ಕರ್ನಾಟಕದಲ್ಲಿ ಕಲರ್‌ ಕಾಟನ್ ಕ್ಯಾಂಡಿ ನಿಷೇಧ : ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ ಬಳಸುವಂತಿಲ್ಲ ; ನಿಯಮ ಮೀರಿದ್ರೆ ಜೈಲು-ದಂಡ

ಬೆಂಗಳೂರು : ರಾಜ್ಯದಲ್ಲಿ ಕಲ‌ರ್ ಕಾಟನ್ ಕ್ಯಾಂಡಿ ಬಳಕೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಒಂದು ವೇಳೆ ಕೃತಕ ಬಣ್ಣದ ಕಾಟನ್ ಕ್ಯಾಂಡಿ ಮಾರಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಬಣ್ಣ ಬಳಸದೇ ಇರುವ ಕಾಟನ್ ಕ್ಯಾಂಡಿ ಮಾರಬಹುದು ಎಂದು … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ: ಶಂಕಿತನ ಹೊಸ ಫೋಟೋ ಬಿಡುಗಡೆ ಮಾಡಿದ ಎನ್‌ಐಎ

ನವದೆಹಲಿ : 10 ಮಂದಿ ಗಾಯಗೊಂಡಿರುವ ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟದ ಪ್ರಕರಣದ ಶಂಕಿತ ಆರೋಪಿಯ ಹೊಸ ಫೋಟೋಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಿಡುಗಡೆ ಮಾಡಿದೆ. ಮಾರ್ಚ್ 3 ರಂದು ಪ್ರಕರಣವನ್ನು ಕೈಗೆತ್ತಿಕೊಂಡ ಭಯೋತ್ಪಾದನಾ ನಿಗ್ರಹ ಸಂಸ್ಥೆಯಾದ ಎನ್‌ಐಎ, ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಇರಿಸಿದ್ದ … Continued

ಶ್ರೀಲಂಕಾದಿಂದ 5 ಲಕ್ಷ ಟನ್‌ ಅಡಕೆ ಆಮದಿಗೆ ಮುಂದಾದ ಕಂಪನಿ: ಬೆಳೆಗಾರರಿಗೆ ಎದುರಾಯ್ತು ದರ ಕಡಿಮೆಯಾಗುವ ಆತಂಕ

ನವದೆಹಲಿ: ಅಡಕೆ ಮಾರಾಟ ಹಂಗಾಮು ಆರಂಭವಾಗಿರುವ ಸಂದರ್ಭದಲ್ಲೇ ಶ್ರೀಲಂಕಾದಿಂದ 5 ಲಕ್ಷ ಟನ್‌ ಅಡಕೆ ಆಮದು ಮಾಡಿಕೊಳ್ಳಲು ಕಂಪನಿಯೊಂದು ಮುಂದಾಗಿದೆ ಎಂದು ವರದಿಯಾಗಿದೆ. ಅಡಕೆ ಬೆಳೆಗಾರರಿಗೆ ದರ ಕುಸಿತದ ಆತಂಕ ಎದುರಾಗಿದೆ. ಶ್ರೀಲಂಕಾದಿಂದ ಅಡಕೆ ಆಮದು ಸಂಬಂಧ ಬ್ರಿಟನ್‌ ಮೂಲದ ಎಸ್‌ರಾಂ ಅಂಡ್‌ ಎಂರಾಂ ಗ್ರೂಪ್‌ ಒಪ್ಪಂದ ಮಾಡಿಕೊಂಡಿದೆ ಎಂದು ವರದಿಯಾಗಿದ್ದು, ಶ್ರೀಲಂಕಾ ಮೂಲದ ವ್ಯಾಪಾರಿ … Continued

