ಕರ್ನಾಟಕದಲ್ಲಿ ಬುಧವಾರ ಹೊಸದಾಗಿ 126 ಮಂದಿಗೆ ಕೊರೊನಾ ಸೋಂಕು, ಬೆಂಗಳೂರಿನಿಂದಲೇ ಬಹುತೇಕ ಪ್ರಕರಣಗಳು

posted in: ರಾಜ್ಯ | 0

ಬೆಂಗಳೂರು: ಕೋವಿಡ್ ಸೋಂಕು ನಿಧಾನವಾಗಿ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ (ಬುಧವಾರ) ಬೆಂಗಳೂರಿನಲ್ಲಿ 114 ಜನರಿಗೆ ಸೋಂಕು ಸೇರಿದಂತೆ ಕರ್ನಾಟಕದಲ್ಲಿ 126 ಜನರಿಗೆ ಕೊರೊನಾ ಸೋಂಕು ದಾಖಲಾಗಿದೆ. ಈ ಕುರಿತು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೊನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ದಕ್ಷಿಣ ಕನ್ನಡ, ಧಾರವಾಡ, ಕೋಲಾರ ಮತ್ತು ತುಮಕೂರು ಜಿಲ್ಲೆಯಲ್ಲಿ … Continued

ಕರ್ನಾಟಕದಲ್ಲಿ ಮಂಗಳವಾರ 85 ಮಂದಿಗೆ ಸೋಂಕು, ಬೆಂಗಳೂರಿನಲ್ಲಿ ನಿಧನವಾಗಿ ಏರಿಕೆ

posted in: ರಾಜ್ಯ | 0

ಬೆಂಗಳೂರು: ಕೊರೊನಾ ಸೋಂಕಿನ ಏರಿಕೆಯಾಗುತ್ತಿದೆ. ಇಂದು, ಮಂಗಳವಾರ ಒಟ್ಟು 85 ಸೋಂಕು ದಾಖಲಾಗಿದ್ದು, ಸೋಮವಾರಕ್ಕಿಂತ 21 ಪ್ರಕರಣಗಳು ಹೆಚ್ಚಾಗಿದೆ. ಸಮಾಧಾನದ ಸಂಗತಿಯೆಂದರೆ ಕಳೆದ ಹಲವು ದಿನಗಳಿಂದ ಯಾವುದೇ ಮರಣ ದಾಖಲಾಗಿಲ್ಲ. ಬೆಂಗಳೂರು ನಗರದಲ್ಲಿ ಇಂದು 82 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 70 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಪಾಸಿಟಿವಿಟಿ ರೇಟ್ 1.18% … Continued

ಕರ್ನಾಟಕದಲ್ಲಿಯೂ ನಿಧಾನವಾಗಿ ಏರುತ್ತಿದೆ ಕೊರೊನಾ ಸೋಂಕು

posted in: ರಾಜ್ಯ | 0

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ನಿಧಾನವಾಗಿ ಏರುತ್ತಿದೆ. ಇಂದು, ಶನಿವಾರ ಒಂದೇ ದಿನದಲ್ಲಿ 139 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ ಹೆಚ್ಚಿನವರು ಬೆಂಗಳೂರಿನಲ್ಲಿ ಹೆಚ್ಚಾಗಿ ಸೊಂಕು ತಗುಲಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,46,874ಕ್ಕೆ ಏರಿಕೆಯಾಗಿದೆ. ಇಂದು ಕೊರೊನಾದಿಂದ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. … Continued

