ಕರ್ನಾಟಕದಲ್ಲಿ ಕೊರೊನಾ ಏರಿಕೆ: ಬೆಂಗಳೂರಲ್ಲಿ 565 ಸೇರಿ ಹೊಸದಾಗಿ ರಾಜ್ಯದಲ್ಲಿ 707 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಸತತ ಎರಡನೇ ದಿನವೂ ಏರಿಕೆ ಮುಂದುವರೆದಿದ್ದು, ಕಳೆದ 24 ಗಂಟೆಯಲ್ಲಿ 707 ಹೊಸ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 30,065,05ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಮಹಾಮಾರಿ ಕೊರೊನಾದಿಂದ ಇಂದು, ಗುರುವಾರ ಮೂವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 38,327ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ … Continued

ಕರ್ನಾಟಕದಲ್ಲಿ ಇಂದು 566 ಹೊಸ ಕೋವಿಡ್ ಪ್ರಕರಣಗಳು ದಾಖಲು: ಬೆಂಗಳೂರಿನಲ್ಲೇ 400 ಹೊಸ ಸೋಂಕು

ಬೆಂಗಳೂರು : ರಾಜ್ಯದಲ್ಲಿ ಬುಧವಾರ 566 ಹೊಸ ಕೋವಿಡ್-19 ಪ್ರಕರಣಗಳು ಮತ್ತು ಆರು ಸಾವುಗಳು ವರದಿಯಾಗಿವೆ, ಒಟ್ಟು ಸೋಂಕಿತರ ಸಂಖ್ಯೆ 30,05,798 ಕ್ಕೆ, ಸಾವಿನ ಸಂಖ್ಯೆ 38,324 ಕ್ಕೆ ತಲುಪಿದೆ. ಈಗ ಮತ್ತೆ ಪ್ರಕರಣಗಳು ಐದುನೂರರ ಗಡಿ ದಾಟಿದೆ. ಈ ದಿನ 245 ಮಂದಿ ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದು, , ಇದುವರೆಗೆ ರಾಜ್ಯದಲ್ಲಿ ಒಟ್ಟು ಚೇತರಿಸಿಕೊಂಡವರ … Continued

ಕರ್ನಾಟಕದಲ್ಲಿ ಜನವರಿ 3 ರಿಂದ 15ರಿಂದ18 ವರ್ಷದ ಮಕ್ಕಳಿಗೆ ಲಸಿಕೆ ನೀಡಿಕೆ ಪ್ರಕ್ರಿಯೆ ಆರಂಭ

ಬೆಂಗಳೂರು: ಮೊದಲನೇ ಹಂತದಲ್ಲಿ 15ರಿಂದ18 ವರ್ಷದ ಮಕ್ಕಳಿಗೆ ಲಸಿಕೆ ನೀಡಿಕೆ ಪ್ರಕ್ರಿಯೆ ಆರಂಭಿಸಲಿದ್ದು, ಜನವರಿ 3 ರಿಂದ ಮೊದಲ ಹಂತದಲ್ಲಿ ಮಕ್ಕಳಿಗೆ ಲಸಿಕೆ ನೀಡಲು ಚಾಲನೆ ನೀಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್​ ತಿಳಿಸಿದ್ದಾರೆ. ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ 15-18 ವರ್ಷದ 45 ಲಕ್ಷ ಜನ ಮಕ್ಕಳಿದ್ದಾರೆ. ಅವರಿಗೆಲ್ಲ … Continued

ಪ್ರತಿಪಕ್ಷಗಳ ವಿರೋಧದ ನಡುವೆ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ…

ಸುವರ್ಣಸೌಧ(ಬೆಳಗಾವಿ): ಬಹುನಿರೀಕ್ಷಿತ ಮತಾಂತರ ನಿಷೇಧ ವಿಧೇಯಕ ಇಂದು, ಮಂಗಳವಾರ ವಿಧಾನಸಭೆಯಲ್ಲಿ ಮಂಡನೆ ಮಾಡಲಾಯಿತು. ಭೋಜನ ವಿರಾಮದ ನಂತರ ಸದನ ಆರಂಭವಾಗುತ್ತಿದ್ದಂತೆ ವಿಪಕ್ಷಗಳ ವಿರೋಧದ ನಡುವೆ ವಿಧಾನಸಭೆಯಲ್ಲಿ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ-2021 ಅನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ವಿಧೇಯಕವನ್ನು ಮಂಡಿಸಿದರು ಸದಸ್ಯರು ಧ್ವನಿ ಮತಗಳ ಮೂಲಕ ಮಸೂದೆಗೆ ಬೆಂಬಲ ಸೂಚಿಸಲಾಯಿತು. ವಿಧೇಯಕ … Continued