ರಾಜ್ಯದಲ್ಲಿ ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ ಸೇವೆ ರದ್ದು

ಬೆಂಗಳೂರು : ರಾಜ್ಯದಲ್ಲಿ ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ (Bike Taxi) ಬಾಡಿಗೆ ಯೋಜನೆ ರದ್ದುಗೊಳಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಬೈಕ್‌ಗಳಂತಹ ಸಾರಿಗೆಯೇತರ ವಾಹನಗಳನ್ನು ಟ್ಯಾಕ್ಸಿ ಸೇವೆಗೆ ಬಳಕೆ ಮತ್ತು ಅವುಗಳ ಕಾರ್ಯಾಚರಣೆಗೆ ಖಾಸಗಿ ಅಪ್ಲಿಕೇಶನ್‌ಗಳನ್ನು ಬಳಸುವುದು ಮೋಟಾರು ವಾಹನ ಕಾಯ್ದೆಗೆ ವಿರುದ್ಧವಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಹೀಗಾಗಿ ಎಲ್ಲ ರೀತಿಯ ಬೈಕ್‌ … Continued

ಕರ್ನಾಟಕದಲ್ಲಿ ಆ್ಯಸಿಡ್‌ ಮಾರಾಟ ನಿಷೇಧಕ್ಕೆ ಕ್ರಮ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಕಾಲೇಜು ವಿದ್ಯಾರ್ಥಿಗಳ ಮೇಲೆ ನಡೆದ ಆ್ಯಸಿಡ್‌ ದಾಳಿ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಕರ್ನಾಟಕದಲ್ಲಿ ಆ್ಯಸಿಡ್‌ ಮಾರಾಟ ನಿಷೇಧಿಸಲಾಗುವುದು ಎಂದು ಗೃಹ ಸಚಿವ ಪರಮೇಶ್ವರ ಹೇಳಿದ್ದಾರೆ. ವ್ಯಕ್ತಿಯೊಬ್ಬ ಕೆಲ ದಿನಗಳ ಹಿಂದೆ ಕಡಬ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್‌ ಎರಚಿದ್ದ. ಈ ಪ್ರಕರಣದ ಕುರಿತು ಸುದ್ದಿಗಾರರೊಂದಿಗೆ … Continued

ಈ ಬೇಸಿಗೆಯಲ್ಲಿ ಕರ್ನಾಟಕದಲ್ಲಿ ರಣಬಿಸಿಲು ; ಕೆಲವೆಡೆ ಬಿಸಿಗಾಳಿ : ಹವಾಮಾನ ಇಲಾಖೆ

ಬೆಂಗಳೂರು : ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಋತುವಿನಲ್ಲಿ ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಿನ ತಾಪಮಾನ ಕರ್ನಾಟಕದಲ್ಲಿ ದಾಖಲಾಗಿದೆ. ಹೆಚ್ಚಿನ ಉಷ್ಣತೆಯು ಬೇಸಿಗೆಯ ತಿಂಗಳುಗಳಾದ ಮಾರ್ಚ್ ಮತ್ತು ಮೇ ನಡುವೆ ಇರುತ್ತದೆ. ಎಲ್ಲಾ ಮೂರು ತಿಂಗಳ ಕಾಲ … Continued

ವೀಡಿಯೊ | ಹಾಸನ ; ಆನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ರೈತ : ಕಾರಿನ ಕೆಳಗೆ ತೂರಿಕೊಂಡು ಜೀವ ರಕ್ಷಣೆ

ಹಾಸನ: ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ರೈತರು ಆನೆ ದಾಳಿಯಿಂದ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಕರ್ನಾಟಕದ ಹಾಸನ ಜಿಲ್ಲೆಯ ಕೆಸಗುಳಿ ಗ್ರಾಮದಲ್ಲಿ ಮಾರ್ಚ್ 3 ರಂದು ಈ ಘಟನೆ ನಡೆದಿದೆ. ಘಟನೆಯ ವೀಡಿಯೊದಲ್ಲಿ ಆನೆಯೊಂದು ಜಮೀನಿಗೆ ನುಗ್ಗಿ ಅಡಿಕೆ ತೋಟದ ಕೆಲಸದಲ್ಲಿ ನಿರತರಾಗಿದ್ದ ರೈತ ಕಾರ್ಮಿಕರೊಬ್ಬರ ಮೇಲೆ ದಾಳಿ ಮಾಡಲು ಯತ್ನಿಸುತ್ತಿರುವುದು ಕಂಡು ಬಂದಿದೆ. ರೈತ … Continued

