ಸ್ಥಳೀಯ ಸಂಸ್ಥೆಗಳ ಚುನಾವಣೆ : ಒಬಿಸಿಗೆ ಶೇ.33 ಮೀಸಲಾತಿ ಕಲ್ಪಿಸಲು ನ್ಯಾ.ಭಕ್ಸವತ್ಸಲ ಆಯೋಗ ಶಿಫಾರಸು

ಬೆಂಗಳೂರು: ರಾಜ್ಯದ ಎಲ್ಲ ನಗರ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ‘ಎ’ ಮತ್ತು ‘ಬಿ’ ಪ್ರವರ್ಗದಡಿ ಬರುವ ಇತರೆ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೂರನೇ ಒಂದು ಭಾಗ ಅಥವಾ ಶೇ.33ರಷ್ಟು ಮೀಸಲಾತಿ ನೀಡುವುದು ಸೂಕ್ತ ಎಂದು ನ್ಯಾಯಮೂರ್ತಿ ಭಕ್ತವತ್ಸಲ ಅವರ ನೇತೃತ್ವದ ಆಯೋಗ ಸರ್ಕಾರಕ್ಕೆ ಸಲ್ಲಿಸಿರುವ ವರದಿಯಲ್ಲಿ ಶಿಫಾರಸು ಮಾಡಿದೆ. . ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ … Continued

ನೀತಿ ಆಯೋಗದ ಭಾರತ ಆವಿಷ್ಕಾರ ಸೂಚ್ಯಂಕ 2021ರ ಶ್ರೇಯಾಂಕದಲ್ಲಿ ಕರ್ನಾಟಕಕ್ಕೆ ಮೊದಲನೇ ಸ್ಥಾನ

ನವದೆಹಲಿ: ಕರ್ನಾಟಕ, ಮಣಿಪುರ ಮತ್ತು ಚಂಡೀಗಡವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ನೀತಿ (NITI) ಆಯೋಗದ ಶ್ರೇಯಾಂಕದಲ್ಲಿ ಆರ್ಥಿಕ ಬೆಳವಣಿಗೆಯಲ್ಲಿ ನಾವೀನ್ಯತೆ, ವ್ಯಾಪಾರ ಮತ್ತು ಸ್ಪರ್ಧಾತ್ಮಕತೆಯನ್ನು ಉತ್ತೇಜಿಸುವುದು ಮತ್ತು ಇತರ ನಿಯತಾಂಕಗಳಲ್ಲಿ ಅಗ್ರಸ್ಥಾನ ಪಡೆದಿವೆ. ಪ್ರಮುಖ ರಾಜ್ಯಗಳ ವಿಭಾಗದಲ್ಲಿ ಭಾರತ ಆವಿಷ್ಕಾರ ಸೂಚ್ಯಂಕ 2021 ರಲ್ಲಿ ಕರ್ನಾಟಕ ಅಗ್ರಸ್ಥಾನದಲ್ಲಿದೆ, ಈಶಾನ್ಯ ಮತ್ತು ಗುಡ್ಡಗಾಡು ರಾಜ್ಯಗಳಲ್ಲಿ ಮಣಿಪುರ … Continued

ರಾಜ್ಯದಲ್ಲಿ ದೈನಂದಿನ ಕೊರೊನಾ ಪ್ರಕರಣ ಮತ್ತಷ್ಟು ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತಷ್ಟು ಏರಿಕೆ ಕಂಡಿದೆ. ರಾಜ್ಯದಲ್ಲಿ ಇಂದು ಬುಧವಾರ ಹೊಸದಾಗಿ 1,478 ಕೊರೊನಾ ಪ್ರಕರಣಗಳು ದಾಖಲಾಗಿವೆ. ಆದರೆ ಯಾವುದೇ ಸಾವು ಸಂಭವಿಸಿಲ್ಲ. ಇದೇವೇಳೆ ರಾಜ್ಯದಲ್ಲಿ 1,229 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ನಿನ್ನೆ ಮಂಗಳವಾರ ರಾಜ್ಯದಲ್ಲಿ 1,151 ಪ್ರಕರಣಗಳು ವರದಿಯಾಗಿತ್ತು. ಇಂದು 327 ಕೇಸ್ ಹೆಚ್ಚಳಗೊಂಡು 1,478ಕ್ಕೆ ಏರಿಕೆ … Continued

