ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನವೆಂಬರ್ 25ರ ತನಕ ಮಳೆ : ಮುನ್ಸೂಚನೆ

ಬೆಂಗಳೂರು: ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನವೆಂಬರ್‌ 25ರವರೆಗೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮಳೆ (Rain)ಯಾಗಲಿದೆ. … Continued

‘ನ ದೈನ್ಯಂ, ನ ಪಲಾಯನಂ’: ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಗೈರಾದ ಬೆನ್ನಲ್ಲೇ ಶಾಸಕ ಯತ್ನಾಳ​ ಟ್ವೀಟ್​

ಬೆಂಗಳೂರು : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಹಾಗೂ ಪ್ರತಿಪಕ್ಷ ನಾಯಕನ ನೇಮಕದ ವಿಚಾರವಾಗಿ ಅಸಮಾಧಾನಗೊಂಡಿರುವ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಶುಕ್ರವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಗೆ ಗೈರಾದ ಬೆನ್ನಲ್ಲೇ ‘ನ ದೈನ್ಯಂ, ನ ಪಲಾಯನಂ’ ಎಂದು ಮಾರ್ಮಿಕವಾಗಿ ಟ್ವೀಟ್‌ ಮಾಡಿದ್ದಾರೆ. ಒಬ್ಬ ಯೋಧ ಯಾವುದನ್ನೂ ದೂರಲು ಅಥವಾ ವಿಷಾದಿಸಲು ಸಾಧ್ಯವಿಲ್ಲ. … Continued

ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ ಅಳವಡಿಸುವ ಗಡುವನ್ನು ಫೆಬ್ರವರಿ 17 ರವರೆಗೆ ವಿಸ್ತರಿಸಿದ ಸರ್ಕಾರ

ಬೆಂಗಳೂರು: ಹೆಚ್‌ಎಸ್‌ಆರ್‌ಪಿ ನಂಬರ್‌ಪ್ಲೇಟ್‌ ಅಳವಡಿಸಲು ನಿಗದಿ ಮಾಡಿದ್ದ ಗಡುವನ್ನು ಸರ್ಕಾರ 2024ರ ಫೆಬ್ರವರಿ 17ರ ವರೆಗೆ ವಿಸ್ತರಿಸಿದೆ. 2019 ಏಪ್ರಿಲ್‌ 1ಕ್ಕಿಂತ ಮೊದಲು ನೋಂದಣಿಯಾಗಿರುವ ಎಲ್ಲ ಮಾದರಿಯ ವಾಹನಗಳಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಷನ್‌ ಪ್ಲೇಟ್‌ (HSRP) ಅಳವಡಿಸುವುದಕ್ಕೆ ಈ ಮೊದಲು ನವೆಂಬರ್ 17ರ ಗಡುವನ್ನು ಸಾರಿಗೆ ಇಲಾಖೆ ನೀಡಿತ್ತು. ಈಗ ಈ ಗಡುವನ್ನು ವಿಸ್ತರಣೆ ಮಾಡಲಾಗಿದೆ. … Continued

ರಾಜ್ಯದ ಈ ಜಿಲ್ಲೆಗಳಲ್ಲಿ ನವೆಂಬರ್‌ 22ರ ವರೆಗೂ ಮಳೆ : ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ನವೆಂಬರ್ 22ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ನವೆಂಬರ್ 19ರಿಂದ 3 ದಿನಗಳ ಕಾಲ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, … Continued

ಮಹಿಳೆ ಮೇಲೆ ನಾಯಿ ದಾಳಿ ಪ್ರಕರಣ ; ವಿಚಾರಣೆಗೆ ಹಾಜರಾದ ನಟ ದರ್ಶನ್

ಬೆಂಗಳೂರು: ಮಹಿಳೆಯೊಬ್ಬರಿಗೆ ದರ್ಶನ ಮನೆಯ ಸಾಕು ನಾಯಿ ಕಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ನ.15 ರಂದು ಬುಧವಾರ ನಟ ದರ್ಶನ್​ ಅವರು ರಾಜರಾಜೇಶ್ವರಿ​ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ. ಮಹಿಳೆ ಮೇಲೆ ದರ್ಶನ್ ಮನೆಯ ಸಾಕು ನಾಯಿ ದಾಳಿ ನಡೆಸಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಮಹಿಳೆ ದರ್ಶನ ವಿರುದ್ಧವೂ ದೂರು ದಾಖಲಿಸಿದ್ದರು. ಮಹಿಳೆ ನೀಡಿದ ದೂರಿನ ಮೇರೆಗೆ … Continued

ಟಿಕೆಟ್‌ ವಂಚನೆ ಹಗರಣ: ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ 800 ಪುಟಗಳ ಆರೋಪ ಪಟ್ಟಿ ಸಲ್ಲಿಕೆ

