ರಾಮನಗರ: ಅಕ್ಕ-ತಂಗಿ ಜಮೀನಿಗೆ ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ಮಾಡಿದ್ದು, ಪರಿಣಾಮ ಅಕ್ಕ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಹಾಗೂ ತಂಗಿ ಗಂಭೀರವಾಗಿ ಗಾಯಗೊಂಡ ಘಟನೆ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ನಡೆದಿದೆ. ಕನಕಪುರ ತಾಲೂಕಿನ ಅಚ್ಚಲು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಅಕ್ಕ ಜಯಮ್ಮ (೫೦)ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ. ತಂಗಿ ವೆಂಕಟಲಕ್ಷ್ಮಮ್ಮ ಅವರು ಗಂಭೀರವಾಗಿ ಗಾಯಗೊಂಡಿದ್ದು ಕನಕಪುರ … Continued

ಕೋಮು ಸಂಘರ್ಷದಲ್ಲಿ ಸಾವಿಗೀಡಾದ ನಾಲ್ವರ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ ಸರ್ಕಾರ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ಕು ಮಂದಿ ಯುವಕರ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿರುವ ರಾಜ್ಯ ಸರ್ಕಾರ ಈ ಸಂಬಂಧ ಶುಕ್ರವಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ … Continued

ಸಾರಿಗೆ ನೌಕರರ ವೇತನ ಶೇಕಡಾ 15ರಷ್ಟು ಹೆಚ್ಚಳಕ್ಕೆ ಸಚಿವ ಸಂಪುಟ ಅನುಮೋದನೆ

ಬೆಂಗಳೂರು: ರಾಜ್ಯದ ಸಾರಿಗೆ ಸಿಬ್ಬಂದಿಗೆ ಶೇ.15ರಷ್ಟು ವೇತನ ಹೆಚ್ಚಳಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಇಂದು, ಗುರುವಾರ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ವೇಳೆ ಸಾರಿಗೆ ಸಿಬ್ಬಂದಿ ವೇತನ ಶೇ.15ರಷ್ಟು ಹೆಚ್ಚು ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಏಪ್ರಿಲ್ ತಿಂಗಳಿನಿಂದ ಪೂರ್ವಾನ್ವಯ ಆಗುವಂತೆ ಸಾರಿಗೆ ನೌಕರರಿಗೆ … Continued

ಬಿಬಿಎಂಪಿ ಅಧಿಕಾರಿಗಳ ಜೊತೆ ಸುರ್ಜೇವಾಲ ಸಭೆ : ರಾಜ್ಯಪಾಲರಿಗೆ ಬಿಜೆಪಿ ನಿಯೋಗದಿಂದ ದೂರು

ಬೆಂಗಳೂರು : ಬಿಬಿಎಂಪಿ ಅಧಿಕಾರಿಗಳ ಜೊತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಸಭೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಿಯೋಗವು ಬುಧವಾರ ರಾಜ್ಯಪಾಲರಿಗೆ ದೂರು ನೀಡಿದೆ. ರಾಜ್ಯಪಾಲರಿಗೆ ಶಾಸಕ ಆರ್.ಅಶೋಕ್ ನೇತೃತ್ವದ ನಿಯೋಗದಿಂದ ದೂರು ನೀಡಲಾಗಿದೆ. ದೂರು ನೀಡಿದ ಬಳಿಕ ಮಾತನಾಡಿದ ಆರ್. ಅಶೋಕ್ , ಬಿಬಿಎಂಪಿ ಕಚೇರಿಯನ್ನು ಕಾಂಗ್ರೆಸ್ ಕಚೇರಿ ಮಾಡಲು … Continued

ಕುಮಟಾ: ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ -ಮನೆಗೇ ತೆರಳಿ ವಿದ್ಯಾರ್ಥಿನಿ ಅದಿತಿ ವೈದ್ಯಗೆ ಸನ್ಮಾನಿಸಿದ ಶಾಸಕರು

