ಪರ್ಯಾಯ ಸಮ್ಮೇಳನಕ್ಕೆ ಸಚಿವ ಸುನಿಲಕುಮಾರ ಆಕ್ಷೇಪ

ಹಾವೇರಿ: ಸರ್ಕಾರದ ವತಿಯಿಂದ ನಡೆಯುತ್ತಿರುವ ಸಮ್ಮೇಳನಕ್ಕೆ ವಿರುದ್ಧವಾಗಿ ಪರ್ಯಾಯ ಸಮ್ಮೇಳನ ಮಾಡುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲಕುಮಾರ ಹೇಳಿದ್ದಾರೆ. ಈ ಸಂಬಂಧ ಹಾವೇರಿಯಲ್ಲಿ ಆರಂಭವಾಗಿರುವ 86ನೇ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ಮಾತನಾಡಿದ ಅವರು, ದೊಡ್ಡ ಕಾರ್ಯಕ್ರಮದಲ್ಲಿ ಸಣ್ಣಪುಟ್ಟ ವ್ಯತ್ಯಾಸವಾಗಬಹುದು. ಅದನ್ನು ಚರ್ಚಿಸಿ ಬಗೆಹರಿಸಿಕೊಳ್ಳಬೇಕು. ಭಾಷೆಯ ಬೆಳವಣಿಗೆಯ ದೃಷ್ಟಿಯಿಂದ ಮಹತ್ವವಾಗಿರುವ … Continued

ಐಸಿಸ್‌ ಜೊತೆ ನಂಟು: ಇಬ್ಬರು ಶಂಕಿತರನ್ನು ಬಂಧಿಸಿದ ಎನ್‌ಐಎ

ಬೆಂಗಳೂರು: ಭಯೋತ್ಪಾದಕ ಸಂಘಟನೆ ಐಸಿಸ್ ಜೊತೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕದ ಮಂಗಳೂರಿನ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಸೇರಿದಂತೆ ಇಬ್ಬರು ಯುವಕರನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಗುರುವಾರ ಬಂಧಿಸಿದೆ. ದಕ್ಷಿಣ ಕನ್ನಡ, ಶಿವಮೊಗ್ಗ, ದಾವಣಗೆರೆ ಮತ್ತು ಬೆಂಗಳೂರು ಜಿಲ್ಲೆಗಳ ಆರು ಸ್ಥಳಗಳಲ್ಲಿ ಶೋಧ ನಡೆಸಿದ ನಂತರ ಇಬ್ಬರನ್ನು ಬಂಧಿಸಲಾಗಿದೆ ಎಂದು ಎನ್ಐಎ ತಿಳಿಸಿದೆ. … Continued

ವಿಧಾನಸಭೆ ಚುನಾವಣೆಗೆ ತಯಾರಿ: ಕೇಂದ್ರ ಚುನಾವಣಾಧಿಕಾರಿಗಳಿಂದ ಪೂರ್ವ ತಯಾರಿ ಪರಿವೀಕ್ಷಣೆ

ಬೆಂಗಳೂರು: ಮುಂಬರುವ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವತಿಯಿಂದ ಹಮ್ಮಿಕೊಳ್ಳಲಾಗಿರುವ ಪೂರ್ವತಯಾರಿ ಕಾರ್ಯಗಳನ್ನು ಭಾರತ ಚುನಾವಣಾ ಆಯೋಗದ ಉಪ ಚುನಾವಣಾ ಆಯುಕ್ತರಾದ ಅಜಯ್ ಭಾದೂ ಹಾಗೂ ಕಾರ್ಯದರ್ಶಿ ಬಿ.ಸಿ. ಪಾತ್ರ ಅವರು ಪರಿವೀಕ್ಷಣೆ ಮಾಡಿದರು. 2023ರ ರಾಜ್ಯ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪೂರ್ವತಯಾರಿ ಕಾರ್ಯಗಳನ್ನು ಪರಿವೀಕ್ಷಿಸಲು ಎರಡು ದಿನಗಳ … Continued

ಸಿದ್ದೇಶ್ವರ ಶ್ರೀಗಳು’ 2014ರಲ್ಲಿ ಬರೆದಿದ್ದ ಅಂತಿಮ ಅಭಿವಂದನ ಪತ್ರ (ವಿಲ್)ದಲ್ಲಿ ಏನಿದೆ ?

