ವೃತ್ತಿಪರ ಕೋರ್ಸ್‌ಗಳ ಪ್ರವೇಶ: ಶೇ 10ರಷ್ಟು ಶುಲ್ಕ ಹೆಚ್ಚಳಕ್ಕೆ ಒಪ್ಪಿಗೆ

ಬೆಂಗಳೂರು: ಇಂಜಿನಿಯರಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶ ಶುಲ್ಕವನ್ನು ಈ ವರ್ಷ ಶೇಕಡಾ 10ರಷ್ಟು ಹೆಚ್ಚಿಸಲು ಉನ್ನತ ಶಿಕ್ಷಣ ಇಲಾಖೆ ಒಪ್ಪಿಗೆ ನೀಡಿದೆ. ಖಾಸಗಿ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಜೊತೆ ಇಂದು, ಬುಧವಾರ ಸಭೆ ನಡೆಸಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ … Continued

ಉಕ್ರೇನ್‌ನಲ್ಲಿ ಮೃತಪಟ್ಟಿದ್ದ ನವೀನ್ ಗ್ಯಾನ ಗೌಡರ್ ಕುಟುಂಬದವರನ್ನು ಭೇಟಿಯಾದ ಪ್ರಧಾನಿ ಮೋದಿ

ಬೆಂಗಳೂರು : ಕೊಮ್ಮಘಟ್ಟದಲ್ಲಿ ನಡೆದ ಸಮಾವೇಶದ ವೇದಿಕೆಯ ಹಿಂಭಾಗದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಉಕ್ರೇನ್ ನಲ್ಲಿ ಮೃತಪಟ್ಟ ಎಂಬಿಬಿಎಸ್ ವಿದ್ಯಾರ್ಥಿ ನವೀನ್ ಗ್ಯಾನ ಗೌಡರ್ ಕುಟುಂಬ ಸದಸ್ಯರನ್ನು ಭೇಟಿ ಮಾಡಿದರು. ನವೀನ್ ಅವರ ತಂದೆ ಶೇಖರ ಗೌಡ, ತಾಯಿ, ಸಹೋದರ ಅವರನ್ನು ಪ್ರಧಾನಿ ಭೇಟಿಯಾಗಿ ಮಾತುಕತೆ ನಡೆಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವೇಳೆ ಹಾಜರಿದ್ದರು. … Continued

ದ್ವಿತೀಯ ಪಿಯು ಫಲಿತಾಂಶ: ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮೊದಲ ಸ್ಥಾನ ಪಡೆದವರು

ಬೆಂಗಳೂರು: ಬೆಂಗಳೂರು: ಕರ್ನಾಟಕ ಪಿಯು ಬೋರ್ಡ್‌ 2021-2022ನೇ ಸಾಲಿನ ಇಂದು (ಜೂನ್ 18) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಅನೇಕ ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಬೆಂಗಳೂರು: ಕರ್ನಾಟಕ ಪಿಯು ಬೋರ್ಡ್‌ 2021-2022ನೇ ಸಾಲಿನ ಇಂದು (ಜೂನ್ 18) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ್ದು, ಶೇ.61.88ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಸೀಮ್ರಾನ್ ಶೇಷರಾವ್ … Continued

ನಾಳೆ ದ್ವಿತೀಯ ಪಿಯು ಫಲಿತಾಂಶ ಪ್ರಕಟ: ಸಚಿವ ನಾಗೇಶ

ಬೆಂಗಳೂರು: ದ್ವಿತೀಯ ಪಿಯು ಫಲಿತಾಂಶವನ್ನು ನಾಳೆ, ಶನಿವಾರ (ಜೂನ್ 18) ಬೆಳಿಗ್ಗೆ 11 ಗಂಟೆಗೆ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ ತಿಳಿಸಿದ್ದಾರೆ. ಈ ಕುರಿತು ಶಿಕ್ಷಣ ಸಚಿವರು ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್ 18) ಪ್ರಕಟಿಸಲಾಗುತ್ತದೆ.ವಿದ್ಯಾರ್ಥಿಗಳಿಗೆ ಶುಭಾಶಯಗಳು’ ಎಂದು ಬರೆದಿದ್ದಾರೆ. … Continued

ಸರ್ಕಾರಿ ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಎಸಿಬಿ ಶಾಕ್‌ : ರಾಜ್ಯದ 80 ಕಡೆ ಏಕಕಾಲದಲ್ಲಿ ದಾಳಿ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ರಾಜ್ಯ ಸರ್ಕಾರದ 21 ಅಧಿಕಾರಿಗಳ ಮೇಲೆ ಶುಕ್ರವಾರ ಬೆಳ್ಳಂಬೆಳಿಗ್ಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ಮಾಡಿದ್ದು, 80 ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ 21 ಜನರ ವಿರುದ್ಧ ಮೊಕದ್ದಮೆ ದಾಖಲಿಸಿದ್ದು, ಆರೋಪಿತರ ಮನೆ, ಕಚೇರಿಗಳು, ಅವರ ಸಂಬಂಧಿಕರು ಮತ್ತು ಆಪ್ತರ ಮನೆಗಳ … Continued

ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಹೆಚ್ಚಳ: 833 ಮಂದಿಗೆ ಹೊಸದಾಗಿ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಇಂದು, ಗುರುವಾರ ಇನ್ನಷ್ಟು ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 833 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇಂದು 458 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹಾಗೂ ಪಾಸಿಟಿವಿಟಿ ರೇಟ್ ಶೇ. 3.47ಕ್ಕೆ ಏರಿಕೆಯಾಗಿದೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 4,371ಕ್ಕೆ … Continued

ಪರಿಷತ್‌ ಚುನಾವಣೆ: ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‍ ಗೆಲುವು

ಮೈಸೂರು: ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ ಜಿಲ್ಲೆಗಳನ್ನೊಳಗೊಂಡ ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ. ಮಾದೇಗೌಡ ಗೆಲುವು ಸಾಧಿಸಿದರು. ಜೆಡಿಎಸ್ – ಬಿಜೆಪಿ ಕೋಟೆಯನ್ನು ಕಾಂಗ್ರೆಸ್ ಛಿದ್ರ ಮಾಡಿದ್ದು, ಬಿಜೆಪಿ ಅಭ್ಯರ್ಥಿ ಎರಡನೇ ಸ್ಥಾನ ಪಡೆದರೆ ಜೆಡಿಎಸ್ ಮೂರನೇ ಸ್ಥಾನವನ್ನು ಪಡೆದಿದೆ. ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಗೆಲುವಿಗೆ ನಿಗದಿಪಡಿಸಿದ್ದ ಕೋಟಾವನ್ನು … Continued

ರಾಜ್ಯದಲ್ಲಿ ಏರುತ್ತಿರುವ ಕೊರೊನಾ ಸೋಂಕು : ಗುರುವಾರ 648 ಪ್ರಕರಣ ದಾಖಲು

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪಾಸಿಟಿವ್ ಕೇಸ್‍ಗಳ ಸಂಖ್ಯೆ ಏರಿಕೆ ಕಾಣುತ್ತಿದೆ. ಇಂದು, ಗುರುವಾರ ರಾಜ್ಯದಲ್ಲಿ ಒಟ್ಟು 648 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಜೊತೆಗೆ ಒಂದು ಸಾವು ವರದಿಯಾಗಿದೆ. 532 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,997ಕ್ಕೆ ತಲುಪಿದೆ. ರಾಜ್ಯದ ಇಂದಿನ ಸಕಾರಾತ್ಮಕ ಶೇ. … Continued

ಪಶ್ಚಿಮ ಶಿಕ್ಷಕರ ಕ್ಷೇತ್ರ: ಸತತ 8ನೇ ಬಾರಿಗೆ ಜಯಗಳಿಸಿದ ಬಸವರಾಜ ಹೊರಟ್ಟಿ

ಬೆಳಗಾವಿ : ಸೋಲಿಲ್ಲದ ಸರದಾರ ಖ್ಯಾತಿಯ, ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಸತತ ಎಂಟನೇ ಬಾರಿಗೆ ಜಯಭೇರಿ ಬಾರಿಸಿದ್ದಾರೆ. ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದ ಚುನಾವಣೆ ಮತ ಎಣಿಕೆ ಮಂಗಳವಾರ (ಜೂನ್‌ 15) ನಡೆದಿದ್ದು ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿರುವ ಬಸವರಾಜ ಹೊರಟ್ಟಿ ಎಂಟನೇ ಬಾರಿಗೆ ಗೆದ್ದು ವಿಜಯಮಾಲೆ ಧರಿಸಿದ್ದಾರೆ. ಬಸವರಾಜ ಹೊರಟ್ಟಿಯವರು ಬಸವರಾಜ ಹೊರಟ್ಟಿ … Continued

ಧಾರವಾಡ: ಮುಂಬೈ ವ್ಯಕ್ತಿಗೆ ಕಿರುಕುಳ ನೀಡುತ್ತಿದ್ದ ಐವರು ಲೋನ್ ಆಪ್ ಏಜೆಂಟ್‌ಗಳನ್ನು ಬಂಧಿಸಿದ ಮಹಾರಾಷ್ಟ್ರ ಸೈಬರ್ ಸೆಲ್

ಮುಂಬೈ: ಸಾಲವನ್ನು ಮರುಪಾವತಿಸಲು ವಿಫಲವಾದರೆ ಅವರ ಮಾರ್ಫ್ ಮಾಡಿದ ಚಿತ್ರಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡುವುದಾಗಿ ಬೆದರಿಸಿ ಸಂತ್ರಸ್ತರಿಂದ ಹಣ ವಸೂಲಿ ಮಾಡುತ್ತಿದ್ದ ಐವರು ಸಾಲದ ಆ್ಯಪ್ ಆಪರೇಟರ್‌ಗಳು ಮತ್ತು ಏಜೆಂಟ್‌ಗಳ ಗ್ಯಾಂಗ್ ಅನ್ನು ಧಾರವಾಡದಲ್ಲಿ ಮಹಾರಾಷ್ಟ್ರ ಸೈಬರ್ ಸೆಲ್ ಸೋಮವಾರ ಬಂಧಿಸಿದೆ. ಆರೋಪಿಗಳೆಲ್ಲರೂ ಸುಶಿಕ್ಷಿತರು ಎಂದು ಹೇಳಿದರು. ಆರೋಪಿಗಳನ್ನು ಸುಹೇಲ್ ನಾಸಿರುದ್ದೀನ್ ಸಯ್ಯದ್ (24), … Continued