ಹೊರಬಿತ್ತು ಮತ್ತೊಂದು ಸಮೀಕ್ಷೆ : ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಹೆಚ್ಚಿನ ಸ್ಥಾನ-ಎಬಿಪಿ ನ್ಯೂಸ್-ಸಿ ವೋಟರ್ ಸಮೀಕ್ಷೆ ಭವಿಷ್ಯ

ನವದೆಹಲಿ :  ಲೋಕಸಭಾ ಚುನಾವಣೆಗಳು ಹತ್ತಿರವಾಗುತ್ತಿದ್ದು, ಯಾವುದೇ ಸಮಯದಲ್ಲಿಯೂ ಚುನಾವಣೆ ಘೋಷಣೆಯಾಗಬಹುದಾಗಿದೆ. ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿವೆ. ಲೋಕಸಭೆ ಚುನಾವಣೆಗೂ ಮುನ್ನ ಎಬಿಪಿ ನ್ಯೂಸ್-ಸಿ ವೋಟರ್ಸ್ ಚುನಾವಣಾ ಪೂರ್ವ ಒಪಿನಿಯನ್‌ ಪೋಲ್‌ ನಡೆಸಿದ್ದು, ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಜಯ ಸಾಧಿಸಲಿದೆ ಎಂಬುದು ಸಮೀಕ್ಷೆಯಲ್ಲಿ ಕಂಡುಬಂದಿದೆ. ಎಬಿಪಿ ನ್ಯೂಸ್-ಸಿವೋಟರ್ ಒಪಿನಿಯನ್ … Continued

ಲೋಕಸಭಾ ಚುನಾವಣೆ : ಬಿಜೆಪಿಯ 2ನೇ ಪಟ್ಟಿ ಪ್ರಕಟ ; 20 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಪ್ರಕಟ, ಹಲವು ಹಾಲಿ ಸಂಸದರಿಗೆ ಕೈತಪ್ಪಿದ ಟಿಕೆಟ್‌

ನವದೆಹಲಿ : ಲೋಕಸಭಾ ಚುನಾವಣೆಗೆ ಬಿಜೆಪಿಯ ಎರಡನೇ ಪಟ್ಟಿ ಪ್ರಕಟವಾಗಿದ್ದು, ಕರ್ನಾಟಕದ 28 ಕ್ಷೇತ್ರಗಳ ಪೈಕಿ 20 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ಎಂಟು ಹಾಲಿ ಸಂಸದರಿಗೆ ಟಿಕೆಟ್​ ಕೈತಪ್ಪಿದ್ದು ಬಿಜೆಪಿ ಹೈಕಮಾಂಡ್‌ ಹೊಸ ಮುಖಗಳಿಗೆ ಮಣೆ ಹಾಕಿದೆ. ಟಿಕೆಟ್ ಮಿಸ್ ಆಗಿದ್ದು, ಆರು ಹೊಸ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಮೈಸೂರು-ಪ್ರತಾಪ ಸಿಂಹ, ಬೆಂಗಳೂರು ಉತ್ತರ- … Continued

ಬಿಜೆಪಿಯ ಮೂವರು ಹಾಲಿ ಸಂಸದರು ನಮ್ಮ ಸಂಪರ್ಕದಲ್ಲಿದ್ದಾರೆ : ಚುನಾವಣೆ ಸನಿಹದಲ್ಲಿ ಡಿಕೆ ಶಿವಕುಮಾರ ಅಚ್ಚರಿಯ ಹೇಳಿಕೆ

ಕಲಬುರಗಿ : ಬಿಜೆಪಿಯ ಮೂವರು ಹಾಲಿ ಸಂಸದರು ನಮ್ಮ ಸಂಪರ್ಕದಲ್ಲಿದ್ದು, ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗುವುದರ ಬಗ್ಗೆ ಮಾತನಾಡಿದ್ದಾರೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕಲ್ಬುರಗಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಮ್ಮ ಜೊತೆ ಯಾವ್ಯಾವ ಸಂಸದರು ಸಂಪರ್ಕದಲ್ಲಿದ್ದಾರೆ ಎಂಬ ಬಗ್ಗೆ ನಾನು ಈಗಲೇ ಮಾಹಿತಿ ಬಹಿರಂಗಪಡಿಸುವುದಿಲ್ಲ. ನಮ್ಮ … Continued

