ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 2-3 ದಿನ ಮಳೆಯಾಗುವ ಸಾಧ್ಯತೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಡಿ.3ರಿಂದ ಎರಡ್ಮೂರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳವರೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆ ಅಥವಾ … Continued

ಪೋಕ್ಸೊ ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪಗೆ ಸುಪ್ರೀಂ ಕೋರ್ಟ್‌ ರಿಲೀಫ್‌

ನವದೆಹಲಿ : ಪೋಕ್ಸೊ ಕಾಯ್ದೆ ಅಡಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿರುವ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ. ಕರ್ನಾಟಕ ಹೈಕೋರ್ಟ್ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದ್ದನ್ನು ಪ್ರಶ್ನಿಸಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ಆಲಿಸಿದ ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯಕಾಂತ ಹಾಗೂ ನ್ಯಾಯಮೂರ್ತಿ ಜೊಯಮಲ್ಯ ಬಾಗ್ಚಿ ಅವರಿದ್ದ … Continued

ಸಿಎಂ ಸಿದ್ದರಾಮಯ್ಯ-ಡಿಸಿಎಂ ಡಿಕೆ ಶಿವಕುಮಾರ ಮಧ್ಯೆ ಮತ್ತೊಂದು ‘ಬ್ರೇಕ್​ಫಾಸ್ಟ್ ಮೀಟಿಂಗ್….!

ಬೆಂಗಳೂರು: ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನ ತಮ್ಮ ನಿವಾಸದಲ್ಲಿ ಉಪಾಹಾರ ಕೂಟಕ್ಕೆ ಆಹ್ವಾನಿಸಿದ್ದಾರೆ ಎಂದು ವರದಿಯಾಗಿದೆ. ರಾಜ್ಯದ ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಅಧಿಕಾರಕ್ಕಾಗಿ ಹಗ್ಗಜಗ್ಗಾಟ ನಡೆಯುತ್ತಿದೆ ಎಂಬ ಊಹಾಪೋಹಗಳ ನಡುವೆ ಈಗ ಎರಡನೇ ಬ್ರೇಕ್‌ ಫಾಸ್ಟ್‌ ಮೀಟಿಂಗ್‌ ನಡೆಯುತ್ತಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚಿಸಿದ ಸಭೆಯಲ್ಲಿ ಒಗ್ಗಟ್ಟನ್ನು … Continued

ನಾಯಕತ್ವದ ಬದಲಾವಣೆ ತಿಕ್ಕಾಟದ ಮಧ್ಯೆ ನಡೆದ ಸಿದ್ದರಾಮಯ್ಯ-ಶಿವಕುಮಾರ ʼಬ್ರೇಕ್‌ ಫಾಸ್ಟ್‌ʼ ಸಭೆ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ನಲ್ಲಿ ನಾಯಕತ್ವ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಬಣದ ನಡುವೆ ತಿಕ್ಕಾಟ ನಡೆಯುತ್ತಿದ್ದು, ಇದರ ಬೆನ್ನಲ್ಲೇ ಶನಿವಾರ ಬೆಳಿಗ್ಗೆ ಉಪಾಹಾರ ಸಭೆ ಸೇರಿರುವ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ ಅವರು ಈ ಕುರಿತ ಫೋಟೋ ಹಂಚಿಕೊಂಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ … Continued

ದಿತ್ವಾ ಚಂಡಮಾರುತ ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಶ್ರೀಲಂಕಾದ ಕರಾವಳಿ ಮತ್ತು ಹೊಂದಿಕೊಂಡಿರುವ ನೈಋತ್ಯ ಬಂಗಾಳಕೊಲ್ಲಿಯ ಮೇಲಿರುವ ‘ದಿತ್ವಾ’ (Ditwah) ಚಂಡಮಾರುತವು ಈ ಚಂಡಮಾರುತವು ನವೆಂಬರ್ 30 ರ ಮುಂಜಾನೆ ವೇಳೆಗೆ ಉತ್ತರ ತಮಿಳುನಾಡು, ಪುದುಚೇರಿ ಮತ್ತು  ದಕ್ಷಿಣ ಆಂಧ್ರಪ್ರದೇಶ ಕರಾವಳಿಯ ಬಳಿಯ ನೈಋತ್ಯ ಬಂಗಾಳಕೊಲ್ಲಿಯನ್ನು ತಲುಪುವ ನಿರೀಕ್ಷೆಯಿದೆ. ಉತ್ತರ ಒಳನಾಡಿನಲ್ಲಿ ನವೆಂಬರ್ 30 ರಂದು ಗುಡುಗು ಸಹಿತ ಮಳೆಯಾಗಲಿದೆ ಹಾಗೂ … Continued

ಹೈಕಮಾಂಡ್ ಸೂಚನೆ ಮೇರೆಗೆ ನಾಳೆ (ನ.29) ಬೆಳಿಗ್ಗೆ ಸಿದ್ದರಾಮಯ್ಯ ನಿವಾಸಕ್ಕೆ ಡಿಕೆಶಿ ಭೇಟಿ..?