ವಿಜಯಪುರ: ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನಕ್ಕೆ ಭಕ್ತರ ಸಾಗರವೇ ಹರಿದು ಬರುತ್ತಿದೆ. ಮಂಗಳವಾರ ಬೆಳಗ್ಗೆಯಿಂದ ವಿಜಯಪುರ ಶೈನಿಕ ಶಾಲೆಯಲ್ಲಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸಂಜೆ 5 ಗಂಟೆ ನಂತರ ಆಶ್ರಮದ ಆವರಣದಲ್ಲಿ ಅಂತಿಮ ವಿಧಿವಿಧಾನ ನೆರವೇರಿಸಲು ಸರಕಾರ ಸಿದ್ಧತೆ ಕೈಗೊಂಡಿದೆ. ಸಿದ್ಧೇಶ್ವರ ಸ್ವಾಮೀಜಿ ಅವರು 2014ರಲ್ಲಿ ಬರೆಸಿದ್ದ ಅಂತಿಮ ಅಭಿವಂದನ ಪತ್ರದ (ವಿಲ್‌) … Continued

ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಮಾಡುವಂತೆ ಕೇಂದ್ರಕ್ಕೆ ಒತ್ತಾಯಿಸಿದ ಗೋವಾ

ಪಣಜಿ: ಮಹದಾಯಿ ನದಿಯಿಂದ ಕರ್ನಾಟಕವು ನೀರು ತಿರುಗಿಸುವುದನ್ನು ತಡೆಯಲು ಮಹದಾಯಿ ನೀರು ನಿರ್ವಹಣಾ ಪ್ರಾಧಿಕಾರವನ್ನು ರಚಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ನೇತೃತ್ವದ ಸಚಿವ ಸಂಪುಟವು ಇಂದು, ಸೋಮವಾರ ನಿರ್ಧರಿಸಿದೆ. ಕಳಸಾ-ಬಂಡೂರಿ ನೀರಿನ ಯೋಜನೆಗೆ ಕರ್ನಾಟಕದ ವಿವರವಾದ ಯೋಜನಾ ವರದಿ(ಡಿಪಿಆರ್‌)ಗೆ ನೀಡಲಾದ ಎನ್‍ಒಸಿಯನ್ನು ತಕ್ಷಣವೇ ಹಿಂಪಡೆಯುವಂತೆ ಒತ್ತಾಯಿಸಿ ಕೇಂದ್ರಕ್ಕೆ ಪತ್ರ ಬರೆಯಲು … Continued

ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ​ ಜಾರಿ: ರಾಜ್ಯಾದ್ಯಂತ ಈ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ, ಹೊಸ ವರ್ಷಾಚರಣೆಗೆ ರಾತ್ರಿ 1ರ ಗಡುವು

ಬೆಳಗಾವಿ: ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೊನಾ ವೈರಸ್‌ನ ಹೊಸ ತಳಿಯ ಕಾರಣಕ್ಕೆ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಜನಸಾಮಾನ್ಯರಿಗೆ ತೊಂದರೆಯಾಗದಂತೆ ಹಾಗೂ ಆರ್ಥಿಕ ಚಟುವಟಿಕೆಗೆ ಅಡ್ಡಿಯಾಗದಂತೆ ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲೂ ಮಾರ್ಗಸೂಚಿಗಳನ್ನು ಜಾರಿ ಮಾಡಲಾಗಿದೆ. ಮಾರ್ಗಸೂಚಿಗೆ ಸಂಬಂಧಿಸಿದಂತೆ ಸೋಮವಾರ ನಡೆದ ಸರ್ಕಾರದ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಆರೋಗ್ಯ ಸಚಿವ ಸುಧಾಕರ ಮತ್ತು ಕಂದಾಯ … Continued

