ಕರ್ನಾಟಕದಲ್ಲಿ ಹೊಸದಾಗಿ 8,906 ಜನರಿಗೆ ಸೋಂಕು, ಬೆಂಗಳೂರಿನಲ್ಲೇ ಬಹುತೇಕ ಪ್ರಕರಣ ದಾಖಲು

ಬೆಂಗಳೂರು: ಕರ್ನಾಟಕದಲ್ಲಿ ಇಂದು, ಶನಿವಾರ ಹೊಸದಾಗಿ 8,906 ಕೊರೊನಾ ಸೋಂಕುಗಳು ದಾಖಲಾಗಿದ್ದು, 508 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದೇ ಸಮಯದಲ್ಲಿ ಸೋಂಕಿನಿಂದ ನಾಲ್ವರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು ಸೋಂಕಿತರಿಗೆ ಸಂಖ್ಯೆ 30,39,958ಕ್ಕೆ ಏರಿದೆ. ರಾಜ್ಯದಲ್ಲಿ ಒಟ್ಟು 29,63,056 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.5.42ಕ್ಕೆ ಏರಿಕೆಯಾಗಿದೆ. ಮರಣ ಪ್ರಮಾಣ ಶೇ.0.04 ಇದೆ. … Continued

ಕರ್ನಾಟಕದಲ್ಲಿ ಶುಕ್ರವಾರ 8,449 ಕೊರೊನಾ ಸೋಂಕು ದಾಖಲು…ಬೆಂಗಳೂರಿನಲ್ಲಿ ಆರೂವರೆ ಸಾವಿರಕ್ಕೂ ಹೆಚ್ಚು ಪ್ರಕರಣ

ಬೆಂಗಳೂರು: ಬೆಂಗಳೂರಿನಲ್ಲಿ ಒಂದೇ ದಿನದಲ್ಲಿ ಆರು ಸಾವಿರಕ್ಕೂ ಹೆಚ್ಚು ಕೊರೊನಾ ಸೋಂಕು ದಾಖಲಾಗಿದ್ದು, ಕರ್ನಾಟಕದಲ್ಲಿ ಕೊರೊನಾ ಏರುತ್ತಲೇ ಸಾಗಿದ್ದು, ಶುಕ್ರವಾರ (ಜ.7) ಒಂದೇ ದಿನ 8449 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಇದೇ ಸಮಯದಲ್ಲಿ ಸೋಂಕಿನಿಂದ ನಾಲ್ವರು ಸಾವನ್ನಪ್ಪಿದ್ದಾರೆ. 505 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಬಿಡುಗಡೆಯಾಗಿದ್ದಾರೆ. ​ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 4.15 ಇದ್ದು, … Continued

ಕರ್ನಾಟಕದಲ್ಲಿ 5000 ದಾಟಿದ ದೈನಂದಿನ ಕೊರೊನಾ ಸೋಂಕು, ಪಾಸಿಟಿವಿಟಿ ದರದಲ್ಲಿಯೂ ಹೆಚ್ಚಳ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಗುರುವಾರವೂ ಹೆಚ್ಚಳವಾಗಿದೆ. ರಾಜ್ಯದಲ್ಲಿ ಗುರುವಾರ ಒಂದೇ ದಿನ 5031 ಜನರಲ್ಲಿ ಸೋಂಕು ದೃಢಪಟ್ಟಿದೆ. ಬೆಂಗಳೂರಿನಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಬೆಂಗಳೂರು ನಗರದಲ್ಲಿ 4324 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.. ರಾಜ್ಯದಲ್ಲಿ ಗುರುವಾರ 271 ಮದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಈವರೆಗೆ ಒಟ್ಟು 30,22,603 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 29,62,043 ಮಂದಿ … Continued

ಕರ್ನಾಟಕದಲ್ಲಿ 4,246 ಮಂದಿಗೆ ಸೋಂಕು..ಬೆಂಗಳೂರಲ್ಲೇ 85% ಪ್ರಕರಣ- 6%ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ..!

