ಬೆಂಗಳೂರು–ಮೈಸೂರು ದಶಪಥ ಹೆದ್ದಾರಿಯದಲ್ಲಿ ಇಂದಿನಿಂದ ಟೋಲ್ ಸಂಗ್ರಹ

ಬೆಂಗಳೂರು: ಬೆಂಗಳೂರು–ಮೈಸೂರು ದಶಪಥ ಹೆದ್ದಾರಿಯ ಮೊದಲ ಹಂತದ ಟೋಲ್‌ ಕೇಂದ್ರಗಳು ಇಂದಿನಿಂದ (ಫೆಬ್ರವರಿ 27ರಿಂದ) ಆರಂಭವಾಗಿದ್ದು, ಇಂದು ಬೆಳಿಗ್ಗೆ 8 ಗಂಟೆಯಿಂದಲೇ ಟೋಲ್​ ಸಂಗ್ರಹ ಆರಂಭವಾಗಿದೆ. ಮಾರ್ಚ್ 11ರಂದು ಪ್ರಧಾನಿ ನರೇಂದ್ರ ಮೋದಿ ಹತ್ತುಪಥಗಳ ಹೆದ್ದಾರಿಯನ್ನು ಉದ್ಘಾಟಿಸಲಿದ್ದು, ಅದಕ್ಕೂ ಮುನ್ನವೇ ಪ್ರಯಾಣಿಕರು ಟೋಲ್ ಕಟ್ಟಬೇಕಿದೆ. 117 ಕಿ.ಮೀ ಉದ್ದದ ಹೆದ್ದಾರಿಯ ಬೆಂಗಳೂರು–ನಿಡಘಟ್ಟವರೆಗಿನ 56 ಕಿ.ಮೀ. ಉದ್ದದ … Continued

ಫೆಬ್ರವರಿ 27ರಂದು ಪ್ರಧಾನಿ ಮೋದಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ- 2 ರೈಲ್ವೆ ಯೋಜನೆಗಳ ಶಂಕುಸ್ಥಾಪನೆ, ಬೆಳಗಾವಿಯಲ್ಲಿ 2,700 ಕೋಟಿ ರೂ. ಯೋಜನೆಗಳಿಗೆ ಚಾಲನೆ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 27 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣದ ಉದ್ಘಾಟನೆ ಮತ್ತು 1,000 ಕೋಟಿ ರೂ.ಗಳ ಎರಡು ರೈಲ್ವೆ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಪಿಎಂಒ ಪ್ರಕಟಣೆ ತಿಳಿಸಿದೆ. ಶಿವಮೊಗ್ಗ ವಿಮಾನ ನಿಲ್ದಾಣವನ್ನು ಸುಮಾರು 450 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ವಿಮಾನ ನಿಲ್ದಾಣದ ಪ್ರಯಾಣಿಕರ … Continued

ಬಿಜೆಪಿಯಿಂದ 4 ಕಡೆಯಿಂದ ವಿಜಯ ಸಂಕಲ್ಪ ಯಾತ್ರೆ, 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ

ಬೆಂಗಳೂರು: ಬಿಜೆಪಿಯು 4 ಸ್ಥಳಗಳಿಂದ ವಿಜಯ ಸಂಕಲ್ಪ ಯಾತ್ರೆಯನ್ನು ಮಾರ್ಚ್ ತಿಂಗಳಿನಲ್ಲಿ ಆರಂಭಿಸಲಿದ್ದು, ಇದು ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಸಂಚರಿಸಲಿದೆ ಎಂದು ರಾಜ್ಯದ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು, ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, … Continued

ಮಂಗಳೂರು ಪೊಲೀಸ್‌ ಆಯುಕ್ತ ಸೇರಿ 7 ಐಪಿಎಸ್​ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಸೇರಿದಂತೆ 7 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಅವರನ್ನು ವರ್ಗಾವಣೆ ಮಾಡಿದ್ದು, ಅವರನ್ನು ಡಿಐಜಿ ರೈಲ್ವೆ ಹುದ್ದೆಗೆ ನಿಯೋಜಿಸಲಾಗಿದೆ. ಅವರ ಸ್ಥಾನಕ್ಕೆ ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಜೈನ್ ಅವರನ್ನು … Continued

ಬಿಜೆಪಿ ಸೇರ್ಪಡೆ ಕಾರ್ಯಕ್ರಮಕ್ಕೆ ಬಾರದ ಹಿರಿಯ ನಟ ಅನಂತ ನಾಗ್ …!