ಹೊಸ ರಾಜಕೀಯ ಪಕ್ಷ ಘೋಷಿಸಿದ ಮಾಜಿ ಸಚಿವ ಜನಾರ್ದನ ರೆಡ್ಡಿ

ಬೆಂಗಳೂರು: ಬಿಜೆಪಿಯ ಬಗ್ಗೆ ಅಲ್ಲಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ಮಾಜಿ ಸಚಿವ ಹಾಗೂ ಗಣಿ ಉದ್ಯಮಿ ಜನಾರ್ದನ ರೆಡ್ಡಿ ಈಗ ಹೊಸ ರಾಜಕೀಯ ಪಕ್ಷ ಘೋಷಣೆ ಮಾಡಿದ್ದಾರೆ. ನೂತನ ರಾಜಕೀಯ ಪಕ್ಷಕ್ಕೆ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂಬ ಹೆಸರಿಡಲಾಗಿದೆ ಎಂದು ಹೇಳಿದರು. ನಗರದಲ್ಲಿನ ತಮ್ಮ ಮನೆ ‘ಪಾರಿಜಾತ’ದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಹೊಸ ಪಕ್ಷವನ್ನು ಘೋಷಣೆ ಮಾಡಿದರು … Continued

ವಿಧಾನ ಪರಿಷತ್‌ ಸಭಾಪತಿಯಾಗಿ ಆಯ್ಕೆಯಾದ ಬಸವರಾಜ ಹೊರಟ್ಟಿಗೆ ಸನ್ಮಾನ

ವಿಧಾನ ಪರಿಷತ್‌ ಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾದ ಬಸವರಾಜ ಹೊರಟ್ಟಿ ಅವರನ್ನು ಸನ್ಮಾನಿಸಲಾಯಿತು. ಶಾಂತಿನಿಕೇತನ ಇಂಗ್ಲಿಷ್‌ ಮಾಧ್ಯಮ ಶಾಲೆ ಅಧ್ಯಕ್ಷರಾದ ಭವರಲಾಲ ಸಿ. ಜೈನ್, ಮುಖ್ಯ ಕಾರ್ಯದರ್ಶಿ ವಿವೇಕ್ ಆರ್ ಷಾ, ಖಜಾಂಚಿ ಪೂರಣ್‌ ಕುಮಾರ್ ನಹತಾ, ನಿರ್ದೇಶಕ ದಾನೇಶ್ ಎ. ಕಟಾರಿಯಾ, ಮನೋಜ್ ಜ್ಯುವೆಲರ್ಸ್ ದಿಲೀಪ್ ವಿ ತೇಲಿಸೆರಾ ಇದ್ದರು.

ವಿಧಾನ ಪರಿಷತ್ ಉಪಸಭಾಪತಿಯಾಗಿ ಎಂ.ಕೆ ಪ್ರಾಣೇಶ ಆಯ್ಕೆ

ಬೆಳಗಾವಿ: ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿಯಾಗಿ ಬಿಜೆಪಿಯ ಎಂ.ಕೆ. ಪ್ರಾಣೇಶ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನಿಂದ ಅನಿಲಕುಮಾರ ಅರಳಿ ಅವರು ಸ್ಪರ್ಧಿಸಿದ್ದರು. ಇಂದು (ಡಿಸೆಂಬರ್ 23) ರಂದು 11 ಗಂಟೆಗೆ ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಚುನಾವಣೆ ನಡೆದಿದ್ದು, ಎಂ.ಕೆ ಪ್ರಾಣೇಶ್ 39 ಮತಗಳನ್ನು ಪಡೆಯುವ ಮೂಲಕ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ.ಬಿಜೆಪಿ ಅಗತ್ಯ ಸಂಖ್ಯಾಬಲ(39) ಹೊಂದಿದ್ದರೂ ಅಡ್ಡಮತದ ಭೀತಿಯಿಂದ … Continued

ಪ್ರಥಮ ಪಿಯುಸಿ-ದ್ವಿತೀಯ ಪಿಯುಸಿ ಪ್ರಾಯೋಗಿಕ, ಪೂರ್ವ ಸಿದ್ಧತಾ ಪರೀಕ್ಷೆ, ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ (Karnataka School Examination and Evaluation Board) 2022-23ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ, ಪೂರ್ವ ಸಿದ್ಧತಾ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳನ್ನು ವೇಳಾಪಟ್ಟಿಯಂತೆ ನಡೆಸಲು ಕಾಲೇಜು ಆಡಳಿತ ಮಂಡಳಿಗೆ ಸುತ್ತೋಲೆ ಹೊರಡಿಸಿದೆ. 2022-23ನೇ … Continued