ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿಯ ಬಿಜೆಪಿ ಶಾಸಕ

ಗದಗ: ಕಾಮಗಾರಿ ಗುತ್ತಿಗೆ ನೀಡುವುದಕ್ಕೆ ಸಂಬಂಧಿಸಿದಂತೆ ಲಂಚ ಸ್ವೀಕರಿಸುವಾಗ ಶಿರಹಟ್ಟಿಯ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ (Chandru Lamani) ಸೇರಿ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಶಾಸಕ ಚಂದ್ರು ಲಮಾಣಿಗೆ ಸೇರಿದ ಲಕ್ಷ್ಮೇಶ್ವರ ಪಟ್ಟಣದಲ್ಲಿರುವ ಬಾಲಾಜಿ ಆಸ್ಪತ್ರೆ ಮೇಲೆ ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದ ತಂಡ ದಾಳಿ ನಡೆಸಿದ್ದು, … Continued

ವೀಡಿಯೊ..| ಬೆಂಗಳೂರು : ಬೆಂಕಿ ಹೊತ್ತಿಕೊಂಡು ಉರಿದ ಖಾಸಗಿ ಬಸ್‌

ಬೆಂಗಳೂರು : ಬೆಂಗಳೂರಿನಲ್ಲಿ ಖಾಸಗಿ ಬಸ್​ ದುರಂತ ಸಂಭವಿಸಿದೆ. ಮಹಾನಗರದ ಚಂದ್ರಲೇಔಟ್ ಬಿಎಂಟಿಸಿ ಡಿಪೋ (BMTC) ಬಳಿ ನಿಂತಿದ್ದ ಖಾಸಗಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಒಮ್ಮೆಗೆ ಹೊತ್ತಿ ಉರಿದಿದೆ ಎಂದು ವರದಿಯಾಗಿದೆ. ಈ ಘಟನೆ ಇಂದು, ಬುಧವಾರ 10:20ರ ಸುಮಾರಿಗೆ ನಡೆದಿದೆ ಎಂದು ಹೇಳಲಾಗಿದೆ. ಬೆಂಕಿಯಿಂದ ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಬೆಂಕಿ ಹತ್ತಿಕೊಂಡಾಗ ಬಸ್‌ನಲ್ಲಿ … Continued

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು; ಹೈಕೋರ್ಟ್ ಆದೇಶ

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ (ಭಾಗ್ಯನಗರ) ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಕಾಂಗ್ರೆಸ್‌ ಶಾಸಕ ಎಸ್. ಎನ್. ಸುಬ್ಬಾರೆಡ್ಡಿ ಆಯ್ಕೆಯನ್ನು ಹೈಕೋರ್ಟ್ ಅಸಿಂಧುಗೊಳಿಸಿ ಆದೇಶಿದೆ. ಸುಬ್ಬಾರೆಡ್ಡಿ ಆಯ್ಕೆಯನ್ನು ಅಸಿಂಧು ಎಂದು ಘೋಷಣೆ ಮಾಡಬೇಕು ಎಂದು ಪರಾಜಿತ ಅಭ್ಯರ್ಥಿ ಸಿ ಮುನಿರಾಜು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರಿದ್ದ … Continued

ಕ್ಯಾಲಿಫೋರ್ನಿಯಾದಲ್ಲಿ 6 ದಿನಗಳ ಹಿಂದೆ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶವವಾಗಿ ಪತ್ತೆ

