ಸಿದ್ದಾಪುರ : ಮಂಗನಕಾಯಿಲೆಗೆ ಒಂದೇ ದಿನ ಇಬ್ಬರು ಸಾವು

ಸಿದ್ದಾಪುರ : ಉತ್ತರ ಕನ್ನಡ ಜಿಲ್ಲೆಯಲ್ಲಿ ಸಿದ್ದಾಪುರ ತಾಲೂಕಿನಲ್ಲಿ ಮಂಗನಕಾಯಿಲೆ(ಕೆಎಫ್‌ಡಿ)ಗೆ ಒಂದೇ ದಿನ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಸಿದ್ದಾಪುರ ತಾಲೂಕಿನ ಹೆಗ್ಗೆಕೊಪ್ಪ ಗ್ರಾಮದ 88 ವರ್ಷದ ವೃದ್ಧ ಮತ್ತು ಕಲ್ಲೂರು ಗ್ರಾಮದ 65 ವರ್ಷದ ವೃದ್ಧ ಮಂಗನ ಕಾಯಿಲೆಯಿಂದ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಇಬ್ಬರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಮಂಗನ ಕಾಯಿಲೆಯಿಂದ … Continued

ವಿಧಾನಸೌಧದಲ್ಲಿ ಪಾಕ್​ ಪರ ​ಘೋಷಣೆ ಕೂಗಿರುವುದು ಎಫ್​ಎಸ್​ಎಲ್​​ ವರದಿಯಲ್ಲಿ ದೃಢ: ಬಿಜೆಪಿ ಟ್ವೀಟ್

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಗೆದ್ದ ಕಾಂಗ್ರೆಸ್ಸಿನ ಡಾ ನಾಸಿರ್‌ ಹುಸೇನ್ ಪರ ಬೆಂಬಲಿಗರು ವಿಧಾನಸೌಧ ಆವರಣದಲ್ಲಿ ಸಂಭ್ರಮಾಚರಣೆ ಮಾಡುವ ವೇಳೆ ‘ಪಾಕಿಸ್ತಾನ​ ಜಿಂದಾಬಾದ್​​ ಘೋಷಣೆ’ ಕೂಗಿರುವುದು ವಿಧಿ ವಿಜ್ಞಾನ ಪ್ರಯೋಗಾಲಯ (FSL)​ ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂದು ಬಿಜೆಪಿ ಹೇಳಿಕೊಂಡಿದೆ. ಈ ಕುರಿತು ಟ್ವೀಟ್​ ಮಾಡಿರುವ ಬಿಜೆಪಿ “ವಿಧಾನಸೌಧದ ಒಳಗೆ ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಎಫ್​ಎಸ್​ಎಲ್​ … Continued

ಆರ್‌ಎಸ್‌ಎಸ್ ಕಾರ್ಯಕರ್ತನ ಹತ್ಯೆ ಆರೋಪಿ ದಕ್ಷಿಣ ಆಫ್ರಿಕಾದಲ್ಲಿ ಬಂಧನ

ನವದೆಹಲಿ : ಮಹತ್ವದ ಪ್ರಗತಿಯೊಂದರಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತನ್ನ ಮೋಸ್ಟ್ ವಾಂಟೆಡ್ ಹತ್ಯೆ ಆರೋಪಿಗಳಲ್ಲಿ ಒಬ್ಬನಾದ ಮೊಹಮ್ಮದ್ ಗೌಸ್ ನಿಯಾಜಿಯನ್ನು ದಕ್ಷಿಣ ಆಫ್ರಿಕಾದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದೆ. ಎನ್‌ಐಎ ನಿಯಾಜಿಯ ಮೇಲೆ 5 ಲಕ್ಷ ರೂಪಾಯಿಗಳ ಬಹುಮಾನವನ್ನು ಘೋಷಿಸಿತ್ತು. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿಎಫ್‌ಐ) ಪ್ರಮುಖ ನಾಯಕನಾಗಿದ್ದ ಮೊಹಮ್ಮದ್ ಗೌಸ್ ನಿಯಾಜಿ 2016 … Continued

ಗಡಿನಾಡ ಚೇತನ ರಾಜ್ಯ ಪ್ರಶಸ್ತಿಗೆ ಸಾಹಿತಿ-ರಂಗಕರ್ಮಿ ಬೆಳಗಾವಿಯ ಪ್ರೊ.ಬಿ.ಎಸ್.ಗವಿಮಠ ಸೇರಿ ಮೂವರು ಆಯ್ಕೆ

