ಅನ್ನಭಾಗ್ಯ, ಯುವ ನಿಧಿ ಗ್ಯಾರಂಟಿ ಯೋಜನಗಳಿಗೆ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

ಬೆಂಗಳೂರು: ಕಾಂಗ್ರೆಸ್ಸಿನ ಚುನಾವಣಾ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿಗಳ ಪೈಕಿ ಯುವ ನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಮತ್ತು ಅನ್ನ ಭಾಗ್ಯ ಯೋಜನೆಯಡಿ ಅಂತ್ಯೋದಯ ಹಾಗೂ ಆದ್ಯತಾ (ಬಿಪಿಎಲ್) ಕುಟುಂಬಗಳ ಪ್ರತಿ ಸದಸ್ಯರಿಗೆ ತಲಾ 10 ಕೆಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲು ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಶುಕ್ರವಾರ ನಡೆದ ಸಂಪುಟ ಸಭೆಯ ನಿರ್ಣಯದಂತೆ ಈ ಆದೇಶಗಳನ್ನು ಹೊರಡಿಸಲಾಗಿದೆ. ಕೌಶಲಾಭಿವೃದ್ಧಿ, … Continued

4055 ಅತಿಥಿ ಉಪನ್ಯಾಸಕರ ನೇಮಕಾತಿಗೆ ಆದೇಶ

ಬೆಂಗಳೂರು: 2023-24ನೇ ಶೈಕ್ಷಣಿಕ ಸಾಲಿಗಾಗಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರುಗಳ ಹುದ್ದೆಗಳಿಗೆ 4055 ಅತಿಥಿ ಉಪನ್ಯಾಸಕರುಗಳನ್ನು ನೇಮಕ ಮಾಡಲು ಸರ್ಕಾರ ಮುಂದಾಗಿದೆ. 2023-24ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರ ಹುದ್ದೆಗಳು, ಬಡ್ತಿ, ವಯೋನಿವೃತ್ತಿ, ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಬಹುದಾದ ಉಪನ್ಯಾಸಕರ ಹುದ್ದೆಗಳು … Continued

ಶಿಕ್ಷಣ ಇಲಾಖೆಯಿಂದ ಪರಿಷ್ಕೃತ ವರ್ಗಾವಣಾ ವೇಳಾಪಟ್ಟಿ ಪ್ರಕಟ: ಜೂನ್‌ 6ರಿಂದ ಶಿಕ್ಷಕರ ವರ್ಗಾವಣೆ ಆರಂಭ

ಬೆಂಗಳೂರು: ರಾಜ್ಯದ ಪ್ರಾಥಮಿಕ ಶಾಲಾ ಮತ್ತು ಪ್ರೌಢ ಶಾಲಾ ಶಿಕ್ಷಕರು ಬಹಳ ದಿನಗಳಿಂದ ನಿರೀಕ್ಷಿಸುತ್ತಿದ್ದ ವರ್ಗಾವಣೆ (Teacher Transfer) ಪ್ರಕ್ರಿಯೆಯನ್ನು ಶಾಲಾ ಶಿಕ್ಷಣ ಇಲಾಖೆಯು ಮತ್ತೆ ಆರಂಭಿಸಿದ್ದು, ಪರಿಷ್ಕೃತ ವರ್ಗಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯು ಜೂನ್‌ 6 ರಿಂದ ಜುಲೈ 31 ರವರೆಗೆ ನಡೆಯಲಿದೆ. ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ರಾಜ್ಯ ಸರ್ಕಾರ ಮೇ … Continued

ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಸಂಬಂಧ ಇಂದು ಅಧಿಸೂಚನೆ ಹೊರಡಿಸಿದ್ದು, ಹೊರ್ಟಿಕಲ್ಚರ್ ಮತ್ತು ಸೆರಿಕಲ್ಟರ್ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿದ್ದ ರಾಜೇಂದ್ರಕುಮಾರ ಕಠಾರಿಯ ಅವರನ್ನು ವರ್ಗಾವಣೆ ಮಾಡಿದ್ದು, ಅವರನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದೆ. ಐಎಎಸ್ ಅಧಿಕಾರಿ ಪಂಕಜಕುಮಾರ ಪಾಂಡೆ ಅವರನ್ನು ಎಂಎಸ್ಎಂಇ ಮತ್ತು … Continued

ನಾಳೆಯಿಂದ ಸರ್ಕಾರಿ ನೌಕರರ ವರ್ಗಾವಣೆ: ಆಯಾ ಇಲಾಖೆ ಸಚಿವರಿಗೆ ಅಧಿಕಾರ

ಬೆಂಗಳೂರು: ನಾಳೆಯಿಂದ (ಜೂನ್‌ 1) 15 ದಿನಗಳೊಳಗೆ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಮಾಡಲು ಆದೇಶಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರ ಪ್ರಸಕ್ತ ಸಾಲಿನ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆಯನ್ನು ಜೂನ್ 1ರಿಂದ 15ರೊಳಗೆ ಪೂರ್ಣಗೊಳಿಸುವಂತೆ ಸರ್ಕಾರ ಸೂಚಿಸಿದೆ. ಗ್ರೂಪ್ ಎ, ಬಿ, ಸಿ, ಡಿ ಅಧಿಕಾರಿಗಳು, ನೌಕರರಿಗೆ ಅನ್ವಯವಾಗುವಂತೆ ಕಾರ್ಯನಿರತ ವೃಂದ ಬಲದ ಶೇಕಡ 6 ರಷ್ಟು … Continued

ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೇಳಿಕೆ

ಬೆಂಗಳೂರು: ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಎಲ್ಲಾ ಮಹಿಳೆಯರೂ ಉಚಿತ ಪ್ರಯಾಣ ಮಾಡಬಹುದು ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ಪಾಸ್ ವಿತರಣೆ ಸಂಬಂಧ ಇಂದು, ಮಂಗಳವಾರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ಸರ್ಕಾರಿ ಬಸ್ಸು​ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಸಾರಿಗೆ … Continued

ಇಂದಿನಿಂದ ಶಾಲೆಗಳು ಪುನರಾರಂಭ: ಮೇ 31ರಿಂದ ತರಗತಿ ಆರಂಭ

ಬೆಂಗಳೂರು: 22023-24ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿಯಂತೆ ಇಂದಿನಿಂದ ಶಾಲೆಗಳು ತೆರೆಯಲಿದ್ದು, ಮೇ 31ರಿಂದ ರಾಜ್ಯಾದ್ಯಂತ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಪುನಾರಂಭಗೊಳ್ಳಲಿವೆ. ಶಾಲೆಯ ಮೊದಲ ದಿನ ಪ್ರಾರಂಭಿಸುವ ಮೊದಲು ತರಗತಿಯ ಕೊಠಡಿಗಳು, ಅಡುಗೆ ಪಾತ್ರೆಗಳು, ಆಹಾರ ಧಾನ್ಯಗಳು ಮತ್ತು ನೀರಿನ ಸಂಪ್‌ಗಳು ಸೇರಿದಂತೆ ಆವರಣವನ್ನು ಸ್ವಚ್ಛಗೊಳಿಸಲು ಮತ್ತು ಅನಗತ್ಯ ವಸ್ತುಗಳನ್ನು ವಿಲೇವಾರಿ ಮಾಡಲು ಶಾಲೆಗಳಿಗೆ … Continued

ನೂತನ ವಿಧಾನಸಭಾ ಸ್ಪೀಕರ್​ ಆಗಿ ಯು.ಟಿ. ಖಾದರ್ ಅವಿರೋಧ ಆಯ್ಕೆ

ಬೆಂಗಳೂರು: ರಾಜ್ಯ ವಿಧಾನಸಭೆ ನೂತನ ಸ್ಪೀಕರ್‌ ಆಗಿ ಯು.ಟಿ. ಖಾದರ್‌ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸ್ಪೀಕರ್‌ ಸ್ಥಾನಕ್ಕೆ ಯು.ಟಿ. ಖಾದರ್‌ ಅವರು ಮಾತ್ರ ನಾಮಪತ್ರವನ್ನು ಸಲ್ಲಿಸಿದ್ದರು. ಇಂದು ಸದನದಲ್ಲಿ ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯು.ಟಿ. ಖಾದರ್​ ಅವರ ಹೆಸರನ್ನು ಸೂಚಿಸಿದರು. ಬಳಿಕ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಅವರು ಅನುಮೋದಿಸಿದರು. ನಂತರ ಬಹುಮತದ … Continued

ವಿಧಾನಸಭೆ ಸ್ವೀಕರ್ ಸ್ಥಾನಕ್ಕೆ ಯು.ಟಿ ಖಾದರ್ ನಾಮಪತ್ರ ಸಲ್ಲಿಕೆ

ಬೆಂಗಳೂರು: ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ಇಂದು ಶಾಸಕ ಯು.ಟಿ ಖಾದರ್ ಅವರು ಇಂದು ನಾಮಪತ್ರವನ್ನು ಸಲ್ಲಿಸಿದ್ದಾರೆ. ಅವರು ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಯಿದೆ. ಮೇ 24 ರಂದು ವಿಧಾನಸಭಾಧ್ಯಕ್ಷರ ಆಯ್ಕೆ ನಡೆಯಲಿದೆ. ಕಾಂಗ್ರೆಸ್ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಮನವೊಲಿಕೆಯ ನಂತರ ಯುಟಿ ಖಾದರ್ ಅವರು ಸ್ಪೀಕರ್ ಸ್ಥಾನಕ್ಕಾಗಿ ನಾಮಪತ್ರವನ್ನು ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ … Continued

ಚಿತ್ರದುರ್ಗ ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು: ಚಿತ್ರದುರ್ಗದ ಮುರುಘರಾಜೇಂದ್ರ ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನಿವೃತ್ತ ಐಎಎಸ್‌ ಅಧಿಕಾರಿ ಪಿ ಎಸ್‌ ವಸ್ತ್ರದ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ರದ್ದುಪಡಿಸಿದೆ. ಆದಾಗ್ಯೂ, ಪರ್ಯಾಯ ವ್ಯವಸ್ಥೆಯಾಗುವವರೆಗೆ ಆಡಳಿತಾಧಿಕಾರಿ ಮುಂದಿನ ಒಂದು ತಿಂಗಳು ದೈನಂದಿನ ಚಟುವಟಿಕೆ ಮುಂದುವರಿಸಲು ನ್ಯಾಯಾಲಯ ಅನುಮತಿ ನೀಡಿದೆ. ಚಿತ್ರದುರ್ಗದ ಡಿ ಎಸ್‌ ಮಲ್ಲಿಕಾರ್ಜುನ ಒಳಗೊಂಡು … Continued