ರಾಜ್ಯದ ಜನತೆಗೆ ಸಿಹಿ ಸುದ್ದಿ: ವಿದ್ಯುತ್ ದರದಲ್ಲಿ ಭಾರೀ ಇಳಿಕೆ ಮಾಡಿದ ಸರ್ಕಾರ ; ಎಷ್ಟು ಗೊತ್ತೆ..?

ಬೆಂಗಳೂರು : ಲೋಕಸಭೆ ಚುನಾವಣೆ ಬೆನ್ನಲ್ಲೇ ವಿದ್ಯುತ್ ಬಳಕೆದಾರರಿಗೆ ರಾಜ್ಯ ಸರ್ಕಾರ ವಿದ್ಯುತ್ ದರ ಇಳಿಕೆ ಮಾಡಿ ಸಿಹಿ ಸುದ್ದಿ ನೀಡಿದೆ. ವಿದ್ಯುತ್‌ ದರ ಪರಿಷ್ಕರಣೆ ಮಾಡಿ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ವಿದ್ಯುತ್ ದರ ಇಳಿಕೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. ಎಲ್‌.ಟಿ.ಗೃಹ ಬಳಕೆ ಸಂಪರ್ಕ ಹೊಂದಿದ ಹಾಗೂ100 ಯೂನಿಟ್​ಗಿಂತ ಹೆಚ್ಚು ಬಳಸುವವರಿಗೆ ಪ್ರತಿ … Continued

ರಾಜ್ಯಸಭೆ ಚುನಾವಣೆ | ನನಗೆ ಅನಾರೋಗ್ಯ ಇದ್ದ ಕಾರಣ ಮತದಾನ ಮಾಡ್ಲಿಕ್ಕೆ ಆಗ್ಲಿಲ್ಲ ; ಶಿವರಾಮ ಹೆಬ್ಬಾರ

ಯಲ್ಲಾಪುರ: ‘ಅನಾರೋಗ್ಯದ ಕಾರಣಕ್ಕೆ ರಾಜ್ಯಸಭೆ ಚುನಾವಣೆಯ ಮತದಾನದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ ಎಂದು ಶಾಸಕ ಶಿವರಾಮ ಹೆಬ್ಬಾರ ಹೇಳಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಆಸ್ಪತ್ರೆಯಲ್ಲಿ‌ ಚಿಕಿತ್ಸೆಗೆಂದು ದಾಖಲಾಗಿದ್ದೆ, ಮತದಾನ ಮಾಡಲು ಆಗದೇ ಇರುವುದಕ್ಕೆ ನನಗೆ ಬೇಸರವಿದೆ. ಮಂಗಳವಾರ ಮುಂಜಾನೆ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಯಲ್ಲಿ ದಾಖಲಾಗಿದ್ದೆ. ಅವರು ಮಧ್ಯಾಹ್ನದ ಒಳಗೆ … Continued

ರಾಜ್ಯಸಭೆ ಚುನಾವಣೆ : ಕರ್ನಾಟಕದ 4 ಸ್ಥಾನಗಳಲ್ಲಿ ಕಾಂಗ್ರೆಸ್‌ 3, ಬಿಜೆಪಿ 1ರಲ್ಲಿ ಗೆಲುವು

ಬೆಂಗಳೂರು: ರಾಜ್ಯಸಭಾ ಚುನಾವಣೆಗೆ ಮತದಾನ ಮುಕ್ತಾಯವಾಗಿದ್ದು. ಕರ್ನಾಟಕದಲ್ಲಿ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ನಿರೀಕ್ಷೆಯಲ್ಲಿ ಕಾಂಗ್ರೆಸ್ಸಿನ ಮೂವರು ಹಾಗೂ ಬಿಜೆಪಿ ಓರ್ವ ಅಭ್ಯರ್ಥಿ ಜಯಗಳಿಸಿದ್ದಾರೆ. ಬಿಜೆಪಿ – ಜೆಡಿಎಸ್ ಮೈತ್ರಿಯಲ್ಲಿ ಐದನೇ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದ ಕುಪೇಂದ್ರ ರೆಡ್ಡಿ ಅವರು ಸೋತಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿಗಳಾದ ಅಜಯ ಮಾಕನ್ -47 ಮತಗಳು, ನಾಸೀರ್ ಹುಸೇನ್ – 47 … Continued

ರಾಜ್ಯಸಭಾ ಚುನಾವಣೆ : ಮತದಾನಕ್ಕೆ ಗೈರಾದ ಬಿಜೆಪಿ ಶಾಸಕ ಹೆಬ್ಬಾರ..!