ತುಮಕೂರು: ಗಿಳಿ ಹುಡುಕಿಕೊಟ್ಟವರಿಗೆ 50,000 ರೂ. ಬಹುಮಾನ ಘೋಷಿಸಿದ ಕುಟುಂಬ..!

ತುಮಕೂರು: ರಾಜ್ಯದ ತುಮಕೂರಿನಲ್ಲಿ, ನಗರದಾದ್ಯಂತ ಕುತೂಹಲಕಾರಿ ಪೋಸ್ಟರ್‌ಗಳಲ್ಲಿ  ತಮ್ಮ ಪ್ರೀತಿಯ ಕುಟುಂಬದ ಸದಸ್ಯನಾಗಿದ್ದ  ನಾಪತ್ತೆಯಾದ ಸಾಕು ಗಿಳಿ ಪತ್ತೆಹಚ್ಚಲು ಸಹಾಯ ಮಾಡಿದವರಿಗೆ ₹ 50,000 ನಗದು ಬಹುಮಾನ ನೀಡುವುದಾಗಿ ಕುಟುಂಬವೊಂದು  ಹೇಳಿದೆ. ಈ ಕುಟುಂಬ ಕಳೆದ ಎರಡೂವರೆ ವರ್ಷಗಳಿಂದ ಗಿಳಿ ಕುಟುಂಬದ ಜೊತೆಗಿತ್ತು. ವರದಿಗಳ ಪ್ರಕಾರ, ಕುಟುಂಬವು ಪ್ರತಿ ವರ್ಷ ಜನ್ಮದಿನವನ್ನು ಗಿಳಿಯ ಆಚರಿಸುತ್ತಿತ್ತು. ಜುಲೈ … Continued

ಸಿ.ಎಂ. ಇಬ್ರಾಹಿಂ ರಾಜೀನಾಮೆಯಿಂದ ತೆರವಾದ ಪರಿಷತ್‌ ಸ್ಥಾನಕ್ಕೆ ಚುನಾವಣೆ ಘೋಷಣೆ

ಬೆಂಗಳೂರು: ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ತಮ್ಮ ವಿಧಾನ ಪರಿಷತ್​ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾದ ಆ ಸ್ಥಾನಕ್ಕೆ ಉಪ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 11 ರಂದು ಚುನಾವಣೆ ನಡೆಯಲಿದ್ದು, ಅಂದು ಬೆಳಿಗ್ಗೆ 9 ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದೆ. ಅಂದೇ ಸಾಯಂಕಾಲ … Continued

ಎಸಿಬಿ, ಎಡಿಜಿಪಿ ಕುರಿತು ಕರ್ನಾಟಕ ಹೈಕೋರ್ಟ್‌ ಅವಲೋಕನ, ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ

ನವದೆಹಲಿ: ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಚ್‌ ಪಿ ಸಂದೇಶ್‌ ಅವರು ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಮತ್ತು ಅದರ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ (ಎಡಿಜಿಪಿ) ಸೀಮಂತ್‌ ಕುಮಾರ್‌ ಸಿಂಗ್‌ ಅವರ ವಿರುದ್ಧ ಜುಲೈ 7ರ ಆದೇಶದಲ್ಲಿ ಮಾಡಿದ್ದ ಅವಲೋಕನಗಳಿಗೆ ಹಾಗೂ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಸೋಮವಾರ ತಡೆ ನೀಡಿದೆ. ಎಸಿಬಿ ಎಡಿಜಿಪಿ ಸೀಮಂತ್‌ ಕುಮಾರ್‌ ಸಿಂಗ್‌ … Continued