ಬೆಂಗಳೂರು : ಉಡುಪಿಯ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಬಿಜೆಪಿ ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಆರೋಪಿಗಳಾದ ಚೈತ್ರಾ ಮತ್ತು ಇತರರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಪೂರ್ಣಗೊಳಿಸಿರುವ ಕೇಂದ್ರೀಯ ಅಪರಾಧ ದಳ (ಸಿಸಿಬಿ) 800 ಪುಟಗಳ ಆರೋಪ ಪಟ್ಟಿಯನ್ನು ಬೆಂಗಳೂರಿನ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯಕ್ಕೆ ಸಲ್ಲಿಸಿದೆ. ಬೆಂಗಳೂರಿನ 3ನೇ ಮೂರನೇ ಹೆಚ್ಚುವರಿ … Continued

ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸದಾನಂದ ಗೌಡ…!

ಬೆಂಗಳೂರು : ‘ನಾನು ಚುನಾವಣಾ ರಾಜಕಾರಣದಲ್ಲಿ ಮುಂದುವರಿಯಬಾರದು ಎಂದು ತೀರ್ಮಾನ ಮಾಡಿದ್ದೇನೆ’ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರು ರಾಜಕೀಯಕ್ಕೆ ನಿವೃತ್ತಿ ಪ್ರಕಟಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷದಿಂದ ಹೆಚ್ಚಿನ ಲಾಭ ಪಡೆದುಕೊಂಡಿದ್ದೇನೆ. ಈಗ ನನಗೆ ಹೆಚ್ಚಿನ ಅಸೆ ಏನೂ ಇಲ್ಲ. ಇನ್ಮುಂದೆ ಚುನಾವಣಾ ರಾಜಕೀಯದಲ್ಲಿ ಮುಂದುವರಿಯಬಾರದು ನಿರ್ಧಾರ … Continued

ಹೈಕಮಾಂಡ್‌ ಬುಲಾವ್‌: ಡಿಸಿಎಂ ಡಿಕೆ ಶಿವಕುಮಾರ ದಿಢೀರ್‌ ದೆಹಲಿಗೆ

ಬೆಂಗಳೂರು : ಕಾಂಗ್ರೆಸ್‌ ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ ಅವರು ಇಂದು ಮಂಗಳವಾರ ದೆಹಲಿಗೆ ಹೊರಟಿದ್ದಾರೆ ಎಂದು ವರದಿಯಾಗಿದೆ. ಮುಖ್ಯಮಂತ್ರಿ ಕುರ್ಚಿ ಬಗ್ಗೆ ರಾಜ್ಯ ಕಾಂಗ್ರೆಸ್‌ ನಲ್ಲಿ ನಡೆಯುತ್ತಿರುವ ಚರ್ಚೆಗಳ ಮಧ್ಯೆ ಅವರಿಗೆ ಪಕ್ಷ ಹೈಕಮಾಂಡ್‌ ಬುಲಾವ್‌ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ದೆಹಲಿಯಲ್ಲಿ ಅವರು ಎಐಸಿಸಿ ಅಧ್ಯಕ್ಷ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಎರಡ್ಮೂರು ದಿನ ಮಳೆ ಮುನ್ಸೂಚನೆ ; ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು : ಆಗ್ನೇಯ ಅರಬ್ಬಿ ಸಮುದ್ರದಲ್ಲಿ ಸುಳಿಗಾಳಿ ಎದ್ದಿರುವುದರಿಂದ ಟ್ರಫ್‌ ನಿರ್ಮಾಣವಾಗಿದೆ. ಹೀಗಾಗಿ ಅದರ ಪ್ರಭಾವದಿಂದಾಗಿ ಮುಂದಿನ ಮೂರು ದಿನಗಳು ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕರ್ನಾಟಕದ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳ ಹಲವಡೆ ಜೋರಾಗಿ ಮಳೆಯಾಗಲಿದೆ ಎಂದು ತಿಳಿಸಲಾಗಿದ್ದು, ಯೆಲ್ಲೋ ಅಲರ್ಟ್‌ ನೀಡಲಾಗಿದೆ. … Continued

ಲೋಕಸಭಾ ಚುನಾವಣೆ : 3-4 ದಿನದಲ್ಲಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧ ; ಡಿಕೆಶಿ

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಮೂರ್ನಾಲ್ಕು ದಿನಗಳಲ್ಲಿ ಸಿದ್ಧವಾಗಲಿದೆ, ಸಮೀಕ್ಷಾ ತಂಡವು ವರದಿ ಸಲ್ಲಿಸಲಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ತಿಳಿಸಿದರು. ಶುಕ್ರವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರನ್ನು ಈಗಾಗಲೇ ನೇಮಕ ಮಾಡಲಾಗಿದ್ದು, ಅವರು ತಮ್ಮತಮ್ಮ ಲೋಕಸಭಾ ಕ್ಷೇತ್ರದ, … Continued