ಕರ್ನಾಟಕದಲ್ಲಿ ಕುಸಿತ ಕಂಡ ಹೊಸ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಸೋಮವಾರ (ಆಗಸ್ಟ್ 2) ಹೊಸದಾಗಿ 1,285 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ ಹಾಗೂ ಕೊರೊನಾ ಸೋಂಕಿನಿಂದ 25 ಜನರ ಸಾವು ಸಂಭವಿಸಿದೆ. , ರಾಜ್ಯದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 29,08,284 ಕ್ಕೆ ಏರಿಕೆಯಾಗಿದೆ. ಸೋಂಕಿತರ ಪೈಕಿ 28,47,627 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36,612 ಜನ … Continued

ಯುಜಿಸಿ, ಐಸಿಎಆರ್, ಎಐಸಿಟಿಇ ವೇತನದಾರರಿಗೂ ಶೇ.11 ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ಯುಜಿಸಿ, ಐಸಿಎಆರ್, ಎಐಸಿಟಿಇ ವೇತನ ಶ್ರೇಣಿಗಳಲ್ಲಿ ಕಾರ್ಯ ನಿರ್ವ ಹಿಸುವ ನೌಕರರಿಗೆ ರಾಜ್ಯ ಸರ್ಕಾರ ಶೇ.11ರಷ್ಟು ತುಟ್ಟಿಭತ್ಯೆಯನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. 2016ರ ಪರಿಷ್ಕೃತ ಯುಜಿಸಿ, ಐಸಿಎ ಆರ್, ಎಐಸಿಟಿಇ ವೇತನ ಶ್ರೇಣಿಗಳಲ್ಲಿ ನೌಕರರ ಮೂಲ ವೇತನದ ಶೇ.17ರಿಂದ ಶೇ.28ಕ್ಕೆ ತುಟ್ಟಿಭತ್ಯೆ ದರಗಳನ್ನು ಪರಿಷ್ಕರಿಸಿದ್ದು, ಜುಲೈ 1ರಿಂದಲೇ ಪೂರ್ವಾನ್ವಯವಾಗಿ ಜಾರಿಗೆ ಬಂದಿವೆ. 2020ರ … Continued

ಕರ್ನಾಟಕದಲ್ಲಿ ಭಾನುವಾರ 1875 ಹೊಸ ಕೊರೊನಾ ಸೋಂಕು ವರದಿ

ಬೆಂಗಳೂರು: ರಾಜ್ಯದಲ್ಲಿ ಇಂದು(ಭಾನುವಾರ) 1875 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದೆ.ಇದೇ ಸಮಯದಲ್ಲಿ 25 ಮಂದಿ ಮೃತಪಟ್ಟಿದ್ದು, 1502 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 24,144 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,06,999 ಮಂದಿಗೆ ಕೊರೊನಾ ಬಂದಿದೆ. 28,46,244 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.2.33ರಷ್ಟಿದೆ.ಜಿಲ್ಲಾವಾರು … Continued

ಕರ್ನಾಟಕದಲ್ಲಿ ಶನಿವಾರ 1987 ಕೊರೊನಾ ಸೋಂಕು ಪತ್ತೆ

ಬೆಂಗಳೂರು: ಕೊರೊನಾ ಮೂರನೇ ಅಲೆ ಭೀತಿಯ ನಡುವೆ ಕೇರಳ ಹಾಗೂ ತಮಿಳುನಾಡಿನಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿಯೂ ಶನಿವಾರ ( ಕಳೆದ 24 ಗಂಟೆಗಳಲ್ಲಿ) 1987 ಕೊರೊನಾ ಸೋಂಕು ಪತ್ತೆಯಾಗಿದ್ದು, 1632 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದೇ ಸಮಯದಲ್ಲಿ ಕೊರೊನಾ ಸೋಂಕಿನಿಂದಾಗಿ 37 ಜನ ಮೃತಪಟಟಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು ಕೊರೊನಾ … Continued

ರಾಜ್ಯದಲ್ಲಿ ಶುಕ್ರವಾರ 1,890 ಕೊರೊನಾ ಕೇಸ್, 34 ಸಾವು

ಬೆಂಗಳೂರು: ಹೋಲಿಸಿದರೆ ರಾಜ್ಯದಲ್ಲಿ ಶುಕ್ರವಾರ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಕೊಂಚ ಕಡಿಮೆಯಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಹೊಸದಾಗಿ 1890 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ ಹಾಗೂ 34 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ. ವರದಿಗಳ ಪ್ರಕಾರ 1631 ಸೋಂಕಿತರು … Continued

ಕರ್ನಾಟಕದಲ್ಲಿ ಗುರುವಾರ ಕೊರೊನಾ ದೈನಂದಿನ ಸೋಂಕು ಹೆಚ್ಚಳ..!