ಬೆಂಗಳೂರು : ಕನ್ನಡದ ಹಿರಿಯ ನಟ ಅನಂತ ನಾಗ್  ಮಂಗಳವಾರ ಅಧಿಕೃತವಾಗಿ ಭಾರತೀಯ ಜನತಾ ಪಕ್ಷ ಸೇರಲಿದ್ದಾರೆ ಎಂದು ವರದಿಯಾಗಿತ್ತು. ಆದರೆ ಅವರು ಕಾರ್ಯಕ್ರಮಕ್ಕೆ ಹಾಜರಾಗಲಿಲ್ಲ. ಮಂಗಳವಾರ ಸಂಜೆ 4:30ಕ್ಕೆ ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲು​ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಈ ವೇಳೆ  ಸಚಿವರಾದ ಮುನಿರತ್ನ, ಡಾ. ಸುಧಾಕರ ಮುಂತಾದವರು … Continued

ಬೃಹತ್ ಹವಾಮಾನ ಬದಲಾವಣೆಯ ಅಪಾಯ ಎದುರಿಸುತ್ತಿರುವ ವಿಶ್ವದ ಟಾಪ್-100 ಪ್ರಾಂತ್ಯಗಳ ಪಟ್ಟಿಯಲ್ಲಿ ಕರ್ನಾಟಕವೂ ಸೇರಿ ಭಾರತದ 14 ರಾಜ್ಯಗಳು…!

ನವದೆಹಲಿ: ಭಾರತದಲ್ಲಿ ಕನಿಷ್ಠ 14 ರಾಜ್ಯಗಳು ಹವಾಮಾನ ವೈಪರೀತ್ಯ ಮತ್ತು ಹವಾಮಾನ ಬದಲಾವಣೆಯಿಂದ ಹಾನಿಗೊಳಗಾಗುವ ಏಷ್ಯಾದ ಟಾಪ್-100 ಪ್ರಾಂತ್ಯಗಳಲ್ಲಿ ಸೇರಿವೆ ಎಂದು ಅಧ್ಯಯನ ವರದಿಯೊಂದು ತಿಳಿಸಿದೆ. ಕ್ರಾಸ್ ಡಿಪೆಂಡೆನ್ಸಿ ಇನಿಶಿಯೇಟಿವ್ (XDI) ಮೂಲಕ ಎಕ್ಸ್‌ಡಿಐ (XDI) ಗ್ರೋಸ್‌ ಡೊಮೆಸ್ಟಿಕ್ ಕ್ಲೈಮೇಟ್ ರಿಸ್ಕ್ ಡೇಟಾದ ಮೂಲಸೌಕರ್ಯಕ್ಕೆ ಸಂಭವನೀಯ ಹಾನಿಯ ಮೊದಲ ವಿಶ್ಲೇಷಣೆಯ ಪ್ರಕಾರ, ಹವಾಮಾನ ವೈಪರೀತ್ಯದ ಪರಿಣಾಮಕ್ಕೆ … Continued

ಮೇದರ ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಸರ್ಕಾರದ ಆದೇಶ: 8 ಸಮುದಾಯಗಳಿಗೆ ಅನುಕೂಲ

ಬೆಂಗಳೂರು: ಕರ್ನಾಟಕ ಮೇದರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಅತ್ಯಂತ ಹಿಂದುಳಿದ ಸಮುದಾಯವಾಗಿರುವ ಮೇದರ , ಬಟ್ಟರ್, ಗೌರಿ, ಗೌರಿ ಮರಾಠ, ಗೌರಿಗ, ಮೇದರಿ, ಬುರುಡ್ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ಮೇದರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿಯವರ ಕಚೇರಿ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಮಾಹಿತಿ … Continued

ಕರ್ನಾಟಕ, ತಮಿಳುನಾಡು, ಕೇರಳದ 60ಕ್ಕೂ ಹೆಚ್ಚು ಸ್ಥಳಗಳಲ್ಲಿ ಎನ್‌ಐಎ ದಾಳಿ

ನವದೆಹಲಿ: 2022ರ ಅಕ್ಟೋಬರ್‌ನಲ್ಲಿ ನಡೆದ ಕೊಯಮತ್ತೂರು ಕಾರ್ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬುಧವಾರ ದಕ್ಷಿಣ ಭಾರತದ ಮೂರು ರಾಜ್ಯಗಳಲ್ಲಿನ 60 ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿದೆ. ತಮಿಳುನಾಡು, ಕೇರಳ ಮತ್ತು ಕರ್ನಾಟಕ ಸೇರಿದಂತೆ ದಾಳಿಗಳನ್ನು ನಡೆಸಲಾಯಿತು. ಇಂದು, ಬುಧವಾರ ಬೆಳಿಗ್ಗೆ 6 ಗಂಟೆಗೆ 60 ಕ್ಕೂ ಹೆಚ್ಚು … Continued

ತುಮಕೂರು : ಹೆಚ್ಎಎಲ್ ಹೆಲಿಕಾಪ್ಟರ್ ತಯಾರಿಕಾ ಘಟಕ ಉದ್ಘಾಟಿಸಿದ ಪ್ರಧಾನಿ ಮೋದಿ

ತುಮಕೂರು: ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ತುಮಕೂರು ಜಿಲ್ಲೆಯ ಜಿಲ್ಲೆಯ ಗುಬ್ಬಿ ತಾಲೂಕು ಬಿದರೆಹಳ್ಳಕಾವಲ್‌ನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‌ನ (ಎಚ್‌ಎಎಲ್) ಹೆಲಿಕಾಪ್ಟರ್ ತಯಾರಿಕಾ ಕಾರ್ಖಾನೆ ಉದ್ಘಾಟಿಸಿದರು ಮತ್ತು ಲಘು ಉಪಯುಕ್ತತೆಯ ಹೆಲಿಕಾಪ್ಟರ್ ಅನ್ನು ಅನಾವರಣಗೊಳಿಸಿದರು. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉಪಸ್ಥಿತರಿದ್ದರು. ಎಚ್‌ಎಎಲ್‌ನ ಗ್ರೀನ್‌ಫೀಲ್ಡ್ ಹೆಲಿಕಾಪ್ಟರ್ ಕಾರ್ಖಾನೆಯು ಬಿದರೆಹಳ್ಳಕಾವಲ್‌ನಲ್ಲಿ … Continued

ಪ್ರಶ್ನಾವಳಿ ಬಿಡುಗಡೆ ಮಾಡಿದ 7ನೇ ರಾಜ್ಯ ವೇತನ ಆಯೋಗ : ಸಲಹೆ, ಅಭಿಪ್ರಾಯ ಆಹ್ವಾನ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆ ಪರಿಷ್ಕರಣೆ ಮಾಡಲು ರಚಿಸಲಾಗಿರುವ ಏಳನೇ ರಾಜ್ಯ ವೇತನ ಆಯೋಗವು ಪ್ರಶ್ನಾವಳಿ ಬಿಡುಗಡೆ ಮಾಡಿದ್ದು ಸಲಹೆ, ಅಭಿಪ್ರಾಯಗಳನ್ನು ಸೂಚಿತ ದಿನಾಂಕ ಫೆ.10ರೊಳಗೆ ಸಲ್ಲಿಸಬಹುದಾಗಿದೆ. ಆಯೋಗಕ್ಕೆ ವಹಿಸಲಾಗಿರುವ ಪರಿಶೀಲನಾ ಅಂಶಗಳಿಗೆ ಸಾರ್ವಜನಿಕರು, ಸೇವಾ ಸಂಘಗಳು, ಸರ್ಕಾರಿ ನೌಕರರು, ಸಂಘಸಂಸ್ಥೆಗಳು, ಇಲಾಖೆಗಳಿಂದ ಮಾಹಿತಿ, ಅನಿಸಿಕೆ ಹಾಗೂ ಮುಕ್ತ ಸಲಹೆ ಪಡೆಯುವ … Continued