ಲೋಕಸಭೆ ಚುನಾವಣೆ: ಕರ್ನಾಟಕದ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಬಿಜೆಪಿಯಲ್ಲಿ ಕಸರತ್ತು

ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ನಿರ್ಧರಿಸಲು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿ (ಸಿಇಸಿ) ಸೋಮವಾರ ತನ್ನ ಎರಡನೇ ಸಭೆ ನಡೆಸಿತು. ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತಿತರರು ಭಾಗಿಯಾದರು.ಪಕ್ಷದ ಎರಡನೇ ಪಟ್ಟಿಯನ್ನು ಮಂಗಳವಾರ … Continued

ಕರ್ನಾಟಕದಲ್ಲಿ ಕಲರ್‌ ಕಾಟನ್ ಕ್ಯಾಂಡಿ ನಿಷೇಧ : ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ ಬಳಸುವಂತಿಲ್ಲ ; ನಿಯಮ ಮೀರಿದ್ರೆ ಜೈಲು-ದಂಡ

ಬೆಂಗಳೂರು : ರಾಜ್ಯದಲ್ಲಿ ಕಲ‌ರ್ ಕಾಟನ್ ಕ್ಯಾಂಡಿ ಬಳಕೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಒಂದು ವೇಳೆ ಕೃತಕ ಬಣ್ಣದ ಕಾಟನ್ ಕ್ಯಾಂಡಿ ಮಾರಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಬಣ್ಣ ಬಳಸದೇ ಇರುವ ಕಾಟನ್ ಕ್ಯಾಂಡಿ ಮಾರಬಹುದು ಎಂದು … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ: ಶಂಕಿತನ ಹೊಸ ಫೋಟೋ ಬಿಡುಗಡೆ ಮಾಡಿದ ಎನ್‌ಐಎ

ನವದೆಹಲಿ : 10 ಮಂದಿ ಗಾಯಗೊಂಡಿರುವ ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟದ ಪ್ರಕರಣದ ಶಂಕಿತ ಆರೋಪಿಯ ಹೊಸ ಫೋಟೋಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಿಡುಗಡೆ ಮಾಡಿದೆ. ಮಾರ್ಚ್ 3 ರಂದು ಪ್ರಕರಣವನ್ನು ಕೈಗೆತ್ತಿಕೊಂಡ ಭಯೋತ್ಪಾದನಾ ನಿಗ್ರಹ ಸಂಸ್ಥೆಯಾದ ಎನ್‌ಐಎ, ಮಾರ್ಚ್ 1 ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಇರಿಸಿದ್ದ … Continued

ಶ್ರೀಲಂಕಾದಿಂದ 5 ಲಕ್ಷ ಟನ್‌ ಅಡಕೆ ಆಮದಿಗೆ ಮುಂದಾದ ಕಂಪನಿ: ಬೆಳೆಗಾರರಿಗೆ ಎದುರಾಯ್ತು ದರ ಕಡಿಮೆಯಾಗುವ ಆತಂಕ

ನವದೆಹಲಿ: ಅಡಕೆ ಮಾರಾಟ ಹಂಗಾಮು ಆರಂಭವಾಗಿರುವ ಸಂದರ್ಭದಲ್ಲೇ ಶ್ರೀಲಂಕಾದಿಂದ 5 ಲಕ್ಷ ಟನ್‌ ಅಡಕೆ ಆಮದು ಮಾಡಿಕೊಳ್ಳಲು ಕಂಪನಿಯೊಂದು ಮುಂದಾಗಿದೆ ಎಂದು ವರದಿಯಾಗಿದೆ. ಅಡಕೆ ಬೆಳೆಗಾರರಿಗೆ ದರ ಕುಸಿತದ ಆತಂಕ ಎದುರಾಗಿದೆ. ಶ್ರೀಲಂಕಾದಿಂದ ಅಡಕೆ ಆಮದು ಸಂಬಂಧ ಬ್ರಿಟನ್‌ ಮೂಲದ ಎಸ್‌ರಾಂ ಅಂಡ್‌ ಎಂರಾಂ ಗ್ರೂಪ್‌ ಒಪ್ಪಂದ ಮಾಡಿಕೊಂಡಿದೆ ಎಂದು ವರದಿಯಾಗಿದ್ದು, ಶ್ರೀಲಂಕಾ ಮೂಲದ ವ್ಯಾಪಾರಿ … Continued

