ರಾಜ್ಯದಲ್ಲಿ ಶಾಲೆಗಳನ್ನು ಬಂದ್ ಮಾಡುವ ಚಿಂತನೆ ಇಲ್ಲ: ಶಿಕ್ಷಣ ಸಚಿವ ನಾಗೇಶ

ತುಮಕೂರು: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ನಿಯಂತ್ರಣಕ್ಕೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದು, ಸದ್ಯಕ್ಕೆ ಶಾಲೆಗಳನ್ನು ಬಂದ್ ಮಾಡುವ ಚಿಂತನೆ ಇಲ್ಲ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು. ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರುರಾಜ್ಯದಲ್ಲಿ ಒಂದು ವೇಳೆ ಕೋವಿಡ್ ಸೋಂಕು ಹೆಚ್ಚಾದರೆ ತಾಂತ್ರಿಕ ಸಲಹಾ ಸಮಿತಿ ನಿರ್ಧಾರದ … Continued

ವಿಧಾನಸೌಧದಲ್ಲಿ ಸ್ಯಾನಿಟೈಸರ್ ಕುಡಿದು ಆತ್ಮಹತ್ಯೆಗೆ ಯತ್ನ

ಬೆಂಗಳೂರು : ವ್ಯಕ್ತಿಯೊಬ್ಬರು ವಿಧಾನಸೌಧದಲ್ಲಿ ಸ್ಯಾನಿಟೈಸರ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ನಂದಕುಮಾರ್ (50) ಎಂದು ಗುರುತಿಸಲಾಗಿದೆ. ವಿಧಾನಸೌಧದ 2ನೇ ಮಹಡಿಯ ಪ್ರವೇಶ ದ್ವಾರದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಆರ್ ಟಿ ನಗರ ಮೂಲದ ವ್ಯಕ್ತಿ ನಂದಕುಮಾರ್ ಸ್ಯಾನಿಟೈಸರ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಪೊಲೀಸರು ಬೌರಿಂಗ್ … Continued

ಬಂಡಿಪುರ ಅರಣ್ಯ ಪ್ರದೇಶದಲ್ಲಿ ಕಬ್ಬಿಣದ ಗೇಟನ್ನು ಮನುಷ್ಯರಂತೆ ದಾಟಿದ ಆನೆ… ವ್ಹಾ ಎನ್ನಲೇಬೇಕು..! ವೀಕ್ಷಿಸಿ

ಚಾಮರಾಜನಗರ: ನಾವು ಮುಂದುವರಿದಂತೆ ಕಾಡುಪ್ರಾಣಿಗಳು ಈ ಆಧುನಿಕ ಪ್ರಪಂಚದಲ್ಲಿ ಹೇಗೆ ಬದುವುದು ಎಂಬುದನ್ನು ಕಲಿತುಕೊಳ್ಳುತ್ತಿವೆ. ಹೀಗಾಗಿ ಅವುಗಳು ಸಹ ಈಗ ಕಾಡಿನಿಂದ ನಾಡಿಗೂ ಆಗಮಿಸುತ್ತಿವೆ. ನಾವು ಎಷ್ಟೇ ತಡೆಗಳನ್ನು ಒಡ್ಡಿದರೂ ಅದನ್ನು ದಾಟಿಕೊಂಡು ಅವರು ಬರುತ್ತಿವೆ. ಇಂಥದೊಂದು ನಿದರ್ಶನವನ್ನು ಬಂಡಿಪುರ ಅರಣ್ಯ ಪ್ರದೇಶದಲ್ಲಿ ಕಾಡಾನೆಯೊಂದು ಸಾಬೀತುಪಡಿಸಿದೆ. ಆನೆಗಳು ದಾಟಿ ಬರಬಾರದು ಎಂದೇ ರೈಲ್ವೆಯವರು ನಿರ್ಮಾಣ ಮಾಡಿದ್ದ … Continued

ಕರ್ನಾಟಕದಲ್ಲಿ ಸೋಮವಾರ ಕೊರೊನಾ ಹೊಸ ಪ್ರಕರಣಗಳು ಇಳಿಕೆ, ಒಂದು ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು (ಸೋಮವಾರ) ಕೊರೊನಾ ಪಾಸಿಟಿವ್ ಪ್ರಕರಣ ಮತ್ತು ಸಾವಿನ ಸಂಖ್ಯೆ ಇಳಿಕೆ ಕಂಡಿದೆ. ಇಂದು ಒಟ್ಟು 171 ಹೊಸ ಕೊರೊನಾ ಪ್ರಕರಣ ದಾಖಲಾಗಿದೆ, ಇದೇವೇಳೆ 1 ಸಾವು ದಾಖಲಾಗಿದೆ. ಹಾಗೂ ರಾಜ್ಯದಲ್ಲಿ 255 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರು ನಗರದಲ್ಲಿ 118 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 144 ಮಂದಿ ಆಸ್ಪತ್ರೆಯಿಂದ … Continued

