ಕಡ್ಡಾಯವಾಗಿ ಆನ್‌ಲೈನ್ ಮೂಲಕವೇ ಶಿಕ್ಷಕರಿಗೆ 17 ಸೇವಾ ಸೌಲಭ್ಯ ಮಂಜೂರು ಮಾಡಿ : ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಶಿಕ್ಷಕರಿಗೆ 17 ಸೇವಾ ಸೌಲಭ್ಯಗಳನ್ನು ಮಂಜೂರು ಮಾಡುವಾಗ ಕಡ್ಡಾಯವಾಗಿ ಆನ್ ಲೈನ್ ಮುಖಾಂತರವೇ ಪ್ರಸ್ತಾವನೆಗಳನ್ನು ಸ್ವೀಕರಿಸಿ ಇತ್ಯರ್ಥಪಡಿಸಬೇಕು. ಅದರ ಹೊರತಾಗಿ ಯಾವುದೇ ಕಾರಣಕ್ಕೂ ಭೌತಿಕವಾಗಿ ಪ್ರಸ್ತಾವನೆ ಸ್ವೀಕರಿಸದಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಆಡಳಿತದಲ್ಲಿ ಪಾರದರ್ಶಕತೆ ಕಾಯ್ದುಕೊಂಡು, ಶಿಕ್ಷಕರಿಗೆ, ಅಧಿಕಾರಿಗಳಿಗೆ, ಸಿಬ್ಬಂದಿ ವರ್ಗದವರಿಗೆ … Continued

ವಿಧಾನಪರಿಷತ್ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆ‌

ಬೆಳಗಾವಿ: ವಿಧಾನಪರಿಷತ್ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಬಸವರಾಜ ಹೊರಟ್ಟಿ ಹೊರತಾಗಿ ಬೇರೆ ಯಾರು ನಾಮಪತ್ರ ಸಲ್ಲಿಕೆ ಮಾಡದ ಹಿನ್ನೆಲೆಯಲ್ಲಿ ‌ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಹಂಗಾಮಿ ಸಭಾಪತಿಯಾಗಿದ್ದ ರಘುನಾಥ ಮಲ್ಕಾಪುರೆ ಅವರು ಅಧಿಕಾರ ಹಸ್ತಾಂತರ ಮಾಡಿದರು. … Continued

ಮಗನಿಗಾಗಿ ರಾಮನಗರ ಕ್ಷೇತ್ರ ತ್ಯಾಗ ಮಾಡಿದ ಅನಿತಾ ಕುಮಾರಸ್ವಾಮಿ

ರಾಮನಗರ: ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಪತ್ನಿ, ರಾಮನಗರ ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಪುತ್ರ ನಿಖಿಲ್‌ಗಾಗಿ ತಮ್ಮ ಕ್ಷೇತ್ರವನ್ನು ತ್ಯಾಗ ಮಾಡಿದ್ದಾರೆ. 2023ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಾವು ಪ್ರತಿನಿಧಿಸುತ್ತಿರುವ ರಾಮನಗರ ಕ್ಷೇತ್ರದಿಂದ ಪುತ್ರ ನಿಖಿಲ್‌ ಸ್ಪರ್ಧಿಸಲಿದ್ದಾರೆ ಎಂದು ಸ್ವತಃ ಅನಿತಾ ಕುಮಾರಸ್ವಾಮಿ ಶನಿವಾರ ಘೋಷಿಸಿದ್ದು, ಈ ಮೂಲಕ ಊಹಾಪೋಹಹಳಿಗೆ ತೆರೆ … Continued

ಆರೋಪಿಗಳ ಬಗ್ಗೆ ಮಾಹಿತಿ ನೀಡುವವರಿಗೆ 5 ಲಕ್ಷ ರೂಪಾಯಿ ಬಹುಮಾನ..!