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿನ ಏರಿಕೆ ಮುಂದುವರಿದ್ದು, ಇಂದು ಬುಧವಾರ ಒಟ್ಟು 4,246 ಮಂದಿಗೆ ಸೋಂಕು ದಾಖಲಾಗಿದೆ. ಇಂದು ರಾಜ್ಯದಲ್ಲಿ 362 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಒಟ್ಟು ರಾಜ್ಯದಲ್ಲಿ 29,61,772 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿನಿಂದ ಇಂದು ಇಬ್ಬರು ಮೃತಪಟ್ಟಿದ್ದು, ರಾಜ್ಯದಲ್ಲಿ ಇಲ್ಲಿವರೆಗೂ ಸೋಂಕಿನಿಂದ 38,357 ಜನರು ಮೃತಪಟ್ಟಿದ್ದಾರೆ. ರಾಜ್ಯದ ಒಟ್ಟು ಏರಿಕೆಯಲ್ಲಿ … Continued

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ವಿಮಾನ ಚಾಲನಾ ತರಬೇತಿ ಕೇಂದ್ರ ಆರಂಭಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ: ಸಚಿವ ಜೋಶಿ

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ ವಿಮಾನ ಚಾಲನಾ ತರಬೇತಿ ಕೇಂದ್ರ ಆರಂಭಿಸಲು ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂದಿಯಾ ಮುಂದಾಗಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರ ಹಾಗೂ ಕಲ್ಲಿದ್ದಲು ಖಾತೆ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ವಿಮಾನ ಚಾಲನಾ ತರಬೇತಿ ಕೇಂದ್ರ ಸ್ಥಾಪನೆಯಿಂದ ರಾಜ್ಯದ … Continued

ಕರ್ನಾಟಕದಲ್ಲಿ ಮಂಗಳವಾರ ಕೊರೊನಾ ಪ್ರಕರಣಗಳಲ್ಲಿ ದಿಢೀರ್‌ ಏರಿಕೆ… ಬೆಂಗಳೂರಲ್ಲೇ 2,053 ಸೋಂಕು ದಾಖಲು..!

ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ಸೋಂಕು ಏಉತ್ತಲೇ ಸಾಗಿದ್ದು, ಮಂಗಳವಾರ ದೈನಂದಿನ ಸೋಂಕು ಎರಡೂವರೆ ಸಾವಿರ ಸಮೀಪ ಬಂದು ನಿಂತಿದೆ. ಮಂಗಳವಾರ ರಾಜ್ಯದಲ್ಲಿ ಒಟ್ಟು 2,479 ಪ್ರಕರಣಗಳು ದೃಢಪಟ್ಟಿವೆ ಇದರಲ್ಲಿ ಬೆಂಗಳೂರಿನಲ್ಲೇ ಅತೀ ಹೆಚ್ಚು 2053 ಕೋವಿಡ್ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ 2.59% ಕ್ಕೆ ಏರಿಕೆಯಾಗಿದೆ. ಆದರೆ ಇಂದು ಯಾವುದೇ … Continued

ಕೊರೊನಾ ಹೆಚ್ಚಳ: ಬೆಂಗಳೂರಿನಲ್ಲಿ 1,041 ಸೇರಿ ರಾಜ್ಯದಲ್ಲಿ 1,290 ಹೊಸದಾಗಿ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,290 ಹೊಸ ಪ್ರಕರಣ ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 30,10, 847ಕ್ಕೆ ಏರಿಕೆಯಾಗಿದೆ. 232 ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಒಟ್ಟು ಗುಣಮುಖರಾದವರ ಸಂಖ್ಯೆ 29,61,122ಕ್ಕೆ ಏರಿದೆ. ರಾಜ್ಯದಲ್ಲಿ ಸದ್ಯ 11,345 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಸೋಂಕಿನಿಂದ … Continued