ಡಿಕೆ ಶಿವಕುಮಾರಗೆ ಬಹುದೊಡ್ಡ ರಿಲೀಫ್‌..: ಡಿಕೆಶಿ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ : ಲೋಕಸಭೆ ಚುನಾವಣೆಗೆ ಮುನ್ನ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅವರ ವಿರುದ್ಧದ 2018 ರ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಇಂದು, ಮಂಗಳವಾರ ವಜಾಗೊಳಿಸಿದೆ. ಈ ಪ್ರಕರಣವು ತೆರಿಗೆ ವಂಚನೆ ಮತ್ತು ಕೋಟ್ಯಂತರ ಮೌಲ್ಯದ ಹವಾಲಾ ವ್ಯವಹಾರದ ಆರೋಪಗಳಿಗೆ ಸಂಬಂಧಿಸಿದೆ. ಈ ಪ್ರಕರಣಕ್ಕೆ … Continued

ಲೋಕಸಭೆ ಚುನಾವಣೆ : ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಸ್ವೀಪ್, ತೆಲಂಗಾಣ, ತಮಿಳುನಾಡಿನಲ್ಲಿ ಬಿಜೆಪಿ ಗಮನಾರ್ಹ ಸಾಧನೆ; ಇಂಡಿಯಾ ಟಿವಿ-ಸಿಎನ್‌ಎಕ್ಸ್ ಒಪಿನಿಯನ್‌ ಪೋಲ್‌

ಬೆಂಗಳೂರು : 2024 ರ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) 22 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ ಮತ್ತು ಅದರ ಮಿತ್ರ ಪಕ್ಷ ಜೆಡಿಎಸ್ 2 ಸ್ಥಾನಗಳನ್ನು ಗೆಲ್ಲಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಅಭಿಪ್ರಾಯ ಸಂಗ್ರಹ ಭವಿಷ್ಯ ನುಡಿದಿದೆ. ಟಿವಿ-ಸಿಎನ್‌ಎಕ್ಸ್ ಒಪಿನಿಯನ್‌ ಪೋಲ್‌ ಸೋಮವಾರ (ಮಾರ್ಚ್ 4) ಪ್ರಕಟವಾಗಿದೆ. 2019ರ ಲೋಕಸಭೆ ಚುನಾವಣೆಯಲ್ಲಿ … Continued

ಅತಿಥಿ ಉಪನ್ಯಾಸಕರಿಗೆ ಗುಡ್‌ ನ್ಯೂಸ್ ;‌ ಗೌರವಧನ ಹೆಚ್ಚಳಕ್ಕೆ ಸರ್ಕಾರ ಆದೇಶ-ಜನವರಿ 1ರಿಂದಲೇ ಅನ್ವಯ

ಬೆಂಗಳೂರು: ಸರ್ಕಾರ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಧನವನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ. ಜನವರಿ 1 ರಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದೆ. ಕನಿಷ್ಠ 5 ಸಾವಿರ ರೂ.ಗಳಿಂದ ಗರಿಷ್ಠ 8 ಸಾವಿರ ರೂ. ವರೆಗೆ ಗೌರವ ಧನ ಹೆಚ್ಚಳ ಮಾಡಲಾಗಿದೆ. ಹಾಗೂ 5 ಲಕ್ಷ ರೂ. ಆರೋಗ್ಯ ವಿಮೆ ಮತ್ತು … Continued