ರಾಜ್ಯದಲ್ಲಿ ಭಾನುವಾರ ಹೊಸದಾಗಿ 944 ಕೊರೊನಾ ಪ್ರಕರಣಗಳು ದಾಖಲು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಏರಿಳಿತ ಮುಂದುವರಿದಿದೆ. ಇಂದು, ಭಾನುವಾರ ಹೊಸದಾಗಿ 944 ಕೊರೊನಾ ಪ್ರಕರಣಗಳು ದಾಖಲಾಗಿವೆ ಹಾಗೂ ಒಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ. ಹಾಗೂ ಇದೇವೇಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 7,569ಕ್ಕೆ ತಲುಪಿದೆ. ರಾಜ್ಯದ 27 ಜಿಲ್ಲೆಗಳಲ್ಲಿ ಪ್ರಕರಣ ದಾಖಲಾಗಿದೆ. ಗದಗ, ಕೊಡಗು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ. … Continued

ರಾಜ್ಯದಲ್ಲಿ ಇಂದು ಹೊಸದಾಗಿ 1,374 ಕೊರೊನಾ ಪ್ರಕರಣಗಳು ದಾಖಲು, ಮೂವರ ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. ಇಂದು, ಶನಿವಾರ 1,374 ತಾಜಾ ಕೊರೊನಾ ಪ್ರಕರಣಗಳು ದಾಖಲಾಗಿದೆ. ಬೆಂಗಳೂರಿನಲ್ಲೇ 1,234 ಪ್ರಕರಣಗಳು ವರದಿಯಾಗಿವೆ. ಇದೇವೇಳೆ ರಾಜ್ಯದಲ್ಲಿ 777 ಮಂದಿ ಆಸ್ಪತ್ರೆಯಿಂದ ಡಿಸ್ಚಾಜ್ ಆಗಿದ್ದಾರೆ. ಹಾಗೂ ಮೂವರು ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 7,296ಕ್ಕೆ ತಲುಪಿದೆ. ಬೆಂಗಳೂರಿನ ಬಳಿಕ ರಾಜ್ಯದಲ್ಲಿ ಅತೀ ಹೆಚ್ಚು … Continued

ಸರ್ಕಾರಿ ಕಚೇರಿಗಳಲ್ಲಿ ಫೋಟೋ-ವೀಡಿಯೋ ಚಿತ್ರೀಕರಣ ನಿಷೇಧದ ಆದೇಶ ವಾಪಸ್…!

ಬೆಂಗಳೂರು: ರಾಜ್ಯದ ಎಲ್ಲ ಸರ್ಕಾರಿ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವೀಡಿಯೊ ತೆಗೆಯುವುದನ್ನು ನಿಷೇಧಿಸಿ ಆದೇಶ ಹೊರಡಿಸಿದ್ದ ರಾಜ್ಯ ಸರ್ಕಾರ ನಂತರ ತನ್ನ ಆದೇಶ ವಾಪಸ್ ಪಡೆದಿದೆ. ಸಾರ್ವಜನಿಕರಿಂದ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ರಾಜ್ಯ ಸರ್ಕಾರ ಜುಲೈ 15ರ ತಡರಾತ್ರಿ ಆದೇಶ ಹಿಂಪಡೆದಿದೆ. ಸರ್ಕಾರಿ ಕಚೇರಿಗಳಲ್ಲಿ ಕೆಲಸದ ಸಮಯದಲ್ಲಿ ಸಾರ್ವಜನಿಕರು … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಇನ್ನೂ ನಾಲ್ಕು ದಿನ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲೂ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಶುಕ್ರವಾರ ಕರಾವಳಿಯ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಶನಿವಾರದಿಂದ 4 ದಿನಗಳ ವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.ಕರಾವಳಿ ಸಮುದ್ರ ತೀರದಲ್ಲಿ ಜೋರಾಗಿ ಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದ್ದು, ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಿದೆ. … Continued