ಬೆಂಗಳೂರು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದಿಂದ ಪ್ರತಿ ವರ್ಷ ನೀಡುವ ‘ಗಡಿನಾಡ ಚೇತನ ರಾಜ್ಯ ಪ್ರಶಸ್ತಿ’ಗೆ ಕೇರಳದ ಸಾಹಿತಿ ರಾಧಾಕೃಷ್ಣ ಉಳಿಯತ್ತಡ್ಕ ಸೇರಿ ಮೂವರು ಆಯ್ಕೆಯಾಗಿದ್ದಾರೆ. ನಾಡು, ನುಡಿ, ಸಾಹಿತ್ಯ ಹಾಗೂ ಕನ್ನಡ ಭಾಷೆಗಾಗಿ ಸೇವೆ ಸಲ್ಲಿಸುತ್ತಿರುವ ರಾಜ್ಯ ಹಾಗೂ ಹೊರ ರಾಜ್ಯದ ಗಡಿ ಕನ್ನಡ ಪ್ರದೇಶಗಳ ಸಂಘ- ಸಂಸ್ಥೆಗಳು, ಮಹನೀಯರಿಗೆ ಈ ಪ್ರಶಸ್ತಿ … Continued

ಕೊನೆಗೂ 44 ನಿಗಮ/ಮಂಡಳಿಗಳಿಗೆ ಅಧ್ಯಕ್ಷರ ನೇಮಕ : ಯಾರಿಗೆ ಯಾವ ನಿಗಮ ಮಂಡಳಿ; ಪಟ್ಟಿ ಇಲ್ಲಿದೆ..

ಬೆಂಗಳೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿರುವುದರ ಮಧ್ಯೆ 44 ನಿಗಮ/ಮಂಡಳಿಗಳಿಗೆ ಕಾಂಗ್ರೆಸ್‌ನ 44 ಮುಖಂಡರು ಹಾಗೂ ಕಾರ್ಯಕರ್ತರನ್ನು ಅಧ್ಯಕ್ಷರನ್ನಾಗಿ ನೇಮಿಸಿದೆ. ನಿಗಮ/ಮಂಡಳಿ ಅಧ್ಯಕ್ಷ ಸ್ಥಾನಗಳಿಗೆ ಅಧ್ಯಕ್ಷರ ಪಟ್ಟಿಯನ್ನು ಅಂತಿಮಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿ ಹಾಕಿದ್ದಾರೆ. ಪಕ್ಷದ 44 ಮಂದಿ ಕಾರ್ಯಕರ್ತರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡಿ ಆದೇಶ ಹೊರಡಿಸಿದ್ದು, ಬಹಳಷ್ಟು ಸಮಯದಿಂದ ಸುದ್ದಿಯಲ್ಲಿದ್ದ ನಿಗಮ … Continued

ಪಾಕಿಸ್ತಾನ ಬಿಜೆಪಿಗೆ ಶತ್ರು ದೇಶವೇ ಹೊರತು ನಮಗಲ್ಲ : ವಿವಾದಕ್ಕೆ ಕಾರಣವಾದ ಕಾಂಗ್ರೆಸ್‌ ನಾಯಕ ಬಿಕೆ ಹರಿಪ್ರಸಾದ ಹೇಳಿಕೆ

ಬೆಂಗಳೂರು: ಬಿಜೆಪಿಗೆ ಪಾಕಿಸ್ತಾನವು “ಶತ್ರು ದೇಶ” ಆಗಿರಬಹುದು, ಆದರೆ ಕಾಂಗ್ರೆಸ್ ಪಕ್ಷವು ಪಾಕಿಸ್ತಾನವನ್ನು ನೆರೆಯ ರಾಷ್ಟ್ರವೆಂದು ಪರಿಗಣಿಸುತ್ತದೆ ಎಂದು ರಾಜ್ಯ ವಿಧಾನಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ ಹೇಳಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ. ವಿಧಾನ ಪರಿಷತ್ ಕಲಾಪದಲ್ಲಿ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲಿನ ಚರ್ಚೆಯ ವೇಳೆ ಮಾತನಾಡಿದ ಹಿರಿಯ ಕಾಂಗ್ರೆಸ್‌ ನಾಯಕ ಹರಿಪ್ರಸಾದ … Continued

ರಾಜ್ಯದ ಜನತೆಗೆ ಸಿಹಿ ಸುದ್ದಿ: ವಿದ್ಯುತ್ ದರದಲ್ಲಿ ಭಾರೀ ಇಳಿಕೆ ಮಾಡಿದ ಸರ್ಕಾರ ; ಎಷ್ಟು ಗೊತ್ತೆ..?