ಕರ್ನಾಟಕದಲ್ಲಿ ಭಾನುವಾರ ಹೊಸದಾಗಿ 236 ಜನರಿಗೆ ಕೋವಿಡ್‌  ಸೋಂಕು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ನವೆಂಬರ್ 14) ಹೊಸದಾಗಿ 236 ಜನರಿಗೆ ಕೋವಿಡ್‌  ಸೋಂಕು ದೃಢವಾಗಿದೆ. ಇದೇ ಸಮಯದಲ್ಲಿ ಸೋಂಕಿನಿಂದ 2 ಜನರ ಸಾವು ಸಂಭವಿಸಿದೆ. ಹಾಗೂ 264 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 29,91,850 ಕ್ಕೆ ಏರಿಕೆಯಾಗಿದೆ. ಒಟ್ಟು 29,45,679 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ … Continued

ಕರ್ನಾಟಕದಲ್ಲಿ ಮೂನ್ನೂರರ ಗಡಿದಾಟಿದ ಕೋವಿಡ್‌ ಸೋಂಕು

ಬೆಂಗಳೂರು: ಕರ್ನಾಟಕದಲ್ಲಿ ಇಂದು (ಬುಧವಾರ) ಒಟ್ಟು 328 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 9 ಜನರು ಮೃತಪಟ್ಟಿದ್ದಾರೆ ಹಾಗೂ ಸೋಂಕಿನಿಂದ ಚೇತರಿಸಿಕೊಂಡಿರುವ 247 ಮಂದಿ ಆಸ್ಪತ್ರೆಗಳಿಂದ ಡಿಸ್​ಚಾರ್ಜ್​ ಆಗಿದ್ದಾರೆ. ಈವರೆಗೆ ಒಟ್ಟು 29,90,856 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 9 ಮಂದಿ ಮೃತಪಟ್ಟಿದ್ದಾರೆ. 29,44,669 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಈವರೆಗೆ 38,131 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, … Continued

ರಾಜ್ಯದಲ್ಲಿ ಹೋಟೆಲ್ ತಿಂಡಿ-ತಿನಿಸುಗಳ ಬೆಲೆ ಏರಿಕೆಗೆ ತಾತ್ಕಾಲಿಕ ತಡೆ

ಬೆಂಗಳೂರು : ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಹೋಟೆಲ್‌ಗಳ ತಿಂಡಿ ತಿನಿಸುಗಳ ದರ ಹೆಚ್ಚಳ ಮಾಡುವ ಪ್ರಸ್ತಾವನೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲು ಹೋಟೆಲ್ ಮಾಲೀಕರ ಸಂಘ ತೀರ್ಮಾನಿಸಿದೆ. ದರ ಏರಿಕೆ ಕುರಿತಂತೆ ಹೋಟೆಲ್ ಸಂಘ ನಿರ್ಧರಿಸಿದ್ದರೂ ಬಹುತೇಕ ಹೋಟೆಲ್‌ಗಳು ದರ ಏರಿಕೆ ಮಾಡಲು ಹಿಂದೇಟು ಹಾಕಿವೆ. ತಿಂಡಿ, ಊಟ ಸೇರಿದಂತೆ ಚಹಾ, ಕಾಫಿಗಳ ಬೆಲೆಯಲ್ಲಿ ಶೇ … Continued

ಕರ್ನಾಟಕದಲ್ಲಿ ಇಂದು, ನಾಳೆ ಭಾರಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ನವೆಂಬರ್ 9ರ ವರೆಗೆ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತ ಮತ್ತು ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪ್ರಭಾವದಿಂದ ರಾಜ್ಯದಲ್ಲಿ ಮಳೆಯಾಗುತ್ತಿದೆ. ಇದು ಇನ್ನೂ ಎರಡು ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ … Continued

ಕರ್ನಾಟಕದಲ್ಲಿ ಭಾನುವಾರ ಹೊಸದಾಗಿ 239 ಜನರಿಗೆ ಕೊರೊನಾ ಸೋಂಕು; ಐವರ ಸಾವು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಭಾನುವಾರ) ಹೊಸದಾಗಿ 239 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ. ಇದೇ ವೇಳೆ ಸೋಂಕಿನಿಂದ ಐವರು ಮೃತಪಟ್ಟಿದ್ದಾರೆ ಹಾಗೂ 322 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 29,89,952 ಕ್ಕೆ ಏರಿಕೆಯಾಗಿದೆ. ಒಟ್ಟು 29,43,809 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿರೆ. ಹಾಗೂ ಒಟ್ಟು 38,112 … Continued

ಕರ್ನಾಟಕದಲ್ಲಿ ಶನಿವಾರ ಹೊಸದಾಗಿ 224 ಮಂದಿಯಲ್ಲಿ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು (ಶನಿವಾರ) ಹೊಸದಾಗಿ 224 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು 5 ಮಂದಿ ಮೃತಪಟ್ಟಿದ್ದಾರೆ. ಇದೇವೇಳೆ 317 ಮಂದಿ ಚೇತರಿಸಿಕೊಂಡು ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ‌. ಬಾಗಲಕೋಟೆ, ಬಳ್ಳಾರಿ,ಚಿಕ್ಕಬಳ್ಳಾಪುರ, ದಾರವಾಡ,ಗದಗ, ಹಾವೇರಿ, ,ಕಲಬುರಗಿ,ಕೊಪ್ಪಳ, ಕೊಪ್ಪಳ, ರಾಯಚೂರು,ರಾಮನಗರ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಯಾವುದೇ ಸೋಂಕು ದಾಖಲಾಗಿಲ್ಲ. ರಾಜ್ಯದಲ್ಲಿ … Continued