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ಸಿನಲ್ಲಿ ನಡೆಯುತ್ತಿರುವ ಆಂತರಿಕ ಕಲಹವನ್ನು ಕೊನೆಗೊಳಿಸಲು ಪಕ್ಷದ ಹೈಕಮಾಂಡ್ ಶುಕ್ರವಾರ ಮಧ್ಯಪ್ರವೇಶಿಸಿದ್ದು, ಬಿಕ್ಕಟ್ಟನ್ನು ಪರಿಹರಿಸುವ ನಿಟ್ಟಿನಲ್ಲಿ ಪರಸ್ಪರ ಭೇಟಿಯಾಗಿ ಮಾತುಕತೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರಿಗೆ ಸೂಚಿಸಿದೆ ಎಂದು ಸುದ್ದಿ ಹೊರಬಿದ್ದಿದೆ. ಹೈಕಮಾಂಡ್‌ನ ಸೂಚನೆಯ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ (ನವೆಂಬರ್‌ 29) ಉಪಾಹಾರಕ್ಕಾಗಿ … Continued

ದಿತ್ವಾ ಚಂಡಮಾರುತ : ಕರ್ನಾಟಕದಲ್ಲಿಯೂ ಭಾರಿ ಮಳೆ ಸಾಧ್ಯತೆ

ನವದೆಹಲಿ: ಶ್ರೀಲಂಕಾದ ಕರಾವಳಿ ಮತ್ತು ಅದರ ಪಕ್ಕದ ನೈಋತ್ಯ ಬಂಗಾಳಕೊಲ್ಲಿಯಲ್ಲಿ ಪ್ರಸ್ತುತ ಸುಳಿಯುತ್ತಿರುವ ‘ದಿತ್ವಾ’ ಚಂಡಮಾರುತವು (Cyclonic Storm Ditwah) ಉತ್ತರ-ವಾಯುವ್ಯದ ಕಡೆಗೆ ಸಾಗುತ್ತಿದ್ದು, ನವೆಂಬರ್ 30ರ ಮುಂಜಾನೆಯ ವೇಳೆಗೆ ತಮಿಳುನಾಡು ಮತ್ತು ದಕ್ಷಿಣ ಆಂಧ್ರಪ್ರದೇಶದ ಕರಾವಳಿ ತೀರಕ್ಕೆ ಮತ್ತಷ್ಟು ಸಮೀಪಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ. ಇದರಿಂದಾಗಿ ಕರ್ನಾಟಕದಲ್ಲಿಯೂ ನಾಲ್ಕೈದು … Continued

‘ಮಾತು’ ಜಗತ್ತಿಗೆ ಒಳಿತಾಗದ ಹೊರತು ಅದು ʼಶಕ್ತಿʼಯಲ್ಲ; ಡಿಕೆಶಿ ಪೋಸ್ಟ್​​ಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ನಡುವಿನ ಮುಖ್ಯಮಂತ್ರಿ ಹುದ್ದೆಯ ಪೈಪೋಟಿಯ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗುರುವಾರ ಮಹತ್ವದ ಹೇಳಿಕೆ ನೀಡಿದ್ದಾರೆ. ರಾಜ್ಯದ ಜನತೆ ಕಾಂಗ್ರೆಸ್‌ಗೆ ನೀಡಿದ ಜನಾದೇಶ ಕೇವಲ ‘ಒಂದು ಕ್ಷಣದ’ ಸಂಗತಿಯಲ್ಲ, ಬದಲಿಗೆ ಐದು ವರ್ಷಗಳ ಸಂಪೂರ್ಣ ಜವಾಬ್ದಾರಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ.  ‘ಎಕ್ಸ್’ (ಹಿಂದಿನ ಟ್ವಿಟರ್) … Continued

ಹೊನ್ನಾವರ | ಮುಳ್ಳೋಡು ಸಮೀಪ ಶರಾವತಿ ನದಿಗೆ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ಸಂಪುಟ ಆಡಳಿತಾತ್ಮಕ ಅನುಮೋದನೆ

ಬೆಂಗಳೂರು: ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರಮುಖ ನಿರ್ಣಯಗಳನ್ನು ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ – ಭಟ್ಕಳ ವಿಧಾನಸಭಾ ಕ್ಷೇತ್ರದ ಹೊನ್ನಾವರ ತಾಲೂಕಿನ ಮುಳ್ಳೋಡು ಗ್ರಾಮದ ಸಮೀಪ ಶರಾವತಿ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸುವ 200 ಕೋಟಿ ರೂ.ಗಳ ಅಂದಾಜು ಮೊತ್ತದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. … Continued

ಕರ್ನಾಟಕದಲ್ಲಿ ಅಧಿಕಾರ ಸಂಘರ್ಷ: ಸಿದ್ದರಾಮಯ್ಯ, ಶಿವಕುಮಾರಗೆ ಕಾಂಗ್ರೆಸ್‌ ಹೈಕಮಾಂಡಿನಿಂದ ದೆಹಲಿ ಬುಲಾವ್‌ ಸಾಧ್ಯತೆ…

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ (Chief minister) ಹುದ್ದೆಯ ಕುರಿತಂತೆ ನಡೆಯುತ್ತಿರುವ ಆಂತರಿಕ ಸಂಘರ್ಷ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಪಕ್ಷದ ಹೈಕಮಾಂಡ್‌ ಮಧ್ಯಪ್ರವೇಶಿಸಿದೆ. ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರ ನಡುವೆ ಮಹತ್ವದ ಸಭೆ ನಿಗದಿಯಾಗಿದ್ದು, ಅದರ ನಂತರ ಗೊಂದಲಕ್ಕೆ ಪರಿಹಾರ ಕಂಡುಕೊಳ್ಳುವ ಸಲುವಾಗಿ, ನವೆಂಬರ್ 29 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ … Continued