ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 8ರ ವರೆಗೆ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು : ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮುಂದಿನ ನಾಲ್ಕೈದು ದಿನ ಗಾಳಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲೂ ಮುಂದಿನ ಮೂರು ದಿನಗಳ ಅವಧಿಗೆ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಬಂಗಾಳ ಕೊಲ್ಲಿಯಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 1.5 ಮತ್ತು 3.1 ಕಿ.ಮೀ. ನಡುವೆ ಮೇಲ್ಮೈ ಸುಳಿಗಾಳಿ … Continued

ದೇಶಾದ್ಯಂತ 1,100ಕ್ಕೂ ಹೆಚ್ಚು ಹುಸಿ ಬಾಂಬ್ ಬೆದರಿಕೆ : ಮೈಸೂರಿನಲ್ಲಿ ಆರೋಪಿಯ ಬಂಧನ

ನವದೆಹಲಿ: ದೇಶಾದ್ಯಂತ ಶಾಲೆಗಳು, ಆಸ್ಪತ್ರೆಗಳು, ಹೈಕೋರ್ಟ್‌ಗಳು ಮತ್ತು ಸರ್ಕಾರಿ ಕಚೇರಿಗಳಿಗೆ 1,100 ಕ್ಕೂ ಹೆಚ್ಚು ನಕಲಿ ಬಾಂಬ್ ಬೆದರಿಕೆ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ಕರ್ನಾಟಕದ ಮೈಸೂರಿನಲ್ಲಿ ವ್ಯಕ್ತಿಯೊಬ್ಬನನ್ನು ದೆಹಲಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಬಂಧಿತ ಆರೋಪಿಯನ್ನು ಶ್ರೀನಿವಾಸ ಲೂಯಿಸ್ (47) ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಶ್ರೀನಿವಾಸ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ 4 ದಿನ ಗುಡುಗು ಸಹಿತ ಮಳೆ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್‌ 2ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗಾಳಿಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. 14 ಜಿಲ್ಲೆಗಳಲ್ಲಿ ಮಳೆಯಾಗಬಹುದು ಎಂದು ಹೇಳಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಸ್ಥಳೀಯವಾಗಿ ಉಂಟಾಗಿರುವ ಪಶ್ಚಿಮ ಗಾಳಿಯ ಪ್ರಭಾವದಿಂದಾಗಿ ಈ ಮಳೆ ಸುರಿಯುತ್ತಿದೆ ಎಂದು ಹೇಳಲಾಗಿದೆ. … Continued

ವೀಡಿಯೊ | ಸಕಲೇಶಪುರ : ಚಪ್ಪಲಿ ಧರಿಸಿ ದೇವಸ್ಥಾನದಲ್ಲಿ ಪ್ರಿ-ವೆಡ್ಡಿಂಗ್ ಶೂಟಿಂಗ್ ಮಾಡಿದ ಆರೋಪ ; ಹೊಡೆದಾಟ

ಹಾಸನ : ಸಕಲೇಶಪುರ ತಾಲ್ಲೂಕಿನ ಪ್ರಸಿದ್ಧ ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ನಡೆದ ಪ್ರಿ-ವೆಡ್ಡಿಂಗ್ ಫೋಟೋಶೂಟ್ ವೇಳೆ ಸ್ಥಳೀಯರು ಮತ್ತು ಫೋಟೋಗ್ರಾಫರ್‌ಗಳ ನಡುವೆ ಜಗಳ ಉಂಟಾಗಿದ್ದು, ಅದು ಮಾರಾಮಾರಿಗೆ ಕಾರಣವಾಗಿದೆ. ಘಟನೆಗೆ ಸಂಬಂಧಿಸಿದಂತೆ ಏಳು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಸಕಲೇಶಪುರ ತಾಲ್ಲೂಕಿನ ಬೆಟ್ಟದ ಸಾಲಿನಲ್ಲಿರುವ ಈ ದೇವಸ್ಥಾನವು ಪ್ರಿ-ವೆಡ್ಡಿಂಗ್ ಫೋಟೋಶೂಟ್‌ಗಳಿಗೆ ಅತ್ಯಂತ ಜನಪ್ರಿಯ ತಾಣವಾಗಿದೆ. ವರದಿಯ ಪ್ರಕಾರ, … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ನಾಲ್ಕೈದು ದಿನ ಮಳೆ ಬೀಳುವ ಸಾಧ್ಯತೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್‌ 2ರ ವರೆಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣವಿದೆ ಎಂದು ಅದು ಹೇಳಿದೆ.. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಮೈಸೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಮಂಡ್ಯ, ಬೆಂಗಳೂರು ಜಿಲ್ಲೆಗಳ ಕೆಲವಡೆ … Continued