ಬೆಂಗಳೂರು : ಲೋಕಸಭೆ ಚುನಾವಣೆ ಬೆನ್ನಲ್ಲೇ ವಿದ್ಯುತ್ ಬಳಕೆದಾರರಿಗೆ ರಾಜ್ಯ ಸರ್ಕಾರ ವಿದ್ಯುತ್ ದರ ಇಳಿಕೆ ಮಾಡಿ ಸಿಹಿ ಸುದ್ದಿ ನೀಡಿದೆ. ವಿದ್ಯುತ್‌ ದರ ಪರಿಷ್ಕರಣೆ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ವಿದ್ಯುತ್ ದರ ಇಳಿಕೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. ಎಲ್‌.ಟಿ.ಗೃಹ ಬಳಕೆ ಸಂಪರ್ಕ ಹೊಂದಿದ ಹಾಗೂ100 ಯೂನಿಟ್​ಗಿಂತ ಹೆಚ್ಚು ಬಳಸುವವರಿಗೆ ಪ್ರತಿ … Continued

ರಾಜ್ಯಸಭೆ ಚುನಾವಣೆ | ನನಗೆ ಅನಾರೋಗ್ಯ ಇದ್ದ ಕಾರಣ ಮತದಾನ ಮಾಡ್ಲಿಕ್ಕೆ ಆಗ್ಲಿಲ್ಲ ; ಶಿವರಾಮ ಹೆಬ್ಬಾರ

ಯಲ್ಲಾಪುರ: ‘ಅನಾರೋಗ್ಯದ ಕಾರಣಕ್ಕೆ ರಾಜ್ಯಸಭೆ ಚುನಾವಣೆಯ ಮತದಾನದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಆಸ್ಪತ್ರೆಯಲ್ಲಿ‌ ಚಿಕಿತ್ಸೆಗೆಂದು ದಾಖಲಾಗಿದ್ದೆ, ಮತದಾನ ಮಾಡಲು ಆಗದೇ ಇರುವುದಕ್ಕೆ ನನಗೆ ಬೇಸರವಿದೆ. ಮಂಗಳವಾರ ಮುಂಜಾನೆ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿ ದಾಖಲಾಗಿದ್ದೆ. ಅವರು ಮಧ್ಯಾಹ್ನದ ಒಳಗೆ … Continued

ರಾಜ್ಯಸಭೆ ಚುನಾವಣೆ : ಕರ್ನಾಟಕದ 4 ಸ್ಥಾನಗಳಲ್ಲಿ ಕಾಂಗ್ರೆಸ್‌ 3, ಬಿಜೆಪಿ 1ರಲ್ಲಿ ಗೆಲುವು

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಮತದಾನ ಮುಕ್ತಾಯವಾಗಿದ್ದು. ಕರ್ನಾಟಕದಲ್ಲಿ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಲ್ಲಿ ಕಾಂಗ್ರೆಸ್ಸಿನ ಮೂವರು ಹಾಗೂ ಬಿಜೆಪಿ ಓರ್ವ ಅಭ್ಯರ್ಥಿ ಜಯಗಳಿಸಿದ್ದಾರೆ. ಬಿಜೆಪಿ – ಜೆಡಿಎಸ್ ಮೈತ್ರಿಯಲ್ಲಿ ಐದನೇ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಕುಪೇಂದ್ರ ರೆಡ್ಡಿ ಅವರು ಸೋತಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿಗಳಾದ ಅಜಯ ಮಾಕನ್ -47 ಮತಗಳು, ನಾಸೀರ್ ಹುಸೇನ್ – 47 … Continued

ರಾಜ್ಯಸಭಾ ಚುನಾವಣೆ : ಮತದಾನಕ್ಕೆ ಗೈರಾದ ಬಿಜೆಪಿ ಶಾಸಕ ಹೆಬ್ಬಾರ..!

ಬೆಂಗಳೂರು : ಕರ್ನಾಟಕದ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಇಂದು (ಫೆಬ್ರವರಿ 27) ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ವಿಧಾನಸೌಧದಲ್ಲಿ ನಡೆದಿದ್ದ ಮತದಾನ ಅಂತ್ಯವಾಗಿದೆ. ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಮೂರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಬಿಜೆಪಿಯಿಂದ ಅಖಾಡಕ್ಕೆ ಇಳಿದಿದ್ದ ಓರ್ವ ಅಭ್ಯರ್ಥಿಗೆ ಗೆಲುವಾಗಿದೆ. ಒಟ್ಟು … Continued