ನವದೆಹಲಿ: ಕ್ಯಾಲಿಫೋರ್ನಿಯಾದಲ್ಲಿ ಆರು ದಿನಗಳ ಹಿಂದೆ ನಾಪತ್ತೆಯಾಗಿದ್ದ 22 ವರ್ಷದ ಭಾರತೀಯ ವಿದ್ಯಾರ್ಥಿಯೊಬ್ಬರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತ ವಿದ್ಯಾರ್ಥಿಯನ್ನು ಕರ್ನಾಟಕ ಮೂಲದ ಸಾಕೇತ್ ಶ್ರೀನಿವಾಸಯ್ಯ ಎಂದು ಗುರುತಿಸಲಾಗಿದೆ. ಇವರು ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ (ಬರ್ಕ್ಲಿ) ಕೆಮಿಕಲ್ ಮತ್ತು ಬಯೋಮಾಲಿಕ್ಯುಲರ್ ಎಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಯಾಗಿದ್ದು, ಫೆಬ್ರವರಿ 9 ರಿಂದ ನಾಪತ್ತೆಯಾಗಿದ್ದರು. ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ದೂತಾವಾಸವು ಪೊಲೀಸರು … Continued

ಬಳ್ಳಾರಿ- ಹೊಸಪೇಟೆ ಹೊಸ ರೈಲು ಮಾರ್ಗಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಆರ್ಥಿಕ ವ್ಯವಹಾರಗಳ ಕುರಿತ ಸಚಿವ ಸಂಪುಟ ಸಭೆಯು ಬಳ್ಳಾರಿ ಮತ್ತು ಹೊಸಪೇಟೆ ನಡುವೆ ಮೂರನೇ ಮತ್ತು ನಾಲ್ಕನೇ ರೈಲು ಮಾರ್ಗದ ಯೋಜನೆಗೆ ಒಪ್ಪಿಗೆ ನೀಡಿದೆ. ದೆಹಲಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 2372 ಕೋಟಿ ರೂ. ವೆಚ್ಚದ ಬಳ್ಳಾರಿ ಮತ್ತು ಹೊಸಪೇಟೆ ನಡುವೆ ಮೂರನೇ … Continued

ಸ್ವಯಂ ನಿವೃತ್ತಿ ಪಡೆದು ಸ್ವಾಮೀಜಿಯಾದ ಅಧಿಕಾರಿಗೂ ಬಡ್ತಿ…! ರಾಜ್ಯ ಸರ್ಕಾರದ ಎಡವಟ್ಟು ಬಹಿರಂಗಗೊಳಿಸಿದ ಆರ್‌. ಅಶೋಕ

ಬೆಂಗಳೂರು: ಸ್ವಯಂ ನಿವೃತ್ತಿ ಪಡೆದು ಸ್ವಾಮೀಜಿಯಾದ ಕೆಎಎಸ್‌ ಅಧಿಕಾರಿಗೂ ಬಡ್ತಿ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ವಿಪಕ್ಷದ ನಾಯಕ ಆರ್‌ ಅಶೋಕ ದಾಖಲೆ ಬಹಿರಂಗ ಪಡೆಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅಶೋಕ ಅವರು, ರಾಜ್ಯ ಸರ್ಕಾರ ಇತ್ತೀಚೆಗೆ 20 ಕೆಎಎಸ್ (KAS) ಅಧಿಕಾರಿಗಳಿಗೆ ಬಡ್ತಿ ನೀಡಿ ಅಧಿಕೃತ ಆದೇಶ … Continued

ಅಮೆರಿಕದಲ್ಲಿ ಕರ್ನಾಟಕದ ವಿದ್ಯಾರ್ಥಿ ನಾಪತ್ತೆ : ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದ ವಿದ್ಯಾರ್ಥಿ

ಸ್ಯಾನ್ ಫ್ರಾನ್ಸಿಸ್ಕೋ/ ನವದೆಹಲಿ : ಅಮೆರಿಕದ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ (UC Berkeley) ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿಯೊಬ್ಬರು ನಾಪತ್ತೆಯಾಗಿದ್ದಾರೆ. ಈ ಕುರಿತು ಸ್ಯಾನ್ ಫ್ರಾನ್ಸಿಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಶನಿವಾರ ತೀವ್ರ ಕಳವಳ ವ್ಯಕ್ತಪಡಿಸಿದ್ದು, ವಿದ್ಯಾರ್ಥಿಯ ಪತ್ತೆಗಾಗಿ ಸ್ಥಳೀಯ ಅಧಿಕಾರಿಗಳ ಜೊತೆ ಸಂಪರ್ಕದಲ್ಲಿದೆ. ನಾಪತ್ತೆಯಾದ ವಿದ್ಯಾರ್ಥಿಯನ್ನು 22 ವರ್ಷದ ಸಾಕೇತ್ ಶ್ರೀನಿವಾಸಯ್ಯ … Continued