ಕ್ರೀಡಾ ಚಟುವಟಿಕೆ ನಡೆಸದೆ ಕ್ರೀಡಾ ನಿಧಿ ಶುಲ್ಕ ಸಂಗ್ರಹಕ್ಕೆ ಮುಂದಾದ ಸಾರ್ವಜನಿಕ ಶಿಕ್ಷಣ ಇಲಾಖೆ : ಚರ್ಚೆಗೆ ಗ್ರಾಸ

ಬೆಂಗಳೂರು: ಕ್ರೀಡಾ ಚಟುವಟಿಕೆ ನಡೆಸದೆ ಕ್ರೀಡಾ ನಿಧಿ ಶುಲ್ಕ ಸಂಗ್ರಹ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದೆ. 2021-22ನೇ ಸಾಲಿನ ವಿದ್ಯಾರ್ಥಿ ಕ್ರೀಡಾ ನಿಧಿ ಶುಲ್ಕ ವಸೂಲಿ ಮಾಡಿ, ಕ್ರೀಡಾ ನಿಧಿ ಖಾತೆಗೆ ಜಮಾ ಮಾಡುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶಿಸಿದೆ. ಕೊರೊನಾ ಹಿನ್ನೆಲೆ ಶಿಕ್ಷಣ ಸಂಸ್ಥೆಗಳಲ್ಲಿ ಕ್ರೀಡಾ ಚಟುವಟಿಕೆಗಳೇ ನಡೆದಿಲ್ಲ. ಆದರೂ ಕ್ರೀಡಾ ನಿಧಿ ಶುಲ್ಕ … Continued

ನಾಳೆ ವಿಧಾನ ಪರಿಷತ್ತಿನ ೨೫ ಸ್ಥಾನಗಳಿಗೆ ಚುನಾವಣೆ: 90 ಅಭ್ಯರ್ಥಿಗಳ ಹಣೆಬರಹ ನಿರ್ಧಾರ

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ ೨೫ ಸ್ಥಾನಗಳಿಗೆ ನಾಳೆ, ಶುಕ್ರವಾರ ನಡೆಯುವ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಕೊನೆ ಕ್ಷಣದ ಕಸರತ್ತು ನಡೆಸಿವೆ. ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ನ ೨೦ ಕ್ಷೇತ್ರಗಳ ೨೫ ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್‌ನಿಂದ ಸ್ಪರ್ಧಿಸಿರುವ ೯೦ ಅಭ್ಯರ್ಥಿಗಳ ರಾಜಕೀಯ ಭವಿಷ್ಯಕ್ಕೆ … Continued

ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಉನ್ನತ ಮಟ್ಟದ ಸಭೆ: ಹೊಸ ಮಾರ್ಗಸೂಚಿ ಪ್ರಕಟ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ರೂಪಾಂತರಿ ಓಮಿಕ್ರಾನ್ ತಳಿ ವೈರಸ್ ಪ್ರಕರಣಗಳು ಕಾಣಿಸಿಕೊಂಡ ನಂತರ ಎಚ್ಚೆತ್ತುಕೊಂಡ ಸರ್ಕಾರ ಕ್ರಮಕ್ಕೆ ಮುಂದಾಗಿದ್ದು, ತಜ್ಞರ ಜೊತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು, ಬುಧವಾರ ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ. ಸಭೆಯ ಬಳಿಕ ಹೊಸ ಮಾರ್ಗಸೂಚಿ ಬಿಡುಗಡೆಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಸಭೆಯಲ್ಲಿ ಆರೋಗ್ಯ ಸಚಿವ … Continued