ರಾಜ್ಯದಲ್ಲಿ ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ ಸೇವೆ ರದ್ದು

ಬೆಂಗಳೂರು : ರಾಜ್ಯದಲ್ಲಿ ಆ್ಯಪ್ ಆಧಾರಿತ ಬೈಕ್ ಟ್ಯಾಕ್ಸಿ (Bike Taxi) ಬಾಡಿಗೆ ಯೋಜನೆ ರದ್ದುಗೊಳಿಸಿ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ. ಬೈಕ್‌ಗಳಂತಹ ಸಾರಿಗೆಯೇತರ ವಾಹನಗಳನ್ನು ಟ್ಯಾಕ್ಸಿ ಸೇವೆಗೆ ಬಳಕೆ ಮತ್ತು ಅವುಗಳ ಕಾರ್ಯಾಚರಣೆಗೆ ಖಾಸಗಿ ಅಪ್ಲಿಕೇಶನ್‌ಗಳನ್ನು ಬಳಸುವುದು ಮೋಟಾರು ವಾಹನ ಕಾಯ್ದೆಗೆ ವಿರುದ್ಧವಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ. ಹೀಗಾಗಿ ಎಲ್ಲ ರೀತಿಯ ಬೈಕ್‌ … Continued

ಕರ್ನಾಟಕದಲ್ಲಿ ಆ್ಯಸಿಡ್‌ ಮಾರಾಟ ನಿಷೇಧಕ್ಕೆ ಕ್ರಮ : ಗೃಹ ಸಚಿವ ಪರಮೇಶ್ವರ

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಕಾಲೇಜು ವಿದ್ಯಾರ್ಥಿಗಳ ಮೇಲೆ ನಡೆದ ಆ್ಯಸಿಡ್‌ ದಾಳಿ ಬೆನ್ನಲ್ಲೇ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಕರ್ನಾಟಕದಲ್ಲಿ ಆ್ಯಸಿಡ್‌ ಮಾರಾಟ ನಿಷೇಧಿಸಲಾಗುವುದು ಎಂದು ಗೃಹ ಸಚಿವ ಪರಮೇಶ್ವರ ಹೇಳಿದ್ದಾರೆ. ವ್ಯಕ್ತಿಯೊಬ್ಬ ಕೆಲ ದಿನಗಳ ಹಿಂದೆ ಕಡಬ ಕಾಲೇಜಿನ ಮೂವರು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್‌ ಎರಚಿದ್ದ. ಈ ಪ್ರಕರಣದ ಕುರಿತು ಸುದ್ದಿಗಾರರೊಂದಿಗೆ … Continued

ಈ ಬೇಸಿಗೆಯಲ್ಲಿ ಕರ್ನಾಟಕದಲ್ಲಿ ರಣಬಿಸಿಲು ; ಕೆಲವೆಡೆ ಬಿಸಿಗಾಳಿ : ಹವಾಮಾನ ಇಲಾಖೆ

ಬೆಂಗಳೂರು : ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಮತ್ತಷ್ಟು ಹೆಚ್ಚಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಋತುವಿನಲ್ಲಿ ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಿನ ತಾಪಮಾನ ಕರ್ನಾಟಕದಲ್ಲಿ ದಾಖಲಾಗಿದೆ. ಹೆಚ್ಚಿನ ಉಷ್ಣತೆಯು ಬೇಸಿಗೆಯ ತಿಂಗಳುಗಳಾದ ಮಾರ್ಚ್ ಮತ್ತು ಮೇ ನಡುವೆ ಇರುತ್ತದೆ. ಎಲ್ಲಾ ಮೂರು ತಿಂಗಳ ಕಾಲ … Continued