ಬೆಂಗಳೂರು: ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡ ಆರೋಪಿಗಳ ಮಾಹಿತಿ ನೀಡುವವರಿಗೆ ನೀಡಲಾಗುತ್ತಿದ್ದ ಬಹುಮಾನದ ಮೊತ್ತವನ್ನು 20 ಸಾವಿರ ರೂ.ಗಳಿಂದ 5 ಲಕ್ಷ ರೂಪಾಯಿಗೆ ಹೆಚ್ಚಿಸಿ ಗೃಹ ಇಲಾಖೆ ಗುರುವಾರ ಆದೇಶ ಹೊರಡಿಸಿದೆ. ರಾಷ್ಟ್ರೀಯ ಸುರಕ್ಷತೆ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ, ಮಾದಕ ವಸ್ತು ಹಾಗೂ ಆಯುಧ ಕಳ್ಳಸಾಗಣೆ, ಮಕ್ಕಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ … Continued

ವರದಕ್ಷಿಣೆ ಕಿರುಕುಳ ಪ್ರಕರಣ: ನಟಿ ಅಭಿನಯಗೆ ಎರಡು ವರ್ಷ ಜೈಲು ಶಿಕ್ಷೆ

ಬೆಂಗಳೂರು: ಅತ್ತಿಗೆಗೆ ವರದಕ್ಷಿಣೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಸಿನೆಮಾ ನಟಿ ಹಾಗೂ ಕಿರುತೆರೆ ಕಲಾವಿದೆ ಅಭಿನಯಾ ಅವರಿಗೆ ಹೈಕೋರ್ಟ್‌ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಈ ಪ್ರಕರಣದಲ್ಲಿ ಅಭಿನಯ ಅವರ ತಾಯಿ ಜಯಮ್ಮ ಅವರಿಗೆ 5 ವರ್ಷ ಜೈಲು ಶಿಕ್ಷೆ ನೀಡಿದೆ. ವರದಕ್ಷಿಣ ಕಿರುಕುಳಕ್ಕೆ ಸಂಬಂಧಿಸಿದಂತೆ ಅಭಿನಯಾ ಅಣ್ಣ … Continued

ಈ ವರ್ಷದಿಂದಲೇ 5 ಮತ್ತು 8ನೇ ತರಗತಿಗಳಿಗೆ ʼಪಬ್ಲಿಕ್ʼ ಪರೀಕ್ಷೆ : ಮಾರ್ಗಸೂಚಿ ಬಿಡುಗಡೆ ಮಾಡಿದ ಶಿಕ್ಷಣ ಇಲಾಖೆ

 ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2022-23ನೇ ಸಾಲಿನಿಂದ ರಾಜ್ಯ ಪಠ್ಯಕ್ರಮದ ಎಲ್ಲ ಶಾಲೆಗಳಲ್ಲಿನ 5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ಮಾದರಿಯಲ್ಲಿ ವಾರ್ಷಿಕ ಪರೀಕ್ಷೆ / ಮೌಲ್ಯಾಂಕನ ನಡೆಸಲು ಅನುಮತಿ ನೀಡಿ ಆದೇಶ ಹೊರಡಿಸಿದೆ. ಇದರ ಅಲ್ಲದೆ, ವಾರ್ಷಿಕ ಪರೀಕ್ಷೆ /ಮೌಲ್ಯಾಂಕನ ನಿರ್ವಹಣೆಗೆ ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಿದೆ. ಶಾಲಾ ಶಿಕ್ಷಣ ಮತ್ತು … Continued

ಜೆಇ ಮೆದುಳು ಜ್ವರ ನಿಯಂತ್ರಣಕ್ಕೆ ಇಂದಿನಿಂದ ಮಕ್ಕಳಿಗೆ ಲಸಿಕಾ ಅಭಿಯಾನ, 48 ಲಕ್ಷ ಮಕ್ಕಳಿಗೆ ಲಸಿಕೆ: ಸಚಿವ ಸುಧಾಕರ