ಒಂದೇ ಶಾಲೆ 63 ವಿದ್ಯಾರ್ಥಿಗಳು ಸೇರಿ ಕರ್ನಾಟಕದ 456 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು: ಚಿಕ್ಕಮಗಳೂರು ಜಿಲ್ಲೆ ನವೋದಯ ಶಾಲೆಯ 63 ವಿದ್ಯಾರ್ಥಿಗಳು ಸೇರಿದಂತೆ ಕರ್ನಾಟಕದ 456 ಮಂದಿಯಲ್ಲಿ ಭಾನುವಾರ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿನಿಂದ ಆರು ಜನ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 7132 ಸಕ್ರಿಯ ಪ್ರಕರಣಗಳಿದ್ದಾರೆ. ಒಟ್ಟು 330 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಈವರೆಗೆ 29,98,099 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 29,52,708 ಜನರು ಚೇತರಿಸಿಕೊಂಡಿದ್ದಾರೆ. ಈವರೆಗೆ 38,230 … Continued

ಓಮಿಕ್ರಾನ್‌ ಪೀಡಿತ ದಕ್ಷಿಣ ಆಫ್ರಿಕಾದಿಂದ ಆಗಮಿಸಿದ ನಂತರ ನಾಪತ್ತೆಯಾಗಿದ್ದ 10 ಪ್ರಯಾಣಿಕರಲ್ಲಿ 9 ಮಂದಿ ಪತ್ತೆ

ಬೆಂಗಳೂರು: ಓಮಿಕ್ರಾನ್‌ ಪೀಡಿತ ದೇಶ ದಕ್ಷಿಣ ಆಫ್ರಿಕಾದಿಂದ ಕರ್ನಾಟಕಕ್ಕೆ ಆಗಮಿಸಿದ ನಂತರ ನಾಪತ್ತೆಯಾಗಿದ್ದ 10 ಪ್ರಯಾಣಿಕರ ಪೈಕಿ ಇಂದು 9 ಮಂದಿ ಪತ್ತೆಯಾಗಿದ್ದಾರೆ ಎಂದು ತಿಳಿಸಲಾಗಿದೆ. ದಕ್ಷಿಣ ಆಫ್ರಿಕಾದಿಂದ ಬಂದಿದ್ದ 66 ವರ್ಷ ವಯಸ್ಸಿನ ವ್ಯಕ್ತಿಗೆ ಓಮಿಕ್ರಾನ್‌ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಅದೇ ವಿಮಾನದಲ್ಲಿ 57 ಪ್ರಯಾಣಿಕರು ಬೆಂಗಳೂರಿಗೆ ಆಗಮಿಸಿದ್ದರು. ಅವರಲ್ಲಿ ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗಿತ್ತು. … Continued

ಹೊಸ ಕೋವಿಡ್‌ ರೂಪಾಂತರಿ ಓಮಿಕ್ರಾನ್‌ ಭೀತಿ: ಮತ್ತೆ ಲಸಿಕೆ ಕೇಂದ್ರಗಳತ್ತ ಮುಖ ಮಾಡಿದ ಜನ..!

ಬೆಂಗಳೂರು: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾದ ಈಗ ಜಗತ್ತಿನ ೧೫ ದೇಶಗಳಿಗೆ ಹಬ್ಬಿದ ಕೋವಿಡ್‌ ಹೊಸ ರೂಪಾಂತರ ಓಮಿಕ್ರಾನ್ ಜಾಗತಿಕವಾಗಿ ಆತಂಕ ಸೃಷ್ಟಿಸಿರುವ ಬೆನ್ನಲ್ಲೇ ಜನ ಲಸಿಕೆ ಪಡೆಯಲು ಸಾಲುಗಟ್ಟಿ ನಿಲ್ಲುತ್ತಿದ್ದಾರೆ. ದೇಶದಲ್ಲಿ ಕೊರೊನಾ ಎರಡನೇ ಅಲೆ ಸಂಪೂರ್ಣ ನಿಯಂತ್ರಣಕ್ಕೆ ಬಂದಿದ್ದು, ಇನ್ನು ಕೊರೊನಾ ಕಾಲ ಮುಗಿದೇ ಹೋಯಿತು ಎಂದು ಅಂದುಕೊಂಡವರಿಗೆ ಇದೀಗ ಕೊರೊನಾ ಹೊಸ ರೂಪಾಂತರ … Continued