ಹೊನ್ನಾವರ | ಮುಳ್ಳೋಡು ಸಮೀಪ ಶರಾವತಿ ನದಿಗೆ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ಸಂಪುಟ ಆಡಳಿತಾತ್ಮಕ ಅನುಮೋದನೆ

ಬೆಂಗಳೂರು: ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರಮುಖ ನಿರ್ಣಯಗಳನ್ನು ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ – ಭಟ್ಕಳ ವಿಧಾನಸಭಾ ಕ್ಷೇತ್ರದ ಹೊನ್ನಾವರ ತಾಲೂಕಿನ ಮುಳ್ಳೋಡು ಗ್ರಾಮದ ಸಮೀಪ ಶರಾವತಿ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸುವ 200 ಕೋಟಿ ರೂ.ಗಳ ಅಂದಾಜು ಮೊತ್ತದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. … Continued

ಕರ್ನಾಟಕದಲ್ಲಿ ಅಧಿಕಾರ ಸಂಘರ್ಷ: ಸಿದ್ದರಾಮಯ್ಯ, ಶಿವಕುಮಾರಗೆ ಕಾಂಗ್ರೆಸ್‌ ಹೈಕಮಾಂಡಿನಿಂದ ದೆಹಲಿ ಬುಲಾವ್‌ ಸಾಧ್ಯತೆ…

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ (Chief minister) ಹುದ್ದೆಯ ಕುರಿತಂತೆ ನಡೆಯುತ್ತಿರುವ ಆಂತರಿಕ ಸಂಘರ್ಷ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಪಕ್ಷದ ಹೈಕಮಾಂಡ್‌ ಮಧ್ಯಪ್ರವೇಶಿಸಿದೆ. ದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರ ನಡುವೆ ಮಹತ್ವದ ಸಭೆ ನಿಗದಿಯಾಗಿದ್ದು, ಅದರ ನಂತರ ಗೊಂದಲಕ್ಕೆ ಪರಿಹಾರ ಕಂಡುಕೊಳ್ಳುವ ಸಲುವಾಗಿ, ನವೆಂಬರ್ 29 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ … Continued

ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ ಎಂದು ಎಕ್ಸ್ ಸಂದೇಶ ; ಹೈಕಮಾಂಡಿಗೆ ಸಿಎಂ ಹುದ್ದೆ ವಾಗ್ದಾನ ನೆನಪಿಸಿದರೇ ಡಿಕೆಶಿ?

ಬೆಂಗಳೂರು:ಕರ್ನಾಟಕದ ಕಾಂಗ್ರೆಸ್‌(Congress)ನಲ್ಲಿ ಮುಖ್ಯಮಂತ್ರಿ ಹುದ್ದೆಯ ಅಧಿಕಾರ ಹಂಚಿಕೆಚರ್ಚೆ ತೀವ್ರಗೊಂಡಿರುವ ನಡುವೆ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ ಅವರು ಗುರುವಾರ ನಿಗೂಢ ಹಾಗೂ ಮಾರ್ಮಿಕ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ. ಇದು ಕಾಂಗ್ರೆಸ್ ಹೈಕಮಾಂಡ್‌ಗೆ ಸೂಕ್ಷ್ಮ ಸಂದೇಶವಾಗಿರಬಹುದು ಎಂದು ನೋಡಲಾಗುತ್ತಿದೆ. ಎಕ್ಸ್‌ನಲ್ಲಿನ ಪೋಸ್ಟ್‌ನಲ್ಲಿ, ಶಿವಕುಮಾರ ಅವರು, ಕೊಟ್ಟ ಮಾತು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ!. ವರ್ಡ್ ಪವರ್ ಈಸ್ ವರ್ಲ್ಡ್ … Continued

ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ನವೆಂಬರ್‌ ತಿಂಗಳು ಚಳಿಗಾಲವಾಗಿದ್ದರೂ ನ.21ರಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕೋಲಾರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮೈಸೂರು, ಹಾಸನ, ಕೊಡಗು, ರಾಮನಗರ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ … Continued

ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆಯುವ ಸುಳಿವು ನೀಡಿದರೇ ಡಿಕೆ ಶಿವಕುಮಾರ..?

ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಹುದ್ದೆಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರೊಂದಿಗಿನ ತಮ್ಮ ಹಗ್ಗ-ಜಗ್ಗಾಟಕ್ಕೆ ಹಿರಿಯ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ (ಡಿಕೆಎಸ್) ಅವರು ಬುಧವಾರ ಹೊಸ ಟ್ವಿಸ್ಟ್‌ ನೀಡಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ನಡೆದ ಪಕ್ಷದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶಿವಕುಮಾರ, “ನಾನು ಶಾಶ್ವತವಾಗಿ … Continued

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ; 5 ಜಿಲ್ಲೆಗಳಿಗೆ ಶೀತಗಾಳಿ ಎಚ್ಚರಿಕೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ, ಮುಂದಿನ ಒಂದು ವಾರ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕರ್ನಾಟಕದ ಐದು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತೀವ್ರ ಶೀತಗಾಳಿಯ ಪರಿಸ್ಥಿತಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ … Continued

ಡಿಸೆಂಬರ್‌ 8 ರಿಂದ ಬೆಳಗಾವಿ ಚಳಿಗಾಲದ ಅಧಿವೇಶನ

ಬೆಂಗಳೂರು : ಬೆಳಗಾವಿಯ ಸುವರ್ಣಸೌಧದಲ್ಲಿ ಡಿಸೆಂಬರ್‌ 8 ರಿಂದ 10 ದಿನಗಳ ಕಾಲ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸಿದೆ. ಡಿಸೆಂಬರ್ 8 ರಿಂದ 19 ರವೆರೆಗೆ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದು ರಾಜ್ಯ ಸರ್ಕಾರ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ … Continued

ಮೇಕೆದಾಟು ಯೋಜನೆಗೆ ವಿರೋಧ : ತಮಿಳುನಾಡು ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟು ನಿರ್ಮಾಣ ಮಾಡುವ ಕರ್ನಾಟಕದ ಯೋಜನೆಯ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ನವೆಂಬರ್ 13) ವಜಾಗೊಳಿಸಿದೆ. ತಮಿಳುನಾಡು ಸಲ್ಲಿಸಿದ್ದ ಮೊದಲ ಅರ್ಜಿಯಲ್ಲಿ, ಮೇಕೆದಾಟು ಯೋಜನೆಗೆ ವಿವರವಾದ ಯೋಜನಾ ವರದಿ (DPR) ತಯಾರಿಸಲು ಕೇಂದ್ರ ಜಲ ಆಯೋಗವು ದಿನಾಂಕ 22.11.2018 ರ ಪತ್ರದ ಮೂಲಕ ನೀಡಿದ … Continued

ಮಹಿಳಾ ನೌಕರರಿಗೆ ಮುಟ್ಟಿನ ರಜೆ ; ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು : ಮಹಿಳಾ ನೌಕರರಿಗೆ ಮುಟ್ಟಿನ ರಜೆ (ಋತುಚಕ್ರ) ರಜೆ ನೀಡಲು ಸರ್ಕಾರವು ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರಿ, ಅನುದಾನಿತ, ಖಾಸಗಿ ಎಲ್ಲಾ ಸಂಸ್ಥೆಗಳಲ್ಲಿ ಕಡ್ಡಾಯವಾಗಿ ತಿಂಗಳಲ್ಲಿ ಒಂದು ದಿನಮುಟ್ಟಿನ ರಜೆ ನೀಡಬೇಕು. ತಿಂಗಳಲ್ಲಿ ಒಂದು ದಿನ ವರ್ಷಕ್ಕೆ 12 ದಿನ ವೇತನ ಸಹಿತ ರಜೆ ನೀಡುವಂತೆ ಸರ್ಕಾರ ಆದೇಶಿಸಿದೆ. ಇತ್ತೀಚೆಗಷ್ಟೇ ಋತುಚಕ್ರ ರಜೆ ನೀಡಲು … Continued

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್‌ ವೀಡಿಯೊ ವೈರಲ್‌ ; ಬಿಜೆಪಿ ಆಕ್ಷೇಪ, ಸಿಎಂ ಸಿದ್ದರಾಮಯ್ಯಗೆ ಪ್ರಶ್ನೆ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda international airport) ಕೆಲವರು ಸಾಮೂಹಿಕ ನಮಾಜ್ ಮಾಡಿರುವ ವೀಡಿಯೊ ವೈರಲ್‌ ಆಗಿದೆ. ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಕೆಲವರು ಸಾಮೂಹಿಕವಾಗಿ ನಮಾಜ್ ಮಾಡಿದ್ದು, ಹಜ್ ಯಾತ್ರಿಕರನ್ನು ಬೀಳ್ಕೊಡಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ಕೆಲವರು ನಮಾಜ್ ಮಾಡಿದ್ದಾರೆ ಎನ್ನಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣ ಆವರಣದಲ್ಲಿ ನಮಾಜ್ … Continued