ಬೆಂಗಳೂರು: ಮಕ್ಕಳಿಗೆ ನರ ದೌರ್ಬಲ್ಯ, ಬುದ್ಧಿಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವೈಕಲ್ಯ ಉಂಟು ಮಾಡುವ ಜೆಇ ಮೆದುಳು ಜ್ವರ (ಜಪಾನೀಸ್ ಎನ್ ಸೆಫಲೈಟಿಸ್) ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಡಿಸೆಂಬರ್ 5ರಿಂದ ವಿಶೇಷ ಲಸಿಕಾ ಅಭಿಯಾನ ಆರಂಭವಾಗಲಿದೆ. ಈ ಅಭಿಯಾನದಡಿ 1ರಿಂದ 15 ವರ್ಷದ ಸುಮಾರು 48 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ ಎಂದು ಆರೋಗ್ಯ … Continued

ಚುನಾವಣೆಗೂ ಮೊದಲು ಬದಲಾವಣೆಗೆ ಮುನ್ನುಡಿ..?: ಕಾಂಗ್ರೆಸ್‌ನಿಂದ ಐದು ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರ ನೇಮಕ

ಬೆಂಗಳೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್‌ ಪಕ್ಷದೊಳಗೆ ಬದಲಾವಣೆಗೆ ಮುಂದಾಗಿದ್ದು, ಐದು ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ ಐದು ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಕೂಡಲೇ ಜಾರಿಗೆ ಬರುವಂತೆ ಐದು ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನು ನೇಮಿಸಲಾಗಿದೆ ಎಂದು … Continued

ಅತ್ಯಂತ ಕಿರಿಯ ಪ್ರಯಾಣಿಕ….: ದೆಹಲಿ ವಿಮಾನ ನಿಲ್ದಾಣದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಹುಬ್ಬಳ್ಳಿ ಮಹಿಳೆ…!

ನವದೆಹಲಿ: ಕರ್ನಾಟಕದ ಹುಬ್ಬಳ್ಳಿಯ ಮಹಿಳೆಯೊಬ್ಬರು ಮಂಗಳವಾರ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 3 ರಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ದೆಹಲಿ ವಿಮಾನ ನಿಲ್ದಾಣದ ಆಡಳಿತವು ಮಗುವನ್ನು ಸ್ವಾಗತಿಸಿದ್ದು, ಈ ಮಗುವನ್ನು ತನ್ನ ಅತ್ಯಂತ ಕಿರಿಯ ಪ್ರಯಾಣಿಕ ಎಂದು ಕರೆದಿದೆ. ಟರ್ಮಿನಲ್ 3 ರಲ್ಲಿ ವಿಮಾನಕ್ಕಾಗಿ ತನ್ನ ಪತಿಯೊಂದಿಗೆ ಕಾಯುತ್ತಿದ್ದ ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡು … Continued

11 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಆಡಳಿತ ವಿಭಾಗ ಎಡಿಜಿಪಿಯಾಗಿದ್ದ ಡಾ.ಎಂ ಅಬ್ದುಲ್‌ ಸಲೀಂ, ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಆಯುಕ್ತರಾಗಿದ್ದ ಡಾ. ರವಿಕಾಂತೇಗೌಡ ಸೇರಿದಂತೆ ರಾಜ್ಯ ಸರ್ಕಾರ 11 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತು ಅಧಿಸೂಚನೆ ಹೊರಡಿಸಲಾಗಿದ್ದು, ಆಡಳಿತ ವಿಭಾಗ ಎಡಿಜಿಪಿಯಾಗಿದ್ದ ಡಾ.ಎಂ ಅಬ್ದುಲ್ಲಾ ಸಲೀಂ ಅವರನ್ನು ಬೆಂಗಳೂರು ನಗರ ಸಂಚಾರ ವಿಭಾಗದ ಎಡಿಜಿಪಿ … Continued