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಕೊಂಕಣ ಶಿಕ್ಷಣ ಸಂಸ್ಥೆಯ ಸರಸ್ವತಿ ವಿದ್ಯಾ ಕೇಂದ್ರದ ವಿದ್ಯಾರ್ಥಿನಿ ಅದಿತಿ ಪ್ರಕಾಶ ವೈದ್ಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಗ್ರಾಮೀಣ ಪ್ರತಿಭೆಯಾದ ಈ ವಿದ್ಯಾರ್ಥಿನಿಯ ಸಾಧನೆಗೆ ಕುಮಟಾ -ಹೊನ್ನಾವರ ಶಾಸಕ ದಿನಕರ ಶೆಟ್ಟಿ … Continued

ಕರ್ನಾಟಕ ಗ್ರಾಮೀಣ ಬ್ಯಾಂಕ್​ಗಳಲ್ಲಿ 806 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ

ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್‌) ದೇಶದಾದ್ಯಂತ 43 ಗ್ರಾಮೀಣ ಬ್ಯಾಂಕ್‌ಗಳಲ್ಲಿ (ಆರ್‌ಆರ್‌ಬಿ) ಖಾಲಿಯಿರುವ 8612 ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಆಫೀಸರ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಇದರಲ್ಲಿ ರಾಜ್ಯದ ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮತ್ತು ಧಾರವಾಡದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ಗಳು ಸೇರಿದ್ದು, ಈ ಎರಡು ಬ್ಯಾಂಕ್‌ಗಳಲ್ಲಿ ಖಾಲಿ ಇರುವ … Continued

ಉಚಿತ ಪ್ರಯಾಣದ ಬಸ್‌ ಗಳಿಗೆ ಸ್ಟಿಕ್ಕರ್ ಅಂಟಿಸುವ ನಿರ್ಧಾರ: ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು : ಉಚಿತ ಪ್ರಯಾಣದ ಬಸ್ ಗಳಿಗೆ ಸ್ಟಿಕ್ಕರ್ ಅಂಟಿಸುವುದಾಗಿ ಹೇಳಿರುವ ರಾಜ್ಯ ಸರ್ಕಾರದ ಮತ್ತೊಂದು ಷರತ್ತಿನ ಬಗ್ಗೆ ರಾಜ್ಯ ಬಿಜೆಪಿ ಘಟಕ ಕಿಡಿಕಾರಿದೆ. ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, ಉಚಿತ ಪ್ರಯಾಣದ ಬಸ್‌ಗಳಿಗೆ ಸ್ಟಿಕ್ಕರ್ ಅಂಟಿಸುವ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದೆ. ಸಿದ‍್ಧರಾಮಯ್ಯನವರೇ, ಬಸ್ ಹತ್ತುವ ಮಹಿಳೆಯರು ಬಸ್ ನಂಬರ್ … Continued

ಹೊಸ ಮನೆಗಳು, ಮನೆ ಶಿಫ್ಟ್ ಮಾಡಿದವರಿಗೂ ಉಚಿತ ವಿದ್ಯುತ್ : ಇಂಧನ ಸಚಿವ ಕೆ.ಜೆ ಜಾರ್ಜ್

ಬೆಂಗಳೂರು : ಹೊಸ ಮನೆಗಳು ಹಾಗೂ ಮನೆ ಶಿಫ್ಟ್ ಮಾಡಿದವರಿಗೂ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಆರ್.ಆರ್ ನಂಬರಿಗೆ ವೋಟರ್ ಲಿಂಕ್ ಆಗಿದ್ದರೆ ಸಾಕು. ಉಚಿತ ವಿದ್ಯುತ್ ನೀಡಲಾಗುತ್ತದೆ. ಮನೆ ಅಗ್ರಿಮೆಂಟ್ ಪತ್ರ ಇದ್ದರೂ ಫ್ರಿ ವಿದ್ಯುತ್ ನೀಡುತ್ತೇವೆ. ಅಡ್ರೆಸ್ ಇರುವ … Continued