ಕುಮಟಾ: ಕಡ್ಲೆ ಕಡಲ ತೀರದಲ್ಲಿ ಬೃಹತ್‌ ಡಾಲ್ಫಿನ್‌ ಕಳೆಬರ ಪತ್ತೆ…ವೀಕ್ಷಿಸಿ

posted in: ರಾಜ್ಯ | 0

ಕುಮಟಾ; ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಅರಬ್ಬೀ ಸಮುದ್ರದ ಕರಾವಳಿಯ ಕಡ್ಲೆ ತೀರದಲ್ಲಿ ಡಾಲ್ಫಿನ್ ಕಳೆಬರಹ ಪತ್ತೆಯಾಗಿದೆ . ಸ್ಥಳೀಯವಾಗಿ ಇದಕ್ಕೆ ಹಂದಿ ಮೀನು ಎಂದು ಕರೆಯಲಾಗುತ್ತಿದೆ. ಅರಬ್ಬಿ ಸಮುದ್ರದಲ್ಲಿ ೩೦ ನಾಟಿಕಲ್ ಮೈಲು ಒಳಗೆ ಇದರ ವಾಸಸ್ಥಾನ ಎಂದು ಹೇಳಲಾಗಿದೆ. ಅರಣ್ಯಾಧಿಕಾರಿಗಳು ಹೇಳುವಂತೆ ಮೀನುಗಾರಿಕಾ ಬೋಟ್‌ಗಳ ಫೋನ್‌ಗಳು ಬೋಟಿಗೆ ತಾಗಿ ಪೆಟ್ಟಾಗಿ ಸಾಯುವ … Continued

ಎಫ್‌ಐಆರ್ ದಾಖಲಾಗದಿದ್ದರೂ, ಶಿಕ್ಷೆಗೆ ಗುರಿಯಾಗದಿದ್ದರೂ ರೌಡಿ ಶೀಟ್ ತೆರೆಯಬಹುದು ಎಂದ ಹೈಕೋರ್ಟ್‌

posted in: ರಾಜ್ಯ | 0

ಬೆಂಗಳೂರು: ಅಪರಾಧ ಚುಟವಟಿಕೆಯಲ್ಲಿ ಸಕ್ರಿಯಾಗಿರುವ ರೌಡಿಗಳ ವಿರುದ್ಧ ರೌಡಿ ಶೀಟ್‌ ತೆರೆಯುವ ವಿಚಾರದಲ್ಲಿ ಅನುಸರಿಸಬೇಕಾದ ನಿಯಮಗಳ ಕುರಿತು ಕರ್ನಾಟಕ ಹೈಕೋರ್ಟ್ ಶುಕ್ರವಾರ ಮಾರ್ಗಸೂಚಿಗಳನ್ನು ರಚಿಸಿದೆ. ಅಪರಾಧ ಪ್ರಕರಣದಲ್ಲಿ ಶಿಕ್ಷೆಯಾಗದಿದ್ದರೂ ಮತ್ತು ಯಾವುದೇ ಅಪರಾಧ ಕೃತ್ಯದಲ್ಲಿ ಆರೋಪಿಯಾಗದಿದ್ದರೂ ಪೊಲೀಸರು ರೌಡಿ ಶೀಟ್‌ ತೆಗೆದಿದ್ದಾರೆ. ಇದು ಮೂಲಭೂತ ಹಕ್ಕಿನ ಚ್ಯುತಿಯಾಗಿದೆ. ಆದ್ದರಿಂದ ತಮ್ಮ ವಿರುದ್ಧದ ರೌಡಿ ಶೀಟ್ ರದ್ದುಪಡಿಸಬೇಕು … Continued

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 50 ಸನ್ಯಾಸಿಗಳಿಂದ ಸ್ಪರ್ಧೆ, ಭಟ್ಕಳದಲ್ಲಿ ನನ್ನಿಂದಲೇ ಮೊದಲು ಪ್ರಯೋಗಕ್ಕೆ ಚಿಂತನೆ : ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ

posted in: ರಾಜ್ಯ | 0

ಭಟ್ಕಳ (ಉತ್ತರ ಕನ್ನಡ) : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಂದ ಪ್ರೇರಣೆ ಪಡೆದಿರುವ ಸುಮಾರು 50ಕ್ಕೂ ಹೆಚ್ಚು ಸನ್ಯಾಸಿಗಳು ಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದೇವೆ ಎಂದು ಉಜಿರೆ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹೊಳೆ ಹಳೆಕೋಟೆ ಶ್ರೀಕ್ಷೇತ್ರ ಹನುಮಂತ ದೇವರ ಪುನರ್ … Continued

ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಮಳೆ : ಮುನ್ಸೂಚನೆ

posted in: ರಾಜ್ಯ | 0

ಬೆಂಗಳೂರು: ಬಂಗಾಳ ಕೊಲ್ಲಿ ಮತ್ತು ದಕ್ಷಿಣ ಅರಬ್ಬಿ ಸಮುದ್ರದಲ್ಲಿನ ಮೇಲ್ಮೈ ಸುಳಿಗಾಳಿಯಿಂದಾಗಿ ಮುಂದಿನ ಮೂರು ದಿನ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ದಕ್ಷಿಣ ಒಳನಾಡಿನ ಇತರೆ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ ನೀಡಿದೆ. ಈ … Continued

ಹಳೇಹುಬ್ಬಳ್ಳಿ ಹಿಂಸಾಚಾರದ ಹಿಂದೆ ಮತೀಯ ಸಂಘಟನೆಗಳಿದ್ದರೆ ತನಿಖೆಯಲ್ಲಿ ಹೊರಗೆ ಬಂದೇ ಬರುತ್ತದೆ: ಗೃಹ ಸಚಿವ ಅರಗ ಜ್ಞಾನೇಂದ್ರ

posted in: ರಾಜ್ಯ | 0

ಹುಬ್ಬಳ್ಳಿ: ಶನಿವಾರ ಒಂದು ದೊಡ್ಡ ಗುಂಪು ಕಾನೂನು ಕೈಗೆ ತಗೆದುಕೊಂಡಿದೆ. ಪೊಲೀಸರ ಮೇಲೆ ಹಲ್ಲೆ ಮಾಡಿ, ವಾಹನಗಳನ್ನು ಜಖಂ ಮಾಡಿದೆ. ಓಣಿಯಲ್ಲಿ ಕಲ್ಲು ಎಸೆದು ಅರಾಜಕತೆ ಸೃಷ್ಟಿ ಮಾಡಿದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ನಗರದ ದಿಡ್ಡಿಕೇರಿ ಓಣಿಯಲ್ಲಿರುವ ಹನುಮಂತನ ದೇವಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಮಾಧ್ಯಮದವರ ಜೊತೆ … Continued

ಇಂದು ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ, ಆರೆಂಜ್‌ ಅಲರ್ಟ್‌ ಘೋಷಣೆ

posted in: ರಾಜ್ಯ | 0

ಬೆಂಗಳೂರು: ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಕರಾವಳಿ ಹಲವೆಡೆ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗುರುವಾರ ರಾತ್ರಿ ಬೆಂಗಳೂರು, ಬೆಳಗಾವಿ, ವಿಜಯಪುರ, ದಾವಣಗೆರೆ, ಚಿತ್ರದುರ್ಗ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಹಾಗೂ ವಿಜಯಪುರ ತಾಲೂಕಿನ ಮದಭಾವಿ ಗ್ರಾಮದಲ್ಲಿ ಇಬ್ಬರು … Continued

ಕರ್ನಾಟಕದಲ್ಲಿ ಇನ್ನೆರಡು ದಿನ ಚದುರಿದ ಮಳೆ ಮುನ್ಸೂಚನೆ

posted in: ರಾಜ್ಯ | 0

ಬೆಂಗಳೂರು: ಕರ್ನಾಟಕದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಇನ್ನೂ 2ರಿಂದ 3 ದಿನ ಚದುರಿದ ಮಳೆಯಾಗುವ ಸಾಧ್ಯತೆಗಳಿವೆ. ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿದ್ದರೂ ಕೇರಳದಲ್ಲಿ ಏ. 14ರವರೆಗೂ ಮಳೆಯಾಗುವ ನಿರೀಕ್ಷೆಯಿದೆ. ತಮಿಳುನಾಡಿನ ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆ ಕರ್ನಾಟಕದಲ್ಲೂ ಮಳೆಯಾಗಿತ್ತು. ಆದರೂ ಕರ್ನಾಟಕದ ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಇನ್ನೂ 2ರಿಂದ 3 ದಿನ ಚದುರಿದ … Continued