ಬೆಂಗಳೂರು: ಕಳೆದ ಕೆಲ ದಿನಗಳಿಂದ ಇಳಿಕೆಯ ಹಾದಿಯಲ್ಲಿದ್ದ ಹೊಸ ಕೊರೋನಾ ಸೋಂಕಿನ ಸಂಖ್ಯೆ ಗುರುವಾರ ಮತ್ತೆ ಏರಿಕೆಯಾಗಿದೆ. ಗುರುವಾರ ರಾಜ್ಯದಲ್ಲಿ ಎರಡು ಸಾವಿರಕ್ಕೂ ಅಧಿಕ ಪ್ರಕರಣಗಳು ದಾಖಲಾಗಿವೆ. ಒಂದೇ ದಿನದಲ್ಲಿ ಹೊಸದಾಗಿ 2052 ಜನರಿಗೆ ಸೋಂಕು ದೃಢಪಟ್ಟಿದ್ದು, 35 ಮಂದಿ ಮೃತಪಟ್ಟಿದ್ದಾರೆ. ಇದೇ ಸಮಯದಲ್ಲಿ 1332 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಸದ್ಯ 23,253 … Continued

ಕರ್ನಾಟಕದಲ್ಲಿ ಬುಧವಾರ ಮೂರು ತಿಂಗಳಲ್ಲೇ ಕಡಿಮೆ ದೈನಂದಿನ ಕೊರೊನಾ ಸಾವು

ಬೆಂಗಳೂರು: ರಾಜ್ಯದಲ್ಲಿ ಬುಧವಾರ 1,531 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದ್ದು, 19 ಜನರು ಮೃತಪಟ್ಟಿದ್ದಾರೆ. ಮೂರು ತಿಂಗಳ ನಂತರದಲ್ಲಿ ಇದೇ ಮೊದಲ ಸಲ ದೈನಂದಿನ ಕೋವಿಡ್‌ ಸಾವು 20ಕ್ಕಿಂತ ಕಡಿಮೆ ದಾಖಲಾಗಿದೆ. ಇದೇ ಸಮಯದಲ್ಲಿ 1,430 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 22,569 ಸಕ್ರಿಯ ಪ್ರಕರಣಗಳಿವೆ. ಮರಣ ಪ್ರಮಾಣ ಶೇ.1.24ಕ್ಕೆ ಇಳಿಕೆ ಕಂಡಿದ್ದರೆ … Continued

ಕರ್ನಾಟಕದಲ್ಲಿ ಸೋಮವಾರ 1606 ಮಂದಿಗೆ ಹೊಸ ಕೊರೊನಾ ಸೋಂಕು

ಬೆಂಗಳೂರು : ರಾಜ್ಯದಲ್ಲಿ ಸೋಮವಾರ ಹೊಸದಾಗಿ 1606 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಇದೇವೇಳೆ 1937 ಜನರು ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ 467 ಮಂದಿಗೆ ಸೋಂಕು ತಗುಲಿದ್ದರೆ, 497 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆಂಗಳೂರಿನಲ್ಲಿ ಮೂವರು ಸೋಂಕಿತರು ಸೇರಿದಂತೆ ರಾಜ್ಯದಲ್ಲಿ … Continued

ಕರ್ನಾಟಕದಲ್ಲಿ ಶೇ 20ರಷ್ಟು ಅಧಿಕ ಮಳೆ

ಬೆಂಗಳೂರು: ಕಳೆದ 10 ದಿನಗಳಲ್ಲಿ ಕರ್ನಾಟಕದಲ್ಲಿ ಮುಂಗಾರು ಮಳೆ ಎಡೆಬಿಡದೆ ಸುರಿಯುತ್ತಿದೆ. ರಾಜ್ಯದಲ್ಲಿ ಬಹುತೇಕ ಭಾಗಗಳಲ್ಲಿ ವಾಡಿಕೆಗಿಂತ ಶೇ. 20ರಷ್ಟು ಅಧಿಕ ಮಳೆಯಾಗಿದೆ ಎಂದು ವರದಿಯಾಗಿದೆ. ಇನ್ನೂ 2 ದಿನ ಮಳೆಯಾಗಲಿದ್ದು, 7 ಜಿಲ್ಲೆಗಳಲ್ಲಿ ರೆಡ್​​ ಅಲರ್ಟ್​ ಮುಂದುವರಿದಿದೆ. ಮುಂಗಾರಿನ ಅವಧಿಯಲ್ಲಿ ಅಂದರೆ ಜೂನ್ 1 ರಿಂದ ಜುಲೈ 19ರ ಮಧ್ಯದ ಅವಧಿಯಲ್ಲಿ ಕರ್ನಾಟಕದಲ್ಲಿ ವಾಡಿಕೆಯಂತೆ … Continued

ಕರ್ನಾಟಕದಲ್ಲಿ ಶನಿವಾರ 1,857 ಹೊಸ ಕೊರೊನಾ ಸೋಂಕು

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಶನಿವಾರ (ಜುಲೈ 24) ಹೊಸದಾಗಿ 1,857 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,93,556 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 29 ಸಾವು ಸಂಭವಿಸಿದೆ. ರಾಜ್ಯದಲ್ಲಿ ಈವರೆಗೆ ಕೊರೊನಾದಿಂದ 36352 ಜನರ ಸಾವು ಸಂಭವಿಸಿದೆ. ರಾಜ್ಯದಲ್ಲಿ 23,905 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು … Continued