ಕರ್ನಾಟಕದಲ್ಲಿ ಭಾನುವಾರವೂ ಕೊರೊನಾ ಹೆಚ್ಚಳ..1187 ಜನರಿಗೆ ಹೊಸದಾಗಿ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು, ಭಾನುವಾರ ಕೂಡ ಕೊರೊನಾ ದೈನಂದಿನ ಸೋಂಕಿನಲ್ಲಿ ಹೆಚ್ಚಳವಾಗಿದ್ದು ಒಂದೇ ದಿನ 1187 ಜನರಿಗೆ ಹೊಸದಾಗಿ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 30,09,557 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇದೇವೇಳೆ 6 ಜನ ಸೋಂಕಿತರು ಮೃತಪಟ್ಟಿದ್ದು, ಮೃತಪಟ್ಟವರ ಸಂಖ್ಯೆ 38,346ಕ್ಕೆ ಏರಿದೆ. 275 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇದುವರೆಗೆ ಒಟ್ಟು … Continued

ಸರ್ಕಾರಿ ಶಾಲೆಗಳಿಗೆ ಇಲ್ಲದ ಕಟ್ಟಡ ಸುರಕ್ಷತೆ ನಿಯಮ ಖಾಸಗಿ ಶಾಲೆಗಳಿಗೇಕೆ?: ಜಿ.ಆರ್‌.ಭಟ್‌ ಪ್ರಶ್ನೆ

ಹುಬ್ಬಳ್ಳಿ: ೩೧ ಖಾಸಗಿ ಶಾಲೆಗಳ ಮಾನ್ಯತೆ ನವೀಕರಣಕ್ಕೆ ಶಾಲಾ ಕಟ್ಟಡಗಳಿಗೆ ಅಗ್ನಿ ಸುರಕ್ಷತಾ ಕ್ರಮಗಳನ್ನು ಅಳವಡಿಸಿ ಪ್ರಮಾಣಪತ್ರ ಪಡೆಯುವ ನಿಯಮ ಕೇವಲ ಖಾಸಗಿ ಶಾಲೆಗಳಿಗೆ ಅಳವಡಿಸಿ ಸರಕಾರಿ ಶಾಲೆಗಳಿಗೆ ವಿನಾಯಿತಿ ನೀಡಿದ್ದು ಸರಿಯಲ್ಲ ಎಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘದ ರಾಜ್ಯ ಘಟಕದ ಪ್ರದಾನ ಕಾರ್ಯದರ್ಶಿ ಜಿ.ಆರ್.ಭಟ್ ಸರಕಾರದ ಕ್ರಮ ಖಂಡಿಸಿದ್ದಾರೆ. ಈ … Continued

ಕರ್ನಾಟಕದಲ್ಲಿ ಕೊರೊನಾ ಸೋಂಕು ಮತ್ತೆ ಏರಿಕೆ: ಒಂದೇ ದಿನ 832 ಮಂದಿಗೆ ಹೊಸದಾಗಿ ಸೋಂಕು ದೃಢ

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಾಜ್ಯದಲ್ಲಿ ಶುಕ್ರವಾರ ಒಂದೇ ದಿನ 832 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಎಂಟು ಮಂದಿ ಮೃತಪಟ್ಟಿದ್ದಾರೆ. ಇದೇ ವೇಳೆ 335 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಕರ್ನಾಟಕದಲ್ಲಿ ಕೊವಿಡ್ ಪಾಸಿಟಿವಿಟಿ ಪ್ರಮಾಣ ಶೇ 0.70 ಹಾಗೂ ಸೋಂಕಿನಿಂದ ಸಾವಿನ ಸರಾಸರಿ ಶೇ 0.96 ಇದೆ. ರಾಜ್ಯದಲ್ಲಿ ಈವರೆಗೆ … Continued