ಬೆಂಗಳೂರು : ಕರ್ನಾಟಕದ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಇಂದು (ಫೆಬ್ರವರಿ 27) ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆ ವರೆಗೆ ವಿಧಾನಸೌಧದಲ್ಲಿ ನಡೆದಿದ್ದ ಮತದಾನ ಅಂತ್ಯವಾಗಿದೆ. ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಮೂರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಬಿಜೆಪಿಯಿಂದ ಅಖಾಡಕ್ಕೆ ಇಳಿದಿದ್ದ ಓರ್ವ ಅಭ್ಯರ್ಥಿಗೆ ಗೆಲುವಾಗಿದೆ. ಒಟ್ಟು … Continued

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಬಿಜೆಪಿ ಶಾಸಕ…!

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಐದನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿರುವ ಐದನೇ ಅಭ್ಯರ್ಥಿಗೆ ಬಿಜೆಪಿ ಶಾಸಕ ಎಸ್‌. ಟಿ. ಸೋಮಶೇಖರ ಕಾಂಗ್ರೆಸ್‌ ಅಡ್ಡ ಮತದಾನ ಮಾಡುವ ಮೂಲಕ ಶಾಕ್‌ ನೀಡಿದ್ದಾರೆ. ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಶಾಸಕ ಎಸ್‌ ಸಿ ಸೋಮಶೇಖರ ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಮತ ಚಲಾಯಿಸಿದ್ದಾರೆ ಎಂಬುದನ್ನು ಬಿಜೆಪಿ ಚುನಾವಣಾ ಏಜೆಂಟ್‌ರೊಬ್ಬರು ಖಚಿತಪಡಿಸಿದ್ದಾರೆ. ಮತದಾನ ಮಾಡಿದ ನಂತರ ಮಾಧ್ಯಮಗಳ … Continued

384 ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗೆ ಕೆಪಿಎಸ್‌ಸಿಯಿಂದ ಅಧಿಸೂಚನೆ

ಬೆಂಗಳೂರು : 2023–24 ನೇ ಸಾಲಿನ 384 ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ (KAS) ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗ ಅಧಿಸೂಚನೆ ಹೊರಡಿಸಿದೆ. ಕೆಪಿಎಸ್‌ಸಿ ಪ್ರಭಾರಿ ಕಾರ್ಯದರ್ಶಿ ಡಾ. ರಾಕೇಶಕುಮಾರ ಕೆ ಸೋಮವಾರ ಅಧಿಸೂಚನೆ ಹೊರಡಿಸಿದ್ದು, ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳೂ (ಹೈದರ್‌ಬಾದ್‌ ಕರ್ನಾಟಕ) ಸೇರಿದಂತೆ ಒಟ್ಟಾರೆ 384 ಹುದ್ದೆಗಳಲ್ಲಿ ‘ಗ್ರೂಪ್ –ಎ’ 159, ‘ಗ್ರೂಪ್ –ಬಿ’ … Continued

23 ಸಂಸದರ ಆಸ್ತಿ 15 ವರ್ಷಗಳಲ್ಲಿ ಸರಾಸರಿ 1,045%ರಷ್ಟು ಏರಿಕೆ : ಕರ್ನಾಟಕದ ಯಾವ ಸಂಸದರ ಆಸ್ತಿಯಲ್ಲಿ ಏರಿಕೆ ?