ಮಾಟ-ಮಂತ್ರದ ಶಂಕೆ: ಜ್ಯೋತಿಷಿಯ ಮಾತು ನಂಬಿ ಹೆತ್ತ ತಾಯಿಯನ್ನೇ ಕೊಂದ ಮಗಳು…!

ತುಮಕೂರು: ಜ್ಯೋತಿಷಿಯೊಬ್ಬರ ಮಾತನ್ನು ನಂಬಿ, ತನ್ನ ತಂದೆಯ ಸಾವಿಗೆ ತಾಯಿಯೇ ಕಾರಣ ಎಂದು ಭಾವಿಸಿದ ಮಗಳೊಬ್ಬಳು ಹೆತ್ತ ತಾಯಿಯನ್ನೇ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಈ ಘೋರ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಅಲ್ಲದೆ, ಮೃತ ಪುಷ್ಪಲತಾ ಹೆಸರಲ್ಲಿ ಒಂದು ಮನೆ ಹಾಗೂ ಬ್ಯಾಂಕ್ ಖಾತೆಯಲ್ಲಿ ಹಣ ಇತ್ತು. … Continued

ರಾಜ್ಯಮಟ್ಟದ ಪ್ರತಿಭಾ ಕಾರಂಜಿ : ಚಿನ್ಮಯ ಕೆರೆಗದ್ದೆ ಪ್ರಥಮ

ಶಿರಸಿ; ಶಾಲಾ ಶಿಕ್ಷಣ ಇಲಾಖೆಯಿಂದ ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಾ ಕಾರಂಜಿಯ ಸಂಸ್ಕೃತ ಭಾಷಣ ಸ್ಪರ್ಧೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ ಲಯನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿಯ ವಿದ್ಯಾರ್ಥಿ ಚಿನ್ಮಯ ಕೆರೆಗದ್ದೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾನೆ. ಈತ ಪತ್ರಕರ್ತ ಕೃಷ್ಣಮೂರ್ತಿ ಕೆರೆಗದ್ದೆ ಮತ್ತು ಆಶಾ ಕೆರೆಗದ್ದೆ ದಂಪತಿ ಪುತ್ರ. … Continued

ವಿಜಯಪುರ: ತಾಂತ್ರಿಕ ದೋಷದಿಂದ ಜಮೀನಿಗೆ ಅಪ್ಪಳಿಸಿದ ಖಾಸಗಿ ತರಬೇತಿ ವಿಮಾನ ; ಇಬ್ಬರಿಗೆ ಗಾಯ

ವಿಜಯಪುರ: ತಾಂತ್ರಿಕ ದೋಷದಿಂದ ತರಬೇತಿ ವಿಮಾನ ತುರ್ತು ಭೂಸಮ್ಮತ; ಇಬ್ಬರು ಪೈಲಟ್‌ಗಳು ಸುರಕ್ಷಿತ ವಿಜಯಪುರ: ಜಿಲ್ಲೆಯ ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದ ಬಳಿ ಭಾನುವಾರ (ಫೆಬ್ರವರಿ 8) ರೆಡ್‌ಬರ್ಡ್ ಏವಿಯೇಷನ್ ಸಂಸ್ಥೆಗೆ ಸೇರಿದ ತರಬೇತಿ ವಿಮಾನವೊಂದು ತಾಂತ್ರಿಕ ದೋಷದಿಂದಾಗಿ ನೆಲಕ್ಕೆ ಅಪ್ಪಳಿಸಿದೆ (Crash-land). ಅದೃಷ್ಟವಶಾತ್ ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಲಬುರಗಿಯಿಂದ ಬೆಳಗಾವಿಗೆ ತರಬೇತಿ … Continued