ಎಸ್‌ಎಸ್‌ಎಲ್‌ಸಿ ; ಮಹತ್ವದ ಬದಲಾವಣೆ : ಹಿಂದಿ ಸೇರಿ ತೃತೀಯ ಭಾಷೆಗೆ ಗ್ರೇಡ್‌ ನೀಡಲು ನಿರ್ಧಾರ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ (SSLC Exam) ಸಂಬಂಧಿಸಿ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ಮಾಡಲು ಮುಂದಾಗಿದೆ. ಈ ವರ್ಷದಿಂದ ಮೂರನೇ ಭಾಷೆಯ (ಹಿಂದಿ) ವಿಷಯಗಳಿಗೆ ಅಂಕಗಳನ್ನು ಕೈಬಿಟ್ಟು ಗ್ರೇಡ್‌ ನೀಡಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿದೆ. 625 ಅಂಕಗಳ ಬದಲು 525 ಅಂಕಗಳು ಮಾತ್ರ ಇರಲಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ … Continued

1ನೇ ತರಗತಿ ದಾಖಲಾತಿ ; 6 ವರ್ಷ ಕಡ್ಡಾಯ ವಯೋಮಿತಿಗೆ ವಿನಾಯಿತಿ

ಬೆಂಗಳೂರು : ರಾಜ್ಯದಲ್ಲಿ ಮಕ್ಕಳನ್ನು ಶಾಲೆಗೆ ಸೇರಿಸಲು ಅಗತ್ಯವಾಗಿರುವ ವಯಸ್ಸಿನ ಬಗ್ಗೆ ಮೂಡಿರುವ ಗೊಂದಲಕ್ಕೆ ಸರ್ಕಾರ ಸದ್ಯಕ್ಕೆ ನಿವಾರಿಸಿದೆ. 1ನೇ ತರಗತಿ ಪ್ರವೇಶಕ್ಕೆ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂಬ ನಿಯಮದಲ್ಲಿ ಈ ವರ್ಷವೂ ಸಡಿಲಿಕೆ ಮಾಡುವುದಾಗಿ ಅಧಿವೇಶನದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಜೂನ್ 1ಕ್ಕೆ ಮಗುವಿಗೆ 6 ವರ್ಷ ತುಂಬಿರಬೇಕು ಎಂಬ … Continued

ಕರ್ನಾಟಕ ಸಾಹಿತ್ಯ ಅಕಾಡೆಮಿಯ 2025ನೇ ಸಾಲಿನ ವಿವಿಧ ವಾರ್ಷಿಕ ಪ್ರಶಸ್ತಿಗಳು ಪ್ರಕಟ

ಬೆಂಗಳೂರು : 2025ನೇ ಸಾಲಿನ ಕರ್ನಾಟಕ ಸಾಹಿತ್ಯ ಅಕಾಡೆಮಿ ವಾರ್ಷಿಕ ಪ್ರಶಸ್ತಿಗಳ ಪಟ್ಟಿ ಪ್ರಕಟಿಸಲಾಗಿದೆ. 2025ನೇ ಸಾಲಿನ “ಕರ್ನಾಟಕ ಸಾಹಿತ್ಯ ಅಕಾಡೆಮಿ ವರ್ಷದ ಗೌರವ ಪ್ರಶಸ್ತಿಗೆ ಪ್ರೊ.ಶಿವರಾಮಯ್ಯ, ಚಂದ್ರಶೇಖರ ತಾಳ್ಯ, ಡಾ.ವಸುಂಧರಾ ಭೂಪತಿ, ಡಾ.ಚಂದ್ರಶೇಖರ ಪೋಕಳೆ ಹಾಗೂ ಡಾ. ಎಸ್. ತುಕಾರಾಂ ಅವರು ಭಾಜನರಾಗಿದ್ದಾರೆ. ಗೌರವ ಪ್ರಶಸ್ತಿಯು ತಲಾ 50 ಸಾವಿರ ಬಹುಮಾನವನ್ನು ಒಳಗೊಂಡಿದೆ. 2025ನೇ … Continued

ಮಾರ್ಚ್‌ 28ರ ವರೆಗೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ  ಉಷ್ಣತೆಯಿದ್ದರೂ, ಕೆಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದೆ. ರಾಜ್ಯದಲ್ಲಿ ಮಾರ್ಚ್ 23ರಿಂದ 28ರವರೆಗೆ ಸುಮಾರು ಹತ್ತಕ್ಕೂ ಅಧಿಕ ಜಿಲ್ಲೆಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿ ಮುಂದಿನವಾರವೂ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ. ಮಾರ್ಚ್‌ 24ರಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ … Continued

ಉಪಚುನಾವಣೆ : ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳು ಘೋಷಣೆ

ಬೆಂಗಳೂರು : ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಗಳಿಗೆ ಕಾಂಗ್ರೆಸ್​​ ಕೊನೆಗೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಬಾಗಲಕೋಟೆ ಕ್ಷೇತ್ರದಿಂದ ಉಮೇಶ ಮೇಟಿ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಶಾಮನೂರು ಕುಟುಂಬದ ಸಮರ್ಥ ಶಾಮನೂರು ಅವರಿಗೆ ಟಿಕೆಟ್‌ ನೀಡಲಾಗಿದೆ. ​​ ಈ ಎರಡೂ ಕ್ಷೇತ್ರಗಳಲ್ಲಿ ಟಿಕೆಟ್​​ಗಾಗಿ ತೀವ್ರ ಪೈಪೋಟಿ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನಾಯಕರು ಸಭೆಗಳನ್ನು … Continued