ನವದೆಹಲಿ : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಕಳೆದ ಇಪ್ಪತ್ತು ವರ್ಷಗಳಲ್ಲಿ ಆಸ್ತಿ ಹೆಚ್ಚಿಸಿಕೊಂಡ ಸಂಸದರ ಪಟ್ಟಿ ಬಹಿರಂಗವಾಗಿದೆ. ವರದಿಯೊಂದರ ಪ್ರಕಾರ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೇನಕಾ ಗಾಂಧಿ ಸೇರಿದಂತೆ 2004ರಿಂದ ಪುನರಾಯ್ಕೆಗೊಳ್ಳುತ್ತಿರುವ 23 ಸಂಸದರ ಒಟ್ಟಾರೆ ಆಸ್ತಿ ಮೌಲ್ಯವು 35.18 ಕೋಟಿ ರೂ.ಗಳಿಂದ 402.79 ಕೋಟಿರೂ.ಗಳಿಗೆ ಏರಿಕೆಯಾಗಿದೆ ಎಂದು ತಿಳಿದು ಬಂದಿದೆ. ಅಸೋಸಿಯೇಷನ್‌ … Continued

1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ : ದ್ವಿತೀಯ ಪಿಯು ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು

ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆ ಆಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಅರ್ಹರಿಂದ ಆಹ್ವಾನಿಸಲಾಗಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಶೈಕ್ಷಣಿಕವಾಗಿ ಅರ್ಹತೆ … Continued

ಧಾರ್ಮಿಕ ದತ್ತಿ ವಿಧೇಯಕ ಅಂಗೀಕಾರ, ದೇವಸ್ಥಾನದ ಆದಾಯದ ಶೇ.10 ರಷ್ಟು ಹಣ ಸರ್ಕಾರಕ್ಕೆ

ಬೆಂಗಳೂರು : ಹಿಂದು ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ವಿಧೇಯಕ ವಿಧಾನಸಭೆಯಲ್ಲಿ ಬುಧವಾರ ಅಂಗೀಕಾರಗೊಂಡಿದೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮದಾಯ ದತ್ತಿಗಳ ವಿಧೇಯಕದಲ್ಲಿ ಬದಲಾವಣೆ ಮಾಡಲಾಗಿದೆ. ವಿಧೇಯಕದಲ್ಲಿ ಸರ್ಕಾರದ ಮುಜರಾಯಿ ಇಲಾಖೆಗೆ ದೇವಸ್ಥಾನಗಳು ನೀಡುತ್ತಿದ್ದ ಆದಾಯದ ಹಣವನ್ನು ದ್ವಿಗುಣಗೊಳಿಸಲಾಗಿದೆ. ಇನ್ನು ಮುಂದೆ 10 ಲಕ್ಷ ರೂ.ಗಳಿಂದ 1 ಕೋಟಿ ರೂ.ಗಳ ವರೆಗಿನ … Continued

ವಕೀಲರ ಹೋರಾಟಕ್ಕೆ ಕೊನೆಗೂ ಮಣಿದ ಸರ್ಕಾರ : ಐಜೂರು ಠಾಣೆಯ ಪಿಎಸ್ಐ ಅಮಾನತು

ಬೆಂಗಳೂರು : ರಾಮನಗರದಲ್ಲಿ ವಕೀಲರ ಪ್ರತಿಭಟನೆ ತೀವ್ರಗೊಂಡ ಹಿನ್ನಲೆಯಲ್ಲಿ ಐಜೂರು ಠಾಣಾ ಪಿಎಸ್ ಐ ತನ್ವೀರ್ ಹುಸೇನ್ ಅಮಾನತು ಮಾಡುವುದಾಗಿ ಗೃಹ ಸಚಿವ ಡಾ.ಪರಮೇಶ್ವರ ಅವರು ವಿಧಾನಸಭೆಗೆ ತಿಳಿಸಿದ್ದಾರೆ. ವಿಧಾನಸಭಾ ಅಧಿವೇಶನದ ಬುಧವಾರದ ಕಾರ್ಯಕಲಾಪ ಆರಂಭವಾದ ಬಳಿಕ ಐಜೂರು ಪೊಲೀಸ್ ಇನ್ಸ್ ಪೆಕ್ಟರ್ ತನ್ವೀರ್ ಹುಸ್ಸೇನ್ ವಿರುದ್ಧ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಗೃಹ ಸಚಿವ … Continued